ರಾಹುಲ್ ಗಾಂಧಿ ಅನರ್ಹತೆ ಹಿಂದೆ ರಾಜಕೀಯ ದ್ವೇಷ ಎದ್ದು ಕಾಣುತ್ತಿದೆ: ಡಿ ಕೆ ಶಿವಕುಮಾರ್ ಕಿಡಿ

Date:

  • ದೇಶದಲ್ಲಿ ಬಿಜೆಪಿಗೆ ಮತ್ತು ಕಾಂಗ್ರೆಸ್ಸಿಗೆ ಬೇರೆ ಬೇರೆ ಕಾನೂನು ಇದೆಯಾ: ಡಿಕೆಶಿ
  • ರಾಹುಲ್‌ ಅನರ್ಹವು ಸಂವಿಧಾನ, ಪ್ರಜಾಪ್ರಭುತ್ವ ವ್ಯವಸ್ಥೆ ಮೇಲೆ ನಡೆದ ದಾಳಿ

ರಾಜಕೀಯ ದ್ವೇಷದಿಂದ ರಾಹುಲ್ ಗಾಂಧಿ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಕಿಡಿ ಕಾರಿದರು.

ಸದಾಶಿವನಗರ ನಿವಾಸ ಬಳಿ ಶನಿವಾರ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿ, ‘ಕರ್ನಾಟಕದಲ್ಲಿ ಇಬ್ಬರು ಬಿಜೆಪಿ ಶಾಸಕರು ಚೆಕ್ ಬೌನ್ಸ್ ಮತ್ತು ಇತರೆ ಪ್ರಕರಣದಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿದ್ದಾರೆ. ಅವರನ್ನು ಅನರ್ಹಗೊಳಿಸಿಲ್ಲ ಯಾಕೆ. ಅವರಿಗೆ ಬೇರೆ, ನಮಗೆ ಬೇರೆ ಕಾನೂನು ಇದೆಯಾ”ಎಂದು ಪ್ರಶ್ನಿಸಿದರು.

“ರಾಜಕೀಯ ದ್ವೇಷದಿಂದ ರಾಹುಲ್ ಗಾಂಧಿ ಅವರನ್ನು ಅನರ್ಹಗೊಳಿಸಿದ್ದು, ಸಂವಿಧಾನ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆ ಮೇಲೆ ನಡೆದ ದಾಳಿ. ನಾವು ಇದನ್ನು ಖಂಡಿಸುತ್ತೇವೆ. ನ್ಯಾಯಾಲಯದಲ್ಲಿ ಈ ವಿಚಾರವಾಗಿ ಹೋರಾಟ ಮಾಡುತ್ತೇವೆ. ನಮಗೆ ನ್ಯಾಯ ಸಿಗುವ ಭರವಸೆ ಇದೆ” ಎಂದರು.

ಶೇ. 95 ರಷ್ಟು ಹಾಲಿ ಶಾಸಕರಿಗೆ ಟಿಕೆಟ್

“ಎಲ್ಲರೂ ಯುಗಾದಿ ಚಂದ್ರನ ನೋಡಲು ಕಾಯುತ್ತಿದ್ದರು. ಅದರಂತೆ ಮೊದಲ ಪಟ್ಟಿ ಬಿಡುಗಡೆ ಮಾಡಲಾಗಿದೆ. ಮುಂದಿನ ಮೂರ್ನಾಲ್ಕು ದಿನಗಳಲ್ಲಿ ಎರಡನೇ ಪಟ್ಟಿ ಪ್ರಕಟಿಸಲಾಗುವುದು. ಆ ಮೂಲಕ ಚಂದ್ರನ ಹಿಂದೆ ಸೂರ್ಯನ ಬೆಳಕು ಆಗಮಿಸಲಿದೆ” ಎಂದು ಕಾವ್ಯಾತ್ಮಕವಾಗಿ ಹೇಳಿದರು.

‘ಶೇ. 95 ರಷ್ಟು ಹಾಲಿ ಶಾಸಕರಿಗೆ ಟಿಕೆಟ್ ಸಿಗಲಿದೆ. ಕೆಲವು ಕ್ಷೇತ್ರಗಳಲ್ಲಿ ಮಾತುಕತೆ ಸಂಧಾನ ನಡೆಯುತ್ತಿದ್ದು, ಎರಡನೇ ಪಟ್ಟಿಯಲ್ಲಿ ಉಳಿದ ಹೆಸರುಗಳು ಪ್ರಕಟವಾಗಲಿದೆ. ಧ್ರುವನಾರಾಯಣ ಅವರು ನಮ್ಮನ್ನು ಅಗಲಿದ್ದಾರೆ. ಹೀಗಾಗಿ ಯುವಕರಾದ ಅವರ ಪುತ್ರನಿಗೆ ಟಿಕೆಟ್ ನೀಡಿದ್ದೇವೆ” ಎಂದರು.

ವಿರೋಧದ ನಡುವೆ ಪುಟ್ಟಣ್ಣ ಅವರಿಗೆ ಟಿಕೆಟ್ ನೀಡಿರುವ ಬಗ್ಗೆ ಕೇಳಿದಾಗ, “ಪುಟ್ಟಣ್ಣ ಅವರು ನಾಲ್ಕೂವರೆ ವರ್ಷಗಳ ಪರಿಷತ್ ಅಧಿಕಾರ ತ್ಯಜಿಸಿ ಪಕ್ಷ ಸೇರಿದ್ದಾರೆ. ಹೀಗಾಗಿ ಅವರಿಗೆ ಒಂದು ಅವಕಾಶ ಕಲ್ಪಿಸಲು ಪಕ್ಷ ತೀರ್ಮಾನಿಸಿದೆ” ಎಂದು ತಿಳಿಸಿದರು.

ಕ್ಷೇತ್ರ ಆಯ್ಕೆ ಸಿದ್ದರಾಮಯ್ಯನವರ ವಿವೇಚನೆಗೆ ಬಿಡಲಾಗಿತ್ತು

ಸಿದ್ದರಾಮಯ್ಯ ಅವರು ವರುಣಾ ಕ್ಷೇತ್ರದಿಂದ ಸ್ಪರ್ಧಿಸುವ ವಿಚಾರವಾಗಿ ಪ್ರಶ್ನಿಸಿದಾಗ, ‘ಕ್ಷೇತ್ರ ಆಯ್ಕೆಯನ್ನು ಸಿದ್ದರಾಮಯ್ಯನವರ ವಿವೇಚನೆಗೆ ಬಿಡಲಾಗಿತ್ತು. ಅವರು ವರುಣಾದಿಂದ ಸ್ಪರ್ಧಿಸಲು ಇಚ್ಛಿಸಿದ್ದು, ಪಕ್ಷ ಟಿಕೆಟ್ ನೀಡಿದೆ. ಎರಡನೇ ಕ್ಷೇತ್ರವಾಗಿ ಕೋಲಾರ ಮತ್ತು ಬದಾಮಿ ಸಿದ್ದರಾಮಯ್ಯ ಸ್ಪರ್ಧಿಸುವ ಬಗ್ಗೆ ಹೈಕಮಾಂಡ್ ಕೇಳಿ” ಎಂದಷ್ಟೇ ಹೇಳಿದರು.

ಮೀಸಲಾತಿ ಬೋಗಸ್

ಮೀಸಲಾತಿ ಹೆಚ್ಚಳ ವಿಚಾರವಾಗಿ ಕೇಳಿದ ಪ್ರಶ್ನೆಗೆ, “ಇದೆಲ್ಲವೂ ಬೋಗಸ್ ಘೋಷಣೆ. ರಾಜ್ಯದ ಜನರನ್ನು ಮೂರ್ಖರನ್ನಾಗಿಸುವ ಪ್ರಯತ್ನ” ಎಂದು ಟೀಕಿಸಿದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ಜಿಲ್ಲಾಸ್ಪತ್ರೆಯಲ್ಲಿ ತಪಾಸಣೆಗೆ ಶುಲ್ಕ ನಿಗದಿ; ಎಸ್‌ಯುಸಿಐ ಖಂಡನೆ

ಧಾರವಾಡ ಜಿಲ್ಲಾಸ್ಪತ್ರೆಯಲ್ಲಿ ತಪಾಸಣೆ ಮಾಡಲು ಹಲವು ರೀತಿಯ ಶುಲ್ಕ ನಿಗದಿ ಮಾಡಿರುವುದನ್ನು...

ಬೆಂಗಳೂರು | ನ್ಯಾಯಾಂಗ ಬಡಾವಣೆಯಲ್ಲಿ ಬೀದಿ ಬದಿ ವ್ಯಾಪಾರಿಯ ಎಳನೀರು ಕಳ್ಳತನ

ಬಡ ವ್ಯಾಪಾರಿಯೊಬ್ಬರು ಮಾರಾಟ ಮಾಡಲು ತಂದಿರಿಸಿದ್ದ ಸುಮಾರು 800 ಎಳನೀರು ರಾತ್ರೋರಾತ್ರಿ...

ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾಗೆ ಬೀಳ್ಕೊಡುಗೆ

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರು ವಯೋ ನಿವೃತ್ತಿ...

ಈಗಲಾದರೂ ಚರ್ಚೆಗೆ ಬರುತ್ತದೆಯೇ ಪ್ರಾದೇಶಿಕ ಅಸಮಾನತೆ ಕೂಗು

ಕರ್ನಾಟಕ ಏಕೀಕರಣವಾಗಿ ಅರ್ಧ ಶತಮಾನ ಕಳೆದರೂ ಇಡೀ ಕರ್ನಾಟಕವನ್ನು ಸಮಗ್ರವಾಗಿ ಅಭಿವೃದ್ಧಿಯ...