ಕಳಸಾ ಬಂಡೂರಿ ಯೋಜನೆಗೆ ಅನುಮತಿ ಕೋರಿ ಕೇಂದ್ರ ಸಚಿವರಿಗೆ ಡಿ ಕೆ ಶಿವಕುಮಾರ್ ಮನವಿ

Date:

Advertisements

ಕಳಸಾ ಬಂಡೂರಿ ನಾಲೆ ಯೋಜನೆ ವಿಚಾರದಲ್ಲಿ ಕೇಂದ್ರ ಸಚಿವರು ಮಧ್ಯಪ್ರವೇಶ ಮಾಡಿ ಅಗತ್ಯವಿರುವ ಅರಣ್ಯ ಹಾಗೂ ವನ್ಯಜೀವಿ ಮಂಡಳಿ ಅನುಮತಿ ಕೊಡಿಸಬೇಕು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಕೇಂದ್ರ ಅರಣ್ಯ ಸಚಿವ ಭೂಪೇಂದರ್ ಯಾದವ್ ಅವರಿಗೆ ಮನವಿ ಮಾಡಿದರು.

ನವದೆಹಲಿಯಲ್ಲಿ ಕೇಂದ್ರ ಸಚಿವರನ್ನು ಬುಧವಾರ ಭೇಟಿ ಮಾಡಿದ ಜಲ ಸಂಪನ್ಮೂಲ ಸಚಿವರೂ ಆಗಿರುವ ಶಿವಕುಮಾರ್ ಅವರು ಈ ಬಗ್ಗೆ ಮನವಿ ಪತ್ರ ಸಲ್ಲಿಸಿದರು.

ಪತ್ರದ ಸಾರಾಂಶ ಹೀಗಿದೆ..

Advertisements

ದಿನಾಂಕ 09-10-2024ರಂದು ರಾಷ್ಟ್ರೀಯ ವನ್ಯಜೀವಿ ಮಂಡಳಿಯ ಸ್ಥಾಯಿ ಸಮಿತಿಯು ತನ್ನ 80ನೇ ಸಭೆಯಲ್ಲಿ ಕರ್ನಾಟಕದ ಅರ್ಜಿ ವಿಚಾರಣೆಯನ್ನು ಮುಂದೂಡಿ ಈ ವಿಚಾರವಾಗಿ ಇರುವ ಕಾನೂನು ಸಮಸ್ಯೆಗಳ ಬಗ್ಗೆ ಸ್ಪಷ್ಟನೆ ನೀಡುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿತ್ತು. ರಾಜ್ಯವು ದಿನಾಂಕ 10-10-2024 ಹಾಗೂ 16-10-2024 ದಿನಾಂಕದಂದು ಅಗತ್ಯ ಸ್ಪಷ್ಟನೆಯನ್ನು ಪತ್ರದ ಮೂಲಕ ಸಲ್ಲಿಕೆ ಮಾಡಲಾಗಿದೆ.

ಕಳಸಾ ನಾಲೆ ಯೋಜನೆಗೆ ಕಾಳಿ ಹಾಗೂ ಸಹ್ಯಾದ್ರಿ ಹುಲಿ ಸಂರಕ್ಷಣಾ ಪ್ರದೇಶದಲ್ಲಿ 10.6852 ಹೆಕ್ಟೇರ್ ಅರಣ್ಯ ಭೂಮಿ ಅಗತ್ಯವಿದೆ. ಬೆಳಗಾವಿ ಜಿಲ್ಲೆಯ ಖಾನಾಪುರ ತಾಲ್ಲೂಕಿನ ಕಣಕುಂಬಿ ಸುತ್ತಲಿನ ಹಳ್ಳಿಗಳ ಪ್ರದೇಶವನ್ನು ಇದು ಹೊಂದಿದೆ. ಇದರಲ್ಲಿ ಜಾಕ್ ವೆಲ್ ಸಹಿತ ಪಂಪ್ ಹೌಸ್, ವಿದ್ಯುತ್ ಉಪಕೇಂದ್ರಗಳನ್ನು ನಿರ್ಮಾಣ ಮಾಡಲಾಗುವುದು.

ಸ್ಥಾಯಿ ಸಮಿತಿಯ 80ನೇ ಸಭೆ ಚರ್ಚೆಯಾದ ಅಂಶಗಳು: ಗೋವಾದ ವನ್ಯಜೀವಿ ಮಂಡಳಿ ಮುಖ್ಯಸ್ಥರು ವನ್ಯಜೀವಿ ಸಂರಕ್ಷಣಾ ಕಾಯ್ದೆ 1972 ಸೆಕ್ಷನ್ 29 ಅನ್ನು ಪ್ರಸ್ತಾಪಿಸಿ ಈ ಯೋಜನೆ ಕಾಮಗಾರಿಗೆ ಆಕ್ಷೇಪ ವ್ಯಕ್ತಪಡಿಸಿದ್ದರು. ಇದಕ್ಕೆ ಪ್ರತಿಯಾಗಿ ಕರ್ನಾಟಕ ರಾಜ್ಯವು ಸುಪ್ರೀಂ ಕೋರ್ಟ್ ಮುಂದೆ ಸೂಕ್ತ ದಾಖಲೆಗಳನ್ನು ಮಂಡಿಸಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕೇವಲ ಕಾಗದದ ಹುಲಿಯಾಯಿತೇ ಪೂಜಾಸ್ಥಳಗಳ ಕಾಯಿದೆ?

ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರ (NTCA) ತಜ್ಞರ ಸಮಿತಿ ರಚಿಸಿತ್ತು. ಈ ತಂಡ ಯೋಜನೆ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ತನ್ನ ವರದಿ ಸಲ್ಲಿಸಿದೆ. ಈ ವರದಿಯಲ್ಲಿ ಪ್ರಾಧಿಕಾರವು ಮಹದಾಯಿ ನೀರು ವಿವಾದ ನ್ಯಾಯಾಧೀಕರಣ ತೀರ್ಪಿನ ಬಗ್ಗೆ ಗೋವಾ, ಮಹಾರಾಷ್ಟ್ರ ಹಾಗೂ ಕರ್ನಾಟಕ ನಡುವಣ ಕಾನೂನು ಸಮರ ಸುಪ್ರೀಂ ಕೋರ್ಟ್ ನಲ್ಲಿದೆ ಎಂದು ತಿಳಿಸಿತ್ತು.

ಈ ಎಲ್ಲಾ ವಿಚಾರವಾಗಿ ಕರ್ನಾಟಕ ಸರ್ಕಾರದ ಅರಣ್ಯ ಮತ್ತು ಪರಿಸರ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳು ಸ್ಪಷ್ಟನೆ ನೀಡಿದ್ದು, ಸುಪ್ರೀಂ ಕೋರ್ಟ್ ಈ ಯೋಜನೆ ಜಾರಿ ವಿಚಾರದಲ್ಲಿ ಕರ್ನಾಟಕ ರಾಜ್ಯಕ್ಕೆ ಯಾವುದೇ ಆಕ್ಷೇಪ ವ್ಯಕ್ತಪಡಿಸಿಲ್ಲ. ಇದರ ಜತೆಗೆ ಕಾನೂನು ಪ್ರಕಾರವಾಗಿ ಕೇಂದ್ರ ಸರ್ಕಾರದ ಎಲ್ಲ ಅನುಮತಿಗಳು ಸಿಕ್ಕ ನಂತರವಷ್ಟೇ ಈ ಯೋಜನೆ ಕಾಮಗಾರಿ ಕೈಗೊಳ್ಳಲು ನಿರ್ಧರಿಸಿದೆ.

ಈ ಯೋಜನೆಯು ಅಭಯಾರಣ್ಯದ ಭಾಗವಲ್ಲದಿದ್ದರೂ ಹುಲಿ ಕಾರಿಡಾರ್ ಪ್ರದೇಶ ವ್ಯಾಪ್ತಿಯಲ್ಲಿ ಬರುತ್ತದೆ. ಈ ಯೋಜನೆಯಲ್ಲಿ ನಿರ್ಮಿಸಲಾಗುವ ಜಲ ಮೂಲಗಳು ವನ್ಯಜೀವಿಗೆ ಅಗತ್ಯ ನೀರು ಪೂರೈಸಲಿದೆ. ಹೀಗಾಗಿ ಈ ಯೋಜನೆಗೆ ಅನುಮತಿ ನೀಡಬೇಕು ಎಂದು ಕರ್ನಾಟಕದ ವನ್ಯಜೀವಿ ಸಂರಕ್ಷಣಾ ಮಂಡಳಿಯು ಸ್ಥಾಯಿ ಸಮಿತಿಗೆ ಮಾಹಿತಿ ನೀಡಿತ್ತು.

ಈ ಎಲ್ಲಾ ವಿಚಾರಗಳ ಬಗ್ಗೆ ಚರ್ಚೆ ನಡೆಸಿದ ಬಳಿಕ ಸ್ಥಾಯಿ ಸಮಿತಿಯು ಕಾನೂನು ವಿಚಾರಗಳ ಬಗ್ಗೆ ಸ್ಪಷ್ಟನೆ ಕೋರಿತ್ತು. ಜತೆಗೆ ಪ್ರಾಧಿಕಾರದ ಅಭಿಪ್ರಾಯ ಸಲ್ಲಿಕೆಗೆ ಸೂಚಿಸಿತ್ತು. ಸ್ಥಾಯಿ ಸಮಿತಿಯ ಈ ಎಲ್ಲಾ ಮಾರ್ಗದರ್ಶನವನ್ನು ಕರ್ನಾಟಕ ರಾಜ್ಯ ಪಾಲಿಸಿದೆ. ಆದರೂ ಈ ಯೋಜನೆಗೆ ಅನುಮತಿ ನೀಡುವುದು ವಿಳಂಬವಾಗುತ್ತಿದೆ.

ಡಿ ಕೆ ಶಿವಕುಮಾರ್
ಡಿಸಿಎಂ ಡಿ ಕೆ ಶಿವಕುಮಾರ್ ಅವರು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಅವರನ್ನು ದೆಹಲಿಯಲ್ಲಿ ಬುಧವಾರ ಭೇಟಿ ಮಾಡಿ ಜನ್ಮದಿನದ ಶುಭಾಶಯ ಹೇಳಿ, ಮೇಕೆದಾಟು, ಕಳಸ ಬಂಡೂರಿ ಸೇರಿದಂತೆ ರಾಜ್ಯದ ಕುಡಿಯುವ ನೀರು, ನೀರಾವರಿ ಯೋಜನೆಗಳಿಗೆ ಕೇಂದ್ರ ಸರಕಾರದ ಅನುಮತಿ ಕೊಡಿಸುವಂತೆ ಮನವಿ ಸಲ್ಲಿಸಿದರು.

ಹೀಗಾಗಿ, ಕೇಂದ್ರ ಅರಣ್ಯ ಸಚಿವರಾದ ತಾವು ಈ ವಿಚಾರದಲ್ಲಿ ಮಧ್ಯಪ್ರವೇಶ ಮಾಡಿ ಕರ್ನಾಟಕದ ಲಿಖಿತ ಮನವಿ ಬಗ್ಗೆ ಪ್ರಾಧಿಕಾರದ ಅಭಿಪ್ರಾಯವನ್ನು ಪರಿಶೀಲಿಸಿ ಆದಷ್ಟು ಬೇಗ ಯೋಜನೆಗೆ ಅನುಮತಿ ನೀಡಬೇಕು. ಕಳಸಾ ಯೋಜನೆಗೆ ಅಗತ್ಯವಿರುವ ಅನುಮತಿ ನೀಡಲು ರಿಜನಲ್ ಎಂಪವರ್ ಕಮಿಟಿ, ಇಂಟರ್ ಗ್ರೇಟೆಡ್ ರೀಜನಲ್ ಆಫೀಸ್, ಪರಿಸರ ಮತ್ತು ಅರಣ್ಯ ಇಲಾಖೆಯು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಡಿ ಕೆ ಶಿವಕುಮಾರ್‌ ಆಗ್ರಹಿಸಿದ್ದಾರೆ.

“ಕರ್ನಾಟಕ ರಾಜ್ಯವು ಕಳಸಾ ನಾಲೆ ಯೋಜನೆಗೆ ಅಗತ್ಯವಿರುವ ಅರಣ್ಯ ಪ್ರದೇಶ ಭೂಮಿಯ ಪ್ರಮಾಣವನ್ನು 258 ಹೆಕ್ಟೇರ್ ಪ್ರದೇಶದಿಂದ ಕೇವಲ 26.9255 ಹೆಕ್ಟೇರ್ ಪ್ರದೇಶಕ್ಕೆ ಇಳಿಸಿದೆ. ಬಂಡೂರಿ ನಾಲೆ ಯೋಜನೆಗೆ ಅಗತ್ಯವಿರುವ ಅರಣ್ಯ ಪ್ರದೇಶ ಭೂಮಿಯನ್ನು 243 ಹೆಕ್ಟೇರ್ ನಿಂದ ಕೇವಲ 28.4427 ಹೆಕ್ಟೇರ್ ಪ್ರದೇಶಗಳಿಗೆ ಇಳಿಸಿದೆ. ಆಮೂಲಕ ಪರಿಸರ ಸಂರಕ್ಷಣೆಯಲ್ಲಿ ರಾಜ್ಯ ತನ್ನ ಬದ್ಧತೆ ಪ್ರದರ್ಶಿಸಿದೆ. ರಾಜ್ಯದ ಹಿತಾಸಕ್ತಿ ಕಾಪಾಡಲು ಕೇಂದ್ರ ಸರ್ಕಾರವು ವಿಳಂಬ ಮಾಡದೇ ಈ ಯೋಜನೆಗೆ ಅನುಮತಿ ನೀಡಬೇಕು” ಎಂದು ಪತ್ರದಲ್ಲಿ ಮನವಿ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ: ಚಲನಚಿತ್ರ ನಿರ್ದೇಶಕಿ ಸುಮನ್ ಕಿತ್ತೂರು

ಪರಿಶಿಷ್ಟ ಜಾತಿ ಒಳಮೀಸಲಾತಿ ವಿಚಾರದಲ್ಲಿ ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ...

ಚಿತ್ರದುರ್ಗ | ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಅನ್ಯಾಯ ಸರಿಪಡಿಸಿ; ಮಹಾನಾಯಕ ದಲಿತ ಸೇನೆ

ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ...

Download Eedina App Android / iOS

X