ಅಚ್ಚೇ ದಿನ್‌ಗೆ ಕಾಯಬೇಡಿ, ನಿಮಗೆ ಬೇಕಾದ ಸರ್ಕಾರ ಆಯ್ಕೆ ಮಾಡಿ: ರೈತರಿಗೆ ನಟ ನಾನಾ ಪಾಟೇಕರ್ ಕರೆ

Date:

ಮಹಾರಾಷ್ಟ್ರದಲ್ಲಿ ಕಳೆದ ಒಂದು ವರ್ಷದಿಂದ ನಿರಂತರವಾಗಿ ಆಗುತ್ತಿರುವ ರಾಜಕೀಯ ಬದಲಾವಣೆಗಳನ್ನು ಕಟುವಾಗಿ ಟೀಕಿಸಿದ ನಟ ನಾನಾ ಪಾಟೇಕರ್, ಇದೇ ಸಂದರ್ಭದಲ್ಲಿ ರೈತರಿಗೆ ಕರೆ ಕೊಟ್ಟಿದ್ದಾರೆ. “ನೀವು ಅಚ್ಚೇ ದಿನ್‌ಗಾಗಿ (ಉತ್ತಮ ದಿನಕ್ಕಾಗಿ) ಕಾಯಬಾರದು, ನಿಮಗೆ ಬೇಕಾದ ಸರ್ಕಾರವನ್ನು ನೀವೇ ಆಯ್ಕೆ ಮಾಡಿಕೊಳ್ಳಬೇಕು” ಎಂದು ಹೇಳಿದ್ದಾರೆ.

- Advertisement -

ನಾಸಿಕ್‌ನಲ್ಲಿ ನಡೆದ ‘ಶೇಟ್ಕರಿ ಸಮ್ಮೇಳನ’ದಲ್ಲಿ ರೈತರನ್ನು ಉದ್ದೇಶಿಸಿ ಮಾತನಾಡಿದ ನಟ ನಾನಾ ಪಾಟೇಕರ್, “ರೈತರು ಎಂದಿಗೂ ಇಂದಲ್ಲ ನಾಳೆ ಒಳ್ಳೆಯ ದಿನ ಬರುತ್ತದೆ ಎಂದು ಕಾದು ಕೂರಬಾರದು. ನಾವಾಗಿಯೇ ನಮಗೆ ಉತ್ತಮ ದಿನಗಳನ್ನು ತಂದುಕೊಳ್ಳಬೇಕು. ಮುಂದಿನ ಬಾರಿ ಯಾವ ಸರ್ಕಾರ ಬರಬೇಕು ಎಂಬುದನ್ನು ನೀವು ತೀರ್ಮಾನ ಮಾಡಬೇಕು,” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...

“ನಮ್ಮ ದೇಶದಲ್ಲಿ ಚಿನ್ನದ ಬೆಲೆ ಹೆಚ್ಚಳವಾಗುತ್ತಿರುವಾಗ ಅಕ್ಕಿಯ ಬೆಂಬಲ ಬೆಲೆ ಮಾತ್ರ ಯಾಕೆ ಹೆಚ್ಚಾಗುವುದಿಲ್ಲ? ರೈತರು ಇಡೀ ದೇಶಕ್ಕೆ ಆಹಾರ ನೀಡುವವರು. ಆದರೆ, ರೈತರ ಸಮಸ್ಯೆಯನ್ನು ಬಗೆಹರಿಸಲು ಸರ್ಕಾರಕ್ಕೆ ಸಮಯವೇ ಇಲ್ಲ. ಇಂತಹ ಸರ್ಕಾರದಿಂದ ರೈತರು ಏನೂ ಕೇಳಬಾರದು. ನೀವೇ ಮುಂದಿನ ಸರ್ಕಾರ ಆಯ್ಕೆ ಮಾಡಬೇಕು,” ಎಂದರು.

“ನಾವು ಇಂದಿನ ಸ್ಥಿತಿಯನ್ನು ಬದಲಾವಣೆ ಮಾಡಲು ಜೊತೆಯಾಗಬೇಕು. ನಾವೆಂದಿಗೂ ಆತ್ಮಹತ್ಯೆಯ ದಾರಿಯನ್ನು ತುಳಿಯಬಾರದು,” ಎಂದು ರೈತರಿಗೆ ಹೇಳಿದರು.

ರಾಜಕೀಯ ಪಕ್ಷಗಳ ವಿರುದ್ಧ ಹರಿಹಾಯ್ದ ಪಾಟೇಕರ್, “ರಾಜಕೀಯ ನಾಯಕರೇ ನಮ್ಮ ಯುವಜನರಿಗೆ ಯಾವ ನಿದರ್ಶನವನ್ನು ನೀವು ನೀಡುತ್ತಿದ್ದೀರಿ,” ಎಂದು ಪ್ರಶ್ನಿಸಿದರು. ”ನಾನು ಎಂದಿಗೂ ಕಟುವಾಗಿ, ನೇರವಾಗಿ ಟೀಕೆ ಮಾಡುವ ವ್ಯಕ್ತಿ. ಆದ್ದರಿಂದಾಗಿ ನಾನು ರಾಜಕೀಯಕ್ಕೆ ಸೇರಿಕೊಳ್ಳಲು ಸಾಧ್ಯವಿಲ್ಲ” ಎಂದು ಈ ವೇಳೆ ತಿಳಿಸಿದರು.

WhatsApp Image 2025 11 17 at 4.20.34 PM
+ posts

ಪತ್ರಕರ್ತೆ, 2019ರಿಂದ ಪತ್ರಿಕೋದ್ಯಮವೇ ಬದುಕು. ರಾಜಕೀಯ, ಬ್ಯುಜಿನೆಸ್‌ ಸುದ್ದಿಗಳಲ್ಲಿ ಆಸಕ್ತಿ.

ಪೋಸ್ಟ್ ಹಂಚಿಕೊಳ್ಳಿ:

ಮಯೂರಿ ಬೋಳಾರ್
ಮಯೂರಿ ಬೋಳಾರ್
ಪತ್ರಕರ್ತೆ, 2019ರಿಂದ ಪತ್ರಿಕೋದ್ಯಮವೇ ಬದುಕು. ರಾಜಕೀಯ, ಬ್ಯುಜಿನೆಸ್‌ ಸುದ್ದಿಗಳಲ್ಲಿ ಆಸಕ್ತಿ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಫಕೀರನಂತೆ ‘ಜೋಳಿಗೆ’ ಎತ್ತಿಕೊಂಡು ಹೋಗುವ ಸಮಯ ಬಂತು, ಹೊರಡಿ ಮೋದಿಜಿ: ಕಾಂಗ್ರೆಸ್ ಲೇವಡಿ

ದೇಶಾದ್ಯಂತ ಔಷಧಿಗಳ ಬೆಲೆ ತೀವ್ರವಾಗಿ ಏರಿಕೆಯಾಗುತ್ತಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್ ಪ್ರಶಸ್ತಿ ವಿಜೇತ ಸಂಶೋಧನೆ‌

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ...

CEC ಗ್ಯಾನೇಶ್‌ ಕುಮಾರ್‌ ವಿರುದ್ಧ ಭುಗಿಲೆದ್ದ ಆಕ್ರೋಶ; ತೀವ್ರಗೊಂಡ ಮೋಶಾ ದಮನ ಕ್ರಮಗಳು

ಚುನಾವಣಾ ಅಕ್ರಮಗಳ ಆರೋಪದ ಹಿನ್ನೆಲೆಯಲ್ಲಿ ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್‌...

ಸಿಇಸಿ ಗ್ಯಾನೇಶ್ ವಿರುದ್ಧ ಅರ್ಜಿ: ಕೇಂದ್ರ, ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರು ಇತರ ಚುನಾವಣಾ...