ಡಿ ಕೆ ಸುರೇಶ್ ಹಿನ್ನಲೆ ಏನು ಅಂತ ಜನರಿಗೆ ಗೊತ್ತಿಲ್ಲವೇ: ಕುಮಾರಸ್ವಾಮಿ ಪ್ರಶ್ನೆ

Date:

Advertisements

ನಾಗಮಂಗಲ ಗಲಭೆ ಹಿಂದೆ ಕುಮಾರಸ್ವಾಮಿ ಇದ್ದಾರೆ ಎಂಬ ಡಿ ಕೆ ಸುರೇಶ್ ಆರೋಪಕ್ಕೆ ತಿರುಗೇಟು ಕೊಟ್ಟ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು, ಆ ಬ್ರದರ್‌ಗಳ ಹಿನ್ನೆಲೆ ಏನು ಎಂಬುದು ಇಡೀ ಜಗತ್ತಿಗೆ ಗೊತ್ತಿದೆ ಎಂದರು.

ಬೆಂಗಳೂರಿನಲ್ಲಿ ಶನಿವಾರ ಜೆಡಿಎಸ್ ರಾಜ್ಯ ಕಚೇರಿಯಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು; ಡಿ.ಕೆ.ಸುರೇಶ್ ಅವರ ಹಿನ್ನಲೆ ಏನು ಅಂತ ಗೊತ್ತಿಲ್ಲವೇ? ಅವರ ಮಾರ್ಗ ಎಂಥದು ಎನ್ನುವುದು ಎಲ್ಲರಿಗೂ ಗೊತ್ತು ಎಂದು ಕಿಡಿಕಾರಿದರು.

“ಅಣ್ಣ – ತಮ್ಮಂದಿರು ಯಾವ ಮಾರ್ಗದಲ್ಲಿ ಬಂದಿದ್ದಾರೆ. ಯಾರಿಗೆ ಹೇಗೆಲ್ಲಾ ಧಮ್ಕಿ ಹಾಕಿದ್ದಾರೆ. ಯಾರ ಯಾರ ಆಸ್ತಿಗಳನ್ನು ಲಪಟಾಯಿಸಿ ಲೂಟಿ ಮೂಡಿದ್ದಾರೆ, ಇದೆಲ್ಲವೂ ಜನರಿಗೆ ಗೊತ್ತಿದೆ. ಅಂತವರ ಬಗ್ಗೆ ನಾನು ಹೇಳಿಕೆ ಕೊಡಬೇಕಾ” ಎಂದು ಸಚಿವರು ಪ್ರಶ್ನಿಸಿದರು.

Advertisements

“ನಾನು ವಾರಕ್ಕೊಮ್ಮೆ ರಾಜ್ಯಕ್ಕೆ ಬರುವುದು ಗಲಾಟೆ ಮಾಡಿಸುವುದಕ್ಕಾ? ನಾನು ನಾಗಮಂಗಲಕ್ಕೆ ಹೋಗಿದ್ದು ಶಾಂತಿ ಉದ್ದೇಶಕ್ಕೆ. ಅಲ್ಲಿ ನಾನು ಏನು ಸಂದೇಶ ಕೊಟ್ಟಿದ್ದೀನಿ ಎಂಬುದನ್ನು ಆ ವ್ಯಕ್ತಿ ಒಮ್ಮೆ ಗಮನಿಸಲಿ” ಡಿ.ಕೆ.ಸುರೇಶ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

“ಒಲೈಕೆ ರಾಜಕಾರಣಕ್ಕೆ ಮರುಳಾಗಬೇಡಿ ಎಂದು ಹೇಳಿದ್ದೇನೆ. ನಮ್ಮ ರಾಜ್ಯ ಸರ್ವ ಜನಾಂಗದ ಶಾಂತಿಯ ತೋಟ. ಇದು ಕುವೆಂಪು ಅವರು ಕೊಟ್ಟ ಸಂದೇಶ. ಈ ಸರ್ವ ಜನಾಂಗದ ಶಾಂತಿಯ ತೋಟ ನೆಮ್ಮದಿಯಿಂದ ಇರಬೇಕು. ಎಲ್ಲರಿಗೂ ಕೈ ಮುಗಿದು ಮನವಿ ಮಾಡುತ್ತೇನೆ. ಎಲ್ಲಾ ಅಣ್ಣ ತಮ್ಮಂದಿರ ರೀತಿ ಬದುಕಬೇಕೆಂದು ನಾಗಮಂಗಲದಲ್ಲಿ ನಾಡಿನ ಜನತೆಗೆ ಮಾಧ್ಯಮಗಳ ಮೂಲಕ ಮನವಿ ಮಾಡಿದ್ದೇನೆ” ಎಂದರು.

ಕರ್ನಾಟಕಕ್ಕೆ ಬಂದರೆ ಇವರು ಸಹಿಸಲ್ಲ!

“ನಾನು ನಾಗಮಂಗಲಕ್ಕೆ ಹೋಗುವುದು ಇರಲಿ,ಕರ್ನಾಟಕಕ್ಕೆ ಬರುವುದನ್ನೇ ಇವರಿಗೆ ಸಹಿಸಿಕೊಳ್ಳಲು ಆಗುತ್ತಿಲ್ಲ. ನನ್ನ ಮತ್ತು ನಮ್ಮ ಪಕ್ಷದ ಕಥೆ ಮುಗಿದೇ ಹೋಯಿತು ಎಂದುಕೊಂಡಿದ್ದರು. ಈಗ ಕೇಂದ್ರದಲ್ಲಿ ಮಂತ್ರಿ ಆಗಿರುವುದಕ್ಕೆ ಕೆಲವರಿಗೆ ಸಹಿಸಿಕೊಳ್ಳಲು ಆಗುತ್ತಿಲ್ಲ. ಅವರ ನೋವಿಗೆ ಔಷಧಿ ನಾನು ಎಲ್ಲಿಂದ ಕೊಡಲಿ? ಎಂದು ಕುಮಾರಸ್ವಾಮಿ ಅವರು ಟಾಂಗ್ ನೀಡಿದರು.

ಚನ್ನಪಟ್ಟಣ ಚುನಾವಣೆಗೂ ನಾಗಮಂಗಲಕ್ಕೂ ಏನು ಸಂಬಂಧ?

ಕುಮಾರಸ್ವಾಮಿಯವರು ಚನ್ನಪಟ್ಟಣ ಚುನಾವಣೆಗಾಗಿ ಬರುದ್ದಾರೆ ಎಂದು ಟೀಕೆ ಮಾಡಿದರೆ ನಾನೇನು ಹೇಳಲಿ? ಚನ್ನಪಟ್ಟಣ ಚುನಾವಣೆಗೂ ನಾಗಮಂಗಲಕ್ಕೂ ಏನು ಸಂಬಂಧ? ಅಲ್ಲಿ ನಡೆದಿರುವ ಘಟನೆ ಬಗ್ಗೆ ಪರಿಶೀಲನೆ ಮಾಡಲು ಮಂಡ್ಯ ಸಂಸದನಾಗಿ ಅಲ್ಲಿಗೆ ಹೋಗಿದ್ದೇನೆ. ನಾನು ಹೋದಾಗ ಒಂದು ಸಮಾಜದವರನ್ನ ಒಲೈಸಿದ್ದೇನೆಯೇ? ಎರಡೂ ಸಮಾಜಗಳಲ್ಲಿ ಆಗಿರುವ ಅನಾಹುತವನ್ನು ಅರಿತುಕೊಂಡು ನನ್ನ ಕೈಲಾದಷ್ಟು ಪರಿಹಾರ ಕೊಟ್ಟು ಬಂದಿದ್ದೇನೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

Download Eedina App Android / iOS

X