ಮೋದಿಗೆ ಕ್ಯಾಮೆರಾ ಮುಂದೆ ಮಾತ್ರವೇ ರಕ್ತ ಕುದಿಯುವುದಾ?

Date:

ಪಹಲ್ಗಾಮ್‌ ದಾಳಿಯ ಬಗ್ಗೆ ಅಬ್ಬರದ ಭಾಷಣ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ‘ನನ್ನ ಮೈಯಲ್ಲಿ ಹರಿಯುತ್ತಿರುವುದು ರಕ್ತವಲ್ಲ. ಕುದಿಯುತ್ತಿರುವ ಸಿಂಧೂರ’ ಎಂದು ಹೇಳಿದ್ದಾರೆ. ಅವರ ಹೇಳಿಕೆಯನ್ನು ವ್ಯಂಗ್ಯವಾಡಿರುವ ವಿಪಕ್ಷ ನಾಯಕ ರಾಹುಲ್‌ ಗಾಂಧಿ, “ಕ್ಯಾಮೆರಾಗಳ ಮುಂದೆ ಮಾತ್ರವೇ ನಿಮ್ಮ ಕುದಿಯುವುದೇಕೆ” ಎಂದು ಪ್ರಶ್ನಿಸಿದ್ದರೆ.

- Advertisement -

ಗುರುವಾರ, ರಾಜಸ್ಥಾನದ ಬಿಕಾನೇರ್‌ನಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಮೋದಿ, “ನನ್ನ ಮನಸ್ಸು ತಂಪಾಗಿರುತ್ತದೆ. ಆದರೆ, ರಕ್ತ ಮಾತ್ರ ಕುದಿಯುತ್ತಿರುತ್ತದೆ. ಈಗ, ಅದು ರಕ್ತವಲ್ಲ, ಕುದಿಯುತ್ತಿರುವ ಸಿಂಧೂರ” ಎಂದು ಘೋಷಿಸಿದರು. ಅವರ ಹೇಳಿಕೆಯು ಭಾರೀ ಟ್ರೋಲ್‌ಗೂ ಒಳಗಾಗಿದೆ. ಭಾರತ-ಪಾಕ್ ಸಂಘರ್ಷವನ್ನು ವ್ಯಾಪಾರದ ಬೆದರಿಕೆಯ ಅಸ್ತ್ರಬಳಸಿ ನಿಲ್ಲಿಸಿದೆ, ಕದನ ವಿರಾಮಕ್ಕೆ ಒಪ್ಪಿಸಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ಪದೇ-ಪದೇ ಹೇಳುತ್ತಿರುದ್ದರೂ, ಅದರ ಬಗ್ಗೆ ಏನನ್ನೂ ಮಾತನಾಡದೆ, ಟ್ರಂಪ್ ಹೇಳಿಕೆಯನ್ನು ಅಲ್ಲಗಳೆಯದ, ಖಂಡಿಸದ ಮೋದಿ ಅವರ ರಕ್ತವು ಕ್ಯಾಮೆರಾ ಎದುರು ಮಾತ್ರವೇ ಕುದಿಯುತ್ತದೆ ಎಂದು ನೆಟ್ಟಿಗರು ಟ್ರೋಲ್ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...

ಇನ್ನು, ಮೋದಿ ಹೇಳಿಕೆ ಕುರಿತು ಟ್ವೀಟ್‌ ಮಾಡಿರುವ ರಾಹುಲ್‌ ಗಾಂಧಿ, “ಮೋದಿಯವರೇ, ಸುಳ್ಳು ಭಾಷಣಗಳನ್ನು ನಿಲ್ಲಿಸಿ. ಭಯೋತ್ಪಾದನೆಯ ವಿರುದ್ಧದ ಪಾಕಿಸ್ತಾನದ ಹೇಳಿಕೆಗಳನ್ನು ನೀವೇಕೆ ನಂಬಿಕೊಂಡಿದ್ದೀರಿ? ಟ್ರಂಪ್‌ಗೆ ತಲೆಬಾಗುವ ಮೂಲಕ ನೀವು ಭಾರತದ ಹಿತಾಸಕ್ತಿಯನ್ನು ಬಲಿಕೊಟ್ಟಿದ್ದೀರಿ. ಕದನ ವಿರಾಮಕ್ಕೆ ಒಪ್ಪಿಕೊಂಡು ಭಾರತದ ಪ್ರತಿಷ್ಠೆಯ ಜೊತೆ ರಾಜಿ ಮಾಡಿಕೊಂಡಿದ್ದೀರಿ. ಬರೀ ಕ್ಯಾಮೆರಾಗಳ ಮುಂದೆ ಮಾತ್ರ ಏಕೆ ನಿಮ್ಮ ರಕ್ತ ಕುದಿಯುತ್ತದೆ” ಎಂದು ಪ್ರಶ್ನಿಸಿದ್ದಾರೆ.

ಕದನ ವಿರಾಮ ಘೋಷಣೆ ವಿಚಾರದಲ್ಲಿ ಟ್ರಂಪ್ ನೀಡುತ್ತಿರುವ ಹೇಳಿಕೆಗಳ ಕುರಿತು ಮೋದಿ ಸರ್ಕಾರವನ್ನು ಕಾಂಗ್ರೆಸ್‌ ಪ್ರಶ್ನಿಸಿದೆ. “ಟ್ರಂಪ್ 11 ದಿನಗಳಲ್ಲಿ ಎಂಟು ಬಾರಿ ಭಾರತ ಮತ್ತು ಪಾಕಿಸ್ತಾನದ ನಡುವಿನ ಕದನ ವಿರಾಮದಲ್ಲಿ ತಮ್ಮದೇ ಪಾತ್ರವಿರುವುದಾಗಿ ಹೇಳಿಕೊಂಡಿದ್ದಾರೆ. ಭಾರತ ಮತ್ತು ಪಾಕಿಸ್ತಾನದ ಪ್ರಧಾನಿಗಳನ್ನು ಸಮಾನವಾಗಿ ಹೊಗಳಿದ್ದಾರೆ. ಇಬ್ಬರನ್ನೂ ಎಲ್ಲ ರೀತಿಯಲ್ಲೂ ಸಮಾನವೆಂದು ಹೇಳಿದ್ದಾರೆ. ಎರಡು ದೇಶಗಳು ಕದನ ವಿರಾಮ ಘೋಷಿಸುವಂತೆ ಮಾಡಲು ಅಮೆರಿಕ ಜೊತೆಗಿನ ವ್ಯಾಪಾರ ವಹಿವಾಟನ್ನು ಅಸ್ತ್ರವಾಗಿ ಬಳಸಿದ್ದಾಗಿ ಹೇಳಿಕೊಂಡಿದ್ದಾರೆ. ಆದರೆ, ಅವರ ಹೇಳಿಕೆಗಳನ್ನು ಮೋದಿ ಒಮ್ಮೆಯೂ ತಿರಸ್ಕರಿಸಿಲ್ಲ. ಗಾಢ ಮೌನಕ್ಕೆ ಜಾರಿದ್ದಾರೆ. ಈ ಮೌನ ಯಾಕೆ” ಎಂದು ಕೇಳಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಫಕೀರನಂತೆ ‘ಜೋಳಿಗೆ’ ಎತ್ತಿಕೊಂಡು ಹೋಗುವ ಸಮಯ ಬಂತು, ಹೊರಡಿ ಮೋದಿಜಿ: ಕಾಂಗ್ರೆಸ್ ಲೇವಡಿ

ದೇಶಾದ್ಯಂತ ಔಷಧಿಗಳ ಬೆಲೆ ತೀವ್ರವಾಗಿ ಏರಿಕೆಯಾಗುತ್ತಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್ ಪ್ರಶಸ್ತಿ ವಿಜೇತ ಸಂಶೋಧನೆ‌

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ...

CEC ಗ್ಯಾನೇಶ್‌ ಕುಮಾರ್‌ ವಿರುದ್ಧ ಭುಗಿಲೆದ್ದ ಆಕ್ರೋಶ; ತೀವ್ರಗೊಂಡ ಮೋಶಾ ದಮನ ಕ್ರಮಗಳು

ಚುನಾವಣಾ ಅಕ್ರಮಗಳ ಆರೋಪದ ಹಿನ್ನೆಲೆಯಲ್ಲಿ ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್‌...

ಸಿಇಸಿ ಗ್ಯಾನೇಶ್ ವಿರುದ್ಧ ಅರ್ಜಿ: ಕೇಂದ್ರ, ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರು ಇತರ ಚುನಾವಣಾ...