ಡಿ ಕೆ ಶಿವಕುಮಾರ್ ಮುಖ್ಯಮಂತ್ರಿಯಾಗುತ್ತಾರೆಂದು ಭವಿಷ್ಯ ನುಡಿದ ಬೆಳಗಾವಿಯ ಜೈನ ಮುನಿ

Date:

ಡಿ ಕೆ ಶಿವಕುಮಾರ್ ಸಿಎಂ ಆಗ್ತಾರೆ, ಧಾರವಾಡ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕ ವಿನಯ್ ಕುಲಕರ್ಣಿ ಮಂತ್ರಿಯಾಗ್ತಾರೆ… ಹೀಗಂತ ಭವಿಷ್ಯ ನುಡಿದವರು ಯಾವುದೇ ರಾಜಕೀಯ ಧುರೀಣರಲ್ಲ, ಬದಲಾಗಿ ಬೆಳಗಾವಿಯ ಜೈನ ಮುನಿಯೋರ್ವರು.

- Advertisement -

ಬೆಳಗಾವಿಯ ಹಲಗಾದ ಜೈನ್ ಬಸದಿಯ ಪ.ಪೂ ಬಾಲಾಚಾರ್ಯ ಶ್ರೀ 108 ಸಿದ್ದಸೇನ ಮುನಿ ಮಹಾರಾಜರು ಈ ರೀತಿಯ ಹೇಳಿಕೆ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ಶಾಸಕ ವಿನಯ್ ಕುಲಕರ್ಣಿ ಅವರು ಬೆಳಗಾವಿ ತಾಲೂಕಿನ ಹಲಗಾದ ಗ್ರಾಮದಲ್ಲಿರುವ ಜೈನ ಬಸದಿಗೆ ಭೇಟಿ ನೀಡಿದ್ದು, ಈ ವೇಳೆ ಜೈನ ಮುನಿ ಸಿದ್ದಸೇನ ಮಹಾರಾಜರು, ‘ನೀವು ಸಚಿವರಾಗುತ್ತೀರಿ, ಧಾರವಾಡ ಜಿಲ್ಲಾ ಉಸ್ತುವಾರಿ ಆಗುತ್ತೀರಿ’ ಎಂದು ಹೇಳಿ ಆಶೀರ್ವಾದ ಮಾಡಿದ್ದಾರೆ.

ಶಾಸಕ ವಿನಯ್ ಕುಲಕರ್ಣಿಗೆ ಆಶೀರ್ವಾದ ಮಾಡಿದ ಬಳಿಕ ಜೈನ ಮುನಿಗಳು, ‘ಡಿಕೆ ಶಿವಕುಮಾರ್ ಅವರಿಗೂ ಆಶೀರ್ವಾದ ಕೊಟ್ಟಿದ್ದೇನೆ. ಅವರೂ ಕೂಡ ಮುಖ್ಯಮಂತ್ರಿಯಾಗುತ್ತಾರೆ. ಡಿಕೆ ಶಿವಕುಮಾರ್ ಅವರು ಒಂದು ವರ್ಷ ಮೊದಲು ಇಲ್ಲಿಗೆ ಬಂದಿದ್ದರು. ಬರುವ ಸಮಯದಲ್ಲಿ ಸಿಎಂ ಆಗುತ್ತೀರಿ ಎಂದು ಆಶೀರ್ವಾದ ಕೊಟ್ಟಿದ್ದೆ. ಏನೋ ಒಂದು ಅವಕಾಶ ಇತ್ತು. ಆದರೆ, ಅದು ನಡೆದಿಲ್ಲ. ಈಗಲೂ ನನಗೆ ವಿಶ್ವಾಸವಿದೆ. ಮುಂದಿನ ದಿನಗಳಲ್ಲಿ ಡಿಕೆ ಶಿವಕುಮಾರ್ ಸಿಎಂ ಆಗುತ್ತಾರೆ’ ಎಂದು ಹೇಳಿಕೆ ನೀಡಿದ್ದಾರೆ.

ವಿನಯ್ ಕುಲಕರ್ಣಿಯವರು ಧಾರವಾಡ ಗ್ರಾಮೀಣ ಕ್ಷೇತ್ರದಲ್ಲಿ ಎಲ್ಲ ಸಮುದಾಯಕ್ಕೆ ಬೇಕಾದ ವ್ಯಕ್ತಿ. ಈಗ ಶಾಸಕರಿದ್ದೀರಿ, ಬರುವ ದಿನಗಳಲ್ಲಿ ಸಚಿವರಾಗಿ ಎಂದು ಆಶೀರ್ವಾದ ಕೊಟ್ಟಿದ್ದೇನೆ.

ನಾಳೆ ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ. ಒಂದಲ್ಲ ನೂರು ಪರ್ಸಂಟ್ ಡಿಕೆ ಶಿವಕುಮಾರ್ ಸಿಎಂ ಆಗುತ್ತಾರೆ ಎಂದು ಆಶೀರ್ವಾದ ಕೊಟ್ಟಿದ್ದೇನೆ. ಇದರ ಅರ್ಥ ಸಿದ್ದರಾಮಯ್ಯನವರನ್ನು ಕುರ್ಚಿ ಕೆಳಗೆ ಇಳಿಸಿ ಅಂತೇನಲ್ಲ. ಸಿದ್ದರಾಮಯ್ಯನವರಿಗೂ ನನ್ನ ಆಶೀರ್ವಾದ ಇದೆ. 2013ರಲ್ಲಿ ಸಿದ್ದರಾಮಯ್ಯನವರಿಗೆ ನಾನು ಆಶೀರ್ವಾದ ಮಾಡಿದ್ದೆ. ಸಿದ್ದರಾಮಯ್ಯ ಹಾಗೂ ಡಿ ಕೆ ಶಿವಕುಮಾರ್ ಇಬ್ಬರೂ ಕೂಡಿ ತಾವೇ ಅಡ್ಜಸ್ಟ್‌ಮೆಂಟ್ ಮಾಡಿ, ಅರ್ಧ ಅರ್ಧ ಅಧಿಕಾರ ಮಾಡುತ್ತಾರೆ ಎಂದು ತಿಳಿಸಿದರು.

ಸಿಎಂ ಕುರ್ಚಿಗೆ ಸಂಬಂಧಿಸಿ ಮಾಧ್ಯಮ ಸೇರಿದಂತೆ ಸೋಷಿಯಲ್ ಮೀಡಿಯಾಗಳಲ್ಲಿ ಜನರು ದಿನಕ್ಕೊಂದು ಅಭಿಪ್ರಾಯ ವ್ಯಕ್ತವಾಗುತ್ತಿದ್ದಾರೆ. ಈ ನಡುವೆಯೇ ಜೈನ ಮುನಿಗಳು, ಡಿಕೆ ಶಿವಕುಮಾರ್ ಅವರು ಮುಖ್ಯಮಂತ್ರಿ ಆಗುತ್ತಾರೆ ಎಂದು ಹೇಳಿಕೆ ನೀಡಿದ್ದು, ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರತಿಭಟನೆಗೆ ವಾಂಗ್‌ಚುಕ್ ಬೆಂಬಲ: ಲಡಾಖ್‌ನ ‘ನೀರಿನ ಜೈವಿಕ ಬಾಂಬ್‌ಗಳ’ ಕಡೆಗೆ ಗಮನ ಹರಿಸಲು ಮನವಿ

ದೆಹಲಿಯಲ್ಲಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಜಂತರ್ ಮಂತರ್‌ನಲ್ಲಿ ಆಯೋಜಿಸಲಾಗಿರುವ ಬೃಹತ್...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ ನಂಬಿಕೆಯ ಬಿಕ್ಕಟ್ಟು

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ....

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ನವಿ ಪಿಳ್ಳೈಗೆ ಒಲಿದ ಶಾಂತಿ ಪುರಸ್ಕಾರ

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು...

ನಮ್ಮ‌ ಪ್ರಸ್ತಾಪಗಳನ್ನು ರಾಷ್ಟ್ರಪತಿ ನಿರಾಕರಿಸಿದ್ದು ಅಚ್ಚರಿ ಮೂಡಿಸಿದೆ, ಸಾಕ್ಷ್ಯ ಕೇಳಿದ್ದಾರೆ – ಕೊಡುತ್ತೇವೆ: ರಾಹುಲ್ ಗಾಂಧಿ

ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಕ್ರಮವಾಗಿ ತೆಗೆದುಹಾಕಿರುವ ಕುರಿತು ನಾವು ಎತ್ತಿರುವ ವಿಷಯವನ್ನು...