ವಿದ್ಯಾರ್ಥಿಗಳಿಗೆ ಉಚಿತ ಬೈಸಿಕಲ್ ವಿತರಣೆ ಬಗ್ಗೆ ಸಿಎಂ ಜೊತೆ ಚರ್ಚೆ: ಶಿಕ್ಷಣ ಸಚಿವ ಮಧು ಬಂಗಾರಪ್ಪ

Date:

Advertisements

ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಉಚಿತ ಬೈಸಿಕಲ್ ವಿತರಣೆ ಕಾರ್ಯಕ್ರಮ ಆರಂಭಿಸುವುದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ತಿಳಿಸಿದರು.

ವಿಧಾನಸಭೆಯಲ್ಲಿ ಸದಸ್ಯ ಪ್ರದೀಪ್ ಈಶ್ವರ್ ಅವರು ಕೇಳಿದ ಚುಕ್ಕೆಗುರುತಿನ ಪ್ರಶ್ನೆಗೆ ಅವರು ಉತ್ತರಿಸಿದರು.

“ರಾಜ್ಯದಲ್ಲಿ ಈ ಹಿಂದೆ 2019-20ನೇ ಸಾಲಿನಲ್ಲಿ ಉಚಿತ ಬೈಸಿಕಲ್ ವಿತರಣೆ ಮಾಡಲಾಗಿರುತ್ತದೆ. ಪ್ರಸ್ತುತ ಸಾಲಿನಲ್ಲಿ ಸರಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಬೈಸಿಕಲ್ ವಿತರಿಸಲಾಗುತ್ತಿಲ್ಲ. ಆದರೆ, ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಶಾಲೆಗೆ ನಿರಂತರವಾಗಿ ಹಾಜರಾಗಲು ಅನುಕೂಲವಾಗುವಂತೆ ಸರಕಾರಿ ಬಸ್‌ಗಳಲ್ಲಿ ಪ್ರಯಾಣಿಸಲು ಉಚಿತವಾಗಿ ಬಸ್ ಪಾಸ್ ವಿತರಿಸಲಾಗುತ್ತಿದೆ” ಎಂದರು.

Advertisements

“ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಕೇಂದ್ರ ಪ್ರಾಯೋಜಿತ ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆ ಅಡಿಯಲ್ಲಿ ತಮ್ಮ ವ್ಯಾಪ್ತಿಯನ್ನು ಮೀರಿದ ಶಾಲೆಗಳಿಗೆ ಕ್ರಮಿಸಲು ಪ್ರತಿ ವಿದ್ಯಾರ್ಥಿಗೆ ಮಾಹೆಯಾನ 600 ರೂ.ಗಳಂತೆ ಆರು ತಿಂಗಳಿಂದ ಸಾರಿಗೆ ಭತ್ಯೆ ನೀಡಲಾಗುತ್ತಿದೆ” ಎಂದರು.

“ರಾಜ್ಯದಲ್ಲಿ 1ರಿಂದ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಸರಕಾರಿ ಶಾಲಾ ಮಕ್ಕಳಿಗೆ ವಿದ್ಯಾವಿಕಾಸ ಯೋಜನೆ ಅಡಿ ಒಂದು ಜೊತೆ ಶೂ ಮತ್ತು ಎರಡು ಜೊತೆ ಸಾಕ್ಸ್ ಉಚಿತವಾಗಿ ನೀಡಲಾಗುತ್ತಿದೆ” ಎಂದರು.

7098 ಶಾಲೆಗಳಿಗೆ 9604 ಕೊಠಡಿಗಳ ನಿರ್ಮಾಣ

“2020-21ರಿಂದ 2022-23ನೇ ಸಾಲಿನವರೆಗೆ 7,098 ಶಾಲೆಗಳಿಗೆ 9,604 ಕೊಠಡಿಗಳ ನಿರ್ಮಾಣ ಹಾಗೂ ಇತರೆ ಕಾಮಗಾರಿಗಳಿಗೆ ಒಟ್ಟು 1,29,768.90ಲಕ್ಷಗಳು ನಿಗದಿಯಾಗಿದ್ದು, ರೂ.9,450.139 ಲಕ್ಷಗಳನ್ನು ಬಿಡುಗಡೆ ಮಾಡಿ ಕ್ರಮ ವಹಿಸಲಾಗಿದೆ” ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಸದಸ್ಯ ಯು.ಬಿ.ಬಣಕಾರ್ ಅವರ ಪ್ರಶ್ನೆಗೆ ಉತ್ತರಿಸಿದರು.

“ಈ ಕೊಠಡಿಗಳ ನಿರ್ಮಾಣಕ್ಕೆ ಕೊರತೆ ಅನುದಾನವನ್ನು 2023-24ನೇ ಸಾಲಿನಲ್ಲಿ ಒದಗಿಸಲು ಕ್ರಮವಹಿಸಲಾಗಿದೆ. ಆಯವ್ಯಯದಲ್ಲಿ ಒದಗಿಸಲಾದ ಅನುದಾನ ಲಭ್ಯತೆ ಆಧರಿಸಿ ಅಗತ್ಯತೆಗೆ ಅನುಗುಣವಾಗಿ ಹಂತ ಹಂತವಾಗಿ ರಾಜ್ಯಾದ್ಯಂತ ಶಾಲೆಗಳಲ್ಲಿ ಕೊಠಡಿ ನಿರ್ಮಾಣ ಮಾಡಲು ಅಗತ್ಯ ಕ್ರಮ ವಹಿಸಲಾಗುತ್ತಿದೆ” ಎಂದರು.

“ಮಲೆನಾಡು ಭಾಗದ ಎಲ್ಲ ಸರಕಾರಿ ನೌಕರರಿಗೆ 6ನೇ ರಾಜ್ಯ ವೇತನ ಆಯೋಗದ ಶಿಫಾರಸ್ಸಿನ ಅನ್ವಯ ಗಿರಿತಾಣ ಭತ್ಯೆ ರದ್ದುಪಡಿಸಿ ಆದೇಶಿಸಿರುವುದರಿಂದ ಚಿಕ್ಕಮಗಳೂರು ಜಿಲ್ಲೆಯ ಗುಡ್ಡಗಾಡು ಪ್ರದೇಶಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರಿಗೆ ಸದ್ಯಕ್ಕೆ ಗಿರಿಭತ್ಯೆ ನೀಡುವ ಪ್ರಶ್ನೆ ಉದ್ಭವಿಸುವುದಿಲ್ಲ” ಎಂದು ಮೂಡಿಗೆರೆ ಶಾಸಕಿ ನಯನಾ ಮೋಟಮ್ಮ ಅವರ ಪ್ರಶ್ನೆಗೆ ಸಚಿವ ಮಧು ಬಂಗಾರಪ್ಪ ಅವರು ಉತ್ತರಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಪಟ್ಟಣ ಪಂಚಾಯತ್ ಚುನಾವಣೆ: ಮೂರರಲ್ಲಿ ಕಾಂಗ್ರೆಸ್‌ಗೆ ಮೇಲುಗೈ; ಎರಡರಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಜಯ

ಕರ್ನಾಟಕದಲ್ಲಿ ಐದು ಪ್ರದೇಶಗಳು ತಾಲೂಕು ಸ್ಥಾನಕ್ಕೇರಿದ ಬಳಿಕ ರಚನೆಯಾದ ಪಟ್ಟಣ ಪಂಚಾಯಿತಿಗೆ...

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

Download Eedina App Android / iOS

X