ಹಾಲಿನ ದರ ಕಡಿತ ಮಾಡದಂತೆ ಕೆಎಂಎಫ್‌ಗೆ ಸೂಚನೆ

Date:

ರೈತರಿಂದ ಖರೀದಿಸುವ ಹಾಲಿಗೆ ನಿಗದಿಪಡಿಸಿರುವ ದರದಲ್ಲಿ ಯಾವುದೇ ಕಡಿತ ಮಾಡಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೆಎಂಎಫ್‌ಗೆ ಸೂಚನೆ ನೀಡಿದ್ದಾರೆ.

ಹಾಲು ಉತ್ಪಾದನೆ ಹೆಚ್ಚಳವಾದ ಕಾರಣ ಬೆಂಗಳೂರು ಹಾಲು ಉತ್ಪಾದಕರ ಒಕ್ಕೂಟ (ಬಮೂಲ್) ದರ ಕಡಿತ ಮಾಡಿದೆ ಎಂದು ವರದಿಯಾಗಿತ್ತು. ಹೀಗಾಗಿ ಮುಖ್ಯಮಂತ್ರಿ ಈ ಸೂಚನೆ ನೀಡಿದ್ದಾರೆ.

ಏಕಾಏಕಿ ದರ ಕಡಿತ ಮಾಡುವಂತಿಲ್ಲ. ಈ ಕುರಿತು ಸರ್ಕಾರದ ಜೊತೆ ಚರ್ಚಿಸಬೇಕು ಎಂದು ಕರ್ನಾಟಕ ಹಾಲು ಮಹಾ ಮಂಡಳದ (ಕೆಎಂಎಫ್) ವ್ಯವಸ್ಥಾಪಕ ನಿರ್ದೇಶಕರ ಜೊತೆಗೆ ಮಾತನಾಡಿ ಸೂಚಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ದರ ಕಡಿತ ಮಾಡಿದರೆ ರೈತರಿಗೆ ತೊಂದರೆಯಾಗುತ್ತದೆ. ಈ ಅಂಶವನ್ನು ಗಮನದಲ್ಲಿ ಇಟ್ಟುಕೊಳ್ಳಬೇಕು ಎಂದು ತಿಳಿಸಿದರು.

ಹಾಲು ಒಕ್ಕೂಟ

ಬೇಸಿಗೆ ಸಮಯದಲ್ಲಿ ಹಾಲಿನ ಉತ್ಪಾದನೆ ಕಡಿಮೆಯಾದ್ದರಿಂದ ಬಮೂಲ್ ಏಪ್ರಿಲ್ 1ರಿಂದ ಮೇ 31ರವರೆಗೆ ಪ್ರತಿ ಲೀಟರ್ ಹಾಲಿಗೆ 12.85 ವಿಶೇಷ ಪ್ರೋತ್ಸಾಹ ಧನ ಘೋಷಿಸಿತ್ತು. ಇದೀಗ ಒಕ್ಕೂಟದ ವ್ಯಾಪ್ತಿಯ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿ ಹಸಿರು ಮೇವು ಲಭ್ಯವಾಗಿದ್ದು, ಹಾಲಿ ಉತ್ಪಾದನೆ ಹೆಚ್ಚಳವಾಗಿದೆ. ಈ ಕಾರಣಕ್ಕೆ ಪ್ರೋತ್ಸಾಹಧನದಲ್ಲಿ 31.50 ಕಡಿತಗೊಳಿಸಿ ಆದೇಶ ಹೊರಡಿಸಲಾಗಿತ್ತು.

ಈ ಸುದ್ದಿ ಓದಿದ್ದೀರಾ? ನಮ್ಮ ಡಿಸಿಎಂ | ಬಿಕ್ಕಟ್ಟುಗಳನ್ನೇ ಮೆಟ್ಟಿಲುಗಳನ್ನಾಗಿ ಬಳಸಿ ಬೆಳೆದ ಶಿವಕುಮಾರ್‌

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಪ್ರಧಾನಿ ಮೋದಿಗೆ ಗುಜರಾತ್‌ನಲ್ಲಿ ಮುಸ್ಲಿಂ ಒಬಿಸಿ ಮೀಸಲಾತಿ ಓಕೆ, ಇತರೆಡೆ ಮಾತ್ರ ಬೇಡ’

ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ಮುಸ್ಲಿಂ ಒಬಿಸಿ ಮೀಸಲಾತಿ ಬಗ್ಗೆ ಭಾರೀ ಚರ್ಚೆಯಾಗುತ್ತಿದೆ....

ಬಿಜೆಪಿ ನಾಯಕರು ಖಿನ್ನತೆಗೆ ಒಳಗಾಗಿದ್ದಾರೆ ಎಂದ ತೇಜಸ್ವಿ ಯಾದವ್!

ಬಿಹಾರದ ಎರಡನೇ ಹಂತದ ಲೋಕಸಭಾ ಚುನಾವಣೆಯ ನಂತರ ಬಿಜೆಪಿ ನಾಯಕರು ಖಿನ್ನತೆಗೆ...

ಹಾಸನ ಪೆನ್‌ಡ್ರೈವ್ ಪ್ರಕರಣ | ಸಂಬಂಧಪಟ್ಟವರ ಬಂಧನಕ್ಕೆ ಆಗ್ರಹಿಸಿ ಏ.29ರಂದು ಪ್ರತಿಭಟನೆ

ನೂರಾರು ಅಶ್ಲೀಲ ವಿಡಿಯೋಗಳು, ಚಿತ್ರಗಳು ಇರುವ ಹಾಸನದ ಪೆನ್ ಡ್ರೈವ್ ಲೈಂಗಿಕ...