ಕೇಂದ್ರದ ಅಸಹಕಾರದಿಂದ ಸ್ಥಗಿತಗೊಂಡಿದ್ದ ‘ಅನ್ನಭಾಗ್ಯ’ ಅಕ್ಕಿ ಮುಂದಿನ ತಿಂಗಳಿನಿಂದ ವಿತರಣೆ: ಸಚಿವ ಕೆ ಎಚ್ ಮುನಿಯಪ್ಪ

Date:

ಚುನಾವಣೆಯ ವೇಳೆ ನೀಡಿದ್ದ ಐದು ಗ್ಯಾರಂಟಿಗಳ ಪೈಕಿ ಅನ್ನಭಾಗ್ಯ ಯೋಜನೆಯ ಅಡಿಯಲ್ಲಿ ನೀಡಿದ್ದ 10 ಕೆ ಜಿ ಅಕ್ಕಿಯ ಭರವಸೆಯನ್ನು ಮುಂದಿನ ತಿಂಗಳಿನಿಂದ ನೀಡಲಾಗುವುದು ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ ಎಚ್ ಮುನಿಯಪ್ಪ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕೇಂದ್ರದ ಅಸಹಕಾರದಿಂದ ಪೂರೈಸಲಾಗದ 10 ಕೆಜಿ ಅಕ್ಕಿಯನ್ನು ನೀಡುವ ನಿಟ್ಟಿನಲ್ಲಿ ಟೆಂಡರ್ ಪ್ರಕ್ರಿಯೆಯನ್ನು ಆರಂಭಿಸಿದ್ದೇವೆ. ಬರ ಪೀಡಿತ ತಾಲೂಕುಗಳಲ್ಲಿ ಹಣದ ಬದಲು ಅಕ್ಕಿಯನ್ನೇ ಕೊಡುತ್ತೇವೆ ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ ಅನ್ನಭಾಗ್ಯ ಯೋಜನೆ ಅಡಿಯಲ್ಲಿ ಎಲ್ಲ ಅರ್ಹ ಪಡಿತರ ಫಲಾನುಭವಿಗಳಿಗೆ ಮುಂದಿನ ತಿಂಗಳಿನಿಂದ (ಅಕ್ಟೋಬರ್‌) ಎಲ್ಲ ಸದಸ್ಯರಿಗೂ ತಲಾ 10 ಕೆ ಜಿ ಅಕ್ಕಿ ನೀಡುತ್ತೇವೆ. ಈಗಾಗಲೇ ಅಕ್ಕಿ ಸರಬರಾಜು ಮಾಡುವ ಬಗ್ಗೆ ಟೆಂಡರ್ ಪ್ರಕ್ರಿಯೆ ನಡೆದಿದೆ. ಇನ್ನು ಮೊದಲನೆಯದಾಗಿ ಆರಂಭದಲ್ಲಿ ಬರಪೀಡಿತವೆಂದು ಘೋಷಣೆ ಮಾಡಲಾದ ತಾಲೂಕಿನಲ್ಲಿ ಹಣದ ಬದಲು ಅಕ್ಕಿ ಕೊಡುತ್ತೇವೆ ಎಂದು ಮಾಹಿತಿ ನೀಡಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
ಕೆ ಎಚ್_ ಮುನಿಯಪ್ಪ

ಅನ್ನಭಾಗ್ಯ ಯೋಜನೆಯಡಿಯಲ್ಲಿ ಕಾಂಗ್ರೆಸ್ 10 ಕೆ ಜೆ ಅಕ್ಕಿ ಕೊಡುವುದಾಗಿ ಘೋಷಣೆ ಮಾಡಿತ್ತು. ಆದರೆ ಕಾಂಗ್ರೆಸ್ ಈ ಗ್ಯಾರಂಟಿಯನ್ನು ಜಾರಿಗೆ ತರಲು ಅಕ್ಕಿಯ ಕೊರತೆ ಎದುರಾಗಿತ್ತು. ಅನ್ನಭಾಗ್ಯ ಯೋಜನೆಯಡಿಯಲ್ಲಿ ಅಕ್ಕಿ ಪೂರೈಕೆ ಮಾಡುವ ನಿಟ್ಟಿನಲ್ಲಿ ಅಗತ್ಯ ಅಕ್ಕಿಯನ್ನು ಕೇಂದ್ರ ಆಹಾರ ನಿಗಮದಿಂದ ಖರೀದಿ ಮಾಡಲು ರಾಜ್ಯ ಸರ್ಕಾರ ಮುಂದಾಗಿತ್ತು. ಆದರೆ ಕೇಂದ್ರ ಆಹಾರ ನಿಗಮ ರಾಜ್ಯಕ್ಕೆ ಅಕ್ಕಿ ಪೂರೈಸಲು ನಿರಾಕರಿಸಿತ್ತು. ಹೀಗಾಗಿ, ಅಂತ್ಯೋದಯ ಹಾಗೂ ಬಿಪಿಎಲ್‌ ಕಾರ್ಡ್‌ದಾರರಿಗೆ ಅಕ್ಕಿ ಕೊಡಲಾಗದೇ ತಲಾ 5 ಕೆ ಜಿ ಅಕ್ಕಿ ಹಾಗೂ ಉಳಿದ 5 ಕೆ ಜಿ ಬದಲಾಗಿ ಹಣವನ್ನು ನೀಡುತ್ತಿತ್ತು.

ಅಕ್ಕಿ ಕೊರತೆ ಎದುರಾದ ಹಿನ್ನೆಲೆಯಲ್ಲಿ ಐದು ಕೆ ಜಿ ಅಕ್ಕಿಯ ಬದಲಾಗಿ ಪ್ರತಿಯೊಬ್ಬರಿಗೆ ಪ್ರತಿ ತಿಂಗಳು 170 ರೂ ಹಣವನ್ನು ಹಾಕಲು ಸಂಪುಟ ಸಭೆಯಲ್ಲಿ ನಿರ್ಧಾರ ಮಾಡಲಾಗಿತ್ತು. ಅದರಂತೆ ಅಕೌಂಟಿಗೆ 170 ರೂ. ಹಣವನ್ನು ಹಾಕಲಾಗಿತ್ತು. ಇದೀಗ ಮುಂಬರುವ ತಿಂಗಳಿಂದ ಹಣಕ್ಕೆ ಬದಲಾಗಿ ಹತ್ತು ಕೆಜಿ ಅಕ್ಕಿಯನ್ನು ಬರ ಪೀಡಿತ ತಾಲೂಕುಗಳಿಗೆ ಪೂರೈಕೆ ಮಾಡಲು ನಿರ್ಧಾರ ಮಾಡಲಾಗಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೇಂದ್ರ ಸರ್ಕಾರ ಉದ್ಯಮಿಗಳ ಏಳಿಗೆಗಾಗಿ ಮಾತ್ರ ಕೆಲಸ ಮಾಡುತ್ತಿದೆ: ರಾಹುಲ್‌ ಗಾಂಧಿ ವಾಗ್ದಾಳಿ

"ಕೇಂದ್ರ ಸರ್ಕಾರ 20-25 ಉದ್ಯಮಿಗಳ ಏಳಿಗೆಗಾಗಿ ಮಾತ್ರ ಕೆಲಸ ಮಾಡುತ್ತಿದೆ. ಉದ್ಯಮಿಗಳ...

ನರೇಂದ್ರ ಮೋದಿಯೇ ಭಾರತದ ದೊಡ್ಡ ಸಮಸ್ಯೆ: ಎಂ ಕೆ ಸ್ಟಾಲಿನ್

ಪ್ರಸ್ತುತ ಭಾರತದ ದೊಡ್ಡ ಸಮಸ್ಯೆ ಪ್ರಧಾನಿ ನರೇಂದ್ರ ಮೋದಿ ಅವರೇ ಆಗಿದ್ದಾರೆ...

ಪಿಎಸ್‌ಐ ಹಗರಣದ ಕಿಂಗ್‌ಪಿನ್ ಆರ್‌.ಡಿ ಪಾಟೀಲ್ ಮನೆಗೆ ಬಿಜೆಪಿ ಅಭ್ಯರ್ಥಿ, ಸಂಸದ ಉಮೇಶ್ ಜಾಧವ್ ಭೇಟಿ

ಪೊಲೀಸ್‌ ಅಧಿಕಾರಿ ಆಗಬೇಕೆಂಬ ರಾಜ್ಯದ ಯುವಜನರ ಭವಿಷ್ಯವನ್ನೇ ಹಾಳು ಮಾಡಿದ್ದ ಪಿಎಸ್‌ಐ...

ಗೈರು ಹಾಜರಾದ ಮತಗಟ್ಟೆ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಕೈಗೊಳ್ಳಲು ಸೂಚನೆ: ಬಿಬಿಎಂಪಿ ಮುಖ್ಯ ಆಯುಕ್ತ

ಲೋಕಸಭಾ ಚುನಾವಣೆ ಹಿನ್ನೆಲೆ, ಮತಗಟ್ಟೆ ಅಧಿಕಾರಿಗಳಿಗೆ ಹಮ್ಮಿಕ್ಕೊಂಡಿರುವ ತರಬೇತಿಗೆ ಗೈರು ಹಾಜರಾದವರ...