ಕಾಂಗ್ರೆಸ್‌ ಸೇರ್ಪಡೆ | ಮೀಸಲಾತಿ ತೀರ್ಮಾನ ರದ್ದು ಮಾಡಿ, ಎಲ್ಲ ಸಮುದಾಯಕ್ಕೂ ನ್ಯಾಯ ಒದಗಿಸುತ್ತೇವೆ: ಡಿಕೆಶಿ

Date:

  • ಸೋಲಿನ ಭೀತಿಯಿಂದ ಬಿಜೆಪಿಯವರು ಮೀಸಲಾತಿ ಕುತಂತ್ರ ಮಾಡಿದ್ದಾರೆ
  • ಬಿಜೆಪಿಯ ಮಾಜಿ ಸಂಸದ ಮಂಜುನಾಥ್ ಕುನ್ನೂರ ಕಾಂಗ್ರೆಸ್‌ ಸೇರ್ಪಡೆ

ಮೀಸಲಾತಿ ಹಂಚಿಕೆಯ ಸರ್ಕಾರ ತೀರ್ಮಾನವನ್ನು ಕಾಂಗ್ರೆಸ್ ಖಂಡಿಸುತ್ತದೆ. ನಾವು ಅಧಿಕಾರಕ್ಕೆ ಬಂದ ನಂತರ ಸರ್ಕಾರದ ಮೀಸಲಾತಿ ತೀರ್ಮಾನವನ್ನು ರದ್ದು ಮಾಡಿ, ಎಲ್ಲ ಸಮುದಾಯಗಳಿಗೆ ನ್ಯಾಯ ಒದಗಿಸುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್‌ ತಿಳಿಸಿದರು.

ಬಿಜೆಪಿಯ ಮಾಜಿ ಸಂಸದ ಮತ್ತು ಮಾಜಿ ಶಾಸಕ ಮಂಜುನಾಥ್ ಕುನ್ನೂರ, ಅವರ ಪುತ್ರ ರಾಜು ಕುನ್ನೂರ, ಕೆ ಆರ್ ಪೇಟೆಯ ಜೆಡಿಎಸ್ ದೇವರಾಜ್, ಶಿವಮೊಗ್ಗದ ಬಿಜೆಪಿ ಮುಖಂಡ ಅರುಣ್ ಹಾಗೂ ಮಾಜಿ ಶಾಸಕ ಸುಧಾಕರ್ ಬೆಂಬಲಿತ ಚಿಂತಾಮಣಿಯ ಅನ್ಯಪಕ್ಷಗಳ ಮುಖಂಡರನ್ನು ಸೋಮವಾರ ಕೆಪಿಸಿಸಿ ಕಚೇರಿಯಲ್ಲಿ ಪಕ್ಷಕ್ಕೆ ಬರಮಾಡಿಕೊಂಡು ಮಾತನಾಡಿದರು.

“ಮುಂದಿನ ಚುನಾವಣೆಯಲ್ಲಿ ಸೋಲಿನ ಭೀತಿಯಿಂದಾಗ ಬಿಜೆಪಿಯವರು ಇಂತಹ ಕುತಂತ್ರ ರೂಪಿಸುತ್ತಿದ್ದಾರೆ. ರಾಜ್ಯದ ಜನ ಇವರ ಕುತಂತ್ರ ಅರ್ಥ ಮಾಡಿಕೊಂಡಿದ್ದಾರೆ. ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲಿದ್ದಾರೆ” ಎಂದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಬಲಗೈ ಭಂಟನಂತೆ ಇದ್ದ ಶಿಗ್ಗಾಂವ್ ಕ್ಷೇತ್ರದ ಬಿಜೆಪಿ ನಾಯಕ, ಮಾಜಿ ಸಂಸದ, ಹಾಗೂ ಶಾಸಕ ಮಂಜುನಾಥ್ ಕುನ್ನೂರ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರಿದ್ದು, ಬಿಜೆಪಿಯ ಶೋಚನೀಯ ಸ್ಥಿತಿಗೆ ಸಾಕ್ಷಿ. ತನ್ನ ಆಪ್ತರನ್ನೇ ಆಪ್ತರನ್ನೇ ವಿಶ್ವಾಸಕ್ಕೆ ತೆಗೆದುಕೊಳ್ಳದ ಮುಖ್ಯಮಂತ್ರಿಗಳು ರಾಜ್ಯದ ಜನರ ವಿಶ್ವಾಸ ಗಳಿಸಲು ಸಾಧ್ಯವೇ?” ಎಂದು ಕುಟುಕಿದರು.

ಬೊಮ್ಮಾಯಿ ತಿರಸ್ಕರಿಸಿದ ಬಿಜೆಪಿ ನಾಯಕರು:

“ಮಂಜುನಾಥ್ ಕುನ್ನೂರ ಅವರ ಸೇರ್ಪಡೆಯಿಂದ ಬಿಜೆಪಿ ನಾಯಕರೇ ಮುಖ್ಯಮಂತ್ರಿ ಕ್ಷೇತ್ರದಲ್ಲಿ ಬದಲಾವಣೆ ಬಯಸಿದ್ದಾರೆ ಎಂಬುದು ಸ್ಪಷ್ಟವಾಗಿ ತಿಳಿಯುತ್ತದೆ. ಈ ಸೇರ್ಪಡೆ ಶಿಗ್ಗಾಂವ್ ಕ್ಷೇತ್ರದಲ್ಲಿ ಮುಂಬರುವ ಚುನಾವಣೆ ಫಲಿತಾಂಶದ ಮೇಲೆ ಪರಿಣಾಮ ಬೀರಲಿದೆ. ಮಂಜುನಾಥ್ ಹಾಗೂ ಅವರ ಜತೆ ಬಂದಿರುವ ಎಲ್ಲ ನಾಯಕರಿಗೆ ನಾನು ಹೃದಯಪೂರ್ವಕವಾಗಿ ಪಕ್ಷಕ್ಕೆ ಸ್ವಾಗತಿಸುತ್ತೇನೆ” ಎಂದರು.

ಈ ಸುದ್ದಿ ಓದಿದ್ದೀರಾ? ಯಾವ ಸಮುದಾಯಕ್ಕೆ ಮೀಸಲಾತಿ ಹೆಚ್ಚಿಸಿದ್ದೇವೆಯೋ ಅದನ್ನು ಕಾಂಗ್ರೆಸ್ ವಿರೋಧಿಸುತ್ತಾ?: ಬೊಮ್ಮಾಯಿ ಸವಾಲು

“ಜಾತ್ಯಾತೀತ ಜನತಾದಳ ತ್ಯಜಿಸಿ ಚಿಂತಾಮಣಿ ಕ್ಷೇತ್ರದ ಮೂವರು ಪ್ರಮುಖ ನಾಯಕರು ಇಂದು ಕಾಂಗ್ರೆಸ್ ಸೇರಿದ್ದಾರೆ. ಯುವ ಮಿತ್ರ ಸುಧಾಕರ್ ಅವರು ಸಾಕಷ್ಟು ಬಾರಿ ನನ್ನ ಭೇಟಿ ಮಾಡಿ ಪಕ್ಷ ಸೇರ್ಪಡೆ ಬಗ್ಗೆ ತಿಳಿಸಿದ್ದರು. ಚಿಂತಾಮಣಿಯ ರಿಯಾಜ್ ಪಾಷಾ, ಮಹೇಶ್, ಭಾಸ್ಕರ್, ಕೃಷ್ಣಾ ರೆಡ್ಡಿ ಅಮರ್, ಮಹಮದ್ ಶಫಿವುಲ್ಲಾ, ಸಾಮ್ರಾಟ್, ಇರ್ಫಾನ್ ಖಾನ್, ಆರ್. ಪ್ರಸಾದ್, ವೆಂಕಟರೆಡ್ಡಿ, ನವೀನ್, ವಿಜಯ್, ಶ್ರೀನಿವಾಸ್ ಯಾದವ್ ಸೇರಿದಂತೆ ವಿವಿಧ ಸಮುದಾಯದ ಅನೇಕ ಮುಖಂಡರು ಪಕ್ಷ ಸೇರುತ್ತಿದ್ದಾರೆ” ಎಂದರು.

“ಸುಧಾಕರ್ ಅವರನ್ನು ನಾವು ಪಕ್ಷದ ಅಭ್ಯರ್ಥಿ ಎಂದು ತೀರ್ಮಾನಿಸಿದ್ದು, ನೀವೆಲ್ಲರೂ ಸೇರಿ ಅವರನ್ನು ಹೆಚ್ಚಿನ ಅಂತರದಲ್ಲಿ ಗೆಲ್ಲಿಸಬೇಕು. ಕಾಂಗ್ರೆಸ್ ಪಕ್ಷದ ಕಾರ್ಯಕ್ರಮಗಳು, ಗ್ಯಾರಂಟಿ ಯೋಜನೆಗಳನ್ನು ಪ್ರತಿ ಮನೆಗೆ ತಲುಪಿಸಬೇಕು” ಎಂದು ಕರೆ ನೀಡಿದರು.

“ಮಂಡ್ಯ ಜಿಲ್ಲೆಯ ರಾಜಕೀಯ ಇಂದು ಹೊಸ ತಿರುವು ಪಡೆಯುತ್ತಿದೆ. ಬಹಳಷ್ಟು ನಾಯಕರು ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರುತ್ತಿದ್ದಾರೆ. ಕಳೆದ ಕೆ ಆರ್ ಪೇಟೆ ಉಪಚುನಾವಣೆಯಲ್ಲಿ ಜೆಡಿಎಸ್ ನಿಂದ ಸ್ಪರ್ಧಿಸಿ ಎರಡನೇ ಸ್ಥಾನ ಪಡೆದಿದ್ದ ದೇವರಾಜ್ ಇಂದು ಕಾಂಗ್ರೆಸ್ ಸೇರಿದ್ದಾರೆ” ಎಂದರು.

“ಶಿವಮೊಗ್ಗದ ಜೆಡಿಎಸ್ ಕಾರ್ಯದರ್ಶಿ ಅರುಣ್ ಕುಮಾರ್ ಅವರು ಕೂಡ ಪಕ್ಷಕ್ಕೆ ಬಂದಿದ್ದು, ಅವರನ್ನು ನಾವು ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡು ಸ್ವಾಗತಿಸುತ್ತೇನೆ. ಗುಬ್ಬಿ ವಾಸು ಅವರು ಕೂಡ ವಿಧಾನಸಭೆ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಪಕ್ಷ ಸೇರಲು ಅರ್ಜಿ ಹಾಕಲು ಬಂದಿದ್ದಾರೆ. ಅವರನ್ನು ಮತ್ತೊಂದು ದಿನ ಕಾರ್ಯಕ್ರಮ ಮಾಡಿ ಪಕ್ಷಕ್ಕೆ ಸೇರಿಸಿಕೊಳ್ಳುತ್ತೇವೆ”’ ಎಂದರು.

ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೇಂದ್ರದ ಮಾಜಿ ಸಚಿವ ರೆಹಮಾನ್ ಖಾನ್ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಮ್ ಅಹ್ಮದ್, ಮಾಜಿ ಸಚಿವರಾದ ಚಲುವರಾಯಸ್ವಾಮಿ, ನರೇಂದ್ರಸ್ವಾಮಿ, ಪ್ರಿಯಾಂಕ್ ಖರ್ಗೆ ಮತ್ತಿತರರು ಉಪಸ್ಥಿತರಿದ್ದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯತೀಂದ್ರ ಸಿದ್ದರಾಮಯ್ಯ ಹೆಸರಿನಲ್ಲಿ ನಕಲಿ ಫೇಸ್‌ಬುಕ್‌ ಪೇಜ್ ಸೃಷ್ಟಿ; ಸಿದ್ದರಾಮಯ್ಯ ವಿರುದ್ಧ ಅವಹೇಳನ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಹಾಗೂ ಕಾಂಗ್ರೆಸ್‌ ಮುಖಂಡ ಯತೀಂದ್ರ ಸಿದ್ದರಾಮಯ್ಯರ...

ಬ್ಯಾಂಕ್‌ ಹಣ ಕಳಕೊಂಡಿದ್ದವರ ಪ್ರಶ್ನೆಗೆ ಉತ್ತರಿಸಲಾಗದೆ ಓಡಿ ಹೋದ ತೇಜಸ್ವಿ ಸೂರ್ಯ: ವಿಡಿಯೋ ವೈರಲ್

ಸದಾ ವಿವಾದಾತ್ಮಕ ಹೇಳಿಕೆ ಹಾಗೂ ಕೋಮುದ್ವೇಷ ಹರಡುವುದರಲ್ಲೇ ಕುಖ್ಯಾತಿ ಗಳಿಸಿಕೊಂಡಿರುವ ಬೆಂಗಳೂರು...

ಜೋಶಿ ವಿರುದ್ಧ ಸ್ಪರ್ಧಿಸುವ ದುಸ್ಸಾಹಸಕ್ಕೆ ದಿಂಗಾಲೇಶ್ವರ ಶ್ರೀ ಮುಂದಾಗಬಾರದು: ಯಡಿಯೂರಪ್ಪ

ಧಾರವಾಡ-ಹುಬ್ಬಳ್ಳಿ ಕ್ಷೇತ್ರದ ಜನತೆ ಪ್ರಲ್ಹಾದ ಜೋಶಿ ಪರವಾಗಿದ್ದಾರೆ. ಅವರ ವಿರುದ್ಧ ಸ್ಪರ್ಧಿಸುವ...

ಮಹಿಳೆಯರಿಗೆ ಅಪಮಾನ ಆರೋಪ | ನೋವಾಗಿದ್ದರೆ ಕ್ಷಮೆಯಾಚಿಸಲು ಸಿದ್ಧ: ಎಚ್‌ ಡಿ ಕುಮಾರಸ್ವಾಮಿ

"ಗ್ಯಾರಂಟಿ ಯೋಜನೆಗಳಿಂದ ಹಳ್ಳಿ ಹೆಣ್ಣುಮಕ್ಕಳು ದಾರಿ ತಪ್ಪುತ್ತಿದ್ದಾರೆ" ಎಂಬ ಮಾಜಿ ಮುಖ್ಯಮಂತ್ರಿ...