ಮರ್ಯಾದೆಗೇಡು ಹತ್ಯೆ | ಜಾತಿ ವ್ಯವಸ್ಥೆಯ ಹೀನ ಮನಸ್ಥಿತಿಯ ಪ್ರತಿಫಲನ: ಸಿಎಂ ಸಿದ್ದರಾಮಯ್ಯ

Date:

Advertisements
  • ‘ನಮ್ಮ ಸರ್ಕಾರವು ಕಾನೂನಾತ್ಮಕವಾಗಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಿದೆ’
  • ‘ಜಾತಿಗ್ರಸ್ತ ಸಮಾಜದಲ್ಲಿ ಜಾಗೃತಿ ಮೂಡಿಸುವುದು ಅತ್ಯವಶ್ಯಕವಾಗಿದೆ’

ಕಳೆದ ಕೆಲ ವಾರಗಳಲ್ಲಿ ರಾಜ್ಯದ ಎರಡು ಕಡೆಗಳಲ್ಲಿ ಮರ್ಯಾದೆಗೇಡು ಹತ್ಯೆ ಪ್ರಕರಣ ನಡೆದಿರುವ ಸುದ್ದಿ ನಮ್ಮೆಲ್ಲರ ಮನ ಕಲಕಿದೆ. ನಮ್ಮ ಸಮಾಜದಲ್ಲಿ ಅಂತರ್ಗತವಾಗಿರುವ ಜಾತಿ ವ್ಯವಸ್ಥೆ, ಸಾಮಾಜಿಕ ಕಟ್ಟುಪಾಡುಗಳ ಹೀನ ಮನಸ್ಥಿತಿಯನ್ನು ಇಂತಹ ಘಟನೆಗಳು ಪ್ರತಿಫಲಿಸುತ್ತವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಳವಳ ವ್ಯಕ್ತಪಡಿಸಿದ್ದಾರೆ.

ಕೋಲಾರದಲ್ಲಿ ನಡೆದ ಮರ್ಯಾದೆಗೇಡು ಹತ್ಯೆ ಪ್ರಕರಣ ಖಂಡಿಸಿ, ಸಾಮಾಜಿಕ ಜಾಲತಾಣ ಎಕ್ಸ್‌ (ಟ್ವಿಟ್ಟರ್‌)ನಲ್ಲಿ ಪ್ರತಿಕ್ರಿಯಿಸಿರುವ ಅವರು, “ಮರ್ಯಾದೆಗೇಡು ಹತ್ಯೆಯಂತಹ ಪ್ರಕರಣಗಳ ವಿಚಾರದಲ್ಲಿ ನಮ್ಮ ಸರ್ಕಾರವು ಕಾನೂನಾತ್ಮಕವಾಗಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಿದೆ. ಪ್ರಕರಣದ ತನಿಖೆ, ವಿಚಾರಣೆಯಲ್ಲಿ ಯಾವುದೇ ಲೋಪವಾಗದಂತೆ ಎಚ್ಚರ ವಹಿಸಲಿದೆ” ಎಂದು ಭರವಸೆ ನೀಡಿದ್ದಾರೆ.

“ಮರ್ಯಾದೆಗೇಡು ಹತ್ಯೆಗಳನ್ನು ಮಾಡುವಂತಹ ಮನಸ್ಥಿತಿಯನ್ನು ಸೃಷ್ಟಿಸಿರುವ ಜಾತಿಗ್ರಸ್ತ ಸಮಾಜದಲ್ಲಿ ಪರಿವರ್ತನೆ, ಜಾಗೃತಿಯನ್ನು ಮೂಡಿಸುವುದು ಅತ್ಯವಶ್ಯಕವಾಗಿದೆ” ಎಂದು ಪ್ರತಿಪಾದಿಸಿದ್ದಾರೆ.

Advertisements

“ಮನುಷ್ಯ ಚಂದ್ರನ ಮೇಲೆ ಕಾಲಿರಿಸಿದ್ದರೂ ದಲಿತರಿಗೆ ದೇವಸ್ಥಾನಗಳಲ್ಲಿ, ಮನೆಗಳಲ್ಲಿ ಕಾಲಿರಿಸಲು ಅವಕಾಶವನ್ನು ನೀಡದಂತಹ ಆಚರಣೆ, ಸಂಪ್ರದಾಯಗಳು ನಮ್ಮಲ್ಲಿವೆ. ಜಾತಿ ಸಂರಚನೆಯ ಕಟ್ಟುಪಾಡುಗಳನ್ನು ಮೀರಲು ಮಾನವೀಯತೆ, ವಿಚಾರಪರತೆಯೇ ದಾರಿ; ಜಾಗೃತಿಯೇ ಅಸ್ತ್ರ” ಎಂದಿದ್ದಾರೆ.

“ಸಮಾಜವನ್ನು ಜಾತಿ ಸಂಕೋಲೆಗಳಿಂದ ಬಿಡುಗಡೆಗೊಳಿಸಲು ಪ್ರಯತ್ನಿಸಿದ ಎಲ್ಲ ಸಮಾಜ ಸುಧಾರಕರ ಆಶಯಗಳನ್ನು ವ್ಯಾಪಕವಾಗಿ ಪ್ರಚುರಪಡಿಸುವುದು ಇಂದಿನ ಅಗತ್ಯವಾಗಿದೆ. ಈ ದಿಕ್ಕಿನಲ್ಲಿ ಸರ್ಕಾರವು ರಚನಾತ್ಮಕ ಕಾರ್ಯಕ್ರಮಗಳಿಗೆ ಮುಂದಾಗಲಿದೆ” ಎಂದು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

2 COMMENTS

  1. ದೇವರಗುಡಿಯಲ್ಲಿ ಪೂಜೆಮಾಡುವವರನ್ನು ಪಂಗಡಗಳ ಮಂದಿಎಣಿಕೆ ನೆಲೆಗಟ್ಟಿನ ಮೇಲೆ ಮೀಸಲಾತಿ ನೀಡಿ ನೇಮಿಸಿ , ಕನ್ನಡದಲ್ಲಿ ಮಂತ್ರ ಓದಿ ಪೂಜೆಮಾಡುವ ಪದ್ದತಿ ತರುವುದು ಈಗ ಆಗಬೇಕಿದೆ

  2. ತನ್ನ ಮಾತಿನಲ್ಲಿ ಕಲಿಕೆ ಮಾಡದ ನಾಡು ಏಳಿಗೆಕಾಣದೆ ಹಿಂದುಳಿದಿದೆ.ಹಾಗಾಗಿ ಕುರುಡು ನಂಬಿಕೆಗಳಿಂದ ಹೊರಬರಲು ಆಗುತ್ತಿ್ಲ. ಸಂಸ್ಕೃತ ಪದಗಳ ಹೊರೆಯಿಂದ ಕಲಿಕೆಯನ್ನು ಕಗ್ಗಂಟಾಗಿಸಿರುವುದೂ ಇದರಲ್ಲಿ ಒಂದು.

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X