ಗಾಜಿನ ಮನೆಯಲ್ಲಿ ಕೂತು ಕಲ್ಲು ಹೊಡಿಬೇಡಿ ಮೋದಿ, ಬಿಜೆಪಿ ಮನೆ ನೂರು ಬಾಗಿಲಾಗಿದೆ: ಸಿದ್ದರಾಮಯ್ಯ ಕಿಡಿ

Date:

Advertisements

ಪ್ರಧಾನಿ ನರೇಂದ್ರ ಮೋದಿ ಅವರು ನಮ್ಮ ಪಕ್ಷದ ಅಂತರ್‌ಕಲಹದ ಬಗ್ಗೆ ಭಾಷಣ ಮಾಡುವ ಹೊತ್ತಲ್ಲೇ, ಬಿಜೆಪಿಯ ಬಂಡಾಯ ನಾಯಕರು ಕುಮಾರ್ ಬಂಗಾರಪ್ಪನವರ ಮನೆಯಲ್ಲಿ ಸಭೆ ಸೇರಿ, ವಿಜಯೇಂದ್ರ ಅವರ ಪದಚ್ಯುತಿಗೆ ತಂತ್ರ ರೂಪಿಸುತ್ತಿರುವುದು ವಿಪರ್ಯಾಸ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಅವರು, “ಪ್ರಧಾನಿ ನರೇಂದ್ರ ಮೋದಿ ಅವರೇ, ಗಾಜಿನ ಮನೆಯಲ್ಲಿ ಕೂತು ಕಲ್ಲು ಹೊಡೆಯಲು ಹೋಗಬೇಡಿ ಬಿಜೆಪಿಯ ರಕ್ತದಲ್ಲಿ ಹೇಗೆ ಕೋಮುವಾದ ಸೇರಿಕೊಂಡಿದೆಯೋ, ಅದೇ ರೀತಿ ಅಂತರ್‌ಕಲಹವೂ ಸೇರಿಕೊಂಡಿದೆ” ಎಂದು ಲೇವಡಿ ಮಾಡಿದ್ದಾರೆ.

“ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕದ ಕಾಂಗ್ರೆಸ್ ನಲ್ಲಿ ಅಂತರ್‌ಕಲಹ ನಡೆಯುತ್ತಿದೆ ಎಂದು ಗಾಳಿಯಲ್ಲಿ ಗುಂಡು ಹೊಡೆದಿದ್ದಾರೆ. ಬಹುಶಃ ಪ್ರಧಾನಿಯವರು ಇತ್ತೀಚೆಗೆ ಮಾಧ್ಯಮಗಳಲ್ಲಿ ಪ್ರಕಟವಾಗಿರುವ ವರದಿಗಳಲ್ಲಿ ಉಲ್ಲೇಖಗೊಳ್ಳುತ್ತಲಿರುವ ಪಕ್ಷಗಳ ಹೆಸರಲ್ಲಿ ಗೊಂದಲ ಮಾಡಿಕೊಂಡು, ಬಿಜೆಪಿ ಬದಲಿಗೆ ಕಾಂಗ್ರೆಸ್ ಎಂದು ತಿಳಿದುಕೊಂಡು ಈ ಅಭಿಪ್ರಾಯ ವ್ಯಕ್ತಪಡಿಸಿರಬಹುದು. ಈ ಗೊಂದಲ ನಿವಾರಣೆಗಾಗಿ ಅವರು ತಕ್ಷಣ ಸ್ಪಷ್ಟೀಕರಣ ನೀಡಬೇಕೆಂದು ಮನವಿ ಮಾಡುತ್ತೇನೆ” ಎಂದು ವ್ಯಂಗ್ಯವಾಡಿದ್ದಾರೆ.

Advertisements

“ಬಿಜೆಪಿಯ ರಕ್ತದಲ್ಲಿ ಹೇಗೆ ಕೋಮುವಾದ ಸೇರಿಕೊಂಡಿದೆಯೋ, ಅದೇ ರೀತಿ ಅಂತರ್‌ಕಲಹವೂ ಸೇರಿಕೊಂಡಿದೆ. ಇತ್ತೀಚಿನ ದಿನಗಳಲ್ಲಿ ಕರ್ನಾಟಕದ ಬಿಜೆಪಿ ನಾಯಕರು ಪರಸ್ಪರ ಕೆಸರೆರಚಾಟ ಮಾಡಿಕೊಳ್ಳದ ದಿನವೇ ಸಿಗಲಾರದು. ಪ್ರತಿನಿತ್ಯ ಬಿಜೆಪಿ ನಾಯಕರು ಆರೋಪ – ಪ್ರತ್ಯಾರೋಪ, ಪರಸ್ಪರ ದೂಷಣೆ – ನಿಂದನೆಯ ಧಾರವಾಹಿ ಮೂಲಕ ಜನರನ್ನು ರಂಜಿಸುತ್ತಿದ್ದಾರೆ” ಎಂದಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪವನ್ – ಕಂಗನಾ ಎಂಬ ‘ಬುದ್ಧಿ’ವಂತರು ಮತ್ತು ಬಿಜೆಪಿ

“ಮೋದಿ ಅವರೇ, ದಯವಿಟ್ಟು ತಾವು ಬೆಳಿಗ್ಗೆ ಎದ್ದು ಕರ್ನಾಟಕದಿಂದ ಪ್ರಕಟವಾಗುವ ಪತ್ರಿಕೆಗಳ ಮೇಲೆ ಕಣ್ಣಾಡಿಸಿದರೆ ನಿಮ್ಮ ಪಕ್ಷದಲ್ಲಿ ನಡೆಯುವ ಅಂತರ್‌ಕಲಹದ ಒಂದು ಅಂದಾಜು ಸಿಗಬಹುದು. ಇದರ ನಂತರವಾದರೂ ನೀವು ನಮ್ಮ ಪಕ್ಷದ ಕಡೆ ಬೊಟ್ಟು ಮಾಡುವುದನ್ನು ನಿಲ್ಲಿಸಿ, ನಿಮ್ಮ ಪಕ್ಷದ ಅಂತರ್‌ಕಲಹದ ಬೆಂಕಿಯನ್ನು ಶಮನ ಮಾಡಲು ಪ್ರಯತ್ನ ನಡೆಸಬಹುದು” ಎಂದು ಹೇಳಿದ್ದಾರೆ.

“ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಬೆಳಿಗ್ಗೆ ಎದ್ದ ಕೂಡಲೇ ಯಡಿಯೂರಪ್ಪ ಮತ್ತು ಅವರ ಮಕ್ಕಳ ವಿರುದ್ಧ ಸಾವಿರಾರು ಕೋಟಿ ರೂಪಾಯಿಗಳ ಭ್ರಷ್ಟಾಚಾರ ಆರೋಪ ಮಾಡುತ್ತಿದ್ದಾರೆ. ಇವರ ಆರೋಪಗಳಿಗೆ ಶಾಸಕರಾದ ರಮೇಶ್ ಜಾರಕಿಹೊಳಿ, ಸಿ.ಟಿ.ರವಿ ಮೊದಲಾದವರು ದನಿಗೂಡಿಸಿ ಅಪ್ಪ-ಮಕ್ಕಳ ವಿರುದ್ದ ಬಗೆಬಗೆಯ ಆರೋಪಗಳನ್ನು ಮಾಡಿದ್ದಾರೆ. ಇದೀಗ ಉಚ್ಚಾಟಿತ ಬಿಜೆಪಿ ನಾಯಕ ಈಶ್ವರಪ್ಪನವರ ಮನೆಯಲ್ಲಿಯೇ ಕೂತು ಭಿನ್ನಮತೀಯ ಶಾಸಕರು ಸಭೆ ನಡೆಸಿದ್ದಾರೆ. ಇದನ್ನು ಅಂತರ್‌ಕಲಹ ಎಂದು ಕರೆಯದೆ ಪ್ರೇಮಸಲ್ಲಾಪ ಎನ್ನೋಣವೇ?” ಎಂದು ಲೇವಡಿ ಮಾಡಿದ್ದಾರೆ.

“ಕರ್ನಾಟಕದ ಬಿಜೆಪಿಯಲ್ಲಿನ ಅಂತರ್‌ಕಲಹ ಇತ್ತೀಚಿನ ಬೆಳವಣಿಗೆಯೇನಲ್ಲ, ಇದಕ್ಕೊಂದು ಇತಿಹಾಸವಿದೆ.
ಕರ್ನಾಟಕದ ಜನತೆ ಎಂದೂ ಬಿಜೆಪಿಗೆ ಪೂರ್ಣಬಹುಮತ ನೀಡಿ ಅಧಿಕಾರಕ್ಕೆ ತಂದಿಲ್ಲ. ಅಕ್ರಮ ದುಡ್ಡಿನ ಬಲದಿಂದ ಆಪರೇಷನ್ ಕಮಲ ನಡೆಸಿ ಅಧಿಕಾರಕ್ಕೆ ಬಂದರೂ ಯಾರೇ ಒಬ್ಬ ಮುಖ್ಯಮಂತ್ರಿ ಪೂರ್ಣಾವಧಿ ಆಳಿಲ್ಲ. 2008 ರಿಂದ 2013ರ ವರೆಗೆ ಮೂವರು ಮುಖ್ಯಮಂತ್ರಿಗಳು, 2019ರಿಂದ 2023ರ ಅವಧಿಯಲ್ಲಿ ಇಬ್ಬರು ಮುಖ್ಯಮಂತ್ರಿಗಳು. ಕರ್ನಾಟಕದ ಬಿಜೆಪಿಯೊಳಗಿನ ಅಂತರ್‌ಕಲಹ ನಮ್ಮಲ್ಲಿ ಮನೆಮನೆಮಾತಾಗಿದೆ. ಇದರಲ್ಲಿ ನಮ್ಮ ಪಕ್ಷದ ಯಾವುದೇ ಪಾತ್ರ ಇಲ್ಲ. ಇವೆಲ್ಲ ಸ್ವಯಂಕೃತ ಅಪರಾಧದ ಹಳವಂಡಗಳು” ಎಂದು ತಿಳಿಸಿದ್ದಾರೆ.

“2011ರಲ್ಲಿ ಬಿ ಎಸ್ ಯಡಿಯೂರಪ್ಪ ಅವರು ಜೈಲಿಗೆ ಹೋಗಲು ಪಕ್ಷದೊಳಗಿನ ಅಂತರ್‌ಕಲಹವೂ ಕಾರಣ ಎನ್ನುವುದನ್ನು ಪ್ರಧಾನಿ ನರೇಂದ್ರ ಮೋದಿ ಅವರೂ ಮರೆತುಬಿಟ್ಟಿದ್ದಾರೆ. ಅದರ ನಂತರ ಬಿಜೆಪಿ ತೊರೆದು ಸ್ವಂತ ಪಕ್ಷ ಕಟ್ಟಿದ್ದ ಯಡಿಯೂರಪ್ಪನವರು ವಾಜಪೇಯಿ – ಅಡ್ವಾಣಿಯವರನ್ನು ಸೇರಿದಂತೆ ಯಾರನ್ನೂ ಬಿಡದೆ ಕೀಳು ಮಟ್ಟದ ಭಾಷೆಯಲ್ಲಿ ನಿಂದಿಸಿದ್ದಾರೆ. ಕೊನೆಗೆ ಅವರನ್ನೇ ಕರೆತಂದು ಮುಖ್ಯಮಂತ್ರಿ ಮಾಡಿದ್ದಾಯಿತು, ನಂತರ ಅವರನ್ನು ಪದಚ್ಯುತಿಗೊಳಿಸಿಯೂ ಆಯಿತು. ಇವೆಲ್ಲದರ ಹಿಂದೆ ಪಕ್ಷದ ಅಂತರ್‌ಕಲಹ ಕಾರಣ ಅಲ್ಲವೇ” ಎಂದು ಪ್ರಶ್ನಿಸಿದ್ದಾರೆ.

“ಪ್ರಧಾನಿ ನರೇಂದ್ರ ಮೋದಿ ಅವರೇ, ಗಾಜಿನ ಮನೆಯಲ್ಲಿ ಕೂತು ಕಲ್ಲು ಹೊಡೆಯಲು ಹೋಗಬೇಡಿ. ನಮ್ಮ ಪಕ್ಷದ ಅಂತರ್‌ಕಲಹದ ಬಗ್ಗೆ ಚಿಂತೆ ಮಾಡಬೇಡಿ. ನಮ್ಮ ಪಕ್ಷ ಅಧಿಕಾರಕ್ಕೆ ಬಂದಾಗೆಲ್ಲ ಪೂರ್ಣಾವಧಿಯನ್ನು ಮುಗಿಸಿದ್ದೇವೆ. ದೇವರಾಜ ಅರಸು ನಂತರ ಪೂರ್ಣ ಐದು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿದ್ದ ನಾನು ಇದೀಗ ಎರಡನೇ ಬಾರಿ ಮುಖ್ಯಮಂತ್ರಿಯಾಗಿದ್ದೇನೆ. ನಮ್ಮೊಳಗೆ ಜಗಳ ಹುಟ್ಟುಹಾಕುವ ನಿಮ್ಮೆಲ್ಲರ ನಿರಂತರ ಪ್ರಯತ್ನದ ಹೊರತಾಗಿಯೂ ನಾವೆಲ್ಲ ಒಗ್ಗಟ್ಟಾಗಿದ್ದೇವೆ” ಎಂದು ಸ್ಪಷ್ಟಪಡಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

Download Eedina App Android / iOS

X