- ಹೊಸಕೋಟೆ ಬಳಿ ರಣಹದ್ದು ಹೆಲಿಕಾಪ್ಟರ್‌ಗೆ ಡಿಕ್ಕಿ
- ಹೆಚ್‌ಎಎಲ್ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸಂಚರಿಸುತ್ತಿದ್ದ ಹೆಲಿಕಾಪ್ಟರ್‌ಗೆ ರಣಹದ್ದು ಡಿಕ್ಕಿ ಹೊಡೆದಿದ್ದು, ಡಿಕೆಶಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಡಿಕೆ ಶಿವಕುಮಾರ್ ಅವರು ಚುನಾವಣಾ ಪ್ರಚಾರದ ಸಂಬಂಧ ಮಂಗಳವಾರ ಮುಳಬಾಗಿಲಿಗೆ ಹೆಲಿಕಾಪ್ಟರ್ ಮೂಲಕ ಸಂಚಾರ ಮಾಡುತ್ತಿದ್ದಾಗ ಹೊಸಕೋಟೆ ಬಳಿ ರಣಹದ್ದು ಹೆಲಿಕಾಪ್ಟರ್‌ಗೆ ಡಿಕ್ಕಿ ಹೊಡೆದಿದೆ.
ಡಿಕೆ ಶಿವಕುಮಾರ್ ಅವರು ಸುರಕ್ಷಿತವಾಗಿ ಬೆಂಗಳೂರಿಗೆ ತಲುಪಿದ್ದಾರೆ. ರಣಹದ್ದು ಡಿಕ್ಕಿಗೆ ಹೆಲಿಕಾಪ್ಟರ್ ಗಾಜು ಪುಡಿಯಾಗಿದೆ. ಕೆಲವು ಕಾಲ ಆತಂಕದ ವಾತಾವರಣ ನಿರ್ಮಾಣ ಆಗಿತ್ತು. ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸಿಲ್ಲ.
ಈ ಸುದ್ದಿ ಓದಿದ್ದೀರಾ? ರಾಯಭಾರಿ ಕಚೇರಿಗಳಲ್ಲಿ ಮತದಾನಕ್ಕೆ ಅವಕಾಶ ಕಲ್ಪಿಸುವಂತೆ ಅನಿವಾಸಿ ಕನ್ನಡಿಗರ ಒತ್ತಾಯ
ಕೂಡಲೇ ಹೆಲಿಕಾಪ್ಟರ್ ಅನ್ನು ಬೆಂಗಳೂರಿನ ಹೆಚ್‌ಎಎಲ್ ವಿಮಾನ ನಿಲ್ದಾಣಕ್ಕೆ ತಂದು ಸುರಕ್ಷಿತವಾಗಿ ಲ್ಯಾಂಡ್ ಮಾಡಲಾಗಿದೆ. ಶಿವಕುಮಾರ್ ಅವರು ಸುರಕ್ಷಿತವಾಗಿದ್ದು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ಆತಂಕ ಪಡುವ ಅಗತ್ಯವಿಲ್ಲ.