ಜೂನ್-ಜುಲೈನಲ್ಲಿ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆ!

Date:

ಮೂರು ವರ್ಷಗಳಾದರೂ ನಡೆಯದ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ಕಾಲ ಕೂಡಿಬಂದಿದ್ದು, ಜೂನ್‌-ಜುಲೈನಲ್ಲಿ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಯುವ ಸಾಧ್ಯತೆ ಇದೆ.

- Advertisement -

ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ನಡೆಸದ ಹಿನ್ನೆಲೆಯಲ್ಲಿ ರಾಜ್ಯ ಚುನಾವಣಾ ಆಯೋಗ ಸಲ್ಲಿಸಿದ್ದ ನ್ಯಾಯಾಂಗ ನಿಂದನೆ‌ ಅರ್ಜಿಯ ವಿಚಾರಣೆ ಹೈಕೋರ್ಟ್‌ನಲ್ಲಿ ಇಂದು (ಫೆ.17) ನಡೆಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಸರ್ಕಾರ ಮೀಸಲಾತಿ ಪಟ್ಟಿ ನೀಡಿದರೆ ವೇಳಾ ಪಟ್ಟಿ ಪ್ರಕಟಿಸಲಾಗುವುದು ಎಂದು ಚುನಾವಣಾ ಆಯೋಗದ ಪರ ಹಿರಿಯ ವಕೀಲ ಕೆ.ಎನ್.ಫಣೀಂದ್ರ ವಿಚಾರಣೆ ವೇಳೆ ತಿಳಿಸಿದರು.

ಸರ್ಕಾರದ ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಪ್ರತಿಕ್ರಿಯಿಸಿ, “ಮೇ ತಿಂಗಳೊಳಗೆ ಮೀಸಲಾತಿ ನೀಡುವುದಾಗಿ ಸ್ಪಷ್ಟಪಡಿಸಿದರು. ಏನೆ ಆಗಲಿ ಮೇ ಅಂತ್ಯದೊಳಗೆ ಮೀಸಲಾತಿ ಪಟ್ಟಿಯನ್ನು ಚುನಾವಣಾ ಆಯೋಗಕ್ಕೆ ಕೊಡಲಾಗುವುದು. ಜೂನ್ ಅಥವಾ ಜುಲೈ ತಿಂಗಳಲ್ಲಿ ಚುನಾವಣೆ ಆಯೋಗ, ಚುನಾವಣೆಗಳನ್ನು ನಡೆಸಬಹುದು” ಎಂದು ತಿಳಿಸಿದರು.

ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಅವರ ಹೇಳಿಕೆ ದಾಖಲಿಸಿಕೊಂಡು ಹೈಕೋರ್ಟ್ ಅರ್ಜಿ ಇತ್ಯರ್ಥಪಡಿಸಿತು. ಈ ಮೂಲಕ ನನೆಗುದಿಗೆ ಬಿದ್ದಿದ್ದ ತಾಲೂಕು ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಗೆ ಕೊನೆ ಕಾಲ ಕೂಡಿಬಂದಂತಾಗಿದೆ.

ಜಿಲ್ಲಾ ಮತ್ತು ತಾಲ್ಲೂಕು ಪಂಚಾಯತ್ ಚುನಾವಣೆಗಳಗೆ ಸಿದ್ದ

"ಜಿಲ್ಲಾ ಪಂಚಾಯತ್ ಹಾಗೂ ತಾಲ್ಲೂಕು ಪಂಚಾಯತಿ ಚುನಾವಣೆಗಳಿಗೆ ನಾವು ಸಿದ್ಧರಾಗಿದ್ದು, ಉಚ್ಛ ನ್ಯಾಯಾಲಯದ ಸೂಚನೆ ಮೇರೆಗೆ ಚುನಾವಣೆ ಮಾಡಲಾಗುವುದು" ಎಂದು ಸಿಎಂ ಸಿದ್ದರಾಮಯ್ಯ ಸೋಮವಾರ ಸುದ್ದಿಗಾರರಿಗೆ ತಿಳಿಸಿದರು.
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ SIR | ಮತ ಹಕ್ಕಿಗೇ ಕನ್ನ: ಪರಿಶೋಧನಾ ವರದಿ ಬಿಚ್ಚಿಟ್ಟ ಮತದಾರರ ಕಣ್ಣೀರ ಕಥನ

ಪ್ರಜಾಪ್ರಭುತ್ವದ ಅಡಿಪಾಯವೇ ಮತದಾರ ಮತ್ತು ಮತದಾನ. ಆದರೆ, ಈ ಅಡಿಪಾಯವನ್ನೇ ಕೆಡವುವ...

SIR ಅಕ್ರಮ: ಲೋಕಸಭೆ, ವಿಧಾನಸಭೆಗಳ ವಿಸರ್ಜನೆಗೆ ಖರ್ಗೆ ಒತ್ತಾಯ; ತಕ್ಷಣ ಹೊಸ ಚುನಾವಣೆಗೆ ಆಗ್ರಹ

ಪ್ರಸ್ತುತ ದೇಶಾದ್ಯಂತ ನಡೆದಿರುವ ಹಾಗೂ ಮುಗಿದಿರುವ ಚುನಾವಣೆಗಳ ಸಿಂಧುತ್ವವನ್ನೇ ಪ್ರಶ್ನಿಸಿರುವ ಕಾಂಗ್ರೆಸ್...

ರಾಜ್ಯಕ್ಕೆ ₹3,705.30 ಕೋಟಿ ಬರ ಪರಿಹಾರ ನೀಡಿ: ಕೇಂದ್ರ ತಂಡಕ್ಕೆ ಸಿಎಂ ಡಿಕೆಶಿ ಮನವಿ

ಕರ್ನಾಟಕ ತೀವ್ರ ಬರ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರು ಹಾಗೂ ಜನಸಾಮಾನ್ಯರು ಸಂಕಷ್ಟಕ್ಕೆ...