ಬಿಜೆಪಿಯವರ ಸುಳ್ಳು ನಂಬಿ ಮೋಸ ಹೋಗಬೇಡಿ, ನಮ್ಮದು ಎಂದಿಗೂ ಬಸವ ಮಾರ್ಗ: ಸಿಎಂ ಸಿದ್ದರಾಮಯ್ಯ

Date:

Advertisements

ನಾಡಿನ ಜನರನ್ನು ತಪ್ಪು ದಾರಿಗೆ ಎಳೆದು ಅವರನ್ನು ವಂಚಿಸಲು ಬಿಜೆಪಿ ಅಪ್ಪಟ ಸುಳ್ಳುಗಳನ್ನು ಉತ್ಪಾದಿಸುತ್ತಿದೆ. ನಮ್ಮ ಸರ್ಕಾರದಲ್ಲಿ ಹಣ ಇಲ್ಲ ಎಂದು ಬಿಜೆಪಿಯವರು ಸುಳ್ಳುಗಳನ್ನು ಉತ್ಪಾದಿಸುತ್ತಾ ಅಲೆಯುತ್ತಿದ್ದಾರೆ. ಹಣ ಇಲ್ಲದೆ ಗ್ಯಾರಂಟಿ ಯೋಜನೆಗಳು , ಇಷ್ಟೆಲ್ಲಾ ಅಭಿವೃದ್ಧಿ ಕಾರ್ಯಗಳು ಹೇಗೆ ನಡೆಯಲು ಹೇಗೆ ಸಾಧ್ಯ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದರು.

ಮುದ್ದೇಬಿಹಾಳ ತಾಲ್ಲೂಕಿನ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿ ಸರ್ಕಾರದ ಐದು ಐತಿಹಾಸಿಕ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶದಲ್ಲಿ ಮಾತನಾಡಿದರು.

“ಒಂದೇ ದಿನ 227 ಕೋಟಿ ರೂಪಾಯಿ ಮೌಲ್ಯದ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಮಾಡಿದ್ದೇವೆ. ಮಾರ್ಚ್ 20 ರಂದು ನಾನು ಮುದ್ಸೇಬಿಹಾಳ ಚುನಾವಣಾ ಪ್ರಚಾರಕ್ಕೆ ಬಂದಿದ್ದೆ. ಅವತ್ತು ನಾನು ಮುದ್ದೇ ಬಿಹಾಳದಲ್ಲಿ ಕೊಟ್ಟ ಮಾತಿನಂತೆ ಎಲ್ಲ ಗ್ಯಾರಂಟಿಗಳನ್ನೂ ಜಾರಿ ಮಾಡಿ ನುಡಿದಂತೆ ನಡೆದಿದ್ದೇವೆ. ಮೊದಲ ಬಾರಿ ಮುಖ್ಯಮಂತ್ರಿ ಆದಾಗಲೂ ನಾನು ಕೊಟ್ಟಿದ್ದ ಎಲ್ಲಾ ಭರವಸೆಗಳನ್ನೂ ಈಡೇರಿಸಿ ನುಡಿದಂತೆ ನಡೆದಿದ್ದೇವೆ.  ಈಗಲೂ ಅಷ್ಟೆ. ಬಸವಾದಿ ಶರಣರು ನುಡಿದಂತೆ ನಡೆದರು. ನಾವೂ ಬಸವಾದಿ ಶರಣರ ಮಾರ್ಗದಲ್ಲಿ ನಡೆಯುತ್ತಿದ್ದೇವೆ” ಎಂದರು.

Advertisements

“ನಾನು ಬಸವಾದಿ ಶರಣರ ಅನುಯಾಯಿ. ಮೌಡ್ಯ, ಕಂದಾಚಾರ, ಕಂದಾಚಾರ, ಜಾತಿ ತಾರತಮ್ಯದ ವಿರುದ್ಧ ವಚನ ಕ್ರಾಂತಿ ಆರಂಭಿಸಿದರು. ದುಡಿಯುವವರು ಯಾರೋ, ದುಡಿದು ತಿನ್ನುವವರು ಇನ್ಯಾರೋ ಎನ್ನುವ ಪರಿಸ್ಥಿತಿ ಸಮಾಜದಲ್ಲಿತ್ತು. ಈ ತಾರತಮ್ಯ ಮತ್ತು ಮೇಲು-ಕೀಳು ಹೋಗಲಾಡಿಸಲು ಬಸವಣ್ಣರ ನೇತೃತ್ವದಲ್ಲಿ ವಚನ ಕ್ರಾಂತಿ ಶುರು ಆಯಿತು. ಈ ಕಾರಣಕ್ಕೆ ನಾನು ಬಸವಾದಿ ಶರಣರ ಅನುಯಾಯಿ. ಇವರು ಕರ್ಮ ಸಿದ್ಧಾಂತವನ್ನು ಸಂಪೂರ್ಣ ತಿರಸ್ಕರಿಸಿದರು” ಎಂದು ವಿವರಿಸಿದರು.

ಈ ಸುದ್ದಿ ಓದಿದ್ದೀರಾ? ಕಾಂಗ್ರೆಸ್‌ಗೆ 135 ಸೀಟು ಬರುವುದರಲ್ಲಿ ಬೊಮ್ಮಾಯಿ ಕೊಡುಗೆಯೂ ಇದೆ: ಎಂ ಬಿ ಪಾಟೀಲ್‌

“ಕ್ರಾಂತಿಯ ಪ್ರಭಾವದಲ್ಲಿ ಸಮಾಜ ಪೂರ್ಣ ಬದಲಾಗುವ ಮೊದಲೇ ವಚನ ಕ್ರಾಂತಿಗೆ ಅಡ್ಡಗಾಲು ಹಾಕಿದರು. ಆದ್ದರಿಂದ ಇನ್ನೂ ಬಸವಣ್ಣನವರ ಆಶಯದ “ಇವ ನಮ್ಮವ ಇವ ನಮ್ಮವ” ಎನ್ನುವ ಆಶಯ ಈಡೇರದೆ ಜಾತಿ ವ್ಯವಸ್ಥೆ ಗಟ್ಟಿಯಾಗಿದೆ” ಎಂದು ವಿಷಾದ ವ್ಯಕ್ತಪಡಿಸಿದರು.

ಅಪ್ಪಾಜಿ ನಾಡಗೌಡ ಸಭ್ಯ ರಾಜಕಾರಣಿ

“ಅಪ್ಪಾಜಿ ನಾಡಗೌಡರು ಅತ್ಯಂತ ಹಿರಿಯ ಸಭ್ಯ ರಾಜಕಾರಣಿ. ಅವರಿಗೆ ಸಚಿವರಾಗುವ ಅರ್ಹತೆ, ಅನುಭವ ಎರಡೂ ಇದೆ. ನಾಡಗೌಡರ ಕಾರಣದಿಂದ ಮುದ್ದೇಬಿಹಾಳ ಅಭಿವೃದ್ಧಿ ಪಥದಲ್ಲಿ ಮುನ್ನುಗ್ಗುತ್ತಿದೆ” ಎಂದು ಸಿದ್ದರಾಮಯ್ಯ ಮೆಚ್ಚುಗೆ ಮಾತುಗಳನ್ನಾಡಿದರು.

ಶರಣ ಶ್ರೇಷ್ಠ ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು 12 ಮಂದಿ ಶರಣ ಸ್ವಾಮೀಜಿಗಳು ವೇದಿಕೆಯಲ್ಲೇ ಅಭಿನಂದಿಸಿ, ಸನ್ಮಾನಿಸಿ ಆಶೀರ್ವದಿಸಿದರು

ಕ್ಷೇತ್ರದ ಶಾಸಕರಾದ ಅಪ್ಪಾಜಿ ಸಿ.ಎಸ್.ನಾಡಗೌಡ ಅವರು ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ್, ಕೃಷಿ ಸಚಿವರಾದ ಶಿವಾನಂದ ಪಾಟೀಲ್, ವಿಧಾನ ಪರಿಷತ್ ಮಾಜಿ ಮುಖ್ಯ ಸಚೇತಕ ಪ್ರಕಾಶ್ ರಾಥೋಡ್, ಶಾಸಕರುಗಳಾದ ಯಶವಂತರಾಯಗೌಡ ವ್ಹಿ ಪಾಟೀಲ್, ಹಣಮಂತ ನಿರಾಣಿ, ಬಸವನಗೌಡ ಆರ್ ಪಾಟೀಲ್, ಸುನಿಲಗೌಡ ಬಿ ಪಾಟೀಲ, ಪೊ.ಹೆಚ್.ಪೂಜಾರ, ವಿಠ್ಠಲ ಧೋಂಡಿಬಾ ಕಟಕದೊಂಡ, ಅಶೋಕ ಮಲ್ಲಪ್ಪ ಮನಗೂಳಿ, ಭೀಮನಗೌಡ ಪಾಟೀಲ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕಾಂತಾ ನಾಯಕ್, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ವಿದ್ಯಾರಾಣಿ ತುಂಗಲ್ ಸೇರಿ ಹಲವು ಮುಖಂಡರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಧರ್ಮಸ್ಥಳ ಪ್ರಕರಣಗಳ ಸಮಗ್ರ ತನಿಖೆಗೆ ಎಡಪಕ್ಷಗಳ ಒತ್ತಾಯ

ಧರ್ಮಸ್ಥಳದಲ್ಲಿ ನಡೆದಿರುವ ವೇದವಲ್ಲಿ, ಪದ್ಮಲತಾ, ನಾರಾಯಣ, ಯಮುನಾ ಮತ್ತು ಸೌಜನ್ಯ, ಮುಂತಾದ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

Download Eedina App Android / iOS

X