ಸಿಎಂ ಅಧಿಕಾರ ಹಂಚಿಕೆ ವಿಚಾರದಲ್ಲಿ ಅನಗತ್ಯ ಹೇಳಿಕೆ ನೀಡಬೇಡಿ : ಸುರ್ಜೇವಾಲ ಸೂಚನೆ

Date:

  • ರಾಜ್ಯ ಕಾಂಗ್ರೆಸ್‌ನೊಳಗೆ ತಲ್ಲಣ ಹುಟ್ಟಿಸಿರುವ ಸಿಎಂ ಅಧಿಕಾರಾವಧಿ ವಿಚಾರ
  • ಹೈ ಕಮಾಂಡ್ ನಿರ್ಧರಿತ ವಿಚಾರದ ಬಗ್ಗೆ ಹೇಳಿಕೆ ನೀಡದಂತೆ ಎಚ್ಚರಿಕೆ

ಮಂದಿನ 5 ವರ್ಷ ಅವಧಿಗೂ ಸಿದ್ದರಾಮಯ್ಯನವರೇ ಸಿಎಂ ಎಂದು ಹೇಳಿದ್ದ ಸಚಿವ ಎಂಬಿ ಪಾಟೀಲ್ ಹೇಳಿಕೆ ವಿಚಾರವೀಗ ಪಕ್ಷದೊಳಗೆ ಅಸಮಾಧಾನದ ಕಿಡಿ ಹೊತ್ತಿಸಿದೆ. ಈ ವಿಚಾರದ ಮೇಲೆ ಪರ ವಿರೋಧದ ಚರ್ಚೆಗಳು ಆರಂಭವಾಗಿದೆ.

ಇತ್ತ ಈ ಬೆಳವಣಿಗೆ ಗಮನಿಸಿರುವ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಸಚಿವರು, ಶಾಸಕರುಗಳು ಯಾರೂ ಈ ವಿಚಾರದಲ್ಲಿ ಅನಗತ್ಯ ಹೇಳಿಕೆ ನೀಡಬಾರದು ಎಂದು ಹೇಳಿದ್ದಾರೆ.

ಈ ಕುರಿತು ಪಕ್ಷದ ಸರ್ವ ಸದಸ್ಯರಿಗೂ ಸುರ್ಜೇವಾಲ ಸೂಚನೆ ಹೊರಡಿಸಿದ್ದಾರೆ. ಜೊತೆಗೆ ಸಿಎಂ, ಡಿಸಿಎಂ ಬಗ್ಗೆ 4 ಗೋಡೆಯ ಮಧ್ಯೆ ಮಾತುಕತೆ ನಡೆದಿರುವುದು. ಇದರ ಬಗ್ಗೆ ಯಾರೂ ಕೂಡ ಗೊಂದಲ ಮೂಡಿಸುವ ಹೇಳಿಕೆಯನ್ನು ನೀಡಬೇಡಿ. ಯಾವುದೇ ತೀರ್ಮಾನಗಳಿದ್ದರೂ ಎಐಸಿಸಿ ನಾಯಕರೇ ನಿರ್ಧರಿಸುತ್ತಾರೆ ಎಂದಿದ್ದಾರೆ.

ಈ ಸುದ್ದಿ ಓದಿದ್ದೀರಾ?;ಸಿಎಂ ಅಧಿಕಾರಾವಧಿ ವಿಚಾರ | ಎಂಬಿ ಪಾಟೀಲ್‌ಗೆ ಎಚ್ಚರಿಕೆ ನೀಡಿದ ಸಂಸದ ಡಿಕೆ ಸುರೇಶ್

ಇದೇ ವಿಚಾರದ ಹಿನ್ನೆಲೆಯಲ್ಲಿ ಸಂಸದ ಡಿಕೆ ಸುರೇಶ್ ಹಾಗೂ ಸಚಿವ ಎಂಬಿ ಪಾಟೀಲ್ ನಡುವೆ ಪರೋಕ್ಷ ವಾಕ್ಸಮರ ಏರ್ಪಟ್ಟಿತು. ಈ ವಿಚಾರ ವಿಪಕ್ಷಗಳ ಗಮನಕ್ಕೆ ಬಂದಿತ್ತು. ವಿರೋಧ ಪಕ್ಷ ಇದನ್ನೇ ಟೀಕಾಸ್ತ್ರವನ್ನಾಗಿ ಮಾಡಿಕೊಂಡಿತೆಂಬ ಆತಂಕದ ಕಾರಣ ಸುರ್ಜೇವಾಲ ಈ ಪಕ್ಷದ ಸರ್ವ ಸದಸ್ಯರಿಗೂ ಈ ಸೂಚನೆ ಜಾರಿ ಮಾಡಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

Subscribe

ಹೆಚ್ಚು ಓದಿಸಿಕೊಂಡ ಲೇಖನಗಳು

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಣಿಪುರ | ಪ್ರತ್ಯೇಕ ಆಡಳಿತ ಕೋರಿದ್ದ 10 ಶಾಸಕರಿಗೆ ಶೋಕಾಸ್‌ ನೋಟಿಸ್

ರಾಜ್ಯ ವಿಧಾನಸಭೆಯ ಸವಲತ್ತುಗಳು ಮತ್ತು ನೀತಿ ಸಮಿತಿ ಶಾಸಕರಿಗೆ ಶೋಕಾಸ್‌ ನೋಟಿಸ್ ಕುಕಿ...

ನಮ್ಮ ಸಚಿವರು | ಅಪ್ಪ ಹಾಕಿದ ಆಲದಮರದಡಿ ‘ಸುಭದ್ರ ರಾಜಕಾರಣ’ ಮಾಡುತ್ತಿರುವ ಈಶ್ವರ್ ಖಂಡ್ರೆ

ಭಾಲ್ಕಿ ಕ್ಷೇತ್ರದ ಕಳೆದ 70 ವರ್ಷಗಳ ಸುದೀರ್ಘ ರಾಜಕಾರಣದಲ್ಲಿ ಮೂರು ಅವಧಿ...

ಧಾರವಾಡ ಲೋಕಸಭಾ ಕ್ಷೇತ್ರ | ಪ್ರಲ್ಹಾದ್‌ ಜೋಶಿ ಬದಲು ಹೊಸ ಮುಖಕ್ಕೆ ಮನ್ನಣೆ ನೀಡಲು ಲಿಂಗಾಯತರ ಒತ್ತಾಯ

2024ರಲ್ಲಿ ನಡೆಯುವ ಲೋಕಸಭಾ ಚುನಾವಣೆಯಲ್ಲಿ 13 ಬಿಜೆಪಿ ಹಾಲಿ ಸಂಸದರಿಗೆ ಟಿಕೆಟ್‌...

ಆಗಸ್ಟ್‌ 1 ರಂದು ಗೃಹಜ್ಯೋತಿ, ಆಗಸ್ಟ್‌ 17-18 ರಂದು ಗೃಹಲಕ್ಷ್ಮಿ ಯೋಜನೆ ಜಾರಿ : ಸಿಎಂ ಸಿದ್ದರಾಮಯ್ಯ

ಯೋಜನೆಗಳ ಅನುಷ್ಠಾನ ಕುರಿತು ಉನ್ನತ ಮಟ್ಟದ ಸಭೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅರ್ಜಿ...