ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ | ಶಂಕಿತನ ಗುರುತು ಪತ್ತೆ; ಶೀಘ್ರವೇ ಬಂಧನ: ಡಿ.ಕೆ. ಶಿವಕುಮಾರ್

Date:

“ರಾಮೇಶ್ವರಂ ಕೆಫೆಯಲ್ಲಿನ ಸ್ಫೋಟ ನಡೆಯುವುದಕ್ಕೂ ಮುನ್ನ 28ರಿಂದ 30 ವರ್ಷ ವಯಸ್ಸಿನ ಯುವಕ ಬ್ಯಾಗ್‌ ಅನ್ನು ಕೆಫೆಯೊಳಗೆ ಇಟ್ಟಿದ್ದಾರೆ. ಆತನ ಚಲನವಲನಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ. ಗುರುತು ಪತ್ತೆಯಾಗಿದೆ. ದುಷ್ಕರ್ಮಿಯನ್ನು ಆದಷ್ಟು ಬೇಗ ಪತ್ತೆಹಚ್ಚಿ ಬಂಧಿಸಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ ನೀಡಿದ್ದಾರೆ.

ಸ್ಫೋಟ ನಡೆದ ವೈಟ್‌ಫೀಲ್ಢ್‌ನ ಕುಂದಲಹಳ್ಳಿಯಲ್ಲಿರುವ ರಾಮೇಶ್ವರಂ ಕೆಫೆಗೆ ತೆರಳಿ ಸ್ಥಳ ಪರಿಶೀಲನೆ ನಡೆಸಿದ ಬಳಿಕ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದರು.

“ಇಂದು ಮಧ್ಯಾಹ್ನ ಸುಮಾರು 1 ಗಂಟೆಗೆ ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ ಸಂಭವಿಸಿದ್ದು, ಇದೊಂದು ಅಲ್ಪ ತೀವ್ರತೆಯ ಸ್ಫೋಟವಾಗಿದೆ. ಈ ಪ್ರಕರಣದಲ್ಲಿ ಸಿಸಿಬಿ ಅಧಿಕಾರಿಗಳು ತನಿಖೆ ಮಾಡುತ್ತಿದ್ದು, ಬಾಂಬ್ ನಿಗ್ರಹ ದಳ, ಎಫ್‌ಎಸ್‌ಎಲ್ ತಂಡ ಪರಿಶೀಲನೆ ನಡೆಸುತ್ತಿದೆ. ಈ ಪ್ರಕರಣದ ತನಿಖೆಗೆ 7-8 ತಂಡಗಳನ್ನು ನೇಮಿಸಲಾಗಿದೆ. ಈ ಸ್ಫೋಟದಲ್ಲಿ ಯಾರಿಗೂ ತೊಂದರೆ ಆಗಿಲ್ಲ. ಬೆಂಗಳೂರಿನ ನಾಗರಿಕರು ಗಾಬರಿಯಾಗುವ ಅಗತ್ಯವಿಲ್ಲ” ಎಂದು ತಿಳಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“12 ಗಂಟೆ ಸುಮಾರಿಗೆ 28-30 ವರ್ಷ ವಯಸ್ಸಿನ ವ್ಯಕ್ತಿ ಬಸ್‌ನಲ್ಲಿ ಬಂದಿಳಿದು, ಹೊಟೇಲ್‌ನಲ್ಲಿ ರವಾ ಇಡ್ಲಿ ಸೇವಿಸಿದ್ದಾನೆ. ಬಳಿಕ ಬ್ಯಾಗ್‌ ಅನ್ನು ಇಟ್ಟು ಹೋಗಿದ್ದಾನೆ. ಆತ ಹೋದ ಒಂದು ಗಂಟೆಯ ನಂತರ ಸ್ಫೋಟ ಸಂಭವಿಸಿದೆ. ಎಲ್ಲ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಆತನ ಚಹರೆ ಕೂಡ ದಾಖಲಾಗಿದೆ. ಶೀಘ್ರದಲ್ಲೇ ಪತ್ತೆ ಹಚ್ಚಿ ಬಂಧಿಸುತ್ತೇವೆ. ಈ ಪ್ರಕರಣವನ್ನು ಎಲ್ಲ ಆಯಾಮಗಳಲ್ಲಿ ವಿಚಾರಣೆ ನಡೆಸುತ್ತಿದ್ದು, ತನಿಖಾಧಿಕಾರಿಗಳಿಗೆ ಮುಕ್ತ ಅವಕಾಶ ನೀಡಲಾಗಿದೆ.” ಎಂದು ಡಿ ಕೆ ಶಿವಕುಮಾರ್ ತಿಳಿಸಿದರು.

ಇದನ್ನು ಓದಿದ್ದೀರಾ? ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟಕ್ಕೆ ಕೇಂದ್ರದ ವೈಫಲ್ಯ ಕಾರಣವಲ್ಲವೇ ?

ಬಿಜೆಪಿ ನಾಯಕರು ಸರ್ಕಾರದ ಬಗ್ಗೆ ಟೀಕೆ ಮಾಡುತ್ತಿರುವ ಬಗ್ಗೆ ಕೇಳಿದಾಗ, “ಅವರು ಏನಾದರೂ ಟೀಕೆ, ಆರೋಪ ಮಾಡಲಿ. ನಾವು ನಮ್ಮ ನಗರ ಹಾಗೂ ರಾಜ್ಯದ ಘನತೆ ರಕ್ಷಣೆ ಮಾಡಲು ಪ್ರಯತ್ನಿಸುತ್ತೇವೆ. ಅವರ ಅಧಿಕಾರ ಅವಧಿಯಲ್ಲಿ ರಾಜ್ಯದ ವಿವಿಧ ಭಾಗಗಳಲ್ಲಿ ಏನೆಲ್ಲಾ ಆಗಿದೆ ಎಂದು ಎಲ್ಲರಿಗೂ ಗೊತ್ತಿದೆ. ನಾವು ಅದರ ಬಗ್ಗೆ ಹೆಚ್ಚು ಚರ್ಚೆ ಮಾಡುವುದಿಲ್ಲ. ಆದಷ್ಟು ಬೇಗ ಈ ಪ್ರಕರಣದ ರೂವಾರಿಗಳನ್ನು ಸೆರೆ ಹಿಡಿಯುತ್ತೇವೆ. ಪೊಲೀಸರು ಕಾನೂನು ಪಾಲನೆ ಮಾಡಲಿದ್ದಾರೆ. ಬೆಂಗಳೂರಿನ ಎಲ್ಲೆಡೆ ಕ್ಯಾಮೆರಾಗಳಿದ್ದು ಆದಷ್ಟು ಬೇಗ ಇವರನ್ನು ಪತ್ತೆ ಹಚ್ಚುತ್ತೇವೆ. ಯಾರೂ ಆತಂಕ ಪಡುವ ಅಗತ್ಯವಿಲ್ಲ” ಎಂದು ತಿಳಿಸಿದರು.

ತನಿಖೆ ಚುರುಕುಗೊಳಿಸಿದ ಪೊಲೀಸರು

ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಇಟ್ಟವನ ಗುರುತು ಪತ್ತೆಯಾಗಿದೆ. ಘಟನೆಯ ತನಿಖೆ ನಡೆಸುತ್ತಿರುವ ಪೊಲೀಸರು, ಹೋಟೆಲ್ ಹಾಗೂ ಸುತ್ತಲಿನ ಸಿಸಿಟಿವಿ ಕ್ಯಾಮೆರಾಗಳಲ್ಲಿನ ದೃಶ್ಯಾವಳಿಗಳನ್ನು ವಶಕ್ಕೆ ಪಡೆದು ಪರಿಶೀಲಿಸಿದ್ದು, ಅದರಲ್ಲಿ ಸುಮಾರು 25ರಿಂದ 30 ವರ್ಷ ವಯಸ್ಸಿನ ವ್ಯಕ್ತಿಯೊಬ್ಬ ಈ ಬಾಂಬ್ ಇಟ್ಟಿರುವುದು ಸ್ಪಷ್ಟವಾಗಿ ಕಾಣಿಸಿದೆ. ಆತನ ಚಹರೆಯ ಗುರುತು ನಿಖರವಾಗಿ ಕಾಣಿಸುತ್ತಿದ್ದು, ಆತನನ್ನು ಕೆಲವೇ ಗಂಟೆಗಳಲ್ಲಿ ಬಂಧಿಸುವ ವಿಶ್ವಾಸವನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೇಂದ್ರ ಸರ್ಕಾರ ಉದ್ಯಮಿಗಳ ಏಳಿಗೆಗಾಗಿ ಮಾತ್ರ ಕೆಲಸ ಮಾಡುತ್ತಿದೆ: ರಾಹುಲ್‌ ಗಾಂಧಿ ವಾಗ್ದಾಳಿ

"ಕೇಂದ್ರ ಸರ್ಕಾರ 20-25 ಉದ್ಯಮಿಗಳ ಏಳಿಗೆಗಾಗಿ ಮಾತ್ರ ಕೆಲಸ ಮಾಡುತ್ತಿದೆ. ಉದ್ಯಮಿಗಳ...

ನರೇಂದ್ರ ಮೋದಿಯೇ ಭಾರತದ ದೊಡ್ಡ ಸಮಸ್ಯೆ: ಎಂ ಕೆ ಸ್ಟಾಲಿನ್

ಪ್ರಸ್ತುತ ಭಾರತದ ದೊಡ್ಡ ಸಮಸ್ಯೆ ಪ್ರಧಾನಿ ನರೇಂದ್ರ ಮೋದಿ ಅವರೇ ಆಗಿದ್ದಾರೆ...

ಪಿಎಸ್‌ಐ ಹಗರಣದ ಕಿಂಗ್‌ಪಿನ್ ಆರ್‌.ಡಿ ಪಾಟೀಲ್ ಮನೆಗೆ ಬಿಜೆಪಿ ಅಭ್ಯರ್ಥಿ, ಸಂಸದ ಉಮೇಶ್ ಜಾಧವ್ ಭೇಟಿ

ಪೊಲೀಸ್‌ ಅಧಿಕಾರಿ ಆಗಬೇಕೆಂಬ ರಾಜ್ಯದ ಯುವಜನರ ಭವಿಷ್ಯವನ್ನೇ ಹಾಳು ಮಾಡಿದ್ದ ಪಿಎಸ್‌ಐ...

ಗೈರು ಹಾಜರಾದ ಮತಗಟ್ಟೆ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಕೈಗೊಳ್ಳಲು ಸೂಚನೆ: ಬಿಬಿಎಂಪಿ ಮುಖ್ಯ ಆಯುಕ್ತ

ಲೋಕಸಭಾ ಚುನಾವಣೆ ಹಿನ್ನೆಲೆ, ಮತಗಟ್ಟೆ ಅಧಿಕಾರಿಗಳಿಗೆ ಹಮ್ಮಿಕ್ಕೊಂಡಿರುವ ತರಬೇತಿಗೆ ಗೈರು ಹಾಜರಾದವರ...