ಬಟ್ಟೆ ನೋಡಬೇಡಿ, ಮಾನವೀಯವಾಗಿ ಆರೋಗ್ಯ ಸೇವೆ ನೀಡಿ: ಸಿಎಂ ಸಿದ್ದರಾಮಯ್ಯ 

Date:

Advertisements
  • ‘ನಾಡಿನ ಜನರಿಗೆ ಗುಣಮಟ್ಟದ ಆರೋಗ್ಯ ಸೇವೆ ನೀಡಲು ಸರ್ಕಾರ ಬದ್ದವಾಗಿದೆ’
  • 262 ಆಧುನಿಕ ಜೀವ ರಕ್ಷಕ ಆ್ಯಂಬುಲೆನ್ಸ್‌ಗಳನ್ನು ನಾಡಿಗೆ ಅರ್ಪಿಸಿದ ಸಿದ್ದರಾಮಯ್ಯ

ಜಯದೇವ ಆಸ್ಪತ್ರೆಯಲ್ಲಿರುವ ಗುಣಮಟ್ಟದ ಆರೋಗ್ಯ ಸೇವೆ ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲೂ ಸಿಗಬೇಕು ಎನ್ನುವುದು ಸರ್ಕಾರದ ಗುರಿ. ಹಳೆ ಬಟ್ಟೆ-ಕೊಳಕು ಬಟ್ಟೆ ಹಾಕಿಕೊಂಡು ಬರುವ ಬಡವರನ್ನೂ ಮಾನವೀಯವಾಗಿ ನಡೆಸಿಕೊಂಡು ತಾರತಮ್ಯ ಇಲ್ಲದೇ ಉತ್ತಮ ಆರೋಗ್ಯ ಸೇವೆ ನೀಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವೈದ್ಯರಿಗೆ ಕಿವಿಮಾತು ಹೇಳಿದರು.‌

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್ ಮೇಲೆ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ 262 ಆಧುನಿಕ ಜೀವ ರಕ್ಷಕ ಆ್ಯಂಬುಲೆನ್ಸ್‌ಗಳನ್ನು ಜನಸೇವೆಗೆ ಅರ್ಪಿಸಿ ಮಾತನಾಡಿದರು.

“ನಾಡಿನ ಜನರಿಗೆ ಗುಣಮಟ್ಟದ ಆರೋಗ್ಯ ಸೇವೆ ನೀಡಲು ಸರ್ಕಾರ ಬದ್ದವಾಗಿದೆ. ಚಿಕಿತ್ಸೆ ಸಿಗದೆ ಯಾರೂ ಪ್ರಾಣ ಕಳೆದುಕೊಳ್ಳುವಂತಾಗಬಾರದು ಎನ್ನುವ ಕಾರಣಕ್ಕೇ ತುರ್ತು 108 ಆ್ಯಂಬುಲೆನ್ಸ್ ಗಳನ್ನು ಆರೋಗ್ಯ ಸೇವೆಗೆ ಒದಗಿಸಲಾಗಿದೆ. ರಾಜ್ಯದಲ್ಲಿ 840 ಕ್ಕೂ ಹೆಚ್ಚು ಆ್ಯಂಬುಲೆನ್ಸ್ ಗಳ ಅಗತ್ಯವಿದೆ. ಪ್ರತೀ ತಾಲ್ಲೂಕಿನಲ್ಲಿ 4 ಆ್ಯಂಬುಲೆನ್ಸ್ ಗಳು ಕಾರ್ಯನಿರ್ವಹಿಸುತ್ತಾ ಪ್ರತೀ ದಿನ ನೂರಾರು ಮಂದಿಗೆ ತುರ್ತು ಆರೋಗ್ಯ ಸೇವೆ ಒದಗಿಸುತ್ತಿವೆ. ಪ್ರಾಥಮಿಕ ತುರ್ತು ಚಿಕಿತ್ಸೆ ಪ್ರಾಣ ರಕ್ಷಣೆಯಲ್ಲಿ ಮಹತ್ವದ ಪಾತ್ರ ವಹಿಸುತ್ತಿವೆ” ಎಂದು ವಿವರಿಸಿದರು.

Advertisements

ಆಂಬ್ಯುಲೆನ್ಸ್

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮುಖ್ಯಮಂತ್ರಿ ಜನಸ್ಪಂದನ; ಆಡಳಿತ ವೈಫಲ್ಯದ ವಿರಾಟ್ ದರ್ಶನ

“ಪ್ರತೀ ಜಿಲ್ಲೆಯಲ್ಲಿ MRI ಸ್ಕ್ಯಾನಿಂಗ್ ಸೌಲಭ್ಯ ಇರಬೇಕು. ಖಾಸಗಿ ಡಯಾಗ್ನಸ್ಟಿಕ್ ಸೆಂಟರ್ ಗಳಲ್ಲಿ ಸೇವಾವೆಚ್ಚ ದುಬಾರಿ ಆಗಿರುವುದರಿಂದ ಬಡವರಿಗೆ ಬಹಳ ಕಷ್ಟ ಆಗುತ್ತಿದೆ. ಈ ಕಾರಣಕ್ಕೆ ಮುಖ್ಯಮಂತ್ರಿ ಪರಿಹಾರ ನಿಧಿಗೆ ಸಾವಿರಾರು ಮಂದಿ ಬೇಡಿಕೆ ಅರ್ಜಿ ಕೊಡುತ್ತಿದ್ದಾರೆ. ಆದ್ದರಿಂದ ಸರ್ಕಾರಿ ಆಸ್ಪತ್ರೆಗಳಲ್ಲೇ ಉತ್ತಮ‌ ಗುಣಮಟ್ಟದ ಚಿಕಿತ್ಸೆ ಸಿಗುತ್ತದೆ ಎನ್ನುವ ವಾತಾವರಣ ರಾಜ್ಯದಲ್ಲಿ ಸೃಷ್ಟಿ ಆಗುತ್ತಿದೆ” ಎಂದರು.

“ಜಯದೇವ ಆಸ್ಪತ್ರೆಯಿಂದ ಉತ್ತಮ‌ಸೇವೆ ಸಾಧ್ಯ ಆಗಿರುವಾಗ ಉಳಿದ ಕಡೆಗಳಲ್ಲೂ ಅದೇ ಗುಣಮಟ್ಟದ ಸೇವೆ ಒದಗಿಸಲು ಸಾಧ್ಯವಿದೆ. ರಾಜ್ಯ ಸರ್ಕಾರ ಆ ದಿಕ್ಕಿನಲ್ಲಿ ಶ್ರಮಿಸುತ್ತಿದೆ ಎಂದು ಮೆಚ್ಚುಗೆ ಸೂಚಿಸಿ ಉತ್ತರ ಕರ್ನಾಟಕದ ಕಡೆ ಹೆಚ್ಚಿನ‌ ಗಮನ ನೀಡಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಸಲಹೆ ನೀಡಿದರು.

ಶಾಸಕ ರಿಜ್ವಾನ್ ಅರ್ಷದ್ ಅವರು ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೇರಿದಂತೆ ಇಲಾಖೆಯ ಹಿರಿಯ ಅಧಿಕಾರಿಗಳು ವೇದಿಕೆಯಲ್ಲಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಜೆಪಿ-ಆರ್‌ಎಸ್‌ಎಸ್‌ ಜತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ನಾನು ಅಪ್ಪಟ ಕಾಂಗ್ರೆಸ್ಸಿಗ. ಹುಟ್ಟಿನಿಂದ ಕಾಂಗ್ರೆಸ್ಸಿಗ. ಜೀವ ಇರುವ ತನಕವೂ ಕಾಂಗ್ರೆಸ್ಸಿಗನಾಗಿಯೇ...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ: ಚಲನಚಿತ್ರ ನಿರ್ದೇಶಕಿ ಸುಮನ್ ಕಿತ್ತೂರು

ಪರಿಶಿಷ್ಟ ಜಾತಿ ಒಳಮೀಸಲಾತಿ ವಿಚಾರದಲ್ಲಿ ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ...

Download Eedina App Android / iOS

X