ಕೆ ಎಸ್ ಈಶ್ವರಪ್ಪ ಸಹ ಕಾಂಗ್ರೆಸ್ ಸೇರಿದರೆ ಅಚ್ಚರಿಪಡಬೇಕಿಲ್ಲ:‌ ಎಂ ಬಿ ಪಾಟೀಲ

Date:

Advertisements
  • ‘ಎಂ ಬಿ ಪಾಟೀಲ ಮುಖ್ಯಮಂತ್ರಿ ಆಗಬೇಕು ಅಂದರೆ ಆಗಲ್ಲ’
  • ‘ಶರಣಪ್ರಕಾಶ್ ಪಾಟೀಲ್ ಒಬ್ಬ ಬದ್ಧತೆ, ಪರಿಶುದ್ಧತೆ ವ್ಯಕ್ತಿ’

ಎಂ ಬಿ ಪಾಟೀಲ ಮುಖ್ಯಮಂತ್ರಿ ಆಗಬೇಕು ಅಂದರೆ ಆಗಲ್ಲ, ಜನರು ಬಯಸಬೇಕು, ಪಕ್ಷ ಅಧಿಕಾರಕ್ಕೆ ಬರಬೇಕು, ಈಗ ಪಕ್ಷ ಅಧಿಕಾರಕ್ಕೆ ಬಂದಿದೆ. ನಮ್ಮ ಪಾರ್ಟಿಯಲ್ಲಿ ಯಾವುದೇ ನಿರ್ಧಾರ ಮಾಡಿದರೂ ಹೈಕಮಾಂಡ್ ಅಂತಿಮ ತೀರ್ಮಾನ ಮಾಡುತ್ತಾರೆ ಎಂದು ಸಚಿವ ಎಂ ಬಿ ಪಾಟೀಲ ಹೇಳಿದರು.

ರಾಯಚೂರು ಜಿಲ್ಲೆಯ ಲಿಂಗಸುಗೂರು ಪಟ್ಟಣದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, “ನಮ್ಮಲ್ಲಿ ಪಕ್ಷದ ವರಿಷ್ಠರು ಮುಖ್ಯಮಂತ್ರಿ ಯಾರು ಆಗಬೇಕು ಎಂದು ನಿರ್ಧಾರ ಮಾಡುತ್ತಾರೋ ಅವರು ಆಗುತ್ತಾರೆ” ಎಂದು ಹೇಳಿದರು.

ಕಾಂಗ್ರೆಸ್‌ನಲ್ಲಿ ಏನು ಮಾಡಬೇಕು, ಏನು ಮಾಡಬಾರದು ಎನ್ನುವುದು ಎಂ ಬಿ ಪಾಟೀಲ್ ಆಗಲಿ ಅಥವಾ ಅಶೋಕ ಪಟ್ಟಣ ಆಗಲಿ ನಿರ್ಧಾರ ಮಾಡುವುದಿಲ್ಲ. ಎಐಸಿಸಿ ಅಧ್ಯಕ್ಷ ಖರ್ಗೆಯವರು, ಸೋನಿಯಾಗಾಂಧಿ, ರಾಹುಲ್ ಗಾಂಧಿ ಎಲ್ಲರೂ ಸೇರಿ ನಿರ್ಧಾರ ಮಾಡುತ್ತಾರೆ. ಯಾವ ಕಾಲದಲ್ಲಿ ಏನು ಆಗಬೇಕು ಎಂಬುದು ಅವರ ವಿವೇಚನೆಗೆ ಬಿಟ್ಟಿದ್ದು” ಎಂದರು.

Advertisements

ನಾನು ಮುಖ್ಯಮಂತ್ರಿ ಆಗುತ್ತೇನೆ ಅಂದರೆ ಮುಖ್ಯಮಂತ್ರಿ ‌ಆಗಿ ಬಿಡುತ್ತೇನಾ? ಹಂಗೆ ಅಂದುಕೊಂಡರೆ ಬಹಳ ಜನರು ಮುಖ್ಯಮಂತ್ರಿ ಆಗಿ ಹೋಗುತ್ತಿದ್ದರು. ಯಾರು ‌ಮುಖ್ಯಮಂತ್ರಿ ಆಗಬೇಕು, ಯಾರನ್ನು ಸಚಿವರನ್ನಾಗಿ ಮಾಡಬೇಕು ಎನ್ನುವುದು ಹೈಕಮಾಂಡ್ ನಾಯಕರು ನಿರ್ಧರಿಸುತ್ತಾರೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪ್ರಸವ ಅಥವಾ ಗರ್ಭಪಾತ; ಮಹಿಳೆಯ ಆಯ್ಕೆಯೇ ಅಂತಿಮ

ಈಶ್ವರಪ್ಪ ಕಾಂಗ್ರೆಸ್ ಸೇರಿದರೆ ಅಚ್ಚರಿ ಇಲ್ಲ

ಲೋಕಸಭಾ ಚುನಾವಣೆ ಮುಂಚೆ ಸರ್ಕಾರ ಬಿದ್ದು ಹೋಗುತ್ತದೆ ಎನ್ನುವ ಈಶ್ವರಪ್ಪ ಹೇಳಿಕೆಗೆ ಪ್ರತಿಕ್ರಿಯಿಸಿ, “ಬಿಜೆಪಿ ‌ನಾಯಕರೇ ನಮ್ಮ ಪಕ್ಷಕ್ಕೆ ಬರುತ್ತಿದ್ದಾರೆ, ಲೋಕಸಭಾ ಚುನಾವಣೆವರೆಗೂ ಈಶ್ವರಪ್ಪ ನೋಡಲಿ, ಈಶ್ವರಪ್ಪ ಸಹ ಕಾಂಗ್ರೆಸ್ ಸೇರಿದರೆ ಅಚ್ಚರಿಪಡಬೇಕಿಲ್ಲ” ಎಂದರು.

“ಕೆ ಎಸ್ ಈಶ್ವರಪ್ಪ ಅವರು ಬಹಳ ದೊಡ್ಡ ಮೇಧಾವಿಗಳು. ಡಿಕೆ ಶಿವಕುಮಾರ್‌ ಬಗ್ಗೆ ಹೇಳಿರುವ ಮಾತಿಗೆ ನಾನು ಉತ್ತರ ಕೊಡಲ್ಲ. ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಒಬ್ಬ ಬದ್ಧತೆ, ಪರಿಶುದ್ಧತೆ ಹೊಂದಿರುವ ರಾಜಕಾರಣಿಯಾಗಿದ್ದಾರೆ. ಅವರ ಮೇಲೆ ಆರೋಪದ ಪ್ರಕರಣದ ಕುರಿತು ತನಿಖೆಗೆ ಸಿಐಡಿಗೆ ನೀಡುವ ಅವಶ್ಯ ಇರಲಿಲ್ಲ. ಆದರೂ, ನಮ್ಮ ‌ಸರ್ಕಾರ ಸಿಐಡಿ ತನಿಖೆಗೆ ನೀಡಿದೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

Download Eedina App Android / iOS

X