ಕುವೆಂಪುರನ್ನು ಹಿಂದೂ ವಿರೋಧಿ ಎನ್ನುವ ದಮ್ಮು, ತಾಕತ್ತು ಬಿಜೆಪಿಗರಿಗೆ ಇದೆಯಾ: ಪ್ರಿಯಾಂಕ್‌ ಖರ್ಗೆ ಪ್ರಶ್ನೆ

Date:

Advertisements

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆ ವಿರೋಧಿಸಿ ರಾಜ್ಯ ಬಿಜೆಪಿ ಮಾಡಿರುವ ಟ್ವೀಟ್‌ಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಅವರು, “ಉತ್ತರದ ಕಾಶಿಯಲಿ ಕತ್ತೆ ಮಿಂದೈ ತರಲು ದಕ್ಷಿಣದ ದೇಶಕದು ಕುದುರೆಯಹುದೆ?” ಎಂದು ಹೇಳಿದ ಕುವೆಂಪುರನ್ನು ಹಿಂದೂ ವಿರೋಧಿ ಎನ್ನುವ ದಮ್ಮು ತಾಕತ್ತು ಇದೆಯೇ” ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಪ್ರಶ್ನಿಸಿದ್ದಾರೆ.

“ಪ್ರಶ್ನೆಗಳನ್ನು ಎತ್ತಿದರೆ, ವಸ್ತು ಸ್ಥಿತಿಯನ್ನು ಹೇಳಿದರೆ ಹಿಂದೂ ವಿರೋಧಿ ಎಂದು ಹೇಳಿ ಉತ್ತರದಾಯಿತ್ವದಿಂದ ಜಾರಿಕೊಳ್ಳುವುದು ಬಿಜೆಪಿಯ ಹಳೆ ಚಾಳಿ. ಬಿಜೆಪಿ ಏನಾದರೂ 12ನೇ ಶತಮಾನದಲ್ಲಿ ಇದ್ದಿದ್ದರೆ ಮೌಢ್ಯದ ವಿರುದ್ಧ ವಚನ ಚಳವಳಿ ಕಟ್ಟಿದ್ದ ಶರಣರಿಗೂ ಹಿಂದೂ ವಿರೋಧಿ ಪಟ್ಟ ಕಟ್ಟಿಬಿಡುತ್ತಿದ್ದರೋ ಏನೋ! ಆದರೂ ಆಗಿನ ಮನುವಾದಿಗಳು ಶರಣರಿಗೆ ಪೀಡಿಸಿದ್ದರು ಎನ್ನುವುದು ಇತಿಹಾಸ” ಎಂದು ಪ್ರಿಯಾಂಕ್‌ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.

ಟ್ವೀಟ್‌ನಲ್ಲಿ ಏನಿದೆ?

Advertisements

ನೀರ ಕಂಡಲ್ಲಿ ಮುಳುಗುವರಯ್ಯ / ಮರ ಕಂಡಲ್ಲಿ ಸುತ್ತುವರಯ್ಯ / ಬತ್ತುವ ಜಲವ ಒಣಗುವ ಮರವ ಮೆಚ್ಚಿದವರು / ನಿನ್ನನೆತ್ತಬಲ್ಲರು ಕೂಡಲ ಸಂಗಮದೇವ.

ವೇದಕ್ಕೆ ಬರೆಯ ಕಟ್ಟುವೆ, ಶಾಸ್ತ್ರಕ್ಕೆ ನಿಗಳವನಿಕ್ಕುವೆ, ತರ್ಕದ ಬೆನ್ನ ಬಾರನೆತ್ತುವ ಆಗಮದ ಮೂಗ ಕೊಯ್ಯುವೆ ನೋಡಯ್ಯ ಎಂದ ಬಸವಣ್ಣರನ್ನು ಹಿಂದೂ ವಿರೋಧಿ ಎನ್ನುವಿರಾ?

ವೇದ ಶಾಸ್ತ್ರ ಪುರಾಣಗಳೆಂಬ ಕೊಟ್ಟಣ ಕುಟ್ಟುತ್ತಾ ನುಚ್ಚು ತೌಡು ಕಾಣಿರೋ ಎಂದ ಅಕ್ಕಮಹಾದೇವಿಯನ್ನು ಹಿಂದೂ ವಿರೋಧಿ ಎನ್ನುವಿರಾ?

ಕಟ್ಟಿದ ಲಿಂಗವ ಬಿಟ್ಟು ಬೆಟ್ಟದ ಲಿಂಗಕ್ಕೆ ಹೋಗಿ ಹೊಟ್ಟೆಯಡಿಯಾಗಿ ಬೀಳುವ ಲೊಟ್ಟೆ ಮೂಗನ ಕಂಡರೆ ಮೆಟ್ಟಿದ ಎಡಪಾದರಕ್ಷೆಯ ತಕ್ಕೊಂಡು ಲಟಲಟನೆ ಹೊಡೆ’ ಎಂದ ಅಂಬಿಗರ ಚೌಡಯ್ಯರನ್ನು ಹಿಂದೂ ವಿರೋಧಿ ಎನ್ನುವಿರಾ?

ಕಲ್ಲಮನೆಯಡಿ ಕಲ್ಲದೇವರ ಮಾಡಿ, ಆ ಕಲ್ಲು ಕಲ್ಲ ಮೇಲೆ ಕೆಡೆದರೆ ದೇವರೆತ್ತ ಹೋದರೋ? ಎಂದಿದ್ದ ಅಲ್ಲಮರನ್ನು ಹಿಂದೂ ವಿರೋಧಿ ಎನ್ನುವಿರಾ?

‘ಸೌ ಚುಹೇ ಖಾಕೆ ಬಿಲ್ಲಿ ಹಜ್ ಕೊ ಚಲೀ” ಎಂಬ ನುಡಿಗಟ್ಟು ಉರ್ದುವಿನಲ್ಲೂ ಇದೆ, ಯಾವ ಧರ್ಮವೂ ಕೂಡ ಕೆಟ್ಟ ಕೆಲಸ ಮಾಡಿ ಪುಣ್ಯ ಕ್ಷೇತ್ರಕ್ಕೆ ಬಂದರೆ ಪಾಪ ಪರಿಹಾರವಾಗುತ್ತದೆ ಎಂದಿಲ್ಲ, ನಿಮ್ಮ ಒಳ್ಳೆಯ ಕೆಲಸಗಳೇ ನಿಮ್ಮ ಪುಣ್ಯಕ್ಕೆ ದಾರಿ ಎನ್ನುತ್ತವೆ.

“ಬಿಜೆಪಿಯವರು ಮೊದಲು ಹಿಂದೂ ಧರ್ಮದ ಅಧ್ಯಯನ ಮಾಡಲಿ, ಪಾಪ, ಪುಣ್ಯಗಳು ನದಿಗಳಲ್ಲಿ ಮುಳುಗೇಳುವುದರಿಂದ ನಿರ್ಧಾರವಾಗುವುದಿಲ್ಲ, ನಾವು ಮಾಡಿದ ಕೆಟ್ಟ ಕೆಲಸಗಳಿಗೆ ಕುಂಭ ಸ್ನಾನದಿಂದ ಮಾಫಿಯೂ ದೊರಕುವುದಿಲ್ಲ.
ಗಂಗಾ ಸ್ನಾನ ಮಾಡಿದರೆ ಕೆಟ್ಟವನು ಒಳ್ಳೆಯವನಾಗುವುದಿಲ್ಲ,
ಕರ್ಮ, ಕಾಯಕಗಳು ಮಾತ್ರ ನಮ್ಮನ್ನು ಉದ್ದರಿಸಬಲ್ಲವು ಎನ್ನುವುದನ್ನು ಹಲವು ಮಹನೀಯರು ಹೇಳಿದ್ದಾರೆ” ಎಂದು ಕುಟುಕಿದ್ದಾರೆ.

“ಬಿಜೆಪಿಯವರು ಧರ್ಮದ ಹೆಸರು ಹೇಳಿಕೊಂಡು ರಾಜಕಾರಣ ಮಾಡುವುದನ್ನು ಬಿಟ್ಟು, ಸಾಧನೆ ಹೇಳಿಕೊಂಡು ರಾಜಕಾರಣ ಮಾಡಿ ತೋರಿಸಲಿ” ಎಂದು ಸವಾಲು ಹಾಕಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ: ಚಲನಚಿತ್ರ ನಿರ್ದೇಶಕಿ ಸುಮನ್ ಕಿತ್ತೂರು

ಪರಿಶಿಷ್ಟ ಜಾತಿ ಒಳಮೀಸಲಾತಿ ವಿಚಾರದಲ್ಲಿ ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ...

ಚಿತ್ರದುರ್ಗ | ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಅನ್ಯಾಯ ಸರಿಪಡಿಸಿ; ಮಹಾನಾಯಕ ದಲಿತ ಸೇನೆ

ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ...

ಕರ್ನಾಟಕ ಕೃಷಿ ಇಲಾಖೆಯಿಂದ ರೈತರಿಗೆ ಡಿಜಿಟಲ್ ಬಲ: ಬಿಇಎಲ್ ಜೊತೆ ಒಡಂಬಡಿಕೆ

ಕೃಷಿ ಸೇವೆಗಳು ರೈತರಿಗೆ ಇನ್ನಷ್ಟು ಸುಲಭವಾಗಿ ದತ್ತಾಂಶ ಆಧಾರಿತವಾಗಿ ಮತ್ತು ಅವಶ್ಯಕತೆಗೆ...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X