ಅಕ್ಕಿ ವಿತರಣೆ ರಾಜ್ಯ ಸರ್ಕಾರದ ಜವಾಬ್ದಾರಿ; ಕೇಂದ್ರ ಸರ್ಕಾರವನ್ನು ದೂರುವುದು ಸರಿಯಲ್ಲ: ಬಿಎಸ್‌ವೈ

Date:

  • ಉಚಿತ ಅಕ್ಕಿ ವಿತರಣೆ ಸಂಬಂಧ ಮುಂದುವರೆದ ವಾಕ್ಸಮರ
  • ಭರವಸೆ ಕೊಟ್ಟ ಮೇಲೆ ಅದನ್ನು ಈಡೇರಿಸಬೇಕು ಎಂದ ಬಿಎಸ್‌ವೈ

ಅನ್ನಭಾಗ್ಯ ಯೋಜನೆಯಡಿ ಉಚಿತ ಅಕ್ಕಿ ವಿತರಣೆ ಮಾಡುವುದು ರಾಜ್ಯ ಸರ್ಕಾರದ ಜವಾಬ್ದಾರಿ. ಕೊಟ್ಟ ಮಾತನ್ನು ಉಳಿಸಕೊಳ್ಳಬೇಕೆಂದರೆ ಎಲ್ಲಿಯಾದರೂ, ಎಲ್ಲಿಂದಲಾದರೂ ಖರೀದಿ ಮಾಡಿ ಕೊಡಲಿ ಎಂದು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಕಾಂಗ್ರೆಸ್ ಸರ್ಕಾರವನ್ನು ಒತ್ತಾಯಿಸಿದ್ದಾರೆ.

- Advertisement -

ಶಿವಮೊಗ್ಗದಲ್ಲಿ ಮಾಧ್ಯಮದವರೊಂದಿಗೆ ಅಕ್ಕಿ ವಿತರಣೆ ಗೊಂದಲ ವಿಚಾರವಾಗಿ ಮಾತನಾಡಿದ ಅವರು, “ಅಕ್ಕಿ ವಿತರಣೆ ವಿಚಾರದಲ್ಲಿ ಕಾಂಗ್ರೆಸ್ ಉದ್ದೇಶಪೂರ್ವಕವಾಗಿ ಗೊಂದಲ ಸೃಷ್ಟಿಸುತ್ತಿದೆ. ಈಗಾಗಲೇ ಕೇಂದ್ರ ಸರ್ಕಾರ 5 ಕೆಜಿ ಅಕ್ಕಿ ಉಚಿತವಾಗಿ ಕೊಡುತ್ತಿದೆ. ಹೆಚ್ಚುವರಿಯಾಗಿ ಅಕ್ಕಿ ಕೊಡಲು ಕೇಂದ್ರ ಒಪ್ಪಿರಲಿಲ್ಲ. ಅದು ರಾಜ್ಯ ಸರ್ಕಾರದ ಜವಾಬ್ದಾರಿ, ಎಲ್ಲಿಯಾದ್ರೂ ಖರೀದಿ ಮಾಡಿ ಕೊಡಲಿ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪ್ರಜಾಪ್ರಭುತ್ವದ ಪ್ರತಿಭಟನೆ ಮತ್ತು ಪೊಲೀಸ್ ವ್ಯವಸ್ಥೆ

ಭಾರತದಲ್ಲಿ ಪ್ರತಿಭಟನೆಗಳಿಗೆ ಶತಮಾನಗಳ ಸಂಪ್ರದಾಯವಿದೆ. ಬ್ಯಾರಿಕೇಡ್‌ಗಳನ್ನು ಹಾರುವುದು, ಮಾನವ ಸರಪಳಿ ರಚಿಸುವುದು ಅಥವಾ ಬಂಧನವನ್ನು ವಿರೋಧಿಸಿ ನೆಲದ ಮೇಲೆ ಮಲಗುವುದು ಪ್ರಜಾಪ್ರಭುತ್ವದ ಸಹಜ ಆಂದೋಲನದ ಭಾಗವೇ ಹೊರತು ಖಂಡಿಸಬೇಕಾದ ಅಪರಾಧಗಳಲ್ಲ. ಅಕ್ಟೋಬರ್ 10ರಂದು ದೆಹಲಿಯಲ್ಲಿ...

ಬೋಟ್ ಕ್ಲಬ್‌ನಿಂದ ಜಂತರ್ ಮಂತರ್‌ವರೆಗೆ; ದೆಹಲಿಯ ಪ್ರತಿಭಟನಾ ತಾಣ...

ಸ್ವಾತಂತ್ರ್ಯಾನಂತರ ಹಲವು ದಶಕಗಳವರೆಗೆ ದೆಹಲಿಯ ಇಂಡಿಯಾ ಗೇಟ್ ಸಮೀಪದ ರಾಜಪಥದಲ್ಲಿರುವ ಬೋಟ್ ಕ್ಲಬ್ ಮೈದಾನವು ದೇಶದ ಪ್ರಮುಖ ರಾಜಕೀಯ ಪ್ರತಿಭಟನೆಗಳು, ರೈತ ಸಮಾವೇಶಗಳು ಮತ್ತು ಸಾರ್ವಜನಿಕ ಚಳವಳಿಗಳಿಗೆ ವೇದಿಕೆಯಾಗಿತ್ತು. ದೆಹಲಿಯ ಜಂತರ್ ಮಂತರ್ ಪ್ರತಿಭಟನಾ...

2026ರ ಅರ್ಥಶಾಸ್ತ್ರ ನೊಬೆಲ್ ಪ್ರಶಸ್ತಿಯ ಹಿಂದಿನ ತಿರುಳು

ಅಮೆರಿಕದ ಇಬ್ಬರು ವಿದ್ವಾಂಸರಾದ ರಾಬರ್ಟ್ ಇ. ಹಾಲ್ ಮತ್ತು ಮೈಕಲ್ ವುಡ್‌ಫೋರ್ಡ್ ರೂಪಿಸಿದ 'ನವ-ಕೇನ್ಸಿಯನ್ ಮಾದರಿ'ಗಳು ಇಂದು ಜಗತ್ತಿನ ಬಹುತೇಕ ಕೇಂದ್ರ ಬ್ಯಾಂಕುಗಳ ಮತ್ತು ಹಣಕಾಸು ಇಲಾಖೆಗಳ ದೈನಂದಿನ ದಿಕ್ಸೂಚಿಯಾಗಿವೆ. ಆ ಕಾರಣಕ್ಕೆ...

“ಕಾಂಗ್ರೆಸ್ ನಾಯಕರು 10 ಕೆಜಿ ಅಕ್ಕಿ ವಿತರಣೆ ಮಾಡುತ್ತೇವೆ ಎಂದು ಭರವಸೆ ಕೊಟ್ಟಿದ್ದರು. ಅದರಂತೆ ಅಕ್ಕಿ ವಿತರಣೆ ಮಾಡಬೇಕು. ಒಂದು ಗ್ರಾಂ ಕಡಿಮೆಯಾದರೂ ಜನ ಅದನ್ನು ಒಪ್ಪುವುದಿಲ್ಲ. ಕೇಂದ್ರ ಸರ್ಕಾರವನ್ನು ಅನಗತ್ಯ ದೂಷಿಸುವುದು ಸರಿಯಲ್ಲ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ?:ಅಕ್ಕಿ ಕೊಡಲು ನಿರಾಕರಿಸಿದ ಬಗ್ಗೆ ‘ಮನ್‌ ಕಿ ಬಾತ್‌’ನಲ್ಲಿ ಮಾತಾಡುವಿರಾ; ದಿನೇಶ್‌ ಗುಂಡೂರಾವ್ ಪ್ರಶ್ನೆ

“ಇಲ್ಲಿಯವರೆಗೆ ಒಂದೇ ಒಂದು ಬಾರಿ ಕೇಂದ್ರ ಸರ್ಕಾರ ಹೆಚ್ಚುವರಿ ಅಕ್ಕಿ ಕೊಡುತ್ತೇವೆ ಎಂದು ಹೇಳಿಲ್ಲ. ಈಗಲೂ ಐದು ಕೆಜಿ ಅಕ್ಕಿ ಕೊಡುತ್ತಿರುವುದು ಕೇಂದ್ರ ಸರ್ಕಾರವೇ” ಎಂದು ಯಡಿಯೂರಪ್ಪ ಹೇಳಿದರು.

ಇನ್ನು ವಿಪಕ್ಷ ನಾಯಕನ ಆಯ್ಕೆ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಯಡಿಯೂರಪ್ಪ, “ಸದನ ಆರಂಭವಾಗುವುದರೊಳಗೆ ವಿಪಕ್ಷ ನಾಯಕನ ಆಯ್ಕೆ ಮಾಡುತ್ತೇವೆ. ಆ ಬಗ್ಗೆ ಆತಂಕ ಬೇಡ” ಎಂದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರತಿಭಟನೆ ತಡೆಯಲು ಸಾಮಾಜಿಕ ಕಾರ್ಯಕರ್ತನ ಗೃಹಬಂಧನ: ದೆಹಲಿ ಪೊಲೀಸರಿಗೆ ಹೈಕೋರ್ಟ್ ತರಾಟೆ

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್...

ದೆಹಲಿ ಪೊಲೀಸರ ಭೇಟಿಗೆ ಮುಂದಾದ ಸಿಜೆಪಿ ನಾಯಕರು: ಪ್ರತಿಭಟನೆಗೆ ಅನುಮತಿ ಕೋರಲು ನಿರ್ಧಾರ

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್...

ಕಾಂಗ್ರೆಸ್ ನಾಯಕರ ಭೇಟಿಗೆ ನಕಾರ; ನಾಲ್ಕು ಕಾರಣಗಳು ನೀಡಿದ ಸಿಜೆಐ ಸೂರ್ಯ ಕಾಂತ್

ಏಕಪಕ್ಷೀಯ ನಿರ್ಧಾರಗಳನ್ನು ಕೈಗೊಳ್ಳುವ ಮೂಲಕ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್...