ಗ್ಯಾರಂಟಿ ಜಾರಿಗೆ ಅಭಿವೃದ್ಧಿ ಅನುದಾನಗಳಿಗೆ ಕತ್ತರಿ ಹಾಕಬೇಡಿ : ಮಾಜಿ ಸಿಎಂ ಬೊಮ್ಮಾಯಿ

Date:

  • ಹಿಂದಿನ ಸರ್ಕಾರದ ಜನಪರ ಯೋಜನೆ ಮುಂದುವರೆಸಲು ಸಿಎಂಗೆ ಮನವಿ
  • ಸಿದ್ದರಾಮಯ್ಯಗೆ ಪತ್ರ ಮೂಲಕ ಕೋರಿಕೊಂಡ ಮಾಜಿ ಸಿಎಂ ಬೊಮ್ಮಾಯಿ

ಕಾಂಗ್ರೆಸ್‌ನ ಗ್ಯಾರಂಟಿ ಜಾರಿ ಸಲುವಾಗಿನ ಆರ್ಥಿಕತೆ ಹೊಂದಾಣಿಕೆ ಮಾಡಿಕೊಳ್ಳಲು, ಸರ್ಕಾರ ಇತರೆ ಯೋಜನೆಗಳ ಅನುದಾನಕ್ಕೆ ಕತ್ತರಿ ಹಾಕದಿರುವಂತೆ ರಾಜ್ಯ ಸರ್ಕಾರಕ್ಕೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮನವಿ ಮಾಡಿದ್ದಾರೆ.

ಈ ವಿಚಾರ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪತ್ರ ಬರೆದಿರುವ ಬಸವರಾಜ ಬೊಮ್ಮಾಯಿ, ಹಳೆಯ ಸರ್ಕಾರ ರೂಪಿಸಿದ್ದ ಯೋಜನೆಗಳನ್ನೂ ಮುಂದುವರೆಸಿಕೊಂಡು ಹೋಗುವುದರ ಜೊತೆಗೆ ಇತರೆ ಯೋಜನೆಗಳ ಅನುದಾನಕ್ಕೆ ತೊಂದರೆ ಆಗದಂತೆ ನೋಡಿಕೊಳ್ಳಲು ಕೇಳಿಕೊಂಡಿದ್ದಾರೆ.

ಅವರ ಪತ್ರ ಸಾರಾಂಶ ಹೀಗಿದೆ:

ಮಹಿಳೆಯರಿಗೆ ಸ್ತ್ರೀ ಸಾಮರ್ಥ್ಯ ಯೋಜನೆ, ಮಹಿಳಾ ಮತ್ತು ಮಕ್ಕಳ ಪೌಷ್ಟಿಕ ಕಾರ್ಯಕ್ರಮಗಳು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭಿವೃದ್ಧಿಗೆ ಎಸ್ಸಿಪಿ, ಟಿಎಸ್ ಪಿ ಅನುದಾನವನ್ನು ಕಡಿತಗೊಳಿಸಬಾರದು, ಪರಿಶಿಷ್ಟ ಜಾತಿ, ಪಂಗಡ ಮತ್ತು ಹಿಂದುಳಿದ ವರ್ಗಗಳಿಗೆ ನೀಡಿದ ಹಾಸ್ಟೆಲ್ ಗಳ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದ್ದು, ಅದಕ್ಕೆ ಅನುದಾನ ಕಡಿತಗೊಳಿಸಬಾರದು.

ಹಾಗೂ ಗ್ರಾಮೀಣ ಮೂಲಭೂತ ಸೌಕರ್ಯ ಯೋಜನೆಗಳಾದ ಜಲಜೀವನ ಮಿಷನ್, ಗೃಹ ನಿರ್ಮಾಣ, ನೀರಾವರಿ ಯೋಜನೆಗಳು ಹಾಗೂ ಪಂಚಾಯತಿಗೆ ಅನುದಾನ ಕೊರತೆಯಾಗದಂತೆ ನೋಡಿಕೊಳ್ಳಬೇಕು.ಸಿಎಂ ಲೆಟರ್‌

ಅದೇ ರೀತಿ ರಾಜ್ಯ, ಜಿಲ್ಲಾ ರಸ್ತೆಗಳ ನಿರ್ಮಾಣ ಪ್ರಗತಿ ಮೊಟಕುಗೊಳಿಸಬಾರದು ಹಾಗೂ ಕೇಂದ್ರ ರಾಜ್ಯ ಸಹಭಾಗಿತ್ವದಲ್ಲಿ ನಡೆಯುವ ಎಲ್ಲ ಕಾರ್ಯಕ್ರಮಗಳಿಗೆ ಹಣಕಾಸು ಒದಗಿಸುವುದು, ರಾಜ್ಯದ ಹಿತದೃಷ್ಟಿಯಿಂದ ಅತ್ಯಂತ ಅವಶ್ಯವಿದೆ.

ನಗರ ಪ್ರದೇಶಗಳಲ್ಲಿ ನಗರೋತ್ಥಾನ ಸ್ಮಾರ್ಟ್ ಸಿಟಿ ಯೋಜನೆ ಮೆಟ್ರೊ, ಸಬರಬನ್ ಯೋಜನೆಗಳನ್ನು
ಮುಂದುವರೆಸುವುದು ಬೆಂಗಳೂರಿನ ಅಭಿವೃದ್ಧಿಗೆ ಅತಿ ಅವಶ್ಯವಿರುತ್ತದೆ. ಕಾಣಿಸಿದ ವಿಷಯಗಳ ಜೊತೆಗೆ ಇತರ ಇಲಾಖೆಗಳ ಎಲ್ಲ ಅಭಿವೃದ್ಧಿ ಯೋಜನೆಗಳನ್ನು ಮುಂದುವರೆಸಿಕೊಂಡು ಹೋಗುವುದು ಕರ್ನಾಟಕದ ಸರ್ವಾಂಗೀಣ ಅಭಿವೃದ್ಧಿಯ ದೃಷ್ಟಿಯಿಂದ ಅವಶ್ಯಕತೆ ಇದೆ.

ಇದು ರಾಜ್ಯ ಸರ್ಕಾರದ ಜವಾಬ್ದಾರಿ, ಈ ಬಗ್ಗೆ ಅನುದಾನವನ್ನು ಖಚಿತ ಪಡಿಸುವುದು ಹಾಗೂ ಸಮಗ್ರ ಮಾಹಿತಿಯನ್ನು ರಾಜ್ಯದ ಜನತೆಗೆ ಕೊಡಬೇಕಾಗಿ ನಾನು ಆಗ್ರಹ ಮಾಡುತ್ತೇನೆ.

ಈ ಸುದ್ದಿ ಓದಿದ್ದೀರಾ?: ಕೇಂದ್ರ ಸರ್ಕಾರ ಅಕ್ಕಿ ನೀಡದಿದ್ದರೆ ನಾವೇ ಖರೀದಿಸುತ್ತೇವೆ: ಸಚಿವ ಮುನಿಯಪ್ಪ

ತಾವು ಕೊಡುತ್ತಿರುವ ಗ್ಯಾರಂಟಿ ಯೋಜನೆಗಳಿಗೆ 50 ಸಾವಿರ ಕೋಟಿ ರೂ. ಅಗತ್ಯವಿರುವ ಹಿನ್ನೆಲೆಯಲ್ಲಿ ರಾಜ್ಯದ ಆರ್ಥಿಕ ಪರಿಸ್ಥಿತಿ ಬಿಗಡಾಯಿಸಬಾರದು ಹಾಗೂ ರಾಜ್ಯದ ಜನತೆಯ ಮೇಲೆ ಅಪರೋಕ್ಷವಾಗಿ ಹೆಚ್ಚಿನ ಭಾರ ಬೀಳಬಾರದೆಂದು ಈ ಪತ್ರ ಬರೆಯುತ್ತಿದ್ದು ಸಿಎಂ ಸೂಕ್ತ ಕ್ರಮ ಜರುಗಿಸುವ ವಿಶ್ವಾಸ ಇಟ್ಟಿರುವುದಾಗಿ ಅವರು ತಿಳಿಸಿದ್ದಾರೆ.

ಇತ್ತ ರಾಜ್ಯ ಸರ್ಕಾರ ಮಾಜಿ ಸಿಎಂ ಪತ್ರಕ್ಕೆ ಯಾವ ಪ್ರತಿಕ್ರಿಯೆ ನೀಡಲಿದೆ ಎನ್ನುವ ಕುತೂಹಲವೀಗ ಜನರನ್ನು ಕಾಡಲಾರಂಭಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪಾಕಿಸ್ತಾನ | ಮಸೀದಿ ಬಳಿ ಆತ್ಮಹತ್ಯಾ ಬಾಂಬ್ ದಾಳಿ; 52 ಮಂದಿ ಬಲಿ, 130ಕ್ಕೂ ಹೆಚ್ಚು ಜನ ಗಂಭೀರ

ಪಾಕಿಸ್ತಾನದ ಪ್ರಕ್ಷುಬ್ಧ ಪ್ರದೇಶವಾದ ಬಲೂಚಿಸ್ತಾನ್ ಪ್ರಾಂತ್ಯದ ಮಸೀದಿಯೊಂದರ ಬಳಿ ಶುಕ್ರವಾರ ಪ್ರವಾದಿ...

ಮಹಿಳಾ ಮೀಸಲಾತಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ಅಂಗೀಕಾರಗೊಂಡಿದ್ದ ಮಹಿಳಾ ಮೀಸಲಾತಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ...

ಕರ್ನಾಟಕ ಬಂದ್ | ಚಿಕ್ಕಬಳ್ಳಾಪುರ: ತಲೆ ಬೋಳಿಸಿಕೊಂಡು ಪ್ರತಿಭಟನೆ

ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ಖಂಡಿಸಿ ಚಿಕ್ಕಬಳ್ಳಾಪುರದಲ್ಲಿ ವ್ಯಕ್ತಿಯೊಬ್ಬರು ತಲೆ ಬೊಳಿಸಿಕೊಂಡು...

ಕರ್ನಾಟಕಕ್ಕೆ ನೀಡಲು ‘ಇಲ್ಲ’ ಎಂದಿದ್ದ ‘ಅಕ್ಕಿ’ ಸಿಂಗಾಪುರಕ್ಕೆ ರಫ್ತು ಮಾಡಲು ಹೊರಟ ಕೇಂದ್ರ ಸರ್ಕಾರ!

ಕರ್ನಾಟಕ ಸರ್ಕಾರವು ಅನ್ನಭಾಗ್ಯ ಯೋಜನೆಗೆ ಹೆಚ್ಚುವರಿ ಅಕ್ಕಿ ನೀಡುವಂತೆ ಕೇಳಿದಾಗ 'ನಿಮಗೆ...