ಲೋಕದ ಡೊಂಕ ನೀವೇಕೆ ತಿದ್ದುವಿರಿ; ಬಸವಣ್ಣ ವಚನದ ಮೂಲಕ ಎಚ್‌ಡಿಕೆಗೆ ಡಿಸಿಎಂ ಡಿಕೆಶಿ ತಿರುಗೇಟು

Date:

Advertisements

“ಲೋಕದ ಡೊಂಕ ನೀವೇಕೆ ತಿದ್ದುವಿರಿ, ನಿಮ್ಮ ನಿಮ್ಮ ತನುವ ಸಂತೈಸಿಕೊಳ್ಳಿ, ನಿಮ್ಮ, ನಿಮ್ಮ ಮನವ ಸಂತೈಸಿಕೊಳ್ಳಿ” ಎಂಬ ಬಸವಣ್ಣನವರ ವಚನದ ಮೂಲಕ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾಜಿ ಸಿಎಂ ಕುಮಾರಸ್ವಾಮಿ ಅವರಿಗೆ ತಿರುಗೇಟು ನೀಡಿದರು.

ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಬೇರೆಯವರ ಸಂಗತಿ ಅವರಿಗೆ ಏಕೆ ಬೇಕು? ಲೋಕದ ಡೊಂಕು ನೀವೇಕೆ ತಿದ್ದುವಿರಿ ಎಂಬ ಬಸವಣ್ಣನವರ ವಚನದಂತೆ ಮೊದಲು ಅವರು ಅವರ ಮನೆಯನ್ನು ಸರಿಮಾಡಿಕೊಳ್ಳಲಿ. ಅದು ಬಿಟ್ಟು ಬೇರೆಯವರ ಬಗ್ಗೆ ಏಕೆ ಮಾತನಾಡುತ್ತೀರಾ? ನಿಮ್ಮಲ್ಲಿರುವ, ನಿಮ್ಮ ಮನೆಯಲ್ಲಿರುವ ಡೊಂಕನ್ನು ಮೊದಲು ತಿದ್ದಿಕೊಳ್ಳಿ. ನಾವೆಲ್ಲರೂ ಬಸವಣ್ಣನವರ ಈ ಮಾತನ್ನು ಪಾಲನೆ ಮಾಡಿಕೊಂಡು ನಡೆಯೋಣ. ರಾಜ್ಯಪಾಲರ ಬಳಿ ಹೋಗಿರುವ ಅವರಿಗೆ “ಆಲ್ ದ ಬೆಸ್ಟ್.”” ಎಂದರು.

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣದಲ್ಲಿ ಯಾವುದೇ ಸಂತ್ರಸ್ತೆಯರು ದೂರು ನೀಡಿಲ್ಲ ಎನ್ನುವ ಕೇಂದ್ರ ಮಹಿಳಾ ಆಯೋಗದ ಹೇಳಿಕೆ ಬಗ್ಗೆ ಕೇಳಿದಾಗ “ಈಗಲಾದರೂ ಕೇಂದ್ರ ಮಹಿಳಾ ಆಯೋಗ ಈ ವಿಚಾರವಾಗಿ ಪ್ರತಿಕ್ರಿಯೆ ನೀಡಿದೆ ಎಂಬುದೇ ಸಮಾಧಾನದ ಸಂಗತಿ. ಆಯೋಗದ ಹೇಳಿಕೆಯ ವಿಚಾರ ನನಗೂ ಮಾಧ್ಯಮಗಳ ಮೂಲಕ ತಿಳಿಯಿತು. ಉತ್ತರ ನೀಡುವುದು ನನ್ನ ಕೆಲಸವಲ್ಲ, ಅದಕ್ಕೆ ಪೊಲೀಸ್ ಇಲಾಖೆ ಹಾಗೂ ತನಿಖಾಧಿಕಾರಿಗಳು ನೀಡಲಿದ್ದಾರೆ” ಎಂದು ಡಿಸಿಎಂ ಡಿ ಕೆ ಶಿವಕುಮಾರ್ ತಿಳಿಸಿದರು.

Advertisements

ಎಸ್‌ಐಟಿ ಅಧಿಕಾರಿಗಳು ಯಾವುದೇ ಸಂತ್ರಸ್ತರು ಬಂದು ಭೇಟಿ ಮಾಡಿಲ್ಲ ಎಂದು ಹೇಳಿದ್ದಾರೆ ಎಂದಾಗ “ಸಂತ್ರಸ್ತೆಯರಿಗೆ ಪ್ರಭಾವಿ ರಾಜಕಾರಣಿಗಳಿಂದ ಬೆದರಿಕೆ, ಅಪಾಯ ಇದೆ ಎನ್ನುವ ಭಯವಿದೆ. ಅವರು ಬಂದು ಏಕೆ ಭೇಟಿ ಮಾಡುತ್ತಾರೆ? ಎಂದು ಕೇಳಿದರು.

“ನಮ್ಮ ನಾಡು ಬಸವಣ್ಣನವರ ತತ್ವ, ಆದರ್ಶಗಳ ಆಧಾರದ ಮೇಲೆ ನಡೆಯುತ್ತಿದೆ. ಜಗತ್ತಿನಲ್ಲಿ ಮೊದಲನೇ ಸಂಸತ್ತು ಕಟ್ಟಿದವರು‌ ಬಸವಣ್ಣ. ಅವರು ಹಾಕಿಕೊಟ್ಟ ಬುನಾದಿ ಮೇಲೆ ನಾವು ಇಂದಿಗೂ ನಡೆಯುತ್ತಿದ್ದೇವೆ.

ನಮ್ಮ ಕಾಂಗ್ರೆಸ್ ಸರ್ಕಾರದ ಪ್ರತಿಯೊಂದು ಕಾರ್ಯಕ್ರಮವೂ “ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು” ಎನ್ನುವ ತತ್ವದ ಮೇಲೆ ನಡೆಯುತ್ತಿದೆ. ಯಾವುದೇ ಜಾತಿ, ಧರ್ಮಗಳ ಬೇಧವಿಲ್ಲದೆ ಎಲ್ಲರಿಗೂ ಕಾರ್ಯಕ್ರಮಗಳನ್ನು ರೂಪಿಸಿದ್ದೇವೆ. ಅನ್ನ ಭಾಗ್ಯ, ಶಕ್ತಿ, ಗೃಹಲಕ್ಷ್ಮಿ ಮಹಿಳಾ ಸಬಲೀಕರಣದ ಯೋಜನೆ ಹಾಗೂ ಯುವನಿಧಿ ಕಾಯಕ ಕೇಂದ್ರೀತ ಯೋಜನೆಗಳ ಮೂಲಕ ಸಮಾನತೆಯಿಂದ ಕೂಡಿದ ಸಮಾಜ ನಿರ್ಮಾಣಕ್ಕೆ ಬಸವಣ್ಣನವರೇ ಸ್ಪೂರ್ತಿ” ಎಂದು ತಿಳಿಸಿದರು.

“ಬಸವಣ್ಣನವರ ಆದರ್ಶ ತತ್ವಗಳು ಎಲ್ಲೆಡೆ ಹರಡಲಿ ಎಂದು ಅವರ ಭಾವಚಿತ್ರವನ್ನು ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಕಡ್ಡಾಯ ಮಾಡಿದ್ದೆವು. ಈಗ ಸಾಂಸ್ಕೃತಿಕ ನಾಯಕ ಎಂದು ಘೋಷಣೆ ಮಾಡಿದ್ದೇವೆ. ಸಂಸ್ಕೃತಿಯೇ ನಮ್ಮ ದೇಶದ ಆಸ್ತಿ. ಬಸವಣ್ಣನವರ ಆಚಾರ, ವಿಚಾರಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಕೇವಲ ಮಾತಿನಲ್ಲಿ ಹೇಳದೆ ಕೃತಿ ರೂಪದಲ್ಲಿ ತರಬೇಕು ಎಂಬುದೇ ನಮ್ಮ ಆಶಯ. ಅವರ ತತ್ವ, ಸಿದ್ದಾಂತ ಹಾಗೂ ಅವರ ಹಾದಿಯಲ್ಲಿ ನಾವು ನಡೆಯಬೇಕು” ಎಂದು ಡಿ ಕೆ ಶಿವಕುಮಾರ್ ಕಿವಿಮಾತು ಹೇಳಿದರು.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

ದಾವಣಗೆರೆ | ಕೆ.ಎನ್‌. ರಾಜಣ್ಣ, ನಾಗೇಂದ್ರರ ಮರಳಿ ಸಂಪುಟ ಸೇರ್ಪಡೆಗೆ ವಾಲ್ಮೀಕಿ ಸಮಾಜ ಆಗ್ರಹ

"ಇತ್ತೀಚೆಗೆ ಚುನಾವಣೆ ಆಯೋಗದ ವಿರುದ್ಧ ಕಾಂಗ್ರೆಸ್ ಆರೋಪಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿ...

Download Eedina App Android / iOS

X