ದೆಹಲಿಗೆ ಯಾತ್ರೆ ಹೊರಡಿ, ಮೋದಿ ಮೇಲೆ ಒತ್ತಡ ಹಾಕಿ, ಬರಪರಿಹಾರ ಕೊಡಿಸಿ: ಬಿಜೆಪಿಗರನ್ನು ಕುಟುಕಿದ ಸಿಎಂ

Date:

  • ‘ಬರಕ್ಕೆ ಪರಿಹಾರ ಕೊಡಬೇಕಾದವರು ದೆಹಲಿಯಲ್ಲಿ ಕೂತಿದ್ದಾರೆ’
  • ‘ಬಿಜೆಪಿ ನಾಯಕರು ರಾಜ್ಯದಲ್ಲಿ ಸುತ್ತಾಡಲು ಹೊರಟಿದ್ದಾರೆ’

“ದೊರೆಯ ತನಕ ದೂರು ಕೊಂಡು ಹೋಗಲಾಗದವರು ಹೊಳೆಯ ತನಕ ಓಟ ಮಾಡಿದರಂತೆ’’ ಎಂಬ ಗಾದೆ ಮಾತಿನಂತಾಗಿದೆ ರಾಜ್ಯ ಬಿಜೆಪಿ ನಾಯಕರ ದಿಕ್ಕೆಟ್ಟ ಬರ ಅಧ್ಯಯನ ಯಾತ್ರೆ. ಬರಕ್ಕೆ ಪರಿಹಾರ ಕೊಡಬೇಕಾದವರು ದೆಹಲಿಯಲ್ಲಿ ಕೂತಿದ್ದಾರೆ. ಈ ಬಿಜೆಪಿ ನಾಯಕರು ಬರ ಅಧ್ಯಯನಕ್ಕೆ ರಾಜ್ಯ ಸುತ್ತಾಡಲು ಹೊರಟಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದಾರೆ.

- Advertisement -

ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಸಿದ್ದರಾಮಯ್ಯ, “ಬಿಜೆಪಿ ನಾಯಕರೇ, ನಿಮ್ಮದೇ ಪಕ್ಷದ ಸರ್ಕಾರಕ್ಕೆ ಸೇರಿದ ತಜ್ಞರ ತಂಡವೇ ದೆಹಲಿಯಿಂದ ಬಂದು ಕರ್ನಾಟಕದಲ್ಲಿನ ಬರಪರಿಸ್ಥಿತಿಯನ್ನು ಅಧ್ಯಯನ ಮಾಡಿ ಹೋಗಿದೆ. ಈಗ ನೀವು ಅದೇ ಉದ್ದೇಶದಿಂದ ಇನ್ನೊಂದು ಪ್ರವಾಸಕ್ಕೆ ಹೊರಟಿದ್ದೀರಿ. ಯಾಕೆ, ನಿಮ್ಮದೇ ಸರ್ಕಾರ ಕಳಿಸಿರುವ ಬರ ಅಧ್ಯಯನ ತಂಡದ ಮೇಲೆ ನಿಮಗೆ ನಂಬಿಕೆ ಇಲ್ಲವೇ” ಎಂದು ಪ್ರಶ್ನಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

“ನಮ್ಮ ಸರ್ಕಾರದ ಅಧ್ಯಯನದ ಪ್ರಕಾರ ಬರಗಾಲದಿಂದಾಗಿ ಆಗಿರುವ ನಷ್ಟ ಅಂದಾಜು 33,770 ಕೋಟಿ ರೂಪಾಯಿ. ಕೇಂದ್ರ ಸರ್ಕಾರದಿಂದ ನಾವು ಕೇಳಿರುವುದು 17,901 ಕೋಟಿ ರೂಪಾಯಿ ಪರಿಹಾರ. ಕೇಂದ್ರ ಸರ್ಕಾರದಿಂದ ಈ ವರೆಗೆ ನಯಾಪೈಸೆ ಪರಿಹಾರದ ಹಣ ಬಂದಿಲ್ಲ. ಬಿಜೆಪಿ ನಾಯಕರೇ, ರಾಜ್ಯದ ರೈತರ ಬಗ್ಗೆ ನಿಮಗೆ ಪ್ರಾಮಾಣಿಕವಾದ ಕಾಳಜಿ ಹೊಂದಿದ್ದರೆ ಮೊದಲು ಹೆಚ್ಚು ಪರಿಹಾರಕ್ಕಾಗಿ ಒತ್ತಾಯಿಸಿ” ಎಂದಿದ್ದಾರೆ.

“ಡಬಲ್ ಎಂಜಿನ್ ಸರ್ಕಾರ ಬಂದರೆ ರಾಜ್ಯದಲ್ಲಿ ಹಾಲು-ಜೇನಿನ ಹೊಳೆ ಹರಿಯತ್ತದೆ ಎಂದು ಅಮಾಯಕ ಕನ್ನಡಿಗರನ್ನು ನಂಬಿಸಿ ಕಳೆದ ಲೋಕಸಭಾ ಚುನಾವಣೆಯಲ್ಲಿ 25 ಸಂಸದರನ್ನು ಗೆಲ್ಲಿಸಿಕೊಂಡರಲ್ಲಾ, ಅವರೇನು ಮಾಡುತ್ತಿದ್ದಾರೆ? ಕಳ್ಳೆಕಾಯಿ ತಿನ್ನುತ್ತಿದ್ದಾರಾ? ಅವರೆಂದಾದರೂ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ದ ಬಾಯಿ ಬಿಟ್ಟಿದ್ದಾರಾ?” ಎಂದು ಕುಟುಕಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಎಲ್ಲ ಭಯೋತ್ಪಾದಕರೂ ಮುಸ್ಲಿಮರಲ್ಲ ಎನ್ನುವ ಸತ್ಯವನ್ನು ನಂಬದವರು

“ಬಿಜೆಪಿ ನಾಯಕರೇ ನೀವು ಯಾತ್ರೆ ಮಾಡಬೇಕಾಗಿರುವುದು ರಾಜ್ಯದಲ್ಲಿ ಅಲ್ಲ, ನೀವು ಯಾತ್ರೆ ಹೊರಡಬೇಕಾಗಿರುವುದು ದೆಹಲಿಗೆ. ನಿಮ್ಮ ಪಕ್ಷದ 25 ಲೋಕಸಭಾ ಸದಸ್ಯರನ್ನು ಕಟ್ಟಿಕೊಂಡು ದೆಹಲಿಗೆ ಹೋಗಿ ಪ್ರಧಾನಿ ನರೇಂದ್ರ ಮೋದಿಯವರ ಕಾಲಿಗಾದರೂ ಬಿದ್ದು ಬರಪರಿಹಾರಕ್ಕೆ ಹೆಚ್ಚು ಹಣ ಕೊಡುವಂತೆ ಕೇಳಿ. ನಿಮಗೆ ಕೇಳುವ ಧೈರ್ಯ ಇಲ್ಲ ಎಂದಾದರೆ ಪ್ರಧಾನಿ ಜೊತೆ ಭೇಟಿಗಾಗಿ ನನಗಾದರೂ ಒಂದು ಅಪಾಯಿಂಟ್ ಮೆಂಟ್ ಕೊಡಿಸಿ ಬಿಡಿ” ಎಂದು ಆಗ್ರಹಿಸಿದ್ದಾರೆ.

“ನೆಲ-ಜಲ-ಭಾಷೆಯ ವಿಚಾರದಲ್ಲಿ ಕರ್ನಾಟಕಕ್ಕೆ, ಕನ್ನಡಕ್ಕೆ ಮತ್ತು ಕನ್ನಡಿಗರಿಗೆ ಸಾಲು ಸಾಲು ಅನ್ಯಾಯ ಮಾಡಿ ಯಾವ ಮುಖ ಹೊತ್ತು ರಾಜ್ಯ ಪ್ರವಾಸ ಹೊರಟಿದ್ದೀರಿ? ಬರಪೀಡಿತ ಜನರಿಗೆ ಬೇಕಾಗಿರುವುದು ನಿಮ್ಮ ಬಾಯಿ ಮಾತಿನ ಸಾಂತ್ವನ ಅಲ್ಲ, ಅವರಿಗೆ ಬೇಕಾಗಿರುವುದು ಪರಿಹಾರ. ಬರಗಾಲದ ನಷ್ಟ – ನೋವನ್ನು ಬಳಸಿಕೊಂಡು ರಾಜಕೀಯ ಬೇಳೆ ಬೇಯಿಸಲು ಹೊರಟಿರುವ ನಿಮ್ಮನ್ನು ಜನ ಹೇಗೆ ಸ್ವೀಕರಿಸುತ್ತಾರೋ ಗೊತ್ತಿಲ್ಲ, ಜಾಗ್ರತೆಯಿಂದಿರಿ” ಎಂದು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪರಪ್ಪನ ಅಗ್ರಹಾರದಿಂದ ಬೆಳಗಾವಿ ಹಿಂಡಲಗಾ ಜೈಲಿಗೆ ಪ್ರಜ್ವಲ್ ರೇವಣ್ಣ ಎತ್ತಂಗಡಿ

ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಅಕ್ರಮವಾಗಿ ಮೊಬೈಲ್ ಫೋನ್ ಬಳಸಿದ...

ಪಶ್ಚಿಮ ಬಂಗಾಳ ಉಪಚುನಾವಣೆ ವೇಳೆ ಅಕ್ರಮದ ಆರೋಪ; ಮರುಮತದಾನಕ್ಕೆ ವಿಪಕ್ಷಗಳ ಆಗ್ರಹ

ಪಶ್ಚಿಮ ಬಂಗಾಳದ ನಂದಿಗ್ರಾಮ ಮತ್ತು ರೇಜಿನಗರ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತ...

ದೆಹಲಿ ಮೆಟ್ರೋಗೆ ಪೊಲೀಸ್ ಇಲಾಖೆ ಪತ್ರ: 57 ಸ್ಟೇಷನ್‌ಗಳ ಪ್ರವೇಶ-ನಿರ್ಗಮನ ದ್ವಾರ ಮುಚ್ಚಲು ಮನವಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಅಕ್ಟೋಬರ್ 10ರಂದು ನಡೆಯಲಿರುವ ಬೃಹತ್ ಪ್ರತಿಭಟನೆಯಲ್ಲಿ ಹೆಚ್ಚಿನ...

Form 7 ಅರ್ಜಿ ವಿವಾದ; ತನಿಖೆಗೆ SIT ರಚನೆಗೆ ಸರ್ಕಾರ ಚಿಂತನೆ

ರಾಜ್ಯದಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸುವ ಉದ್ದೇಶದಿಂದ ಬೃಹತ್‌ ಪ್ರಮಾಣದಲ್ಲಿ Form...