ವಕ್ಫ್‌ ತಿದ್ದುಪಡಿ ಮಸೂದೆ ವಿರುದ್ಧ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಲಿದೆ ಡಿಎಂಕೆ

Date:

ಲೋಕಸಭೆಯಲ್ಲಿ ಅಂಗೀಕಾರಗೊಂಡಿರುವ ‘ವಕ್ಫ್ (ತಿದ್ದುಪಡಿ) ಮಸೂದೆ-2024’ಅನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸುತ್ತೇವೆ ಎಂದು ತಮಿಳುನಾಡಿನ ಆಡಳಿತಾರೂಢ ಪಕ್ಷ ಡಿಎಂಕೆ ಹೇಳಿದೆ.‌

- Advertisement -

ಮುಸ್ಲಿಂ ಸಮುದಾಯದ ವಕ್ಫ್‌ ಆಸ್ತಿಯನ್ನು ಕಸಿದುಕೊಳ್ಳುವ, ನಿಯಂತ್ರಣ ಸಾಧಿಸಲು ಯತ್ನಿಸುತ್ತಿರುವ ಕೇಂದ್ರ ಸರ್ಕಾರದ ‘ವಕ್ಫ್ ಮಸೂದೆ’ಯನ್ನು ಡಿಎಂಕೆ ಹಿಂದಿನಿಂದಲೂ ವಿರೋಧಿಸುತ್ತಿದೆ. ಕಳೆದ ತಿಂಗಳು (ಮಾರ್ಚ್ 27) ತಮಿಳುನಾಡು ವಿಧಾನಸಭೆಯು ವಕ್ಫ್ ತಿದ್ದುಪಡಿ ಮಸೂದೆಯನ್ನು ಕೇಂದ್ರ ಸರ್ಕಾರ ಹಿಂಪಡೆಯಬೇಕೆಂದು ಒತ್ತಾಯಿಸಿ ನಿರ್ಣಯವನ್ನು ಅಂಗೀಕರಿಸಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಲೋಕಸಭೆಯಲ್ಲಿ ಮಸೂದೆ ಅಂಗೀಕಾರ ಆಗಿದ್ದರ ವಿರುದ್ಧ ಕಪ್ಪು ಪಟ್ಟಿ ಧರಿಸಿ ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಪ್ರತಿಭಟಿಸಿದ್ದಾರೆ. ವಕ್ಫ್ ಮಸೂದೆ ವಿಚಾರದಲ್ಲಿ ತಮಿಳುನಾಡು ಸರ್ಕಾರವು ಕಾನೂನು ಹೋರಾಟ ನಡೆಸಲಿದೆ ಮತ್ತು ಗೆಲುವು ಸಾಧಿಸಲಿದೆ ಎಂದು ಸ್ಟಾಲಿನ್ ಹೇಳಿದ್ದಾರೆ.

“ಈ ಮಸೂದೆ ಧಾರ್ಮಿಕ ಸಾಮರಸ್ಯವನ್ನು ಹಾಳುಗೆಡುವುತ್ತದೆ. ಮಾತ್ರವಲ್ಲದೆ, ಮುಸ್ಲಿಂ ಸಮುದಾಯದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ. ದೇಶದ ಬಹುತೇಕ ರಾಜಕೀಯ ಪಕ್ಷಗಳು ಈ ಮಸೂದೆಗೆ ವಿರೋಧ ವ್ಯಕ್ತಪಡಿಸಿವೆ. ಆದರೂ, ಇದನ್ನು ಲೋಕಸಭೆಯಲ್ಲಿ ಅಂಗೀಕರಿಸಲಾಗಿದೆ. ಮಸೂದೆ ಅಂಗೀಕಾರವಾದರೂ ಮಸೂದೆ ವಿರುದ್ಧ ಚಲಾವಣೆಯಾದ ಮತಗಳ ಸಂಖ್ಯೆಯನ್ನು ನಿರ್ಲಕ್ಷಿಸಬಾರದು” ಎಂದು ಸ್ಟಾಲಿನ್‌ ಹೇಳಿದ್ದಾರೆ.

ಬುಧವಾರ, ಲೋಕಸಭೆಯಲ್ಲಿ ಕೇಂದ್ರ ಸಂಸದೀಯ ಮತ್ತು ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ಮಸೂದೆಯನ್ನು ಮಂಡಿಸಿದ್ದರು. ಸುದೀರ್ಘ ಚರ್ಚೆಯ ಬಳಿಕ ಲೋಕಸಭೆಯಲ್ಲಿ ಮಸೂದೆಯ ಪರವಾಗಿ 288 ಮತಗಳು ಮತ್ತು ಮಸೂದೆಯ ವಿರುದ್ಧವಾಗಿ 232 ಮತಗಳು ಚಲಾವಣೆಯಾದವು. ಅಗತ್ಯ ಬಹುಮತವು ಮಸೂದೆ ಪರವಾಗಿ ಬಂದಿದ್ದರಿಂದ, ಮಸೂದೆಯು ಲೋಕಸಭೆಯಲ್ಲಿ ಅಂಗೀಕಾರಗೊಂಡಿತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಾಹ್‌ EC! 13 ಕೋಟಿ ಜನರನ್ನ ಹೊರದಬ್ಬಿ, ಈಗ ಮರುನೋಂದಣಿಯ ಕಸರತ್ತು

ರಾಷ್ಟ್ರವ್ಯಾಪಿ 'ವಿಶೇಷ ತೀವ್ರ ಪರಿಷ್ಕರಣೆ' (SIR) ಎನ್ನುವ ಭೀಕರ ಆಪರೇಷನ್ ನಡೆಸಿ,...

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...