‘ಕೆಎಸ್‌ಪಿಸಿಬಿ’ಯಲ್ಲಿ 152 ಹುದ್ದೆಗಳಿಗೆ ನೇರ ನೇಮಕಾತಿ: ಸಚಿವ ಈಶ್ವರ ಬಿ. ಖಂಡ್ರೆ

Date:

“ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ (ಕೆಎಸ್‌ಪಿಸಿಬಿ) 152 ಹುದ್ದೆಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ನೇರ ನೇಮಕಾತಿಯಿಂದ ಭರ್ತಿ ಮಾಡಲಾಗುವುದು” ಎಂದು ಅರಣ್ಯ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.

- Advertisement -

“ಮಂಡಳಿಗೆ ಮಂಜೂರಾಗಿರುವ 253 ಹುದ್ದೆಗಳ ಪೈಕಿ 152 ಹುದ್ದೆಗಳು ತಾಂತ್ರಿಕ, ಪ್ರಯೋಗಶಾಲೆ ಹಾಗೂ ಆಡಳಿತ ವಿಭಾಗಗಳಲ್ಲಿ ಖಾಲಿ ಇವೆ. 152 ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಕ್ರಮವಹಿಸಲಾಗಿದೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

“ಈ ಹಿಂದೆ ಮಂಡಳಿಯಲ್ಲಿ 153 ಖಾಲಿ ಹುದ್ದೆಗಳ ಭರ್ತಿಗೆ 2010ರಲ್ಲಿ ಅಧಿಸೂಚನೆ ಹೊರಡಿಸಲಾಗಿತ್ತು. ಆದರೆ, ಕಾರಣಾಂತರದಿಂದ ಹಲವು ಹುದ್ದೆಗಳು ಭರ್ತಿ ಆಗಿಲ್ಲ. ಈ ಹುದ್ದೆಗಳೂ ಸೇರಿದಂತೆ ಪ್ರಸ್ತುತ ಮಂಡಳಿಯಲ್ಲಿ ರಾಜ್ಯ ವ್ಯಾಪಿ ಉಳಿಕೆ ವೃಂದ ಹಾಗೂ ರಾಜ್ಯ ವ್ಯಾಪಿ ಸ್ಥಳೀಯ ವೃಂದದಡಿಯಲ್ಲಿ ಖಾಲಿಯಿರುವ ಹುದ್ದೆಗಳ ಪೈಕಿ ಬಹುತೇಕ ಭರ್ತಿಗೆ ಕ್ರಮ ಕೈಗೊಳ್ಳಲಾಗಿದೆ” ಎಂದು ತಿಳಿಸಿದ್ದಾರೆ.

“ರಾಜ್ಯವ್ಯಾಪಿ ಉಳಿಕೆ ವೃಂದದ 146 ಮತ್ತು ರಾಜ್ಯ ವ್ಯಾಪಿ ಸ್ಥಳೀಯ ವೃಂದದ 6 ಸೇರಿ 152 ಹುದ್ದೆಗಳ ಭರ್ತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ನೇರ ನೇಮಕಾತಿ ಪ್ರಕ್ರಿಯೆಯನ್ನು ಕೈಗೊಳ್ಳಲು ಸರ್ಕಾರ ಈಗಾಗಲೇ ಅನುಮತಿಸಿದೆ” ಎಂದು ಈಶ್ವರ ಖಂಡ್ರೆ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | 625 ಅಂಗಡಿಗಳಲ್ಲಿ ಇನ್ನು ಕನ್ನಡ ನಾಮಫಲಕ ಅಳವಡಿಕೆ ಬಾಕಿ

“23 ಹುದ್ದೆಗಳನ್ನು ಬ್ಯಾಕ್‌ಲಾಗ್ ಎಂದು ಪರಿಗಣಿಸಿದಲ್ಲಿ, 152 ಹುದ್ದೆಗಳೊಂದಿಗೆ 23 ಹುದ್ದೆಗಳನ್ನೂ ಸೇರಿಸಿ ಒಟ್ಟು 175 ಹುದ್ದೆಗಳನ್ನು ಭರ್ತಿ ಮಾಡಿದರೆ ಶೇಕಡ 69ರಷ್ಟು ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಿದಂತಾಗುತ್ತದೆ” ಎಂದು ಸಚಿವರು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ನಾಳೆ ಜಿಲ್ಲಾ ಮಟ್ಟದ ಕಾರ್ಯಾಗಾರ

ಸಾವಯವ ಹಾಗೂ ನೈಸರ್ಗಿಕ ಕೃಷಿ ಪದ್ಧತಿಯನ್ನು ಉತ್ತೇಜಿಸುವ ಜೊತೆಗೆ ರೈತರು ಬೆಳೆಯುವ...

‘ದಿಮಾಗಿ ನಕ್ಸಲ್’ ಟೀಕೆಗಳಿಗೆ ಬಗ್ಗದಿರಿ, ಹೋರಾಟ ಮುಂದುವರಿಸಿ: ಪರಿಸರವಾದಿಗಳಿಗೆ ನಿವೃತ್ತ ಸುಪ್ರೀಂ ನ್ಯಾಯಮೂರ್ತಿ ಓಕಾ ಕರೆ

ಪರಿಸರ ರಕ್ಷಣೆ ಮತ್ತು ಸಾಂವಿಧಾನಿಕ ಹಕ್ಕುಗಳಿಗಾಗಿ ಧ್ವನಿ ಎತ್ತುವ ಹೋರಾಟಗಾರರನ್ನು ‘ದಿಮಾಗಿ...

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...