ರಾಜ್ಯದಲ್ಲಿ 1.27 ಕೋಟಿ ಬಿಪಿಎಲ್‌ ಕಾರ್ಡ್‌ ಹಂಚಿಕೆ, ನಕಲಿ ಕಾರ್ಡ್‌ ರದ್ದತಿಗೆ ಸಿಎಂ ಸೂಚನೆ

Date:

Advertisements

ರಾಜ್ಯದಲ್ಲಿ ಶೇ.80 ರಷ್ಟು ಕುಟುಂಬಗಳು ಬಿಪಿಎಲ್‌ ಕಾರ್ಡು ಹೊಂದಿವೆ. ತಮಿಳುನಾಡಿನಲ್ಲಿ ಶೇ.40 ರಷ್ಟಿದೆ. ನೀತಿ ಆಯೋಗದ ಪ್ರಕಾರ ರಾಜ್ಯದಲ್ಲಿ ಪ್ರಸ್ತುತ ಬಡತನ ರೇಖೆಗಿಂತ ಕೆಳಗಿರುವವರ ಪ್ರಮಾಣ ಶೇ.5.67 ಇರಬೇಕು. ಆದರೆ ರಾಜ್ಯದಲ್ಲಿ 1.27 ಕೋಟಿ ಕುಟುಂಬಗಳಿಗೆ ಬಿಪಿಎಲ್‌ ಕಾರ್ಡ್‌ ನೀಡಿದ್ದೇವೆ. ಅನರ್ಹ ಬಿಪಿಎಲ್ ಕಾರ್ಡುಗಳನ್ನು ರದ್ದು ಪಡಿಸಿ, ಅರ್ಹರಿಗೆ ಬಿಪಿಎಲ್‌ ಕಾರ್ಡು ಒದಗಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಸೂಚಿಸಿದರು.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, “ಜನರನ್ನು ಅನಗತ್ಯವಾಗಿ ಅಲೆದಾಡಿಸಬೇಡಿ. ಅವರ ದೂರುಗಳನ್ನು ಆಲಿಸಿ, ಅಗತ್ಯ ಪರಿಹಾರ ಒದಗಿಸಬೇಕು” ಎಂದರು.

“ರಾಜ್ಯದಲ್ಲಿ ಈ ಬಾರಿ ಬರ ನಿರ್ವಹಣೆಯನ್ನು ಉತ್ತಮವಾಗಿ ಮಾಡಿದ್ದೇವೆ. ಕುಡಿಯುವ ನೀರಿಗೆ ಸಂಬಂಧಿಸಿದಂತೆ ಸಮಸ್ಯಾತ್ಮಕ ಗ್ರಾಮಗಳನ್ನು ಮೊದಲೇ ಗುರುತಿಸಿ ಪರ್ಯಾಯ ವ್ಯವಸ್ಥೆ ಮಾಡಿದ ಕಾರಣ ಎಲ್ಲೂ ಹೆಚ್ಚು ತೊಂದರೆಯಾಗಿಲ್ಲ. ಬರ ನಿರ್ವಹಣೆಗೆ 85 ಕೋಟಿ ವೆಚ್ಚವಾಗಿದ್ದು, ಪಾರದರ್ಶಕವಾಗಿ ಮಾಡಲಾಗಿದೆ. 783 ಕೋಟಿ ಜಿಲ್ಲಾಧಿಕಾರಿ ಖಾತೆಯಲ್ಲಿ ಲಭ್ಯವಿದೆ” ಎಂದು ಹೇಳಿದರು.

Advertisements

“ರಾಜ್ಯದಲ್ಲಿ ಪ್ರಸ್ತುತ ಮುಂಗಾರು ಅವಧಿಯಲ್ಲಿ ಇದುವರೆಗೆ ಶೇ.7ರಷ್ಟು ಹೆಚ್ಚು ಮಳೆಯಾಗಿದೆ. ಈ ವರ್ಷ ಮಳೆ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಅತಿವೃಷ್ಟಿಯಿಂದ ಸಮಸ್ಯೆಯಾಗುವ ಗ್ರಾಮಗಳನ್ನು ಗುರುತಿಸಲಾಗಿದೆ 225 ಅಂತಹ ಜಲಾಗ್ರಾಮಗಳನ್ನು 1247ಗ್ರಾಮ ಪಂಚಾಯತ್‌ ಗುರುತಿಸಲಾಗಿದೆ. ಪ್ರತಿಯೊಂದು ಗ್ರಾಂ ಪಂಚಾಯತ್‌ ನಲ್ಲಿ ಟಾಸ್ಕ್‌ ಪೋಸ್ಟ್‌ ರಚನೆ ಮಾಡಬೇಕು” ಎಂದರು.

“27 ಜಿಲ್ಲೆ 177 ತಾಲೂಕುಗಳು, 1247 ಗ್ರಾಮ ಪಂಚಾಯತ್‌ಗಳಲ್ಲಿ ಅತಿವೃಷ್ಟಿಗೆ ತುತ್ತಾಗುವುದನ್ನು ಗುರುತಿಸಲಾಗಿದ್ದು, ಪ್ರತಿ ಕಡೆ ಟಾಸ್ಕ್‌ಪೋರ್ಸ್‌ ರಚಿಸಬೇಕು. 20,38,334 ಜನರು ಪದೇ ಪದೇ ಪ್ರವಾಹಕ್ಕೆ ತುತ್ತಾಗುವುದನ್ನು ಗುರುತಿಸಲಾಗಿದೆ. ಅಂತಹ ಜನರನ್ನು ಬೇರೆ ಕಡೆಗೆ ಸ್ಥಳಾಂತರಿಸಿ ಮನೆ ಒದಗಿಸುವ ಬಗ್ಗೆ ಕ್ರಮ ಕೈಗೊಳ್ಳಬೇಕು” ಎಂದು ಹೇಳಿದರು.

ಮಹಿಳಾ ಆಯೋಗದ ವರದಿ ಬಳಿಕ ಕ್ರಮ

ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌದರಿ ಅವರು ಕಲ್ಬುರ್ಗಿ ಮಹಿಳಾ ಹಾಸ್ಟೆಲ್ ಗೆ ಭೇಟಿ ನೀಡಿ ಹಾಸ್ಟೆಲ್ ಟ್ಯಾಂಕ್ ಮೂಲಕ ಕಲುಷಿತ ನೀರಿನ ಸರಬರಾಜು ಆಗುತ್ತಿರುವ ಬಗ್ಗೆ ಬರೆದಿರುವ ಪತ್ರವನ್ನು ಸಿಎಂ ಸಭೆಯಲ್ಲಿ ಪ್ರಸ್ತಾಪಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಆ ಸಮಸ್ಯೆಯನ್ನು ಬಗೆಹರಿಸಿ ಈಗಾಗಲೇ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ ಎಂದು ಉತ್ತರಿಸಿದರು.

ಗ್ಯಾರಂಟಿ ಯೋಜನೆ ಸಮೀಕ್ಷೆ

“ಗ್ಯಾರಂಟಿ ಯೋಜನೆಗಳ ಕುರಿತು ಜಾಗೃತಿ ಮೂಡಿಸಲು ಹಾಗೂ ಫಲಾನುಭವಿಗಳಿಂದ ಪ್ರತಿಕ್ರಿಯೆ ಪಡೆಯಲು ಸಮೀಕ್ಷೆ ಕಾರ್ಯವನ್ನು ಚುರುಕುಗೊಳಿಸಬೇಕು. ರಾಜ್ಯದಲ್ಲಿ 84,52,317 ಕುಟುಂಬಗಳ ಸುಮಾರು 5 ಕೋಟಿ ಜನರ ಸಮೀಕ್ಷೆ ನಡೆಸಬೇಕಾಗಿದೆ” ಎಂದರು.

ಗ್ರಾಮೀಣಾಭಿವೃದ್ಧಿ

“ಜಿಲ್ಲಾ ಮಟ್ಟ ಹಾಗೂ ತಾಲೂಕು ಮಟ್ಟದಲ್ಲಿ ಕುಡಿಯುವ ನೀರಿನ ಗುಣಮಟ್ಟ ಪರಿಶೀಲನೆಗೆ ಟಾಸ್ಕ್‌ಫೋರ್ಸ್‌ ರಚಿಸಲಾಗಿದೆ. ಕಲುಷಿತ ನೀರು ಪರೀಕ್ಷೆಗೆ ಸಾಕಷ್ಟು ಪ್ರಮಾಣದಲ್ಲಿ ಕಿಟ್‌ ಲಭ್ಯವಿದೆ. ಪ್ರತಿ ಹೋಬಳಿಗೆ ಭೇಟಿ ನೀಡಿ ಪ್ರಮಾಣ ಪತ್ರ ಒದಗಿಸಲು ಅಧಿಕಾರಿಗಳ ತಂಡಗಳನ್ನು ರಚಿಸಲಾಗಿದೆ. ಇದುವರೆಗೆ 42945 ಜನವಸತಿ ಪ್ರದೇಶಗಳಲ್ಲಿ ಜಂಟಿ ತಪಾಸಣೆ ನಡೆಸಲಾಗಿದೆ” ಎಂದು ವಿವರಿಸಿದರು.

ಶುದ್ಧ ನೀರು ಘಟಕ

“ಕೆಟ್ಟು ನಿಂತಿರುವ ಶುದ್ಧ ನೀರಿನ ಘಟಕಗಳ ದುರಸ್ತಿಗೆ ಯೋಜನೆ ರೂಪಿಸಬೇಕು. ಈಗಾಗಲೇ ಅಂತಹ ಶುದ್ಧ ನೀರು ಘಟಕಗಳ ಪರಿಶೀಲನೆ ನಡೆಸಲಾಗಿದ್ದು, ಸಮರ್ಪಕ ಯೋಜನೆ ರೂಪಿಸಿ, ಗ್ರಾಮಗಳಲ್ಲಿ ಶುದ್ಧ ಕುಡಿಯುವ ನೀರು ಒದಗಿಸಲು ಕ್ರಮ ಕೈಗೊಳ್ಳಬೇಕು” ಎಂದು ಸಿಎಂ ಸೂಚಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X