ಸಚಿವರಿಗೆ ಖಾತೆ ಹಂಚಿದ CM ಡಿಕೆಶಿ; ಯಾರಿಗೆ ಯಾವ ಇಲಾಖೆ? ಡಿಟೇಲ್ಸ್

Date:

ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿರುವ ಡಿ.ಕೆ. ಶಿವಕುಮಾರ್ ಅವರು, ತಮ್ಮೊಂದಿಗೆ ಪ್ರಮಾಣವಚನ ಸ್ವೀಕರಿಸಿದ್ದ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಸೇರಿದಂತೆ ಒಟ್ಟು 13 ಸಚಿವರಿಗೆ ಗುರುವಾರ ಖಾತೆಗಳನ್ನು ಹಂಚಿಕೆ ಮಾಡಿದ್ದಾರೆ.

- Advertisement -

ಹಿಂದಿನ ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಸಚಿವರಾಗಿದ್ದ ಹಲವು ಹಿರಿಯ ನಾಯಕರು, ತಾವು ಈ ಹಿಂದೆ ನಿಭಾಯಿಸುತ್ತಿದ್ದ ಖಾತೆಗಳನ್ನೇ ನೀಡುವಂತೆ ಸಿಎಂ ಡಿ.ಕೆ. ಶಿವಕುಮಾರ್ ಅವರ ಮೇಲೆ ಒತ್ತಡ ಹೇರಿದ್ದರು. “ಹಲವು ಪ್ರಮುಖ ಜನಪರ ಯೋಜನೆಗಳು ಬಾಕಿ ಉಳಿದಿದ್ದು, ಅವುಗಳನ್ನು ಪೂರ್ಣಗೊಳಿಸಲು ಅದೇ ಖಾತೆಗಳು ಬೇಕು” ಎಂದು ಕೇಳಿದ್ದರು ಎನ್ನಲಾಗಿದೆ. ಆದ್ದರಿಂದ, ಕೆಲವು ಸಚಿವರಿಗೆ ಹಳೇ ಖಾತೆಗಳನ್ನೇ ನೀಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಮೆರಿಕದ ಮಧ್ಯಂತರ ಚುನಾವಣೆ: ಬೆಲೆ ಏರಿಕೆ, ಇರಾನ್ ಯುದ್ಧದ...

ಅಮೆರಿಕದಲ್ಲಿ ಏರುತ್ತಿರುವ ಪೆಟ್ರೋಲ್ ಬೆಲೆ, ದುಬಾರಿಯಾಗುತ್ತಿರುವ ದಿನಬಳಕೆಯ ವಸ್ತುಗಳು ಹಾಗೂ ಇರಾನ್ ವಿರುದ್ಧದ ಯುದ್ಧದ ಆರ್ಥಿಕ ಪರಿಣಾಮಗಳು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತಕ್ಕೆ ದೊಡ್ಡ ರಾಜಕೀಯ ಸವಾಲಾಗಿವೆ. ನವೆಂಬರ್ 3ರಂದು ನಡೆಯಲಿರುವ ಮಧ್ಯಂತರ...

ಖಾಲಿದ್‌ರಂತೆ ಸಿಜೆಪಿ ನಾಯಕರನ್ನೂ ದೀರ್ಘ ಜೈಲುವಾಸದ ಸುಳಿಯಲ್ಲಿ ಸಿಲುಕಿಸುವ...

ಚುನಾವಣಾ ಆಯೋಗದ ಅಕ್ರಮ ಪ್ರಶ್ನಿಸಿದ ಸಿಜೆಪಿ ನಾಯಕರ ವಿರುದ್ಧ ಸರಣಿ ದೂರು ದಾಖಲಿಸಲಾಗುತ್ತಿದೆ. ಮೋದಿ ಸರ್ಕಾರದ ಅವಧಿಯಲ್ಲಿ ‘ವಿಚಾರಣೆಯೇ ಒಂದು ಶಿಕ್ಷೆ’ ಎನ್ನುವ ತಂತ್ರ ಪುನರಾವರ್ತನೆಯಾಗುತ್ತಿದೆಯೇ? ಉಮರ್‌ ಖಾಲಿದ್‌ ರೀತಿಯಲ್ಲೇ ಸೌರವ್ ದಾಸ್,...

ಎಚ್ಚೆತ್ತುಕೊಳ್ಳುತ್ತಿವೆ DMK, YSRCP; ಡಿಲಿಮಿಟೇಷನ್‌ ಮಸೂದೆ ಮತ್ತೆ ಸೋಲುವ...

ಮೋದಿಯವರ ಅಹಂಕಾರದ ಆಡಳಿತಕ್ಕೆ ದಕ್ಷಿಣ ಭಾರತವು ಎಂದಿಗೂ ತಲೆಬಾಗುವುದಿಲ್ಲ, ಮತ್ತು ಈ ಬಾರಿಯ ಅವರ ಹತಾಶೆಯ ರಾಜಕೀಯ ಕುತಂತ್ರಗಳು ಅವರ ಪಾಲಿಗೆ ತಿರುಗುಬಾಣವಾಗಿ ದೇಶದ ಪ್ರಜಾಪ್ರಭುತ್ವವು ಗೆಲ್ಲುವುದು ಖಚಿತ ಮಹಿಳಾ ಮೀಸಲಾತಿ ಎಂಬ ಪವಿತ್ರ...

ಆದರೆ, ಬೆಂಗಳೂರು ನಗರಾಭಿವೃದ್ಧಿ ಖಾತೆ ಮೇಲೆ ರಾಮಲಿಂಗಾರೆಡ್ಡಿ ಅವರಿಗೆ ಒಲವಿತ್ತು. ಆದಾಗ್ಯೂ, ಅವರಿಗೆ ಜಲಸಂಪನ್ಮೂಲ ಖಾತೆ ನೀಡಲಾಗಿದೆ ಎಂದು ತಿಳಿದುಬಂದಿದೆ. ಬೆಂಗಳೂರು ನಗರಾಭಿವೃದ್ಧಿಯ ಹೊಣೆಯನ್ನು ಕೃಷ್ಣ ಬೈರೇಗೌಡ ಅವರಿಗೆ ವಹಿಸಲಾಗಿದೆ.

ಮಾಜಿ ಸಿಎಂ ಸಿದ್ದರಾಮಯ್ಯ ಅವರ ಆಪ್ತ ಭೈರತಿ ಸುರೇಶ್ ಅವರಿಗೆ ಸಾರಿಗೆ ಇಲಾಖೆ ಸಿಕ್ಕಿದ್ದರೆ, ಕೆ.ಜೆ. ಜಾರ್ಜ್ ಇಂಧನ ಇಲಾಖೆಯನ್ನು ಉಳಿಸಿಕೊಂಡಿದ್ದಾರೆ.

### ಸಚಿವರು ಮತ್ತು ಅವರಿಗೆ ಹಂಚಿಕೆಯಾದ ಖಾತೆಗಳ ಸಂಪೂರ್ಣ ಪಟ್ಟಿ:

ಡಿ.ಕೆ. ಶಿವಕುಮಾರ್ (ಮುಖ್ಯಮಂತ್ರಿ) – ಹಣಕಾಸು, ಗುಪ್ತಚರ, ಸಹಕಾರ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ (DPAR)
ಡಾ. ಜಿ. ಪರಮೇಶ್ವರ್ (ಉಪಮುಖ್ಯಮಂತ್ರಿ) – ಕಂದಾಯ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ
ಕೃಷ್ಣ ಬೈರೇಗೌಡ -ಬೆಂಗಳೂರು ನಗರಾಭಿವೃದ್ಧಿ
ಪ್ರಿಯಾಂಕ್ ಖರ್ಗೆ – ಗೃಹ ಇಲಾಖೆ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ (IT-BT)
ಡಾ. ಯತೀಂದ್ರ ಸಿದ್ದರಾಮಯ್ಯ – ನಗರಾಭಿವೃದ್ಧಿ, ಹಿಂದುಳಿದ ವರ್ಗಗಳ ಕಲ್ಯಾಣ
ಯು.ಟಿ. ಖಾದರ್ – ಆರೋಗ್ಯ ಮತ್ತು ಕುಟುಂಬ ಕಲ್ಯಾಣ
ಸತೀಶ್ ಜಾರಕಿಹೊಳಿ – ಲೋಕೋಪಯೋಗಿ ಇಲಾಖೆ (PWD)
ಎಂ.ಬಿ. ಪಾಟೀಲ್ – ಬೃಹತ್ ಮತ್ತು ಮಧ್ಯಮ ಕೈಗಾರಿಕೆ
ಕೆ.ಜೆ. ಜಾರ್ಜ್ – ಇಂಧನ ಮತ್ತು ಪ್ರವಾಸೋದ್ಯಮ
ಕೆ.ಎಚ್. ಮುನಿಯಪ್ಪ – ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳು
ರಾಮಲಿಂಗಾ ರೆಡ್ಡಿ – ಜಲಸಂಪನ್ಮೂಲ ಇಲಾಖೆ
ಈಶ್ವರ್ ಖಂಡ್ರೆ – ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ
ಬೈರತಿ ಸುರೇಶ್ – ಸಾರಿಗೆ ಇಲಾಖೆ
ಡಾ. ಶರಣಪ್ರಕಾಶ್ ಪಾಟೀಲ್ – ವೈದ್ಯಕೀಯ ಶಿಕ್ಷಣ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾತ್ರೋರಾತ್ರಿ ತುರ್ತು ವಿಚಾರಣೆ ಕೋರಿ ದೆಹಲಿ ಹೈಕೋರ್ಟ್ ಮೊರೆಹೋದ ಸಿಜೆಪಿ ನಾಯಕರು

ತಮ್ಮ ನ್ಯಾಯಾಂಗ ಬಂಧನ ವಿಸ್ತರಣೆಯನ್ನು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ)...

ಹೊರದೇಶಗಳ ದೊಂಬಿಯನ್ನು ಭಾರತದ ಯುವ ಹೋರಾಟಕ್ಕೆ ಸಮೀಕರಿಸುತ್ತಿರುವ ʼಮಡಿಲ ಮಾಧ್ಯಮʼಗಳು; ಇದೇನಾ ಪತ್ರಿಕೋದ್ಯಮ?

ಹೊರದೇಶಗಳ ಬೀದಿಗಳಲ್ಲಿ ನಡೆಯುವ ದೊಂಬಿ, ಲೂಟಿಗೂ, ಭಾರತದ ಯುವಕರು ಸಂವಿಧಾನದತ್ತ ಹಕ್ಕಿಗಾಗಿ...

ಪ್ರಧಾನಿ ಮೋದಿ ಜೊತೆ ನಾಳೆ ಖರ್ಗೆ ಸಭೆ: ಎಸ್‌ಐಆರ್, ಕ್ಷೇತ್ರ ಪುನರ್‌ವಿಂಗಡಣೆ, ಮಹಿಳಾ ಮೀಸಲಾತಿ ಕುರಿತು ಚರ್ಚೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್), ಕ್ಷೇತ್ರ ಮರುವಿಂಗಡಣೆ ಮತ್ತು...

ಏಷ್ಯನ್ ಪ್ಯಾರಾ ಗೇಮ್ಸ್: ಮಹಿಳೆಯರ 200 ಮೀಟರ್ಸ್ ಓಟದಲ್ಲಿ ಸಿಮ್ರಾನ್‌ಗೆ ಚಿನ್ನ, ತೇಜಲ್‌ಬೆನ್‌ಗೆ ಕಂಚು

ಮಂಗಳವಾರ ಜಪಾನಿನ ನಗೋಯಾದಲ್ಲಿ ನಡೆದ ಏಷ್ಯನ್ ಪ್ಯಾರಾ ಗೇಮ್ಸ್‌ನ ಮಹಿಳೆಯರ 200...