ತಮಿಳು ನಾಡಗೀತೆ ಅವಮಾನ ಪ್ರಕರಣ; ಅಣ್ಣಾಮಲೈ ಕ್ಷಮೆಗೆ ಡಿಎಂಕೆಯ ಕನಿಮೋಳಿ ಪಟ್ಟು

Date:

Advertisements
  • ಅಣ್ಣಾಮಲೈ ಕರ್ನಾಟಕ ವಿಧಾನಸಭೆ ಚುನಾವಣೆಯ ಪ್ರಚಾರದ ನೇತೃತ್ವ
  • ತಮಿಳು ನಾಡಗೀತೆಯನ್ನು ಅರ್ಧಕ್ಕೆ ನಿಲ್ಲಿಸಿ ಕರ್ನಾಟಕ ನಾಡಗೀತೆ ಪ್ರಸಾರ

ತಮಿಳುನಾಡಿನ ಬಿಜೆಪಿ ಮುಖಂಡ ಕೆ.ಅಣ್ಣಾಮಲೈ ಅವರು ಈಗ ಕರ್ನಾಟಕದ ಚುನಾವಣಾ ಕಾರ್ಯಕ್ರಮದಲ್ಲಿ ತಮಿಳು ನಾಡಗೀತೆಯನ್ನು ಅರ್ಧಕ್ಕೆ ನಿಲ್ಲಿಸಿ ತಮಿಳಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ಕರ್ನಾಟಕದ ಶಿವಮೊಗ್ಗ ಜಿಲ್ಲೆಯಲ್ಲಿ ಬಿಜೆಪಿಯ ಚುನಾವಣಾ ಪ್ರಚಾರ ಕಾರ್ಯಕ್ರಮದ ವೇಳೆ ತಮಿಳು ನಾಡಗೀತೆಗೆ ಅವಮಾನಿಸಿದ ತಮಿಳುನಾಡು ಬಿಜೆಪಿ ಮುಖ್ಯಸ್ಥ ಕೆ. ಅಣ್ಣಾಮಲೈ ಅವರು ಕ್ಷಮೆಯಾಚಿಸಬೇಕು ಎಂದು ಡಿಎಂಕೆ ಸಂಸದೆ ಕನಿಮೋಳಿ ಅವರು ಶುಕ್ರವಾರ (ಏಪ್ರಿಲ್‌ 28) ಆಗ್ರಹಿಸಿದ್ದಾರೆ.

ಈ ಕುರಿತು ಕನಿಮೋಳಿ ಅವರು ಅಣ್ಣಾಮಲೈ ನಡೆಯನ್ನು ಟೀಕಿಸಿದ್ದಾರೆ. “ತಮಿಳ್‌ ತಾಯಿ ವಾಝ್ತು ಹೆಸರಿನ ತಮಿಳು ನಾಡಗೀತೆಯನ್ನು ತನ್ನದೇ ಪಕ್ಷದ ಸದಸ್ಯರು ಅವಮಾನ ಮಾಡುವುದನ್ನು ತಡೆಯಲಾಗದವರು ತಮಿಳುನಾಡಿನ ಜನರ ಬಗ್ಗೆ ಕಾಳಜಿ ತೆಗೆದುಕೊಳ್ಳುವರೇ?” ಎಂದು ಕುಟುಕಿದ್ದಾರೆ.

Advertisements

ಅಣ್ಣಾಮಲೈ ಅವರು ಕನಿಮೋಳಿ ಅವರ ಹೇಳಿಕೆಗೆ ಟ್ವೀಟ್‌ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ. ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಪ್ರತಿಪಕ್ಷದ ನಾಯಕರಾಗಿದ್ದಾಗಿನ ವಿಡಿಯೋ ತುಣುಕೊಂದನ್ನು ಅವರು ಟ್ವೀಟ್‌ನಲ್ಲಿ ಹಂಚಿಕೊಂಡಿದ್ದಾರೆ. ವಿಡಿಯೋದಲ್ಲಿ ಕಾರ್ಯಕ್ರಮವೊಂದರಲ್ಲಿ ರಾಷ್ಟ್ರಧ್ವಜವನ್ನು ಹಾರಿಸಲಾಯಿತು. ಆದರೆ ರಾಷ್ಟ್ರಗೀತೆಯನ್ನು ಪ್ರಸಾರ ಮಾಡದೇ ಇರುವುದನ್ನು ತೋರಿಸಿದೆ.

“ರಾಷ್ಟ್ರಧ್ವಜವನ್ನು ಹಾರಿಸಿದ ನಂತರ ರಾಷ್ಟ್ರಗೀತೆಯನ್ನು ಪ್ರಸಾರ ಮಾಡಬೇಕು ಎಂಬ ತಿಳುವಳಿಕೆ ಇಲ್ಲದ ನಾಯಕ ಇರುವ ಪಕ್ಷಕ್ಕೆ ಇದೆಲ್ಲ ಬೇಕೆ? ತಮಿಳು ನಾಡಗೀತೆಯಲ್ಲಿ ಕನ್ನಡದ ಬಗೆಗಿನ ಸಾಲನ್ನು ತೆಗೆದುಹಾಕಿ ರಾಜ್ಯ ವಿಭಜನೆಯನ್ನು ಬಿತ್ತಿದ ಇತಿಹಾಸ ನಿಮ್ಮದಲ್ಲವೇ?” ಎಂದು ಅಣಕವಾಡಿದ್ದಾರೆ.

“ಡಿಎಂಕೆಯ ಅಗ್ಗದ ರಾಜಕೀಯದಿಂದ ತಮಿಳು ಜನರನ್ನು ರಕ್ಷಿಸುವುದು ನಮ್ಮ ಏಕೈಕ ಗುರಿ” ಎಂದು ಅಣ್ಣಾಮಲೈ ಹೇಳಿದರು.

ಏನಿದು ಘಟನೆ?

ಅಣ್ಣಾಮಲೈ ಅವರ ನೇತೃತ್ವದಲ್ಲಿ ಶಿವಮೊಗ್ಗದ ಎನ್‌ಇಎಸ್‌ ಮೈದಾನದಲ್ಲಿ ಗುರುವಾರ (ಏಪ್ರಿಲ್‌ 27) ಮಧ್ಯಾಹ್ನ ಬಿಜೆಪಿಯಿಂದ ಆಯೋಜಿಸಿದ್ದ ತಮಿಳು ಬಾಂಧವರ ಸಮಾವೇಶದಲ್ಲಿ ತಮಿಳು ನಾಡಗೀತೆಯನ್ನು ಶಾಸಕ ಕೆ ಎಸ್‌ ಈಶ್ವರಪ್ಪ ಅರ್ಧಕ್ಕೆ ತಡೆದರು.

ಬಳಿಕ ಕರ್ನಾಟಕ ನಾಡಗೀತೆಯನ್ನು ಸಮಾವೇಶದಲ್ಲಿ ಹಾಡಲಾಯಿತು. ಅಣ್ಣಾಮಲೈ ಅವರು ಕರ್ನಾಟಕ ವಿಧಾನಸಭೆ ಚುನಾವಣೆಯ ಉಸ್ತುವಾರಿ ಆಗಿದ್ದಾರೆ. ಅವರು ಶಿವಮೊಗ್ಗ ನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್‌ ಎನ್‌ ಚನ್ನಬಸಪ್ಪ (ಚನ್ನಿ) ಪರ ಪ್ರಚಾರದಲ್ಲಿ ತೊಡಗಿದ್ದರು.

ಸಮಾವೇಶ ಆರಂಭವಾಗುತ್ತಿದ್ದಂತೆ ಸಂಘಟಕರು ತಮಿಳು ನಾಡಗೀತೆ ಆರಂಭಿಸುವಂತೆ ಸೂಚಿಸಿದರು. ಧ್ವನಿವರ್ಧಕದಲ್ಲಿ ತಮಿಳು ನಾಡಗೀತೆ ಆರಂಭವಾಗುತ್ತಿದ್ದಂತೆ ಆಸನದಿಂದ ಕೆ ಎಸ್‌ ಈಶ್ವರಪ್ಪ ವೇದಿಕೆಯತ್ತ ಧಾವಿಸಿ ನಾಡಗೀತೆ ನಿಲ್ಲಿಸುವಂತೆ ಸೂಚಿಸಿದರು. ಬಳಿಕ ಕರ್ನಾಟಕ ನಾಡಗೀತೆ ಹಾಕಲಾಯಿತು.

ಈ ಸುದ್ದಿ ಓದಿದ್ದೀರಾ? ಸಂಚಾರ ನಿಯಮ ಉಲ್ಲಂಘನೆ ಆರೋಪ; ಪ್ರಧಾನಿ ಮೋದಿ ವಿರುದ್ಧ ದೂರು ದಾಖಲು

ಈ ಕುರಿತ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಕರ್ನಾಟಕ ವಿಧಾನಸಭೆ ಚುನಾವಣೆಯು ಮೇ 10ರಂದು ನಡೆಯಲಿದೆ. ಮೇ 13ರಂದು ಫಲಿತಾಂಶ ಹೊರಬೀಳಲಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಬಿಐ ಅಧಿಕಾರಿಗಳಂತೆ ನಟಿಸಿ 2.3 ಕೋಟಿ ರೂ. ದೋಚಿದ್ದ ಗ್ಯಾಂಗ್: ಇಬ್ಬರ ಬಂಧನ

ಕೇಂದ್ರ ತನಿಖಾ ದಳ (ಸಿಬಿಐ) ಅಧಿಕಾರಿಗಳಂತೆ ನಟಿಸಿ ಉದ್ಯಮಿಯೊಬ್ಬರ ಕಚೇರಿಯಿಂದ ಗ್ಯಾಂಗ್...

ಬೀದಿ ನಾಯಿಗಳಿಗೆ ಲಸಿಕೆ ಹಾಕಿದ ನಂತರ ಅದೇ ಸ್ಥಳಕ್ಕೆ ತಂದು ಬಿಡಬೇಕು: ಸುಪ್ರೀಂ ಕೋರ್ಟ್‌

ಬೀದಿ ನಾಯಿಗಳಿಗೆ ಸಂಬಂಧಿಸಿದ್ದಂತೆ ಆಗಸ್ಟ್ 11ರ ಆದೇಶವನ್ನು ಮಾರ್ಪಡಿಸಿದ ಸುಪ್ರೀಂ...

ವಿವಾದಾತ್ಮಕ ಯೂಟ್ಯೂಬರ್ ಎಲ್ವಿಶ್ ಮನೆ ಮೇಲೆ ಗುಂಡಿನ ದಾಳಿ: ಎನ್‌ಕೌಂಟರ್ ಮಾಡಿ ಆರೋಪಿ ಬಂಧನ

ಬಲಪಂಥೀಯ, ವಿವಾದಾತ್ಮಕ ಯೂಟ್ಯೂಬರ್ ಮತ್ತು ಬಿಗ್ ಬಾಸ್ ವಿಜೇತ ಎಲ್ವಿಶ್ ಯಾದವ್‌...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

Download Eedina App Android / iOS

X