ಜನದ್ರೋಹ ಬಚ್ಚಿಟ್ಟುಕೊಳ್ಳಲು ಶ್ರೀರಾಮನನ್ನು ಮುಂದಿಟ್ಟಿರುವ ಬಿಜೆಪಿಯನ್ನು ನಂಬಬೇಡಿ, ಬೆಂಬಲಿಸಬೇಡಿ: ಸಿದ್ದರಾಮಯ್ಯ ಕರೆ

Date:

Advertisements

ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿ ಮಾಡುತ್ತೇವೆ ಎಂದಿದ್ದ ಪ್ರಧಾನಿ ನರೇಂದ್ರ ಮೋದಿ ಕೊಟ್ಟ ಮಾತು ತಪ್ಪಿದ್ದಾರೆ. ಹತ್ತು ವರ್ಷದಲ್ಲಿ 20 ಕೋಟಿ ಉದ್ಯೋಗ ಕೊಡಬೇಕಿತ್ತು‌. ಆಗಲಿಲ್ಲ. ಈ ವೈಫಲ್ಯ ಮುಚ್ಚಿಕೊಳ್ಳಲು ಶ್ರೀರಾಮನನ್ನು ಮುಂದಿಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹರಿಹಾಯ್ದರು.

ಪಿರಿಯಾಪಟ್ಟಣ ತಾಲ್ಲೂಕಿನ 79 ಗ್ರಾಮಗಳ 150 ಕೆರೆಗಳಿಗೆ ಮತ್ತು ಕಟ್ಟೆಗಳಿಗೆ ಕಾವೇರಿ ನದಿಯ ನೀರು ತುಂಬಿಸುವ ಯೋಜನೆಯನ್ನು ಮುತ್ತಿನಮುಳುಸೋಗೆಯಲ್ಲಿ ಉದ್ಘಾಟಿಸಿ ಮಾತನಾಡಿದರು.

“ಮಹಾತ್ಮಗಾಂಧಿ ಹೇಳಿದ ರಘುಪತಿ ರಾಘವ ರಾಜಾರಾಮನನ್ನು ನಾವು ಪೂಜಿಸುತ್ತೇವೆ, ನಾವೂ ಭಜಿಸುತ್ತೇವೆ‌. ಜನದ್ರೋಹವನ್ನು ಬಚ್ಚಿಟ್ಟುಕೊಳ್ಳಲು ಶ್ರೀರಾಮನನ್ನು ಮುಂದಿಟ್ಟು ರಾಜಕೀಯ ಮಾಡುತ್ತಿರುವ ಬಿಜೆಪಿಯನ್ನು ನಂಬಬೇಡಿ, ಕ್ಷಮಿಸಬೇಡಿ, ಬೆಂಬಲಿಸಬೇಡಿ” ಎಂದು ಕರೆ ನೀಡಿದರು.

Advertisements

“ಪಿರಿಯಾಪಟ್ಟಣದ ಜನ, ಜಾನುವಾರು, ಕೃಷಿಯ ಅನುಕೂಲಕ್ಕಾಗಿ ಮತ್ತು ಇಲ್ಲಿನ ಅಂತರ್ಜಲ ಹೆಚ್ಚಳಕ್ಕೆ ನಾನೇ ಶಂಕುಸ್ಥಾಪನೆ ಮಾಡಿ ನಾನೇ ಈಗ ಉದ್ಘಾಟಿಸಿದ್ದೇನೆ. 79 ಹಳ್ಳಿ 93 ಸಾವಿರ ಜನರಿಗೆ ಇದರಿಂದ ಲಾಭ ಆಗುತ್ತಿದೆ. ಇದು ನಮ್ಮ ಸರ್ಕಾರ ಪಿರಿಯಾಪಟ್ಟಣದಲ್ಲಿ ನಿರ್ವಹಿಸಿದ ಜವಾಬ್ದಾರಿ” ಎಂದರು.

“ನಮ್ಮ ಸರ್ಕಾರದ ಒಂದು ಯೋಜನೆ ಕೋಲಾರ, ಚಿಕ್ಕಬಳ್ಳಾಪುರದ ಕೆರೆಗಳಿಗೆ ಮರು ಹುಟ್ಟು ನೀಡಿದೆ. ಇದೇ ರೀತಿ ಪಿರಿಯಾಪಟ್ಟಣದ ಕೆರೆಗಳಿಗೆ ಮರು ಜೀವ ನೀಡಿ ಇಲ್ಲಿನ ಅಂತರ್ಜಲ ವೃದ್ಧಿಗೆ ಈ ಯೋಜನೆ ಜೀವದಾನವಾಗಲಿದೆ. ನುಡಿದಂತೆ ನಡೆಯೋದು, ಕೊಟ್ಟ ಮಾತಿನಂತೆ ನಡೆದುಕೊಳ್ಳುವುದು ನಮ್ಮ ಸರ್ಕಾರದ, ಕಾಂಗ್ರೆಸ್ ಸರ್ಕಾರದ ಸಂಸ್ಕಾರ. ಬಿಜೆಪಿ ಕೊಟ್ಟ ಮಾತುಗಳಲ್ಲಿ ಯಾವುದನ್ನೂ ಈಡೇರಿಸಿಲ್ಲ. ರಾಜ್ಯದಲ್ಲಿ ತೀವ್ರ ಬರಗಾಲ ಇದ್ದರೂ ಜನ ಜಾನುವಾರುಗಳಿಗೆ ಕುಡಿಯುವ ನೀರಿಗೆ ತೊಂದರೆ ಆಗದಂತೆ, ಜನರು ಗುಳೆ ಹೋಗದಂತೆ ತಡೆದಿದ್ದೇವೆ. ಇದು ನಮ್ಮ ಸಾಧನೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ?ಈ ದಿನ ಸಂಪಾದಕೀಯ | ಯಾವುದು ರಾಮರಾಜ್ಯ? ಗಾಂಧೀಜಿ ಹೇಳಿದ್ದೇ, ಪ್ರಧಾನಿ ಪಾಲಿಸುತ್ತಿರುವುದೇ?

“ಕಳೆದ ವರ್ಷ ಸೆಪ್ಟೆಂಬರ್ ನಿಂದ ಇವತ್ತಿನವರೆಗೂ ನಾನು ರಾಜ್ಯದ ಪಾಲಿನ ಬರ ಪರಿಹಾರದ ಹಣವನ್ನು ಕೊಡಿ ಎಂದು ಪತ್ರ ಬರೆಯುತ್ತಿದ್ದೇವೆ. ನಾವೇ ಖುದ್ದಾಗಿ ಹೋಗಿ ಪ್ರಧಾನಿ ಮೋದಿ ಮತ್ತು ಅಮಿತ್ ಶಾ ಅವರನ್ನು ಭೇಟಿ ಮಾಡಿದರೂ ಕೇಂದ್ರ ಸರ್ಕಾರ ಒಂದೇ ಒಂದು ರೂಪಾಯಿಯನ್ನು ರಾಜ್ಯಕ್ಕೆ ನೀಡಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ರಾಜ್ಯದ ಜನ ಪ್ರತಾಪ್ ಸಿಂಹ ಸೇರಿ 25 ಮಂದಿ ಎಂಪಿಗಳನ್ನು ಗೆಲ್ಲಿಸಿದರು. ಒಬ್ಬೇ ಒಬ್ಬ ಬಿಜೆಪಿ ಸಂಸದರು ರಾಜ್ಯಕ್ಕೆ ಒಂದೇ ಒಂದು ರೂಪಾಯಿ ಬರ ಪರಿಹಾರ ತರಲಿಲ್ಲ. ಮಿಸ್ಟರ್ ಪ್ರತಾಪ್ ಸಿಂಹ ಏಕೆ ಒಂದೇ ಒಂದು ರೂಪಾಯಿ ತರಲಿಲ್ಲ. ಇಷ್ಟು ಎಂಪಿಗಳಿದ್ದು ನಾಚಿಕೆ ಆಗುವುದಿಲ್ಲವೇ ನಿಮಗೆ” ಎಂದು ಖಾರವಾಗಿ ಪ್ರಶ್ನಿಸಿದರು.

“ದೇವೇಗೌಡರು ಈಗ ಪ್ರದಾನಿ ಮೋದಿ ಮತ್ತು ಬಿಜೆಪಿ ಜತೆ ತಮ್ಮ ಅಸ್ತಿತ್ವಕ್ಕಾಗಿ ಹೊಂದಾಣಿಕೆ ಮಾಡಿಕೊಂಡಿದ್ದಾರೆ. ಪ್ರಧಾನಿಗೆ ಹೇಳಿ ರಾಜ್ಯಕ್ಕೆ ಬರಬೇಕಾದ ರಾಜ್ಯದ ಪಾಲಿನ ಬರ ಪರಿಹಾರವನ್ನು ದೊರಕಿಸಿ ಕೊಡಲಿ. ಜಾತ್ಯತೀತ ಎಂದು ಪಕ್ಷದ ಹೆಸರಿಟ್ಟುಕೊಂಡು ಈಗ ಬಿಜೆಪಿ ಜತೆ ಹೊಂದಾಣಿಕೆ ಮಾಡಿಕೊಂಡಿದ್ದಾರೆ” ಎಂದು ಸಿಎಂ ಲೇವಡಿ ಮಾಡಿದರು.

ರೇಷ್ಮೆ ಮತ್ತು ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್ ಅಧ್ಯಕ್ಷತೆ ವಹಿಸಿದ್ದರು. ಜಲಸಂಪನ್ಮೂಲ ಸಚಿವರೂ ಆದ ಡಿಸಿಎಂ ಡಿ ಕೆ ಶಿವಕುಮಾರ್, ಸಮಾಜ ಕಲ್ಯಾಣ ಸಚಿವ ಎಚ್ ಸಿ ಮಹದೇವಪ್ಪ, ಸಣ್ಣ ನೀರಾವರಿ ಸಚಿವ ಎನ್ ಎಸ್ ಬೋಸರಾಜು ಹಾಗೂ ಶಾಸಕರಾದ ಮರಿತಿಬ್ಬೇಗೌಡ, ಡಿ.ರವಿಶಂಕರ್, ಟಿ.ಎಸ್.ಶ್ರೀವತ್ಸ, ಸಿ.ಅನಿಲ್ ಕುಮಾರ್, ಕೆ.ಹರೀಶ್ ಗೌಡ, ಮಂಥರ್ ಗೌಡ, ಡಾ.ಡಿ.ತಿಮ್ಮಯ್ಯ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

Download Eedina App Android / iOS

X