ರೈತರಿಗೆ ಸೂಕ್ತ ಸಮಯದಲ್ಲಿ ಬರ ಪರಿಹಾರ ಸಿಗದಿದ್ದರೆ ಜಿಲ್ಲಾಧಿಕಾರಿಗಳೇ ಹೊಣೆ: ಸಚಿವ ಕೃಷ್ಣ ಬೈರೇಗೌಡ ಎಚ್ಚರಿಕೆ

Date:

Advertisements
  • ಫ್ರೂಟ್ಸ್ ತಂತ್ರಾಂಶದಲ್ಲಿ ರೈತರ ಮಾಹಿತಿ ನಮೂದಿಗೆ ವಾರದ ಗಡುವು
  • ಬಗರ್ ಹುಕುಂ ಅರ್ಜಿ ಸುಲಭ ವಿಲೇಗೆ ಆ್ಯಪ್‌ ಬಿಡುಗಡೆ

ಬರ ಪರಿಹಾರ ನೀಡಲು ರಾಜ್ಯ ಸರ್ಕಾರದ ಖಜಾನೆಯಲ್ಲಿ ಹಣವಿದೆ. ಆದರೆ, ರೈತರಿಗೆ ಸೂಕ್ತ ಸಮಯದಲ್ಲಿ ಪರಿಹಾರದ ಹಣ ಸಿಗದಿದ್ದರೆ ಅದಕ್ಕೆ ಜಿಲ್ಲಾಧಿಕಾರಿಗಳೇ ಕಾರಣ ಎಂದು ಸಚಿವ ಕೃಷ್ಣ ಬೈರೇಗೌಡ ಎಚ್ಚರಿಸಿದರು.

ಜಿಲ್ಲಾಧಿಕಾರಿಗಳ ಜೊತೆಗೆ ಇಂದು ವಿಡಿಯೋ ಕಾನ್ಪರೆನ್ಸ್ ಮೂಲಕ ಸಭೆ ನಡೆಸಲಾಯಿತು. ಈ ವೇಳೆ ಎಚ್ಚರಿಸಿದ ಸಚಿವರು, “ರೈತರ ಜಮೀನಿನ ಸಂಪೂರ್ಣ ವಿಸ್ತೀರ್ಣವನ್ನು ಫ್ರೂಟ್ಸ್ ತಂತ್ರಾಂಶದಲ್ಲಿ ನಮೂದಿಸುವಂತೆ ಕಳೆದ ಎರಡು ತಿಂಗಳಿನಿಂದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ನಿರಂತರವಾಗಿ ಸೂಚಿಸಲಾಗುತ್ತಿದೆ. ಆದರೂ, ಫ್ರೂಟ್ಸ್ ತಂತ್ರಾಂಶದಲ್ಲಿ ರೈತರ ಜಮೀನಿನ ಮಾಹಿತಿ ಶೇ.70ನ್ನೂ ಮೀರಿಲ್ಲ. ಪರಿಸ್ಥಿತಿ ಹೀಗೆ ಮುಂದುವರೆದರೆ ರೈತರಿಗೆ ಅನ್ಯಾಯವಾಗಲಿದೆ” ಎಂದು ಅಸಮಾಧಾನ ಹೊರಹಾಕಿದರು.

kbh

 

“ಇತರೆ ಜಿಲ್ಲೆಗಳಿಗೆ ಹೋಲಿಸಿದರೆ ತುಮಕೂರು, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗಳಲ್ಲಿನ ಸಾಧನೆ ತೀರಾ ಕಳಪೆಯಾಗಿದೆ. ಬರ ಪರಿಹಾರ ಹಣವನ್ನು ನೀಡಲು ರಾಜ್ಯ ಸರ್ಕಾರ ಸಿದ್ದವಾಗಿದೆ. ಖಜಾನೆಯಲ್ಲಿ ಹಣವೂ ಇದೆ. ಆದರೆ, ಪರಿಹಾರ ಫ್ರೂಟ್ಸ್ ದತ್ತಾಂಶವನ್ನು ಆಧರಿಸಿರುವ ಕಾರಣ ಜಿಲ್ಲಾಧಿಕಾರಿಗಳು ಮಾಡುವ ಸಣ್ಣ ತಪ್ಪು ಕೂಡ ರೈತರ ಮೇಲೆ ಪರಿಣಾಮ ಬೀರಲಿದೆ. ಹೀಗಾಗಿ ಇನ್ನಾದರೂ ಆಂದೋಲನ ಮಾದರಿಯಲ್ಲಿ ಕೆಲಸ ಮಾಡಬೇಕಾಗಿದೆ” ಎಂದು ಸ್ಪಷ್ಟವಾಗಿ ಸೂಚಿಸಿದರು.

Advertisements

ಡಿ.22ರೊಳಗೆ ಮುಗಿಸಲು ಗಡುವು

ಶೀಘ್ರದಲ್ಲಿ ತಾಲೂಕು ಹೋಬಳಿ ಸಭೆ ನಡೆಸಿ ಎಲ್ಲ ಅಧಿಕಾರಿಗಳನ್ನು ಸ್ಥಳ ವೀಕ್ಷಣೆಗೆ ಕಳುಹಿಸಿ ಡಿಸೆಂಬರ್ 22ರ ಒಳಗಾಗಿ ರೈತರ ಜಮೀನಿನ ಸಂಪೂರ್ಣ ಮಾಹಿತಿಯನ್ನು ನಮೂದಿಸಿ ಎಂದು ಸಚಿವರು ಸಮಯದ ಗಡುವು ನೀಡಿದರು.

ಇದೇ ಸಮಯದಲ್ಲಿ ನೀರಿನ ಸಮಸ್ಯೆಯನ್ನು ಸೂಕ್ತ ಮಾದರಿಯಲ್ಲಿ ನಿಭಾಯಿಸಿದ್ದಕ್ಕಾಗಿ ಎಲ್ಲಾ ಜಿಲ್ಲಾಧಿಕಾರಿಗಳ ಬಗ್ಗೆಯೂ ಮೆಚ್ಚುಗೆ ಸೂಚಿಸಿದರು. ಬರ ಘೋಷಿಸಲಾಗಿದ್ದರೂ ರಾಜ್ಯದ 134 ತಾಲೂಕುಗಳಲ್ಲಿ ಈವರೆಗೆ ಟಾಸ್ಕ್ ಫೋರ್ಸ್ ಸಭೆ ನಡೆಸಿಲ್ಲ. ಹೀಗಾಗಿ ಅಧಿಕಾರಿಗಳು ಈ ಬಗ್ಗೆಯೂ ಗಮನ ನೀಡಬೇಕು ಎಂದು ಸಚಿವ ಬೈರೇಗೌಡ ಸೂಚಿಸಿದರು.

ಸಭೆಯಲ್ಲಿ ಅರ್ಹ ಜನವಸತಿ ಪ್ರದೇಶಗಳನ್ನು ಕಂದಾಯ ಗ್ರಾಮಗಳನ್ನಾಗಿ ಘೋಷಿಸುವ ಕುರಿತೂ ಚರ್ಚೆ ನಡೆಸಲಾಯಿತು. ಈ ಬಗ್ಗೆ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ ಸಚಿವರು, ಬಡವರಿಗೆ ಸಹಾಯ ಮಾಡುವ ನಿಟ್ಟಿನಲ್ಲಿ ಅರ್ಹ ಕಂದಾಯ ಗ್ರಾಮಗಳನ್ನು ಶೀಘ್ರ ಘೋಷಿಸಿ ಹಕ್ಕುಪತ್ರ ವಿತರಿಸಿ ಎಂದು ತಾಕೀತು ಮಾಡಿದರು.

ಬಗರ್ ಹುಕುಂ ಆ್ಯಪ್‌ ಬಿಡುಗಡೆ

ಸಚಿವ ಕೃಷ್ಣ ಬೈರೇಗೌಡ ಅವರು ಸಭೆಯಲ್ಲೇ ಹೊಸದಾಗಿ ಅಭಿವೃದ್ಧಿಪಡಿಸಲಾಗಿರುವ ಬಗರ್ ಹುಕುಂ ಆ್ಯಪ್‌ ಅನ್ನು ಬಿಡುಗಡೆಗೊಳಿಸಿದರು.

bagar

ನಮೂನೆ 50, 53, 57ರ ಅಕ್ರಮ ಸಕ್ರಮ ಯೋಜನೆಯಡಿ ಸಾವಿರಾರು ಅರ್ಜಿಗಳು ಸಲ್ಲಿಕೆಯಾಗಿವೆ. ಆದರೆ, ಕೃಷಿಯೇತರ ಚಟುವಟಿಕೆಗಳಲ್ಲಿ ತೊಡಗಿರುವವರಿಗೂ ಸಹ ಸಾಗುವಳಿ ಚೀಟಿ ನೀಡುವುದು ಅಸಾಧ್ಯ. ಅಲ್ಲದೆ, ಸಾವಿರಾರು ಎಕರೆ ಸರ್ಕಾರಿ ಭೂಮಿ ಅಕ್ರಮ ಸಾಗುವಳಿದಾರರ ಪಾಲಾಗಿದ್ದು, ಪ್ರತಿಯೊಂದು ಭಾಗಕ್ಕೂ ಅಧಿಕಾರಿಗಳೇ ನೇರ ಹೋಗಿ ಕೃಷಿ ನಡೆಯುತ್ತಿದೆಯೇ? ಎಂದು ಪರಿಶೀಲಿಸುವುದು ಸಾಧ್ಯವಿಲ್ಲ. ಹೀಗಾಗಿ ಬಗರ್ ಹುಕುಂ ತಂತ್ರಾಂಶದ ಮೂಲಕ ಅಕ್ರಮ ಸಾಗುವಳಿ ಭೂಮಿಯಲ್ಲಿ ಕೃಷಿ ಅಥವಾ ಇನ್ಯಾವುದೇ ಚಟುವಟಿಕೆ ಬಗ್ಗೆ ಸ್ಯಾಟಲೈಟ್ ಇಮೇಜ್ ಮೂಲಕ ಮಾಹಿತಿ ಪಡೆದು ಅರ್ಜಿ ವಿಲೇವಾರಿ ಮಾಡುವುದಕ್ಕೆ ಹಾಗೂ ಅರ್ಜಿಗಳ ಶೀಘ್ರ ಪ್ರಕ್ರಿಯೆಗೂ ಈ ಆ್ಯಪ್ ಸಹಕಾರಿಯಾಗಲಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

Download Eedina App Android / iOS

X