ಬೀದಿ ಜಗಳಕ್ಕೆ ಕೋಮು ಬಣ್ಣ ಬಳಿದ ತೇಜಸ್ವಿ ಸೂರ್ಯನ ನಾಮಪತ್ರ ಮಾನ್ಯ ಮಾಡಬೇಡಿ: ಕಾಂಗ್ರೆಸ್

Date:

ಬೆಂಗಳೂರಿನ ನಗರ್ತಪೇಟೆಯಲ್ಲಿ ನಡೆದ ಲೌಡ್ ಸ್ಪೀಕರ್ ಘಟನೆಗೆ ಕೋಮು ಬಣ್ಣ ನೀಡಿ, ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಯತ್ನಿಸಿದ ಬಿಜೆಪಿ ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯನ ವಿರುದ್ಧ ಹರಿಹಾಯ್ದಿರುವ ಕಾಂಗ್ರೆಸ್, ‘ನಾಮಪತ್ರ ಮಾನ್ಯ ಮಾಡಬೇಡಿ’ ಎಂದು ಚುನಾವಣಾ ಆಯೋಗವನ್ನು ಆಗ್ರಹಿಸಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್ ಐಟಿ ಸೆಲ್, “ವೈಯಕ್ತಿಕ ಕಾರಣಗಳಿಗಾಗಿ ನಡೆದ ಗಲಾಟೆಯನ್ನು ಹಿಡಿದುಕೊಂಡು ಕೋಮು ಸಂಘರ್ಷ ಉಂಟುಮಾಡಲು ಹವಣಿಸಿದ ತೇಜಸ್ವಿ ಸೂರ್ಯ ಚುನಾವಣಾ ನೀತಿ ಸಂಹಿತೆಯನ್ನು ಸ್ಪಷ್ಟವಾಗಿ ಉಲ್ಲಂಘಿಸಿದ್ದಾರೆ. ರಾಜ್ಯದ ಚುನಾವಣಾ ಆಯುಕ್ತರು ಕೂಡಲೇ ಸಂಸದ ತೇಜಸ್ವಿ ಸೂರ್ಯನ ವಿರುದ್ಧ ಕ್ರಮ ಕೈಗೊಳ್ಳಬೇಕು ಹಾಗೂ ಈತನ ಉಮೇದುವಾರಿಕೆಯನ್ನು ಮಾನ್ಯ ಮಾಡಬಾರದು ಹಾಗೂ ಚುನಾವಣಾ ಪ್ರಚಾರಕ್ಕೆ ನಿರ್ಬಂಧ ವಿಧಿಸಬೇಕು. ನಿಷ್ಪಕ್ಷಪಾತ ಹಾಗೂ ಪಾರದರ್ಶಕ ಚುನಾವಣೆಗಾಗಿ ಚುನಾವಣಾ ಆಯೋಗ ಈ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಭಾವಿಸಿದ್ದೇವೆ” ಎಂದು ತಿಳಿಸಿದೆ.

“ತೇಜಸ್ವಿ ಸೂರ್ಯ ಎಂಬ ಎಳೆ ಕೂಸಿನಂತಹ ಸಂಸದ ಕೋವಿಡ್ ಬಂದಾಗ ಫುಟ್ಬಾಲ್ ಆಡೋಕೆ ಹೋಗಿದ್ದರು, ನೆರೆ ಬಂದಾಗ ದೋಸೆ ತಿನ್ನೋಕೆ ಹೋಗಿದ್ದರು, ಕನ್ನಡಿಗರಿಗೆ ಅನ್ಯಾಯವಾದಾಗ ಎಮರ್ಜೆನ್ಸಿ ಎಕ್ಸಿಟ್ ನಲ್ಲಿ ಹಾರೋಕೆ ಹೋಗಿದ್ದರು, ಕನ್ನಡಿಗ ಯುವಕರು ಉದ್ಯೋಗ ಕೇಳುತ್ತಿದ್ದಾಗ ನಾಪತ್ತೆಯಾಗಿದ್ದರು, ಆದರೆ ಈಗ ಬೀದಿ ಜಗಳದ ವಿಷಯಕ್ಕೆ ಮಾತ್ರ ಓಡೋಡಿ ಬಂದಿದ್ದಾರೆ” ಎಂದು ಕಾಂಗ್ರೆಸ್ ಕಿಚಾಯಿಸಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಸಂಸದನಾಗಿ ತನ್ನ ಹೊಣೆಗಾರಿಕೆ ಮರೆತು ಮಕ್ಕಳಾಟ ಆಡುವವರನ್ನು ಈ ಬಾರಿ ಜನತೆ ತಿರಸ್ಕರಿಸಿ ಮನೆಗೆ ಕಳಿಸುವುದು ನಿಶ್ಚಿತ” ಬೀದಿ ಜಗಳಕ್ಕೆ ಕೋಮು ದ್ವೇಷ ಹಬ್ಬಿದ ತೇಜಸ್ವಿ ಸೂರ್ಯನ ವಿರುದ್ಧ ಕಾಂಗ್ರೆಸ್ ಆಕ್ರೋಶ ಹೊರಹಾಕಿದೆ.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವೇದಿಕೆಯಲ್ಲೇ ಮಾಜಿ ರಾಜ್ಯಪಾಲೆ ತಮಿಳ್‌ಸೈಗೆ ಎಚ್ಚರಿಕೆ ನೀಡಿದ ಅಮಿತ್ ಶಾ: ವಿಡಿಯೋ ವೈರಲ್

ಆಂಧ್ರ ಪ್ರದೇಶದ ಮುಖ್ಯಮಂತ್ರಿಯಾಗಿ ಎನ್ ಚಂದ್ರಬಾಬು ನಾಯ್ಡು ಅವರು ಪ್ರಮಾಣ ವಚನ...

ಜೂನ್ 15, 16ರಂದು ಬೆಂಗಳೂರಿನಲ್ಲಿ ‘ದಕ್ಷಿಣ ಭಾರತ ಉತ್ಸವ’: ಸಚಿವ ಡಾ. ಎಚ್ ಕೆ ಪಾಟೀಲ್

ದಕ್ಷಿಣ ಭಾರತದ ರಾಜ್ಯಗಳ ಪ್ರವಾಸೋದ್ಯಮ ಕ್ಷೇತ್ರದಲ್ಲಿ ಹೂಡಿಕೆಯ ಅವಕಾಶ, ಉದ್ಯೋಗ ಸೃಷ್ಟಿಗೆ...

ಮಹಿಳೆಯರ ಕೊಲೆ | ಪೊಲೀಸರ ತನಿಖೆಯಲ್ಲೇ ಲೋಪವಿದೆ: ಬಾಲನ್‌

"ಇತ್ತೀಚೆಗೆ ಹೆಚ್ಚು ಹೆಣ್ಣುಮಕ್ಕಳ ಕೊಲೆಗಳಾಗುತ್ತಿದೆ. ಕೋರ್ಟ್‌ನಲ್ಲೂ ಹಲವು ಪ್ರಕರಣಗಳು ಬಾಕಿ ಇವೆ....

ನೀಟ್ ಅಕ್ರಮ | ಹಣಕ್ಕಾಗಿ ಬದ್ಧತೆ ಮರೆತವಾ ಮಾಧ್ಯಮಗಳು?

ಸದ್ಯ ದೇಶಾದ್ಯಂತ ನೀಟ್-ಯುಜಿ ವೈದ್ಯಕೀಯ ಪ್ರವೇಶ ಪರೀಕ್ಷೆ ದೊಡ್ಡ ಚರ್ಚೆಯಾಗಿದೆ. ವೈದ್ಯಕೀಯ...