ಜೋಶಿ ವಿರುದ್ಧ ಸ್ಪರ್ಧಿಸುವ ದುಸ್ಸಾಹಸಕ್ಕೆ ದಿಂಗಾಲೇಶ್ವರ ಶ್ರೀ ಮುಂದಾಗಬಾರದು: ಯಡಿಯೂರಪ್ಪ

Date:

Advertisements

ಧಾರವಾಡ-ಹುಬ್ಬಳ್ಳಿ ಕ್ಷೇತ್ರದ ಜನತೆ ಪ್ರಲ್ಹಾದ ಜೋಶಿ ಪರವಾಗಿದ್ದಾರೆ. ಅವರ ವಿರುದ್ಧ ಸ್ಪರ್ಧಿಸುವ ದುಸ್ಸಾಹಸಕ್ಕೆ ಫಕೀರ ದಿಂಗಾಲೇಶ್ವರ ಸ್ವಾಮೀಜಿ ಕೈ ಹಾಕಬಾರದು ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ ಎಸ್ ಯಡಿಯೂರಪ್ಪ ಹೇಳಿದರು.

ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಸೋಮವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, “‘ಧಾರವಾಡ‌ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯದಂತೆ ಫಕೀರ ದಿಂಗಾಲೇಶ್ವರ ಸ್ವಾಮೀಜಿ ಅವರಿಗೆ ಮತ್ತೊಮ್ಮೆ ಮನವಿ ಮಾಡುತ್ತೇನೆ. ಯಾವುದೇ ಕಾರಣಕ್ಕೂ ಸ್ಪರ್ಧೆ ಮಾಡಬಾರದೆಂದು ಅವರನ್ನು ಕೋರುವೆ. ಮುಂದೆ ಏನು ತೀರ್ಮಾನ ಕೈಗೊಳ್ಳುತ್ತಾರೆ ನೋಡೋಣ” ಎಂದರು.

“ರಾಜ್ಯದಲ್ಲಿ ಬಿಜೆಪಿ, ಪ್ರಧಾನಿ ಮೋದಿ ಪರವಾದ ಅಲೆ ಇದೆ. ಈ ಕ್ಷೇತ್ರದಲ್ಲಿ ಜೋಶಿ ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳು ಮನೆ ಮನೆಗೆ ಗೊತ್ತಿದೆ. ಅವರೊಬ್ಬ ಪ್ರಬುದ್ಧ ರಾಜಕಾರಣಿಯಾಗಿದ್ದಾರೆ” ಎಂದು ತಿಳಿಸಿದರು.

Advertisements
ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. ಚುನಾವಣೆ ಮುಗಿದ ನಂತರ ಇವರ ಕುಟುಂಬದ ರಾಜಕಾರಣ ಒಂದು ಗತಿ ಕಾಣುವುದು,,,ಇವರ ಸರ್ಕಾರದಲ್ಲಿ ಭಿನ್ನಮತ ಸುರು ಆದಾಗ ಧಾರವಾಡದ ಮಂತ್ರಿ ಮಾತಾಡಿದ ಹೀನಾಯ ಮಾತುಗಳನ್ನು ಯಡಿಯೂರಪ್ಪ ಇನ್ನೊಂದು ಸಾರಿ ನೋಡಲಿ,,,,, ಇಂಥಾ ಲಿಂಗಾಯತ ಲೀಡರುಗಳಿಂದಲೇ ಧಾರವಾಡ ಕ್ಷೇತ್ರದಲ್ಲಿ ಮನುವಾದಿಗಳು ಬೆರಳೆಣಿಕೆಯಷ್ಟು ಇದ್ದರೂ ಲಿಂಗಾಯತರನ್ನು ಕಾಲುಕಸ ಮಾಡಿದ್ದಾರೆ

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಪೋಕ್ಸೋ ಪ್ರಕರಣ: ಆರೋಪಿಗಳಿಗೆ ದಂಡ, ತಲಾ ಹತ್ತು ವರ್ಷ ಜೈಲು ಶಿಕ್ಷೆ

ಪೋಕ್ಸೋ ಪ್ರಕರಣದಲ್ಲಿ ಇಬ್ಬರು ಆರೋಪಿಗಳಿಗೆ ತಲಾ ಹತ್ತು ವರ್ಷ ಜೈಲು ಶಿಕ್ಷೆ...

ಚಿಕ್ಕಮಗಳೂರು l ಅಕ್ರಮ ಪ್ಲಾಸ್ಟಿಕ್ ಮಾರಾಟ: ನಗರಸಭೆ ಅಧಿಕಾರಿಗಳು ದಾಳಿ

ಚಿಕ್ಕಮಗಳೂರು ನಗರದಲ್ಲಿ ಪ್ಲಾಸ್ಟಿಕ್ ನಿಷೇಧವಿದ್ದರೂ ಅಕ್ರಮವಾಗಿ ಪ್ಲಾಸ್ಟಿಕ್ ಉತ್ಪನ್ನಗಳನ್ನು ಸಂಗ್ರಹಿಸಿ ಮಾರಾಟ...

ನಿಂದನೆ ಆರೋಪ : ಬಂಧಿತರಾಗಿದ್ದ ವಕೀಲ ಕೆ ಎನ್‌ ಜಗದೀಶ್‌ಗೆ ಜಾಮೀನು ಮಂಜೂರು

ಸಾಮಾಜಿಕ ಜಾಲತಾಣದಲ್ಲಿ ನಿಂದಿಸಿದ್ದ ಆರೋಪದ ಮೇಲೆ ಶುಕ್ರವಾರ ಸಂಜೆ ಬಂಧಿತರಾಗಿದ್ದ ಬಿಗ್‌...

Download Eedina App Android / iOS

X