ಕುಮಾರಸ್ವಾಮಿ ಹುಚ್ಚರಾಗಿದ್ದು, ತಾಳ್ಮೆ ಕಳೆದುಕೊಂಡಿದ್ದಾರೆ: ಡಿ ಕೆ ಶಿವಕುಮಾರ್‌ ತಿರುಗೇಟು

Date:

  • ಕುಮಾರಸ್ವಾಮಿಯ ಪೊಗರು, ಬ್ಯಾಕ್ ಮೇಲ್‌ಗೆ ನಾನು ಹೆದರುವುದಿಲ್ಲ
  • ಲೆಕ್ಕ ಬೇಕೇ ಕೊಡುತ್ತೇನೆ, ತಪ್ಪು ಮಾಡಿದ್ದರೆ ಗಲ್ಲಿಗೆ ಹಾಕಲಿ: ಡಿಕೆಶಿ

ಪೊಗರು ಮಾತುಗಳು, ಬ್ಲ್ಯಾಕ್ ಮೇಲ್‌ಗಳಿಗೆ ನಾನು ಹೆದರುವುದಿಲ್ಲ. ಇದು ಅವರಿಗೂ ಗೊತ್ತಿದೆ. ಅವರು ಕೇಳಿರುವ ಎಲ್ಲ ಲೆಕ್ಕ ದಾಖಲೆಗಳನ್ನು ಕೊಡಲು ಸಿದ್ಧ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಮಾಜಿ ಸಿಎಂ ಕುಮಾರಸ್ವಾಮಿ ಅವರಿಗೆ ತಿರುಗೇಟು ನೀಡಿದರು.

- Advertisement -

ಸದಾಶಿವನಗರ ನಿವಾಸದ ಬಳಿ ಕಾಂಗ್ರೆಸ್ ನವರು ಮೇಕೆದಾಟು ಪಾದಯಾತ್ರೆ, ಕನಕೋತ್ಸವ ಮಾಡಿದಾಗ ಅನುಮತಿ ಪಡೆದು ಕರೆಂಟ್ ಬಳಸಿದ್ದರೆ, ಲುಲು ಮಾಲ್ ಸೇರಿದಂತೆ ದೊಡ್ಡ ಕಟ್ಟಡ ಕಟ್ಟುವಾಗ ಎಷ್ಟು ಕರೆಂಟ್ ಎಳೆದುಕೊಂಡಿಲ್ಲ, ಅದಕ್ಕೆ ಲೆಕ್ಕ ಕೊಡುವರೇ? ಎಂಬ ಕುಮಾರಸ್ವಾಮಿ ಅವರ ಆರೋಪದ ಬಗ್ಗೆ ಮಾಧ್ಯಮಗಳು ಕೇಳಿದಾಗ ಶಿವಕುಮಾರ್ ಅವರು ಈ ರೀತಿ ಉತ್ತರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

“ಕುಮಾರಸ್ವಾಮಿ ಹುಚ್ಚರಾಗಿದ್ದಾರೆ. ಅವರು ತಮ್ಮ ತಾಳ್ಮೆ ಕಳೆದುಕೊಂಡಿದ್ದಾರೆ. ಹತಾಶೆಯಲ್ಲಿ ಅವರು ಬಾಯಿಗೆ ಬಂದದ್ದು ಮಾತನಾಡುತ್ತಿದ್ದಾರೆ. ಅವರು ಏನೇನು ಕೇಳುತ್ತಾರೆ, ಅವರ ಆಚಾರ ವಿಚಾರ, ಮಾತುಗಳಿಗೆ ರಾಜ್ಯದ ಜನ ಈಗಾಗಲೇ ಉತ್ತರ ಕೊಟ್ಟಿದ್ದಾರೆ. ಇನ್ನು ಬೇಕಾದರೆ ಆ ಉತ್ತರವನ್ನು ನಾನು ಕೊಡುತ್ತೇನೆ. ಅವರು ಕೇಳುತ್ತಿರುವ ಲೆಕ್ಕಾಚಾರದ ಪಟ್ಟಿ ಕೊಡೋಣ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕುಮಾರಸ್ವಾಮಿ ಪೂರ್ವ ತಯಾರಿ ಇಲ್ಲದೆ ಆರೋಪ ಮಾಡ್ತಿದ್ದಾರಾ?

ನಿಮ್ಮ ಮಾಲ್ ಅನ್ನು ಖರಾಬು ಭೂಮಿಯಲ್ಲಿ ಕಟ್ಟಿದ್ದೀರಿ ಎಂಬ ಕುಮಾರಸ್ವಾಮಿ ಅವರ ಆರೋಪದ ಬಗ್ಗೆ ಕೇಳಿದಾಗ, “ನಾನು ಮಾಲ್ ಕಟ್ಟಿರುವ ಜಾಗ ಕೇಂದ್ರ ಸರ್ಕಾರದ ಒಂದು ಸಂಸ್ಥೆಗೆ ಸೇರಿದ್ದು. ಆ ಸಂಸ್ಥೆಯವರು ದಾಖಲೆ ಮುಂದಿಟ್ಟು ಟೆಂಡರ್ ಕರೆದಿದ್ದರು. ಅದನ್ನು ನಮ್ಮ ಸ್ನೇಹಿತರು ಖರೀದಿ ಮಾಡಿದ್ದರು. ಅವರಿಂದ ನಾನು ಖರೀದಿ ಮಾಡಿ ಜಂಟಿ ಸಹಯೋಗದಲ್ಲಿ ಮಾಲ್ ಕಟ್ಟಿದ್ದೇವೆ. ಅದರಲ್ಲಿ ಏನಾದರೂ ತಪ್ಪಿದ್ದರೆ ನನ್ನನ್ನು ಗಲ್ಲಿಗೆ ಹಾಕಲಿ. ನನ್ನನ್ನು ಈ ರೀತಿ ನಿಯಂತ್ರಿಸಲು ಅವರು ಈಗಾಗಲೇ ಬೇಕಾದಷ್ಟು ಪ್ರಯತ್ನ ಮಾಡಿದ್ದಾರೆ. ಅವರ ತಂದೆಯವರು ಕೂಡ 10-15 ವರ್ಷಗಳ ಹಿಂದೆಯೇ ಜಯರಾಜ್ ಎಂಬ ಅಧಿಕಾರಿ ಮೂಲಕ ಎಲ್ಲಾ ರೀತಿಯ ಪ್ರಯತ್ನ ಮಾಡಿದ್ದರು. ಈಗಲೂ ಯಾವುದೇ ರೀತಿಯ ತನಿಖೆ ಮಾಡಿಸಲಿ. ನಾನು ಎಲ್ಲದಕ್ಕೂ ಸಿದ್ಧ” ಎಂದರು.

“ಸಾರ್ವಜನಿಕ ಜೀವನದಲ್ಲಿರುವ ವ್ಯಕ್ತಿಯಾಗಿ ಪ್ರತಿ ಸಂದರ್ಭದಲ್ಲೂ ನನ್ನ ಆಸ್ತಿ ವಿವರ ಘೋಷಿಸಿದ್ದೇನೆ. ನಾನು ಅಕ್ರಮವಾಗಿ ಕರೆಂಟ್ ಬಳಸಿರುವ ಬಗ್ಗೆ ಅವರು ಮಾತನಾಡುತ್ತಿದ್ದಾರೆ. ನಾನು ಕಟ್ಟಿರುವ ಮಾಲ್ ಅನ್ನು ನನ್ನ ಪಾರ್ಟ್ನರ್ ಶೋಭಾ ಡೆವಲಪ್ಪರ್ಸ್ ಅವರು ಕಟ್ಟಿದ್ದು, ನೀವು ಎಷ್ಟು ಕರೆಂಟ್ ಬಳಸಿದ್ದೀರಿ ಎಂದು ದಾಖಲೆ ಸಮೇತ ತಂದು ತೋರಿಸಿ ಎಂದು ಅವರಿಗೆ ಹೇಳುತ್ತೇನೆ” ಎಂದು ತಿಳಿಸಿದರು.

ಜಮೀರ್ ಅಹ್ಮದ್ ಅವರ ವಿವಾದಾತ್ಮಕ ಹೇಳಿಕೆ ವಿಚಾರವಾಗಿ ಕೇಳಿದಾಗ, “ನನಗೆ ಈ ವಿಚಾರ ತಿಳಿದಿಲ್ಲ. ತಿಳಿದ ನಂತರ ಮಾತನಾಡುತ್ತೇನೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಮುಸ್ಲಿಂ ಮತದಾರರ ಹೆಸರು ಅಳಿಸಲು ಬಿಜೆಪಿ ಜೊತೆ ಜೆಡಿಎಸ್ ಸಂಚು? ಡಿಕೆಶಿ ಹೇಳಿದ್ದೇನು?

ಮುಸ್ಲಿಂ ಸೇರಿದಂತೆ ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...