ಜನಾಂದೋಲನ ಸಭೆ | ನನ್ನ ನಾಯಕತ್ವಕ್ಕೆ 135 ಸೀಟು, ಎಚ್‌ಡಿಕೆ ನಾಯಕತ್ವಕ್ಕೆ 19 ಸೀಟು: ಡಿಕೆಶಿ ತಿರುಗೇಟು

Date:

ಬಿಜೆಪಿ ಮತ್ತು ಜೆಡಿಎಸ್ ನಾಯಕರು ಬೆಂಗಳೂರು-ಮೈಸೂರು ರಸ್ತೆಯಲ್ಲಿ ಪಾದಯಾತ್ರೆ ಮಾಡುವ ಮೂಲಕ ಅವರ ಭ್ರಷ್ಟಾಚಾರ ವಿಚಾರಗಳನ್ನು ಅನಾವರಣಗೊಳಿಸುವುದರ ಜತೆಗೆ ನಮ್ಮ ಪಕ್ಷ ಸಂಘಟನೆಗೂ ಒಂದು ಅವಕಾಶ ಕಲ್ಪಿಸಿಕೊಟ್ಟಿದ್ದಾರೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್‌ ಹೇಳಿದರು.

ಬಿಜೆಪಿ-ಜೆಡಿಎಸ್ ಪಾದಯಾತ್ರೆ ವಿರುದ್ಧ ರಾಮನಗರದಲ್ಲಿ ಶನಿವಾರ ನಡೆದ ಜನಾಂದೋಲನ ಸಭೆಯಲ್ಲಿ ಮಾತನಾಡಿದ ಅವರು, “ಭ್ರಷ್ಟಾಚಾರವೇ ನಿಮ್ಮ, ತಾಯಿ ತಂದೆ, ಭ್ರಷ್ಟಾಚಾರವೇ ನಿಮ್ಮ ಬಂಧು ಬಳಗ, ಭ್ರಷ್ಟಾಚಾರ ಮಾಡಿರುವ ನಿಮ್ಮನ್ನು ಮೆಚ್ಚನಾ ಪರಮಾತ್ಮನು” ಎಂದು ಲೇವಡಿ ಮಾಡಿದರು.

ಜನ ನನ್ನ ನಾಯಕತ್ವಕ್ಕೆ 135 ಸೀಟು

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಮಿಸ್ಟರ್ ಕುಮಾರಸ್ವಾಮಿ, ನಾನು ತಿಹಾರ್ ಜೈಲನ್ನೂ ನೋಡಿ ಆಗಿದೆ, ನೀವು ನನ್ನ ಹಾಗೂ ನನ್ನ ಕುಟುಂಬದ ಮೇಲೆ ಹಾಕಿರುವ ಕೇಸ್ ಗಳನ್ನು ನೋಡಿ ಆಯಿತು. ಇದಾದ ನಂತರವೇ ಜನ ಈ ಡಿ.ಕೆ. ಶಿವಕುಮಾರ್ ನಾಯಕತ್ವಕ್ಕೆ 135 ಸೀಟುಗಳನ್ನು ಕೊಟ್ಟು, ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತಂದಿದ್ದಾರೆ. ನಿನ್ನ ನಾಯಕತ್ವಕ್ಕೆ ಜನ ಬರೀ 19 ಸೀಟು ಕೊಟ್ಟಿದ್ದಾರೆ” ಎಂದು ವಾಗ್ದಾಳಿ ನಡೆಸಿದರು.

ಕುಮಾರಸ್ವಾಮಿ ಆರೋಪಕ್ಕೆ ಬಿಜೆಪಿ ಮೌನವೇಕೆ?

“ಕುಮಾರಸ್ವಾಮಿ ಅವರು ನಾನು ಪೆನ್ ಡ್ರೈವ್ ಬಿಡುಗಡೆ ಮಾಡಿದೆ ಎಂದು ಸುಳ್ಳು ಆರೋಪ ಮಾದಿದ್ದರು. ಈ ಡಿ.ಕೆ. ಶಿವಕುಮಾರ್ ಅಂತಹ ನೀಚ ರಾಜಕಾರಣ ಮಾಡುವುದಿಲ್ಲ ಎಂದು ರಾಜ್ಯದ ಜನತೆಗೆ ಗೊತ್ತಿದೆ. ಈಗ ಕುಮಾರಸ್ವಾಮಿ ಅವರೇ ಈ ಪೆನ್ ಡ್ರೈವ್ ಗಳನ್ನು ಬಿಟ್ಟಿರುವುದು ಬಿಜೆಪಿ ಮಾಜಿ ಶಾಸಕ ಪ್ರೀತಂ ಗೌಡ ಎಂದು ಹೇಳಿದ್ದಾರೆ. ಈ ಬಗ್ಗೆ ಬಿಜೆಪಿ ನಾಯಕರೇಕೆ ಚರ್ಚೆ ಮಾಡುತ್ತಿಲ್ಲ. ಮಹಿಳೆಯರ ರಕ್ಷಣೆ ಬಗ್ಗೆ ಮಾತನಾಡುವ ದೇಶದ ಪ್ರಧಾನಮಂತ್ರಿಗಳು ಈ ಪ್ರಕರಣದ ಬಗ್ಗೆ ಏಕೆ ಮಾತನಾಡುತ್ತಿಲ್ಲ” ಎಂದು ಪ್ರಶ್ನಿಸಿದರು.

ನಿಮ್ಮ ತಂದೆ ರಾಜೀನಾಮೆ ಕೊಟ್ಟಿದ್ದೇಕೆ?

“ವಿಜಯೇಂದ್ರ ನಿನ್ನೆ ನನ್ನನ್ನು ಭ್ರಷ್ಟಾಚಾರದ ಪಿತಾಮಹ ಎಂದು ಕರೆದಿದ್ದಾರೆ. ಮಿಸ್ಟರ್ ವಿಜಯೇಂದ್ರ, ನಿಮ್ಮ ತಂದೆ ಏನು ತಪ್ಪು ಮಾಡಿದ್ದರು? ಅವರು ಯಾಕೆ ರಾಜೀನಾಮೆ ಕೊಟ್ಟರು? ನಿಮ್ಮ ತಂದೆ ವಿಧಾನಸೌಧದಲ್ಲಿ ಕಣ್ಣೀರು ಹಾಕುತ್ತಾ ರಾಜೀನಾಮೆ ನೀಡಿದ್ದು ಏಕೆ? ಈ ಬಗ್ಗೆ ನೀವು ಉತ್ತರ ನೀಡಬೇಕು. ಈ ಹಿಂದೆ ಯಡಿಯೂರಪ್ಪ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ ಜೈಲಿಗೆ ಹೋಗಿದ್ದೇಕೆ?” ಎಂದು ಕುಟುಕಿದರು.

ದೇವೇಗೌಡರ ಕುಟುಂಬದ ಭೂಕಬಳಿಕೆ ಬಗ್ಗೆ ಬಿಜೆಪಿ ಜಾಹೀರಾತು

“ವಿಧಾನಸಭೆ ಚುನಾವಣೆ ಮುನ್ನ ಬಿಜೆಪಿಯವರು ‘ಮಾಜಿ ಪ್ರಧಾನಿ ದೇವೇಗೌಡರ ಕುಟುಂಬದ ಭೂಕಬಳಿಕೆಯ ಪಕ್ಷಿನೋಟ’ ಎಂದು ಪತ್ರಿಕೆಗಳಲ್ಲಿ ಜಾಹೀರಾತು ನೀಡಿದ್ದರು. ಮುಡಾದಲ್ಲಿ ಆ ಕುಟುಂಬ ಮಾಡಿದ ಅಕ್ರಮ ನಿವೇಶನಗಳ ಬಗ್ಗೆ ಕುಮಾರಸ್ವಾಮಿ ಅವರ ಅರ್ಜಿ ಸಮೇತ ಪ್ರಕಟಣೆ ಮಾಡಿದ್ದಿರಿ. ಈ ಬಗ್ಗೆ ಉತ್ತರ ನೀಡುವಿರಾ ಯಡಿಯೂರಪ್ಪನವರೇ? ಅಶೋಕಣ್ಣ, ಸಿ ಟಿ ರವಿ ಇದಕ್ಕೆ ಉತ್ತರ ಕೊಡ್ರಪ್ಪ? ನಿಮ್ಮ ಪಕ್ಷ ನೀಡಿರುವ ಪ್ರಕಟಣೆ ಬಗ್ಗೆ ಚರ್ಚೆ ಮಾಡಿ” ಎಂದು ಆಗ್ರಹಿಸಿದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಾಂಗ್ರೆಸ್‌ ಒಳಜಗಳದಿಂದ ದೀಪಾವಳಿ ಒಳಗೆ ಸರ್ಕಾರ ಪತನ: ಸಿ ಟಿ ರವಿ

ದೀಪಾವಳಿ ಹಬ್ಬದ ಒಳಗೆ ಕಾಂಗ್ರೆಸ್‌ ಸರ್ಕಾರ ಬೀಳಲಿದೆ. ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಸ್ಥಾನದ...

ಮುಡಾ ಪ್ರಕರಣ: ಸಿಎಂ ಸಿದ್ದರಾಮಯ್ಯ ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆ

ಮುಡಾ ಪ್ರಕರಣದಲ್ಲಿ ತನ್ನ ವಿರುದ್ಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅನುಮತಿ...

ಕಾಂಗ್ರೆಸ್‌ನಲ್ಲಿ ನಿಲ್ಲದ ಮುಖ್ಯಮಂತ್ರಿ ಅಭ್ಯರ್ಥಿ ಕೂಗು, ‘ನಾನೂ ಸಿಎಂ ಆಗುವೆ’ ಎಂದ ಬಸವರಾಜ ರಾಯರೆಡ್ಡಿ

ಖಾಲಿ ಇಲ್ಲದ ಸಿಎಂ ಕುರ್ಚಿಗಾಗಿ ಕ್ಷುಲ್ಲಕ ರಾಜಕಾರಣದಲ್ಲಿ ಮುಳುಗೇಳಿ, ವ್ಯರ್ಥ ಹೇಳಿಕೆ...

ಸಿಡಿ ಪ್ರಕರಣ | ಎಸ್‌ಐಟಿ ರಚನೆ ಪ್ರಶ್ನಿಸಿ ರಮೇಶ್‌ ಜಾರಕಿಹೊಳಿ ಸಲ್ಲಿಸಿದ ಅರ್ಜಿ ವಿಚಾರಣೆ ಮುಂದೂಡಿಕೆ

ಸಿಡಿ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚನೆ ಮಾಡಿರುವುದನ್ನು...