ರಾಮಮಂದಿರಕ್ಕೆ ದಲಿತರು ಕೊಟ್ಟ ದೇಣಿಗೆಯನ್ನು ‘ಅಶುದ್ಧ’ವೆಂದು ವಾಪಸ್‌ ಕೊಟ್ಟ ಸವರ್ಣೀಯರು

Date:

ಜನವರಿ 22 ರಂದು ರಾಮಮಂದಿರ ‘ಪ್ರಾಣ ಪ್ರತಿಷ್ಠಾ’ ಕಾರ್ಯಕ್ರಮಕ್ಕೂ ಮುನ್ನ ರಾಮನ ಹೆಸರಿನಲ್ಲಿ ಅಸ್ಪೃಶ್ಯತೆ ಆಚರಣೆಯ ಘಟನೆ ಗಮನ ಸೆಳೆದಿದೆ. ಶ್ರೀರಾಮನಿಂದ ದಲಿತರು ದೂರ ಉಳಿಯುವಂತೆ ಮಾಡುವ ಅನಿಷ್ಠ ಆಚರಣೆ ರಾಜಸ್ಥಾನದಲ್ಲಿ ನಡೆದಿದೆ.

- Advertisement -

ರಾಮಮಂದಿರದ ಉತ್ಸವಕ್ಕಾಗಿ ದಲಿತರು ದೇಣಿಗೆ ನೀಡಿದ್ದ ಹಣವನ್ನು ಕೆಲವು ಪ್ರಬಲ ಜಾತಿಗರು ‘ಅಶುದ್ಧ’ವೆಂದು ಹಿಂದಿರುಗಿಸಿರುವ ಘಟನೆ ರಾಜಸ್ಥಾನದ ಝಲಾವರ್ ಜಿಲ್ಲೆಯ ಮುಂಡ್ಲಾ ಗ್ರಾಮದಲ್ಲಿ ನೆಡೆದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ದಕ್ಷಿಣ ಆಫ್ರಿಕಾದಲ್ಲಿ ಗಾಂಧಿ ಮೊಳಗಿಸಿದ್ದ ಮತ ಹಕ್ಕಿನ ಕೂಗಿಗೆ...

ಮತದಾನ ಕೇವಲ ಹಕ್ಕಲ್ಲ, ಅದು ಪ್ರಜೆಯೊಬ್ಬನ ಘನತೆ ಹಾಗೂ ಅಸ್ತಿತ್ವದ ಸಂಕೇತ. 131 ವರ್ಷಗಳ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಇದೇ ಮತಾಧಿಕಾರಕ್ಕಾಗಿ ಗಾಂಧೀಜಿ ಬ್ರಿಟಿಷರ ವಿರುದ್ಧ ಸಿಡಿದೆದ್ದಿದ್ದರು. ಆದರೆ, ಇಂದು ಸ್ವತಂತ್ರ ಭಾರತದಲ್ಲಿ...

ಸಾಮಾಜಿಕ ನ್ಯಾಯದ ಸಮಸ್ಯೆಗಳ ಕುರಿತು ವರದಿ ಮಾಡುವ ವೆಬ್‌ಸೈಟ್ ‘ದಿ ಮೂಕನಾಯಕ‘ ಘಟನೆಯ ಬಗ್ಗೆ ವರದಿ ಮಾಡಿದೆ. ಖಾನ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಮುಂಡ್ಲಾ ಗ್ರಾಮದ ದಲಿತ ಸಮುದಾಯದವರು, ರಾಮಮಂದಿರದ ಉತ್ಸವ, ಯಾತ್ರೆ, ಪ್ರಸಾದ ವಿತರಣೆಯಂತಹ ಕಾರ್ಯಕ್ಕಾಗಿ ಹಣವನ್ನು ದೇಣಿಗೆ ನೀಡಿದ್ದಾರೆ. ಆದರೆ, ಪ್ರಬಲ ಜಾತಿಯ ಕೆಲವರು ಆ ಹಣವನ್ನು ದಲಿತರಿಗೆ ಹಿಂದಿರುಗಿಸಿದ್ದಾರೆ.

“ದಲಿತರಿಂದ ಬಂದ ಹಣವನ್ನು ದೇವಾಲಯದ ಆಚರಣೆಗಳಿಗೆ ಸ್ವೀಕರಿಸುವುದಿಲ್ಲ. ಅವರ ದೇಣಿಗೆಯಿಂದ ಮಾಡಿದ ಪ್ರಸಾದವನ್ನು ‘ಅಶುದ್ಧ’ವೆಂದು ಪರಿಗಣಿಸಲಾಗುವುದು” ಎಂದು ಬಲಿಷ್ಠ ಜಾತಿಯವರು ಹೇಳಿದ್ದಾರೆ. ಇದು, ಪಕ್ಷಪಾತ ಮತ್ತು ತಾರತಮ್ಯ ಎಂದು ಆರೋಪಿಸಿ ದಲಿತರು ಜನವರಿ 11ರಂದು ಝಲಾವರ್ ಜಿಲ್ಲಾಡಳಿತಕ್ಕೆ ದೂರು ನೀಡಿದ್ದಾರೆ.

‘ದಿ ಮೂಕನಾಯಕ’ ವರದಿ ಪ್ರಕಾರ, ಮೇಘವಾಲ್‌, ಬೈರ್ವಾ, ಧೋಬಿ ಮತ್ತು ಮೆಹರ್‌ ಸಮುದಾಯದ ಜನರು ಜಿಲ್ಲಾಧಿಕಾರಿಗೆ ದೂರು ನೀಡಿದ್ದಾರೆ. ದೂರಿನಲ್ಲಿ, “ನಾಗರ ಸಮುದಾಯದ ಕೆಲವರು ರಾಮಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡುವಂತೆ ನಮ್ಮನ್ನು ಸಂಪರ್ಕಿಸಿದ್ದರು. ನಮ್ಮ ಸಾಮರ್ಥ್ಯಕ್ಕೆ ಅನುಗುಣವಾಗಿ ತಮ್ಮಿಂದಾಗುವಷ್ಟು ದೇಣಿಗೆ ನೀಡಿದ್ದೇವೆ. ಆದರೆ, ಜನವರಿ 9 ರಂದು ರಾತ್ರಿ 9 ಗಂಟೆಗೆ ಆ ಸಮುದಾಯ ಕಲವರು ನಮ್ಮ ವಸತಿ ಪ್ರದೇಶಕ್ಕೆ ಬಂದು, ಹಣವನ್ನು ಹಿಂದಿರುಗಿಸಿದರು” ಎಂದು ವಿವರಿಸಿದ್ದಾರೆ.

“ದೇವರಿಗೆ ‘ಭೋಗ್’ಗಾಗಿ (ಪವಿತ್ರ ಅರ್ಪಣೆ) ದಲಿತರಿಂದ ಸಂಗ್ರಹಿಸಿದ ಹಣ ಮತ್ತು ಚಾಮರಗಳನ್ನು ಬಳಸಲಾಗುವುದಿಲ್ಲ. ಅದನ್ನು ‘ಅಶುದ್ಧ’ ಎಂದು ಪರಿಗಣಿಸಲಾಗುತ್ತದೆ. ಹೀಗಾಗಿ, ನಿಮ್ಮ ಹಣವನ್ನು ಹಿಂದಿರುಗಿಸುತ್ತಿದ್ದೇವೆಂದು ಅವರು ಹೇಳಿದರು” ಎಂದು ದಲಿತರು ತಿಳಿಸಿದ್ದಾರೆ.

ಘಟನೆ ಬಗ್ಗೆ ವಿವರಿಸಿರುವ ಗ್ರಾಮದ ದಲಿತ ನಿವಾಸಿ ಮುಕೇಶ್ ಮೇಘವಾಲ್, “ಪೊಲೀಸರು ಈಗ ದೂರು ಹಿಂಪಡೆಯಲು ಒತ್ತಡ ಹೇರುತ್ತಿದ್ದಾರೆ. ಅದಕ್ಕಾಗಿ, ಕೆಲವು ಅಧಿಕಾರಿಗಳು ಗ್ರಾಮಕ್ಕೆ ಪದೇ-ಪದೇ ಬರುತ್ತಿದ್ದಾರೆ. ನಮ್ಮ ದೂರು ಆಧರಿಸಿ ಪ್ರಕರಣ ದಾಖಲಿಸುತ್ತಿಲ್ಲ” ಎಂದು ಆರೋಪಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ?: ಅಯೋಧ್ಯೆಯಲ್ಲಿ ರಾಮಮಂದಿರ ತಲೆ ಎತ್ತಿದೆ; ಮಸೀದಿ ಸ್ಥಿತಿ ಏನಾಗಿದೆ?

“ಗ್ರಾಮದಲ್ಲಿ ಉದ್ವಿಗ್ನ ವಾತಾವರಣವಿದೆ. ಪೊಲೀಸರು ಪ್ರಕರಣ ದಾಖಲಿಸಲು ವಿಫಲವಾದರೆ, ದಲಿತ ಸಮುದಾಯವು ಸೋಮವಾರ ಝಲಾವರ್ ಜಿಲ್ಲಾ ಕೇಂದ್ರದಲ್ಲಿ ಪ್ರತಿಭಟನೆ ನಡೆಸಲು ಯೋಜಿಸಿದೆ” ಎಂದು ಮೇಘವಾಲ್ ಹೇಳಿದ್ದಾರೆ.

ದೂರು ಹಿಂಪಡೆಯುವಂತೆ ಒತ್ತಾಯಿಸುತ್ತಿರುವ ಆರೋಪದ ಬಗ್ಗೆ ಪ್ರತಿಕ್ರಿಯಿಸಿರುವ ಖಾನ್‌ಪುರ ಪೊಲೀಸ್‌ ಠಾಣೆಯ ಎಸ್‌ಎಚ್‌ಒ ರಾಮ್ಕಿಶನ್ ಗೋಡಾರಾ, “ದೂರು ಹಿಂಪಡೆಯಲು ಒತ್ತಾಯಿಸುವ ಆರೋಪಗಳು ಆಧಾರರಹಿತವಾಗಿವೆ. ನಿಷ್ಪಕ್ಷಪಾತ ಸಾಕ್ಷಿಗಳೊಂದಿಗೆ ಮಾತನಾಡಲು ಸ್ವತಃ ಡಿವೈಎಸ್‌ಪಿ ಅವರೇ ಗ್ರಾಮಕ್ಕೆ ಭೇಟಿ ನೀಡಿದ್ದರು. ಆಡಳಿತವು ಸಾರ್ವಜನಿಕ ನಂಬಿಕೆಯನ್ನು ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ನಡೆಯುತ್ತಿದೆ. ಪ್ರಕರಣದ ಬಗ್ಗೆ ಪೊಲೀಸರು ನ್ಯಾಯಯುತ ತನಿಖೆ ನಡೆಸುತ್ತಾರೆ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...

ಅಯೋಧ್ಯೆ ರಾಮಮಂದಿರ ಸಿಬ್ಬಂದಿಗೆ ಶೇ. 100ರಷ್ಟು ಪೊಲೀಸ್ ವೆರಿಫಿಕೇಷನ್; ಹಿನ್ನೆಲೆ ಪರಿಶೀಲನೆ ಕಡ್ಡಾಯ

ಉತ್ತರ ಪ್ರದೇಶದ ಅಯೋಧ್ಯೆಯ ರಾಮಮಂದಿರ ಆಡಳಿತ ಮತ್ತು ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು...

ಸಿಇಸಿ ಗ್ಯಾನೇಶ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ: ಅನುಮತಿ ನಿರಾಕರಣೆ; ಜಂತರ್ ಮಂತರ್‌ನಲ್ಲಿ ಬಿಗಿ ಭದ್ರತೆ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...