ಗ್ಯಾರಂಟಿ ಯೋಜನೆ ಬಗ್ಗೆ ಪ್ರಶ್ನಿಸಿದರೆ ಪಕ್ಷದಿಂದ ಶಿಸ್ತು ಕ್ರಮ: ಡಿಸಿಎಂ ಡಿ ಕೆ ಶಿವಕುಮಾರ್‌ ಎಚ್ಚರಿಕೆ

Date:

Advertisements

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ. ಈ ವಿಚಾರವಾಗಿ ಹೇಳಿಕೆ ನೀಡಿರುವ ಶಾಸಕ ಗವಿಯಪ್ಪ ಅವರಿಗೆ ಕಾಂಗ್ರೆಸ್ ಪಕ್ಷದ ವತಿಯಿಂದ ಶೋಕಾಸ್ ನೋಟಿಸ್ ನೀಡಲಾಗುವುದು ಎಂದು ಡಿಸಿಎಂ ಡಿ ಕೆ ಶಿವಕುಮಾರ್ ತಿಳಿಸಿದರು.

ಅಂಬೇಡ್ಕರ್ ಭವನದಲ್ಲಿ ಸುದ್ದಿಗಾರರು ‘ಗ್ಯಾರಂಟಿ ನಿಲ್ಲಿಸಿ ಅನುದಾನ ಕೊಡಿ ಎಂದು ಸಿದ್ದರಾಮಯ್ಯ ಅವರನ್ನು ಕೇಳುತ್ತಿದ್ದೇವೆ’ ಎಂಬ ಶಾಸಕ ಗವಿಯಪ್ಪ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಅವರು ಈ ರೀತಿ ಹೇಳಿದ್ದಾರೆ ಎಂದು ನಾನು ನಂಬುವುದಿಲ್ಲ. ಒಂದು ವೇಳೆ ಅವರು ಈ ಹೇಳಿಕೆ ಕೊಟ್ಟಿದ್ದೇ ಆಗಿದ್ದರೆ ವಿವರಣೆ ಕೇಳಿ ನೋಟಿಸ್ ನೀಡುತ್ತೇವೆ. ನಾವು ಗ್ಯಾರಂಟಿ ವಿಚಾರದಲ್ಲಿ ರಾಜ್ಯದ ಜನರಿಗೆ ಮಾತು ಕೊಟ್ಟಿದ್ದು, ಎಂತಹದೆ ಪರಿಸ್ಥಿತಿ ಬಂದರೂ ನಾವು ಅದಕ್ಕೆ ಬದ್ಧವಾಗಿದ್ದೇವೆ” ಎಂದರು.

“ಕಾಂಗ್ರೆಸ್ ಪಕ್ಷದ ಯಾವುದೇ ಶಾಸಕರು ಗ್ಯಾರಂಟಿ ಯೋಜನೆಗಳ ಬಗ್ಗೆ ಪ್ರಶ್ನೆ ಮಾಡಬಾರದು. ಪ್ರಶ್ನೆ ಮಾಡಿದರೆ ಶಿಸ್ತುಕ್ರಮ ಜರುಗಿಸಲಾಗುವುದು. ಅನರ್ಹರು ಇದರ ಲಾಭ ಪಡೆಯುತ್ತಿದ್ದರೆ, ಅದನ್ನು ಪರಿಶೀಲಿಸಿ ಸರಿಪಡಿಸಲಾಗುವುದು. ಈ ಯೋಜನೆಗಳಿಂದ ಪ್ರತಿ ಕ್ಷೇತ್ರಕ್ಕೆ 250 ಕೋಟಿಯಷ್ಟು ಹಣ ಹೋಗುತ್ತಿದೆ. ಇದು ಆ ಕ್ಷೇತ್ರದ ಜನರ ಅಭಿವೃದ್ಧಿಯಲ್ಲವೇ? ಅಭಿವೃದ್ಧಿ ಕಾರ್ಯಗಳಿಗೂ ನಾವು ಅನುದಾನ ನೀಡುತ್ತಿದ್ದೇವೆ” ಎಂದು ಖಾರವಾಗಿ ಪ್ರತಿಕ್ರಿಯಿಸಿದರು.

Advertisements

ದೆಹಲಿ ಪ್ರವಾಸದ ಬಗ್ಗೆ ಕೇಳಿದಾಗ, “ನಾನು ದೆಹಲಿಗೆ ಭೇಟಿ ನೀಡುತ್ತಿರುವುದು ಮಹದಾಯಿ ವಿಚಾರವಾಗಿ ಕೇಂದ್ರ ಸಚಿವರನ್ನು ಭೇಟಿ ಮಾಡಲು ಹಾಗೂ ಆ ಭಾಗದ ಸಂಸದರನ್ನು ಭೇಟಿಯಾಗಲು. ಜೊತೆಗೆ ಜಾರ್ಖಂಡ್ ನಲ್ಲಿ ಹೇಮಂತ್ ಸೊರೇನ್ ಅವರ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಭಾಗವಹಿಸಲಾಗುವುದು. ಇನ್ನು ಗಾಂಧೀಜಿ ಅವರು ಬೆಳಗಾವಿಯಲ್ಲಿ ನಡೆದಿದ್ದ ಕಾಂಗ್ರೆಸ್ ಅಧಿವೇಶನದಲ್ಲಿ ಪಕ್ಷದ ಅಧ್ಯಕ್ಷರಾಗಿ ಅಧಿಕಾರವಹಿಸಿಕೊಂಡು ನೂರು ವರ್ಷಗಳಾಗಿರುವ ಹಿನ್ನೆಲೆಯಲ್ಲಿ ಆ ಕಾರ್ಯಕ್ರಮದ ರೂಪುರೇಷೆ ವಿಚಾರವಾಗಿ ಚರ್ಚೆ ಮಾಡಲು ತೆರಳುತ್ತಿದ್ದೇನೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಒಕ್ಕಲಿಗರಿಗೆ ಪರ್ಯಾಯ ನಾಯಕತ್ವದ ಅಗತ್ಯವಿದೆಯೇ?

ಆದಷ್ಟು ಬೇಗ ಮಹದಾಯಿ ಯೋಜನೆಗೆ ಅನುಮತಿ ನೀಡುತ್ತೇವೆ ಎಂಬ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಬಹಳ ಸಂತೋಷ. ಮಹದಾಯಿ ಯೋಜನೆಗೂ ಅನುಮತಿ ಕೊಡಿಸಲಿ, ಮಾನ್ಯ ದೇವೇಗೌಡರು ಮೇಕೆದಾಟು ಯೋಜನೆಗೂ ಅನುಮತಿ ಕೊಡಿಸುವುದಾಗಿ ಹೇಳಿದ್ದು, ಅದನ್ನೂ ಕೊಡಿಸಲಿ. ನಮ್ಮ ರಾಜ್ಯಕ್ಕೆ ಒಳ್ಳೆಯದಾಗಲು ಸಹಕಾರ ಕೊಟ್ಟರೆ ನಾವು ಅದನ್ನು ಬಳಸಿಕೊಳ್ಳಲು ಸಿದ್ಧ” ಎಂದರು.

ಹೈಕಮಾಂಡ್ ನಾಯಕರ ಭೇಟಿ ಮಾಡುತ್ತೀರಾ ಎಂದು ಕೇಳಿದಾಗ, “ಖಂಡಿತಾ, ಕಾಂಗ್ರೆಸ್ ಕಚೇರಿ ನಮ್ಮ ಪಾಲಿನ ದೇವಾಲಯ. ಅಲ್ಲಿಗೆ ಹೋದ ಮೇಲೆ ನಾಯಕರನ್ನು ಭೇಟಿ ಮಾಡುತ್ತೇವೆ” ಎಂದು ತಿಳಿಸಿದರು.

ಸಚಿವ ಸಂಪುಟ ಪುನರ್ ರಚನೆ ಬಗ್ಗೆ ಕೇಳಿದಾಗ, “ನನಗೆ ಈ ವಿಚಾರ ಗೊತ್ತಿಲ್ಲ. ಗೊತ್ತಾದಾಗ ಮಾತನಾಡುತ್ತೇನೆ. ಈ ಬಗ್ಗೆ ಮುಖ್ಯಮಂತ್ರಿಗಳು ಹಾಗೂ ನಮ್ಮ ಎಐಸಿಸಿ ಪ್ರಧಾನ ಕಾರ್ಯದರ್ಶಿಗಳನ್ನು ಕೇಳಿ” ಎಂದು ಹೇಳಿದರು.

ಸಚಿವರಿಗೂ ತಮ್ಮ ಸ್ಥಾನ ಬಿಡಲು ಹೇಳಿರುವುದಾಗಿ ಭಾಷಣದಲ್ಲಿ ಪ್ರಸ್ತಾಪ ಮಾಡಿದಿರಿ ಎಂದು ಕೇಳಿದಾಗ “ಅದು ತಕ್ಷಣಕ್ಕೆ ಅಲ್ಲ. ಅದಕ್ಕೆ ಇನ್ನು ಸಮಯಾವಕಾಶವಿದೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

Download Eedina App Android / iOS

X