ಹಿಂದುಳಿದ ವರ್ಗಗಳ ಆಯೋಗದ ಅವಧಿ ವಿಸ್ತರಣೆ ಬೇಡ: ಸಿಎಂಗೆ ರಮೇಶ್‌ ಬಾಬು ಮನವಿ

Date:

Advertisements
  • ನಿಗದಿತ ಸಮಯದಲ್ಲಿ ವರದಿ ಪಡೆಯದೆ ಇರುವುದು ರಾಜಕೀಯ ಚರ್ಚೆಗೆ ಅವಕಾಶ
  • ಮೂಲ ವರದಿ ಅಥವಾ ಪ್ರತಿ ನಾಪತ್ತೆ ಆಗಿದ್ದರೆ, ತಪ್ಪಿತಸ್ತರ ಮೇಲೆ ದೂರು ದಾಖಲಿಸಿ 

ಎಚ್ ಕಾಂತರಾಜ ನೇತೃತ್ವದ ಆಯೋಗದ ವರದಿಯನ್ನು ರಾಜ್ಯ ಸರ್ಕಾರ ನಿಗದಿತ ಸಮಯದಲ್ಲಿ ಪಡೆಯದೆ ಇರುವುದು ಅನೇಕ ರಾಜಕೀಯ ಚರ್ಚೆಗಳಿಗೆ ಅವಕಾಶ ಕೊಟ್ಟಿರುತ್ತದೆ. ಸುಪ್ರೀಂ ಕೋರ್ಟಿನ ತೀರ್ಪಿಗೆ ಅನುಗುಣವಾಗಿ ರಾಜ್ಯ ಸರ್ಕಾರ ಸದರಿ ವರದಿಯನ್ನು ಪಡೆದು, ಅದರ ಜಾರಿ ಮತ್ತು ವರದಿಯ ಅಂಶಗಳ ಕುರಿತು ಸಾರ್ವಜನಿಕ ಚರ್ಚೆಗೆ ಅವಕಾಶ ಕಲ್ಪಿಸಬೇಕು ಎಂದು ಮಾಜಿ ಎಂಎಲ್‌ಸಿ ರಮೇಶ್‌ ಬಾಬು ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಮನವಿ ಮಾಡಿಕೊಂಡಿದ್ದಾರೆ.

“ಸಾಂವಿಧಾನಿಕವಾಗಿ ಆಯೋಗಕ್ಕೆ 3 ವರ್ಷಗಳ ಅವಧಿಯನ್ನು ನೀಡಲಾಗಿದ್ದು, ಅವಧಿ ಪೂರೈಕೆಗೆ ಮುಂಚೆ ಸಮೀಕ್ಷೆಯ ವರದಿಯನ್ನು ಮತ್ತು ಆಯೋಗದ ಇತರೆ ವರದಿಗಳನ್ನು ಸರ್ಕಾರಕ್ಕೆ ನೀಡಲಿ” ಎಂದು ಆಗ್ರಹಿಸಿದ್ದಾರೆ.

“ಯಾವುದೇ ಆಯೋಗಗಳು ತಮ್ಮ ಅವಧಿಯ ಒಳಗೆ ಪೂರ್ಣಮಟ್ಟದ ಕಾರ್ಯಗಳನ್ನು ಮಾಡಲು ಅವಕಾಶದ ಜೊತೆಗೆ ಸಿಬ್ಬಂದಿ ಮತ್ತು ಸೌಲಭ್ಯಗಳನ್ನು ನೀಡಲಾಗಿದೆ. ತಮ್ಮ ಜವಾಬ್ದಾರಿಗಳನ್ನು ನಿಗದಿತ ಅವಧಿಯಲ್ಲಿ ಆಯೋಗಗಳು ಪರಿಣಾಮಕಾರಿಯಾಗಿ ನಿರ್ವಹಿಸದೇ ಹೋದರೆ ಆಯೋಗಗಳ ಮೂಲ ಉದ್ದೇಶವೇ ವಿಫಲವಾಗುತ್ತದೆ. ಆಯೋಗಗಳ ಅವಧಿಯನ್ನು ಪದೇ ಪದೇ ವಿಸ್ತರಿಸುವ ಮೂಲಕ ಕೆಟ್ಟ ಪರಂಪರೆಗೆ ಅವಕಾಶ ನೀಡಬಾರದು” ಎಂದು ಸರ್ಕಾರವನ್ನು ಕೋರಿದ್ದಾರೆ.

Advertisements

“ಕರ್ನಾಟಕ ರಾಜ್ಯ ಸರ್ಕಾರವು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮೂಲಕ ಸುಮಾರು 165 ಕೋಟಿ ರೂಪಾಯಿಗಳನ್ನು ವೆಚ್ಚ ಮಾಡಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ನಡೆಸಿರುತ್ತದೆ. ಸುಪ್ರೀಂ ಕೋರ್ಟ್ ನಿರ್ದೇಶನಕ್ಕೆ ಅನುಗುಣವಾಗಿ ಪ್ರತೀ ರಾಜ್ಯದಲ್ಲಿ ಹಿಂದುಳಿದ ವರ್ಗಗಳ ಆಯೋಗಗಳನ್ನು ರಚಿಸಲಾಗಿದ್ದು, ಈ ಆಯೋಗಗಳ ವರದಿಗೆ ಅನುಗುಣವಾಗಿ ರಾಜ್ಯಗಳಲ್ಲಿ ಹಿಂದುಳಿದ ವರ್ಗ ಮತ್ತು ಜಾತಿಗಳನ್ನು ಅವುಗಳ ಸಾಮಾಜಿಕ ಮತ್ತು ಶೈಕ್ಷಣಿಕ ಅಂಶಗಳ ಮೇಲೆ ನಿರ್ಧರಿಸಲಾಗುತ್ತದೆ” ಎಂದಿದ್ದಾರೆ.

ಈ ಸುದ್ದಿ ಓದಿದ್ದೀರಾ? ಭೋವಿ ಸಮುದಾಯದ ಒಬ್ಬರನ್ನು ಕೆಪಿಎಸ್‌ಸಿ ಸದಸ್ಯರನ್ನಾಗಿ ಮಾಡುವೆ: ಸಿದ್ದರಾಮಯ್ಯ‌ ಭರವಸೆ

“ಹಿಂದಿನ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ತನ್ನ ಅವಧಿ ಮುಗಿದ ನಂತರವೂ ಆಯೋಗದ ಅವಧಿಯನ್ನು ವಿಸ್ತರಿಸಿಕೊಳ್ಳಲು ಸಕಾಲದಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಸಲಿಲ್ಲ ಎಂಬ ಆರೋಪವಿರುತ್ತದೆ. ಆಯೋಗಗಳು ಪದೇ ಪದೇ ತಮ್ಮ ಅವಧಿಯ ನಂತರವೂ ವಿಸ್ತರಣೆಗೆ ರಾಜ್ಯ ಸರ್ಕಾರಕ್ಕೆ ಒತ್ತಡ ಹಾಕುವುದು ಸರಿಯಾದ ಕ್ರಮ ಆಗಿರುವುದಿಲ್ಲ. ಈಗಿನ ಆಯೋಗದ ಅಧ್ಯಕ್ಷರು ಆಯೋಗದ ಅವಧಿಯನ್ನು ವಿಸ್ತರಿಸುವಂತೆ ಮಾಡಿರುವ ಮನವಿ ಸಮಂಜಸವಲ್ಲ” ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

“ಯಾವುದೇ ಆಯೋಗಗಳು ರಾಜ್ಯ ಸರ್ಕಾರದ ಅಡಿಯಲ್ಲಿ ಬಂದರೂ ಅವುಗಳಿಗೆ ವಿಶೇಷವಾದ ಸ್ಥಾನಮಾನ ಮತ್ತು ಅಧಿಕಾರಗಳನ್ನು ನೀಡಲಾಗಿರುತ್ತದೆ. ಆಯೋಗದಲ್ಲಿ ಮೂಲ ವರದಿ ಅಥವಾ ಪ್ರತಿ ನಾಪತ್ತೆ ಆಗಿದ್ದರೆ, ತಪ್ಪಿತಸ್ತರ ಮೇಲೆ ದೂರು ದಾಖಲಿಸಬೇಕಾಗಿತ್ತು. ಸಾರ್ವಜನಿಕರ ಹಣವನ್ನು ವೆಚ್ಚ ಮಾಡಿ ಸಮೀಕ್ಷೆ ನಡೆಸಿ ಈಗ ಮೂಲ ವರದಿ ನಾಪತ್ತೆಯಾಗಿದೆ ಎಂದರೆ ಅದು ಅನೇಕ ಅನುಮಾನಗಳಿಗೆ ಅವಕಾಶ ನೀಡುತ್ತದೆ. ವರದಿಯ ದತ್ತಾಂಶದ ಜೊತೆಗೆ ಸಮೀಕ್ಷೆಯ ವರದಿ ಅಂತಿಮಗೊಳ್ಳುವ ಮೊದಲು ಅನೇಕ ಸಭೆಯ ನಡವಳಿಕೆಗಳನ್ನು ಮಾಡಲಾಗಿದ್ದು, ಪ್ರತೀ ನಡವಳಿಕೆಯಲ್ಲಿ ಆಯೋಗದ ಅಧ್ಯಕ್ಷರು, ಸದಸ್ಯರು ಮತ್ತು ಕಾರ್ಯದರ್ಶಿ ತಮ್ಮ ಸಹಿ ಮಾಡಿರುತ್ತಾರೆ” ಎಂದು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ ಪ್ರಕರಣಗಳ ಸಮಗ್ರ ತನಿಖೆಗೆ ಎಡಪಕ್ಷಗಳ ಒತ್ತಾಯ

ಧರ್ಮಸ್ಥಳದಲ್ಲಿ ನಡೆದಿರುವ ವೇದವಲ್ಲಿ, ಪದ್ಮಲತಾ, ನಾರಾಯಣ, ಯಮುನಾ ಮತ್ತು ಸೌಜನ್ಯ, ಮುಂತಾದ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

Download Eedina App Android / iOS

X