ಬೆಂಗಳೂರಿನ ಜನರಿಗೆ ಕುಡಿಯುವ ನೀರಿನಿಂದ ಆರೋಗ್ಯ ಸಮಸ್ಯೆ ಉಂಟಾದರೆ ಶಿಸ್ತು ಕ್ರಮ: ಡಿ ಕೆ ಶಿವಕುಮಾರ್ ಎಚ್ಚರಿಕೆ

Date:

ಬೆಂಗಳೂರಿನ ಜನರಿಗೆ ಉತ್ತಮ ಗುಣಮಟ್ಟದ ಕುಡಿಯುವ ನೀರನ್ನು ಸರಬರಾಜು ಮಾಡಬೇಕು. ಒಂದು ವೇಳೆ ಕುಡಿಯುವ ನೀರಿನಿಂದ ಯಾವುದೇ ಸಮಸ್ಯೆ ಉಂಟಾದರೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ.

- Advertisement -

ಈ ವಿಚಾರವಾಗಿ ಬಿಬಿಎಂಪಿ ಆಯುಕ್ತರು, ಬೆಂಗಳೂರಿನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ, ಬಿಡಬ್ಲ್ಯೂಎಸ್ಎಸ್ ಬಿ ಮುಖ್ಯಸ್ಥರಿಗೆ ಪತ್ರ ಬರೆದಿರುವ ಶಿವಕುಮಾರ್, “ಬೆಂಗಳೂರಿನ ನಾಗರಿಕರಿಗೆ ಕುಡಿಯುವ ನೀರಿನಿಂದ ಯಾವುದೇ ಸಮಸ್ಯೆ ಎದುರಾಗಬಾರದು” ಎಂದು ಸ್ಪಷ್ಟ ಸೂಚನೆ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

“ರಾಜ್ಯದ ಕೆಲವು ಕಡೆ ಕಲುಷಿತ ನೀರು ಕುಡಿಯುವ ನೀರಿನ ಜತೆ ಮಿಶ್ರವಾಗಿ ಜನರು ಅಸ್ವಸ್ಥಗೊಂಡು ವಿವಿಧ ರೋಗಗಳಿಗೆ ತುತ್ತಾಗುತ್ತಿದ್ದಾರೆ ಎಂಬ ವರದಿಗಳು ಬರುತ್ತಿವೆ. ಈ ವಿಚಾರ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾಧಿಕಾರಿಗಳ ವಿಡಿಯೋ ಸಂವಾದ ಸಭೆಯಲ್ಲಿ ಚರ್ಚೆಯಾಗಿದೆ. ಹೀಗಾಗಿ, ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಶುದ್ಧಕುಡಿಯುವ ನೀರಿನ ಘಟಕಗಳಿಗೆ ಅಧಿಕಾರಿಗಳು ಖುದ್ದಾಗಿ ಭೇಟಿ ನೀಡಿ ನೀರಿನ ಘಟಕಗಳ ಸಮರ್ಪಕ ಕಾರ್ಯನಿರ್ವಹಣೆ, ಉತ್ತಮ ಗುಣಮಟ್ಟದ ನೀರಿನ ಬಗ್ಗೆ ಖಾತರಿ ಮಾಡಿಕೊಳ್ಳಬೇಕು. ಆ ಘಟಕಗಳಿಂದ ಸರಬರಾಜಾಗುವ ನೀರನ್ನು ಪ್ರಯೋಗಾಲಯದಲ್ಲಿ ಪರೀಕ್ಷೆ ಮಾಡಿ ಕುಡಿಯಲು ಯೋಗ್ಯವೇ ಎಂದು ಖಚಿತಪಡಿಸಿಕೊಳ್ಳಬೇಕು” ಎಂದು ಸೂಚಿಸಿದ್ದಾರೆ.

“ಬೆಂಗಳೂರಿನ ಜನರಿಗೆ ಕುಡಿಯುವ ನೀರಿನಿಂದ ಯಾವುದೇ ಆರೋಗ್ಯ ಸಮಸ್ಯೆ ಉಂಟಾಗದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು. ಜನರಿಗೆ ತೊಂದರೆಯಾದರೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ ಜರುಗಿಸಲಾಗುವುದು” ಎಂದು ಈ ಪತ್ರದಲ್ಲಿ ಎಚ್ಚರಿಕೆ ನೀಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರ MLC ಚುನಾವಣೆ: 5 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ ಪ್ರಶಾಂತ್ ಕಿಶೋರ್ ಜನ ಸುರಾಜ್ ಪಾರ್ಟಿ

ಬಿಹಾರ ವಿಧಾನ ಪರಿಷತ್ತಿನ (ಎಂಎಲ್‌ಸಿ) ಮುಂಬರುವ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರಗಳ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ: ರಾಜಕೀಯ ಲಾಭ ಸಿಗುತ್ತಾ?

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು...

ರಾಜಸ್ಥಾನದ ಬುಡಕಟ್ಟು ಶಾಲೆಗಳ ದುಸ್ಥಿತಿ: ‘ಖಾಲಿ ಜಾಗ, ಕುಡಿಯುವ ನೀರಿಲ್ಲ’ – ಸಿಜೆಪಿ ಆಕ್ರೋಶ

ರಾಜಸ್ಥಾನದ ಬುಡಕಟ್ಟು (ಆದಿವಾಸಿ) ಪ್ರದೇಶಗಳಲ್ಲಿರುವ ಸರ್ಕಾರಿ ಶಾಲೆಗಳ ಶೋಚನೀಯ ಸ್ಥಿತಿಯನ್ನು ಖಂಡಿಸಿ...

ಚಿಕ್ಕಮಗಳೂರು | ಕಸ್ತೂರಿರಂಗನ್ ವರದಿಗೆ ಪಕ್ಷಾತೀತ ವಿರೋಧ

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕು ಬಾಳೆಹೊನ್ನೂರಿನಲ್ಲಿ ಕಸ್ತೂರಿರಂಗನ್ ವರದಿ ಕುರಿತು ಸಾರ್ವಜನಿಕರ...