ಕಾಶ್ಮೀರದಲ್ಲಿ 370ನೇ ವಿಧಿ ಮರುಜಾರಿಗೆ ಕಾಂಗ್ರೆಸ್ ಒಪ್ಪಿಗೆ ಇದೆಯೇ: ವಿ ಸುನೀಲ್‍‌ ಕುಮಾರ್ ಪ್ರಶ್ನೆ

Date:

ಕಾಶ್ಮೀರದಲ್ಲಿ 370ನೇ ವಿಧಿಯನ್ನು ಮರುಜಾರಿ ಮಾಡಲು ನಿಮ್ಮ ಒಪ್ಪಿಗೆ ಇದೆಯೇ ಎಂದು ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಪಕ್ಷವು ಸ್ಪಷ್ಟಪಡಿಸಬೇಕು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ ಸುನೀಲ್‍ ಕುಮಾರ್ ಒತ್ತಾಯಿಸಿದರು.

- Advertisement -

ಬೆಂಗಳೂರಿನಲ್ಲಿ ಶನಿವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, “ದೇಶದಲ್ಲಿ ಎರಡು ಕಾನೂನು ಜಾರಿಗೊಳಿಸಲು ನಿಮ್ಮ ಒಪ್ಪಿಗೆ ಇದೆಯೇ? ನ್ಯಾಶನಲ್ ಕಾನ್ಫರೆನ್ಸ್ ತನ್ನ ಪ್ರಣಾಳಿಕೆಯಲ್ಲಿ ಈಗಾಗಲೇ 370ನೇ ವಿಧಿ ಮರುಜಾರಿ ಮಾಡುವುದಾಗಿ ಹೇಳಿದೆ. ನ್ಯಾಶನಲ್ ಕಾನ್ಫರೆನ್ಸ್ ಜೊತೆ ಚುನಾವಣೆ ಹೊಂದಾಣಿಕೆ ಮಾಡಿದ್ದರಿಂದ 370ನೇ ವಿಧಿ ಬಗ್ಗೆ ನಿಮ್ಮ ನಿಲುವೇನು ಎಂದು ಜನರಿಗೆ ತಿಳಿಸಬೇಕು” ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

“ದೇಶದಲ್ಲಿ ಎರಡು ಕಾನೂನು ತರುವ ಸಿದ್ಧತೆ ಮಾಡಿಕೊಳ್ಳುತ್ತಿದ್ದೀರಾ? ದೇಶದಲ್ಲಿ ಎರಡು ಧ್ವಜ ಮಾಡಲು ಕಾಂಗ್ರೆಸ್ ಸಮ್ಮತಿಸುವುದೇ? ಕೇವಲ ಚುನಾವಣೆ ಹೊಂದಾಣಿಕೆ ಅಲ್ಲ. 370ನೇ ವಿಧಿಯನ್ನು ಬಿಜೆಪಿ ರದ್ದು ಮಾಡಿದ ಬಳಿಕ ಇವತ್ತು ಅದನ್ನು ಮರುಜಾರಿ ಮಾಡುವುದಾಗಿ ನ್ಯಾಶನಲ್ ಕಾನ್ಫರೆನ್ಸ್ ಹೇಳಿದೆ. ಆ ಪಕ್ಷದ ಜೊತೆ ಕಾಂಗ್ರೆಸ್ ಪಕ್ಷ ಹೊಂದಾಣಿಕೆ ಮಾಡಿಕೊಂಡಿದ್ದು, ದೇಶದ ಜನರ ಹಲವು ಪ್ರಶ್ನೆಗಳಿಗೆ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಪಕ್ಷವು ಉತ್ತರ ಕೊಡಬೇಕು” ಎಂದರು.

“ಚುನಾವಣೆ ಬಂದಾಗ ಯಾರು ಬೇಕಾದರೂ ನನ್ನ ಮಿತ್ರಪಕ್ಷ ಆಗಬಹುದೆಂದು ಅಂದುಕೊಂಡು ದೇಶದ ಹಿತಾಸಕ್ತಿಯನ್ನು ಕಾಂಗ್ರೆಸ್ ಮರೆತಿದೆ. ಇಲ್ಲಿನತನಕ ಅಲ್ಲಿದ್ದ ಸೈನಿಕರಿಗೆ ಕಲ್ಲು ತೂರಾಟವನ್ನು ಕಾಂಗ್ರೆಸ್ ಸಮರ್ಥಿಸುವುದೇ” ಎಂದು ಕೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕದ ನೀರಾವರಿ ಯೋಜನೆಗಳಿಗೆ ಕೇಂದ್ರದ ನೆರವು ಕೋರಿದ ಸಿಎಂ ಡಿಕೆ ಶಿವಕುಮಾರ್

ರಾಜ್ಯದ ಕುಡಿಯುವ ನೀರು, ನೀರಾವರಿ ಹಾಗೂ ಬರ ಪರಿಹಾರದ ಅಗತ್ಯಗಳನ್ನು ಈಡೇರಿಸಲು...

ಮೈಸೂರು ದಸರಾ: ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ ಅಧಿಕೃತ ಆಹ್ವಾನ

ಮೈಸೂರು ದಸರಾ ಮಹೋತ್ಸವದ ಉದ್ಘಾಟಕರಾಗಿ ಆಯ್ಕೆಯಾಗಿರುವ ಕೊಪ್ಪಳದ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ...

SIR ಎಂಬ ತಾಂತ್ರಿಕ ರೋಗ ಮತದಾರರಿಗೆ ಶಾಪವಾಗಿದೆಯೇ?

ಎಸ್‌ಐಆರ್‌ ಪ್ರಕ್ರಿಯೆಯು ಯಶಸ್ವಿಯಾಗಿ ಮುಕ್ತಾಯಗೊಳ್ಳಲು ಸಾರ್ವಜನಿಕ ಜಾಗೃತಿ, ಅಧಿಕೃತ ಮಾಹಿತಿಯ ಸುಲಭ...