ಕುಮಾರಸ್ವಾಮಿಗೆ ಕೆಲಸ ಇಲ್ಲ, ಪ್ರಚಾರಕ್ಕಾಗಿ ಆರೋಪ ಮಾಡುತ್ತಾರೆ: ಡಿ ಕೆ ಸುರೇಶ್ ಲೇವಡಿ

Date:

  • ‘ಗುತ್ತಿಗೆದಾರರನ್ನು ರಾಜಕೀಯಕ್ಕೆ ಬಳಸಿಕೊಳ್ಳುತ್ತಿದ್ದಾರೆ’
  • ‘ಕುಮಾರಸ್ವಾಮಿಗೆ ಕ್ಷೇತ್ರಕ್ಕೆ ಹೋಗಲು ಆಗುವುದಿಲ್ಲ’

ಮಾಜಿ ಮುಖ್ಯಮಂತ್ರಿ ಎಚ್ ​ಡಿ ಕುಮಾರಸ್ವಾಮಿ ಪ್ರಚಾರಕ್ಕಾಗಿ ಆರೋಪ ಮಾಡಿದರೆ ನಾವು ಏನೂ ಮಾಡುವುದಕ್ಕೆ ಆಗುವುದಿಲ್ಲ. ಭ್ರಷ್ಟಾಚಾರ ಆರೋಪ ಮಾಡಿ ಪ್ರಚಾರದಲ್ಲಿ ಇರಬೇಕು ಅಂತ ಕೆಲವರು ಬಯಸುತ್ತಾರೆ ಎಂದು ಸಂಸದ ಡಿ ಕೆ ಸುರೇಶ್‌ ಕುಟುಕಿದರು.

ಬೆಂಗಳೂರಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, “ಗುತ್ತಿಗೆದಾರರು ಎರಡೂವರೆ ವರ್ಷದಿಂದ ಬಿಲ್ ಪೆಂಡಿಂಗ್ ಇದೆ ಅಂದಿದ್ದಾರೆ. ಕೆಲಸ ಮಾಡಿದವರಿಗೆ ಹಣ ಸಿಗುತ್ತದೆ ಎಂದು ಸರ್ಕಾರವೇ ಸ್ಪಷ್ಟಪಡಿಸಿದೆ. ಆದರೆ, ಗುತ್ತಿಗೆದಾರರನ್ನು ರಾಜಕೀಯಕ್ಕೆ ಬಳಸಿಕೊಳ್ಳುತ್ತಿದ್ದಾರೆ” ಎಂದು ವಾಗ್ದಾಳಿ ನಡೆಸಿದರು.

‘ಕುಮಾರಸ್ವಾಮಿಗೆ ಕ್ಷೇತ್ರಕ್ಕೆ ಹೋಗಲು ಆಗುವುದಿಲ್ಲ. ಇನ್ನು ನಾಲ್ಕು ವರ್ಷ ಬಿಟ್ಟೇ ಕ್ಷೇತ್ರಕ್ಕೆ ಹೋಗುತ್ತಾರೆ. ಇಲ್ಲಿಯೇ ಇದ್ದು ಏನಾದರೂ ಮಾಡಬೇಕಲ್ಲ, ಕೆಲಸ ಇಲ್ಲದಾಗ ರಾಜಕೀಯ ಮಾಡಲೇಬೇಕಲ್ಲವೆ? ಹೀಗೇ ಬದುಕಬೇಕಲ್ಲ. ಅದಕ್ಕಾಗಿಯೇ ಆರೋಪ ಮಾಡುತ್ತಿದ್ದಾರೆ” ಎಂದು ಟೀಕಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಕಳಪೆ ಕಾಮಗಾರಿಗೆ 40% ಕಮಿಷನ್ ಕಾರಣ ಎಂಬ ಆರೋಪಗಳಿತ್ತು. ಹೀಗಾಗಿ ತನಿಖೆ ಮಾಡಿ ಹಣ ಬಿಡುಗಡೆ ಮಾಡುವುದಾಗಿ ಸಿಎಂ ಡಿಸಿಎಂ ಹೇಳಿದ್ದಾರೆ. ಇರಿಗೇಷನ್, ಪಿಡಬ್ಲ್ಯೂಡಿ ಸೇರಿ ಯಾವ ಇಲಾಖೆಯಲ್ಲೂ ಹಣ ಕೊಟ್ಟಿಲ್ಲ” ಎಂದರು.

ಈ ಸುದ್ದಿ ಓದಿದ್ದೀರಾ? ಭ್ರಷ್ಟಾಚಾರದಲ್ಲಿ ಚಲುವರಾಯಸ್ವಾಮಿ ನಂಬರ್ ಒನ್: ಮಾಜಿ ಶಾಸಕ ಸುರೇಶ್‌ ಗೌಡ ಆರೋಪ

“ಸರ್ಕಾರದ ಕಾರ್ಯಕ್ರಮಗಳು ಯಶಸ್ವಿಯಾಗುತ್ತಿವೆ. ಇದರ ಗಮನ ಡೈವರ್ಷನ್ ಮಾಡಬೇಕು ಅಂತ ಆರೋಪಗಳು ಮಾಡುತ್ತಿದ್ದಾರೆ. ಅಕ್ಕಿ ಯಾಕೆ ಅಂತ ಬಾಯಿ ಬಡಿದುಕೊಂಡರು. ಈಗ ಅಕ್ಕಿ ಕೊಟ್ಟಾಯ್ತು. ಕರೆಂಟ್ ಯಾಕೆ ಅಂದರು? ಕರೆಂಟ್ ಕೊಟ್ಟಾಯ್ತು. ಎಲ್ಲ ಕಾರ್ಯಕ್ರಮ ಅನುಷ್ಠಾನ ಆಗುತ್ತಿರುವಾಗ ಏನು ಮಾಡಬೇಕು ಅವರು? ಆರೋಪ ಮಾಡಿ ಓಡಿಹೋಗುವವರನ್ನು ಬಹಳಷ್ಟು ಜನರನ್ನು ನೋಡಿದ್ದೇವೆ” ಎಂದು ತಿರುಗೇಟು ನೀಡಿದರು.

ವಿಧಾನ ಪರಿಷತ್​​ಗೆ ಸಮಾಜ ಸೇವೆಯಿಂದ ಸುಧಾಮ್ ದಾಸ್ ಅವರ ಹೆಸರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯಪಾಲರಿಗೆ ಶಿಫಾರಸ್ಸು ಮಾಡಿದ್ದಾರೆ. ಈ ವಿಚಾರವಾಗಿಯೂ ಪ್ರತಿಕ್ರಿಯಿಸಿ, “ನನ್ನ ಹೆಸರಿಗೂ ವಿರೋಧ ಇದೆಯಪ್ಪ. ಎಲ್ಲವನ್ನು ಹೈಕಮಾಂಡ್, ಪಕ್ಷ ತೀರ್ಮಾನ ಮಾಡುತ್ತದೆ” ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಟ್ ಕಾಯಿನ್ ಹಗರಣ​ | ಸೈಬರ್ ಕ್ರೈಂ ಠಾಣೆ ಇನ್ಸ್​ಪೆಕ್ಟರ್ ಚಂದ್ರಾಧರ್​ ಬಂಧನ

ಬಿಟ್‌ ಕಾಯಿನ್ ಪ್ರಕರಣಕ್ಕೆ ಸಂಬಂಧಿಸಿದಂತೆ, ಇನ್ಸ್‌ಪೆಕ್ಟರ್ ಚಂದ್ರಾಧರ್ ಎಂಬುವವರನ್ನು ಸಿಐಡಿ ಪೊಲೀಸರು...

ಹಿಂದುತ್ವ | ಭಾರತೀಯ ಸಮಾಜವನ್ನು ಒಳಗಿನಿಂದಲೇ ವಂಚಿಸುವ ‘ಗೋಮುಖ ವ್ಯಾಘ್ರ’

ಸದ್ಯದ ರಾಜಕೀಯ ಪರಿಸ್ಥಿತಿಯಲ್ಲಿ ಬಿಜೆಪಿ ಭಾರತದ ಅತಿದೊಡ್ಡ ರಾಜಕೀಯ ಶಕ್ತಿಯಾಗಿದೆ. ಆದರೆ,...

ಸಂತ್ರಸ್ತೆ ಅಪಹರಣ ಪ್ರಕರಣ | ಮೇ 31ಕ್ಕೆ ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ತೀರ್ಪು

ಕೆ ಆರ್‌ ನಗರ ಮಹಿಳೆ ಅಪಹರಣದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ...