ಖಾಸಗಿ ಆಸ್ಪತ್ರೆ, ಕ್ಲಿನಿಕ್‌ಗಳಿಂದ ನೋಂದಣಿ ವಿವರ ಪ್ರದರ್ಶನ ಕಡ್ಡಾಯ: ಸಚಿವ ದಿನೇಶ್‌ ಗುಂಡೂರಾವ್‌

Date:

ನಕಲಿ ವೈದ್ಯಕೀಯ ವೃತ್ತಿಯನ್ನು ಬೇರುಸಮೇತ ಕಿತ್ತೊಗೆಯಲು ಆರೋಗ್ಯ ಇಲಾಖೆಯು ಆದೇಶವನ್ನು ಹೊರಡಿಸಿದ್ದು ಇದರನ್ವಯ ಖಾಸಗಿ ಆಸ್ಪತ್ರೆಗಳು, ಕ್ಲಿನಿಕ್’ಗಳು ತಮ್ಮ KPME ನೋಂದಣಿ ಸಂಖ್ಯೆ, ಆಸ್ಪತ್ರೆಯ ಹೆಸರು ಮತ್ತು ಮಾಲೀಕರ ಹೆಸರನ್ನು ಕಟ್ಟಡದ ಮುಂಭಾಗದಲ್ಲಿ ಪ್ರದರ್ಶಿಸವುದು ಕಡ್ಡಾಯ ಎಂದು ಆರೋಗ್ಯ ಇಲಾಖೆ ಸಚಿವ ದಿನೇಶ್‌ ಗುಂಡೂರಾವ್‌ ತಿಳಿಸಿದ್ದಾರೆ.

- Advertisement -

ಈ ಕುರಿತು ಮಾಹಿತಿ ಹಂಚಿಕೊಂಡಿರುವ ಅವರು, “ಅಲೋಪತಿ ಆಸ್ಪತ್ರೆಗಳು ನೀಲಿ ಬಣ್ಣ ಮತ್ತು ಆಯುರ್ವೇದಿಕ್ ಆಸ್ಪತ್ರೆಗಳು ಹಸಿರು ಬಣ್ಣದ ಬೋರ್ಡ್ ಬಳಸುವ ಮೂಲಕ ಬಣ್ಣ ಸಂಹಿತೆಯನ್ನು ಕಡ್ಡಾಯವಾಗಿ ಅನುಸರಿಸಬೇಕು” ಎಂದು ಸೂಚಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...

ಆಗ್ನೇಯ ಪದವೀಧರ ಕ್ಷೇತ್ರ: ಕಾಂಗ್ರೆಸ್-ಬಿಜೆಪಿ ನಡುವೆ ಬಿರುಸಿನ ಸ್ಪರ್ಧೆ!

ವಿಧಾನ ಪರಿಷತ್ತಿನ ಕರ್ನಾಟಕ ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆ ಕಾವು ಪಡೆದುಕೊಂಡಿದ್ದು, ಬಿಜೆಪಿ–ಜೆಡಿಎಸ್ ಮೈತ್ರಿ ಮತ್ತು ಕಾಂಗ್ರೆಸ್ ನಡುವೆ ನೇರ ಹಣಾಹಣಿಯ ವಾತಾವರಣ ನಿರ್ಮಾಣವಾಗಿದೆ. ಕಾಂಗ್ರೆಸ್‌ನಿಂದ ಶಶಿ ಹುಲಿಕುಂಟೆಮಠ ಹಾಗೂ ಬಿಜೆಪಿ ಅಭ್ಯರ್ಥಿಯಾಗಿ...

ವಿಜಯಪುರ | ಪ್ಲಾಟ್‌ಫಾರ್ಮ್‌ ಮೇಲೆ ಹರಿವ ಚರಂಡಿ ನೀರು;...

"ಚರಂಡಿ ನೀರಿನ್ಯಾಗ ದಿನ ಹೋಗಾಕ ಹತ್ತಿವಿ…" ಇದು ವಿಜಯಪುರ ಕೇಂದ್ರ ಬಸ್ ನಿಲ್ದಾಣಕ್ಕೆ ಪ್ರತಿನಿತ್ಯ ಆಗಮಿಸುವ ಸಾವಿರಾರು ಪ್ರಯಾಣಿಕರ ಅಳಲು. ಪ್ಲಾಟ್‌ಫಾರ್ಮ್‌-1ರಲ್ಲಿ ಕೊಳಚೆ ನೀರು ಹರಿಯುತ್ತಿದ್ದರೂ, ಸಂಬಂಧಪಟ್ಟ ಅಧಿಕಾರಿಗಳು ಮಾತ್ರ ಜವಾಬ್ದಾರಿಯಿಂದ...

“ಖಾಸಗಿ ವೈದ್ಯಕೀಯ ಆಸ್ಪತ್ರೆಗಳು ಈ ನಿಯಮಗಳನ್ನು ಅನುಸರಿಸುವಲ್ಲಿ ವಿಫಲವಾದಲ್ಲಿ KPME ತಿದ್ದುಪಡಿ ಕಾಯಿದೆ 2017 ರ ಸೆಕ್ಷನ್ 19(5) ರ ಅನ್ವಯ ಕಠಿಣ ಕಾನೂನುಕ್ರಮ ಕೈಗೊಳ್ಳಲಾಗುವುದು. ಹೆಚ್ಚಿನ ವಿವರಗಳಿಗಾಗಿ ದಯವಿಟ್ಟು ಸುತ್ತೋಲೆ ಪರಾಮರ್ಶಿಸಿ” ಎಂದು ಹೇಳಿದ್ದಾರೆ.

“ನಕಲಿ ಮತ್ತು ಅರ್ಹತೆ ಹೊಂದಿಲ್ಲದ ವೈದ್ಯರು ಸಮಾಜಕ್ಕೆ ಕಂಟಕರಾಗಿದ್ದು ರೋಗಿಗಳ ಆರೋಗ್ಯದ ವಿಚಾರದಲ್ಲಿ ಚೆಲ್ಲಾಟವಾಡುತ್ತಿದ್ದಾರೆ. ನಮ್ಮ ಸರ್ಕಾರವು ರೋಗಿಗಳ ಸುರಕ್ಷತೆಗೆ ಮತ್ತು ಉತ್ತಮ ಆರೋಗ್ಯ ಸೇವೆ ಒದಗಿಸಲು ಬದ್ಧವಾಗಿದೆ” ಎಂದಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೆಹಲಿ ಪತ್ರಕರ್ತೆಗೆ ಪೊಲೀಸರಿಂದ ಲೈಂಗಿಕ ಕಿರುಕುಳ: ಕರ್ನಾಟಕ ಪತ್ರಕರ್ತೆಯರ ಸಂಘದಿಂದ ಖಂಡನೆ

ದೆಹಲಿಯ ಜಂತ‌ರ್ ಮಂತರ್‌ನಲ್ಲಿ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ...

ಚುನಾವಣಾ ಪ್ರಚಾರದಲ್ಲಿ ಅಪ್ರಾಪ್ತನ ಬಳಕೆ ಮಾಡಿರುವ ಉದಯನಿಧಿ ಸ್ಟ್ಯಾಲಿನ್ ವಿರುದ್ಧ ಎಫ್‌ಐಆರ್ ದಾಖಲು

ತಮಿಳುನಾಡಿನ ಧರಪುರಂ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಪ್ರಚಾರದ ವೇಳೆ ಅಪ್ರಾಪ್ತ ಬಾಲಕನನ್ನು...

MPSC ಪೇಪರ್ ಲೀಕ್: ಪುಣೆ ವಿದ್ಯಾರ್ಥಿಗಳ ಹೋರಾಟಕ್ಕೆ ಸಿಜೆಪಿ ಬೆಂಬಲ; ಅಧ್ಯಕ್ಷರ ರಾಜೀನಾಮೆಗೆ ಆಗ್ರಹ

ಮಹಾರಾಷ್ಟ್ರ ಲೋಕಸೇವಾ ಆಯೋಗ (MPSC) ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ...