3 ತಿಂಗಳೊಳಗೆ ಎಲ್ಲ ಮಹಿಳೆಯರಿಗೂ ಶಕ್ತಿ ಯೋಜನೆ ಸ್ಮಾರ್ಟ್ ಕಾರ್ಡ್ ವಿತರಣೆ : ರಾಮಲಿಂಗಾರೆಡ್ಡಿ

Date:

  • ಭಾನುವಾರ ಅಧಿಕೃತ ಚಾಲನೆ ಪಡೆದುಕೊಳ್ಳಲಿರುವ ಶಕ್ತಿ ಯೋಜನೆ
  • ನಾಳೆ ಸಾಂಕೇತಿಕವಾಗಿ ಕೆಲವರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಮಾಡುತ್ತೇವೆ

ಶಕ್ತಿಯೋಜನೆ ಮಹಿಳಾ ಪ್ರಯಾಣಿಕರಿಗೆ ಯೋಜನೆ ಲಾಭ ಪಡೆಯಲು ಅಗತ್ಯವಿರುವ ಸ್ಮಾರ್ಟ್ ಕಾರ್ಡ್ ಗಳನ್ನು ಮೂರು ತಿಂಗಳ ಒಳಗಾಗಿ ಒದಗಿಸಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.

ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ ಈ ಕುರಿತು ಮಾಹಿತಿ ಹಂಚಿಕೊಂಡ ಅವರು, ನಮ್ಮ ಪಕ್ಷದ ಮಹತ್ವಾಕಾಂಕ್ಷಿಯ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಮಹಿಳೆಯರಿಗೆ ಸರ್ಕಾರಿ ಬಸ್ ಗಳಲ್ಲಿ ಉಚಿತ ಪ್ರಯಾಣ ಕಲ್ಪಿಸುವ “ಶಕ್ತಿ ಯೋಜನೆ”ಗೆ ನಾಳೆ (ಭಾನುವಾರ) ಚಾಲನೆ ದೊರಕಲಿದೆ ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಯೋಜನೆಗೆ ಚಾಲನೆ ನೀಡಲಿದ್ದು, ಮೆಜಸ್ಟಿಕ್ ನಿಂದ ವಿಧಾನಸೌಧದ ವರೆಗಿನ ಮಾರ್ಗವೊಂದರಲ್ಲಿ ಕಂಡಕ್ಟರ್ ಮಾದರಿಯಲ್ಲಿ ಪ್ರಯಾಣಿಕರಿಗೆ ಟಿಕೆಟ್ ನೀಡಲಿದ್ದಾರೆ. ಇದೇ ವೇಳೆ ಕೆಲವರಿಗೆ ಸಾಂಕೇತಿಕವಾಗಿ ಸ್ಮಾರ್ಟ್ ಕಾರ್ಡ್‌ಗಳ ವಿತರಣೆ ಮಾಡಲಿದ್ದೇವೆ ಎಂದು ಸಚಿವರು ಹೇಳಿದರು.

ನಿಯಮಾವಳಿಗಳಂತೆ ಯೋಜನೆ ಲಾಭ ಪಡೆಯ ಬಯಸುವವರು, ಸ್ಮಾರ್ಟ್ ಕಾರ್ಡ್ ಮಾಡಿಸಿಕೊಳ್ಳಲು ಮೂರು ತಿಂಗಳು ಅವಧಿ ನೀಡಲಾಗಿದೆ. ಹಾಗೆಯೇ ಯಾವ ಬಸ್‌ಗಳಿಗೆ ಈ ಯೋಜನೆ ಅನ್ವಯವಾಗಲಿದೆ ಎನ್ನುವುದರ ಬಗೆಗೂ ಜಾಹೀರಾತು ಸಹಿತ ಸ್ವಷ್ಟ ಮಾಹಿತಿ ಕೊಟ್ಟಿದ್ದೇವೆ. ಈ ವಿಚಾರದಲ್ಲಿ ಯಾವುದೇ ಗೊಂದಲಬೇಡ ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ?:ಗ್ಯಾರಂಟಿ ಯೋಜನೆಗಳಲ್ಲಿ ಯಾವುದೇ ಗೊಂದಲಗಳಿಲ್ಲ: ಸಿಎಂ ಸಿದ್ದರಾಮಯ್ಯ

ಇನ್ನು ಕೆಲವು ಭಾಗಗಳಲ್ಲಿ ಬಸ್ ಇಲ್ಲ ಎನ್ನುವ ದೂರು ಬಂದಿದೆ. ಈ ಬಗ್ಗೆ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳುತ್ತೇವೆ. ಹಾಗೆಯೇ ಎಲ್ಲೆಲ್ಲಿ ಬಸ್ ನಿಲುಗಡೆಗೆ ಅವಕಾಶವಿದೆಯೋ ಅಲ್ಲೆಲ್ಲ ಕಡ್ಡಾಯವಾಗಿ ಚಾಲಕರು ಬಸ್ ನಿಲ್ಲಿಸುವಂತೆ ಸೂಚನೆ ನೀಡಲಾಗಿದೆ ಎಂದು ಸಾರಿಗೆ ಸಚಿವರು ತಿಳಿಸಿದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

28 ಲೋಕಸಭಾ ಕ್ಷೇತ್ರಗಳಿಗೆ ವೀಕ್ಷಕರಾಗಿ ಸಚಿವರ ನೇಮಕ; ಎಂ ಬಿ ಪಾಟೀಲ್‌, ಜಾರ್ಜ್‌ಗಿಲ್ಲ ಜವಾಬ್ದಾರಿ

ಸಚಿವರ ತವರು ಜಿಲ್ಲೆ ಹೊರತುಪಡಿಸಿ ಬೇರೆ ಬೇರೆ ಜಿಲ್ಲೆಗಳಿಗೆ ನೇಮಕ ಸಂಭಾವ್ಯ ಅಭ್ಯರ್ಥಿಗಳ...

ವಿಪಕ್ಷಗಳಿಂದ ನೀರಿನ ರಾಜಕಾರಣ: ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್

ಕಾವೇರಿ ನೀರಿನ ವಿಚಾರದಲ್ಲಿ ವಿಪಕ್ಷಗಳ ಮುಖಂಡರಾದ ಬಿಎಸ್​ವೈ, ಬೊಮ್ಮಾಯಿ, ಹೆಚ್​ಡಿ ಕುಮಾರಸ್ವಾಮಿಯವರು...

ತಮಿಳುನಾಡಿಗೆ ನೀರು ಬಿಟ್ಟಿದ್ದೇ ಆದರೆ ನಮ್ಮ ನಡೆ ಬೇರೆ ಇರಲಿದೆ: ಕುಮಾರಸ್ವಾಮಿ ಎಚ್ಚರಿಕೆ

ತಮಿಳುನಾಡು ಕೇಳುವ ಮೊದಲೇ ನೀರು ಬಿಟ್ಟ ಸರ್ಕಾರ ತಮಿಳುನಾಡಿನವರು ಎರಡು ಬೆಳೆ ಬೆಳೆಯುತ್ತಾರೆ:...

ಹೊಸ ಸಂಸತ್ ಕಟ್ಟಡವನ್ನು ‘ಮೋದಿ ಮಲ್ಟಿಪ್ಲೆಕ್ಸ್’ ಎನ್ನಬೇಕು: ಜೈರಾಮ್ ರಮೇಶ್

ಹೊಸ ಸಂಸತ್ ಭವನದ ರಚನೆಗೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್...