ದೇವದಾರಿ ಗಣಿಗಾರಿಕೆ ಯೋಜನೆ ಬಗ್ಗೆ ಕಳವಳ ಬೇಡ: ಕೇಂದ್ರ ಸಚಿವ ಕುಮಾರಸ್ವಾಮಿ

Date:

ಬಳ್ಳಾರಿಯ ಸಂಡೂರು ವ್ಯಾಪ್ತಿಯ ದೇವದಾರಿ ಪ್ರದೇಶದಲ್ಲಿ ಕುದುರೆಮುಖ ಕಬ್ಬಿಣ ಅದಿರು ಕಂಪನಿ (KIOCL) ಕೈಗೆತ್ತಿಕೊಂಡಿರುವ ಗಣಿಗಾರಿಕೆ ಯೋಜನೆಯ ಬಗ್ಗೆ ಕಳವಳ ಬೇಡ ಎಂದು ಕೇಂದ್ರದ ಉಕ್ಕು ಮತ್ತು ಭಾರೀ ಕೈಗಾರಿಕೆ ಸಚಿವ ಹೆಚ್ ಡಿ ಕುಮಾರಸ್ವಾಮಿ ಹೇಳಿದರು.

ಬೆಂಗಳೂರಿನಲ್ಲಿ ಮಂಗಳವಾರ ಕುದುರೆಮುಖ ಕಬ್ಬಿಣ ಅದಿರು ಕಂಪನಿಯ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕ ಗಂಟಿ ವೆಂಕಟ ಕಿರಣ್ ಅವರು ಸೇರಿದಂತೆ ಇನ್ನೂ ಹಲವಾರು ಉನ್ನತಾಧಿಕಾರಿಗಳ ಜತೆ ಸಭೆ ನಡೆಸಿದ ನಂತರ ಅವರು ಮಾಧ್ಯಮಗಳ ಜತೆ ಮಾತನಾಡಿದರು.

“ಅರಣ್ಯ ನಾಶಕ್ಕೆ ನಾನು ಸಹಿ ಹಾಕಿದ್ದಲ್ಲ. ರಾಜ್ಯದಲ್ಲಿ ಉಕ್ಕು ಉತ್ಪಾದನೆ ಆಗಬೇಕು ಹಾಗೂ ಹೆಚ್ಚೆಚ್ಚು ಉದ್ಯೋಗ ಸೃಷ್ಟಿಯಾಗಿ ನಮ್ಮ ಯುವಕರಿಗೆ ಉದ್ಯೋಗ ದೊರೆಯಬೇಕು. ಪ್ರಧಾನಿ ನರೇಂದ್ರ ಮೋದಿ ಅವರ ಆತ್ಮ‌ನಿರ್ಭರ್ ಭಾರತ ಆಶಯದಂತೆ ಜಿಡಿಪಿ ವೃದ್ಧಿಗೆ ಹೆಚ್ಚು ಕಾಣಿಕೆ ನೀಡುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ. ಅರಣ್ಯ ಉಳಿಸಲು ಕ್ರಮ ವಹಿಸಲಾಗಿದೆ” ಎಂದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಅರಣ್ಯ ನಾಶದ ಆತಂಕ ಬೇಡ

“ದೇವದಾರಿ ಅರಣ್ಯ ಪ್ರದೇಶದಲ್ಲಿ ಗಣಿಗಾರಿಕೆಗೆ ಅನುಮತಿ ನೀಡಲಾಗಿದೆ ಎಂದು ಪ್ರಚಾರ ಮಾಡಲಾಗುತ್ತಿದೆ. ಜನರಲ್ಲಿ ಸ್ವಲ್ಪ ಮಟ್ಟಿಗಿನ ಆತಂಕ‌ ಉಂಟಾಗುವ ರೀತಿಯಲ್ಲಿ ಪ್ರಚಾರವಾಗಿದೆ. 2019ರಲ್ಲಿ ರಾಜ್ಯ ಸರಕಾರವೇ ದೇವದಾರಿ ಗಣಿಗಾರಿಕೆ ಯೋಜನೆಗೆ 404 ಹೆಕ್ಟೇರ್ ಪ್ರದೇಶದಲ್ಲಿ ಗಣಿಗಾರಿಕೆ ನಡೆಸಲು ಅನುಮತಿ ಕೊಟ್ಟಿದೆ. ನಂತರ ಕೇಂದ್ರ ಸರಕಾರದ ಪರಿಸರ ಇಲಾಖೆ ಕೂಡ ಅನುಮತಿ ನೀಡಿದೆ. ಆದರೆ, ಕುಮಾರಸ್ವಾಮಿ ಅವರು ಗಣಿಗಾರಿಕೆಗೆ ಅನುಮತಿ ನೀಡುವ ಯೋಜನೆಗೆ ಸಹಿ ಹಾಕಿದ್ದಾರೆ. ದೇವದಾರಿ ಭಾಗದಲ್ಲಿ ಅರಣ್ಯ ಮತ್ತು ಜೀವರಾಶಿಗಳಿಗೆ ಹಾನಿ ಆಗುತ್ತದೆ. 99 ಸಾವಿರ ಮರಗಳಿಗೆ ಧಕ್ಕೆ ಆಗುತ್ತದೆ ಎಂದು ವರದಿಗಳು ಬಂದಿವೆ. ಆದರೆ, ಅರಣ್ಯ ನಾಶದ ಬಗ್ಗೆ ಆತಂಕ ಬೇಡ” ಎಂದರು.

“ಕುದುರೆಮುಖ ಕಂಪನಿ ಅದಿರು ತೆಗೆಯುವ ಕೆಲಸ ಪ್ರಾರಂಭ ಮಾಡುವ ಮುನ್ನವೇ ಸುಮಾರು 194 ಕೋಟಿ ರೂಪಾಯಿ ವೆಚ್ಚದಲ್ಲಿ 808 ಹೆಕ್ಟೇರ್ ಪ್ರದೇಶದಲ್ಲಿ ಪರ್ಯಾಯವಾಗಿ ಅರಣ್ಯ ಬೆಳೆಸಲಿದೆ. ಅದಕ್ಕೆ ಅರಣ್ಯ ಇಲಾಖೆಗೆ ಹಣ ಪಾವತಿಸಿದೆ. ಜೀವರಾಶಿಗೆ ತೊಂದರೆಯಾಗದ ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ. ಈ ವಿಷಯವನ್ನು ಆ ಭಾಗದ ಜನತೆ ಗಮನಿಸಬೇಕು” ಎಂದು ಕುಮಾರಸ್ವಾಮಿ ಮನವಿ ಮಾಡಿದರು.

ರಾಜ್ಯ ಕೈಗಾರಿಕೆ ಸಚಿವ ಎಂ ಬಿ ಪಾಟೀಲ್ ಅವರ ಹೇಳಿಕೆ‌ ಬಗ್ಗೆ ಪ್ರತಿಕ್ರಿಯಿಸಿ, “ದೇಶದಲ್ಲಿ ಸೆಮಿಕಂಡಕ್ಟರ್ ಕೈಗಾರಿಕೆ ದೊಡ್ಡ ಪ್ರಮಾಣದಲ್ಲಿ ಬೆಳೆಯಬೇಕಿದೆ. ತೈವಾನ್, ಅಮೆರಿಕದಲ್ಲಿ ಈ ಉದ್ಯಮ ದೊಡ್ಡಮಟ್ಟದಲ್ಲಿದೆ. ಅದಕ್ಕೆ ಮೋದಿಯವರು ಪ್ರೋತ್ಸಾಹ ನೀಡಲು ಒಂದು ಬೃಹತ್ ಯೋಜನೆ ಜಾರಿಗೆ ತಂದಿದ್ದಾರೆ. ಇದರಲ್ಲಿ ಯೂಟರ್ನ್ ಪ್ರಶ್ನೆ ಏನೂ ಇಲ್ಲ. ದೇಶದ ಪ್ರಗತಿ ಅಷ್ಟೇ ಮುಖ್ಯ” ಎಂದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಐದು ವರ್ಷ ಒಂದೇ ಕಡೆ ಕಾರ್ಯ ನಿರ್ವಹಿಸುತ್ತಿರುವ ಪೊಲೀಸ್‌ ಸಿಬ್ಬಂದಿ ವರ್ಗಾವಣೆಗೆ ಸೂಚನೆ

ಐದು ವರ್ಷಗಳ ಸೇವೆಯನ್ನು ಒಂದೇ ಸ್ಥಳದಲ್ಲಿ ಪೂರೈಸಿರುವ ಪಿ.ಸಿ. ಹೆಚ್.ಸಿ ಹಾಗೂ...

ಮುಂಗಾರು ಅಧಿವೇಶನ | ಸಾವಿರಕ್ಕೂ ಅಧಿಕ ಪರವಾನಗಿ ಹೊಂದಿರುವ ಸರ್ವೇಯರ್‌ ಹುದ್ದೆ ಭರ್ತಿ: ಸಚಿವ ಕೃಷ್ಣ ಬೈರೇಗೌಡ

ಸರ್ವೇ ಇಲಾಖೆಯಲ್ಲಿ ಹಲವಾರು ಸಮಸ್ಯೆಗಳಿದ್ದು, ಇದರಿಂದ ರೈತರು ಸಂಕಷ್ಟಕ್ಕೀಡಾಗಿರುವುದು ನಮ್ಮ ಗಮನದಲ್ಲಿದೆ....

ವಾಲ್ಮೀಕಿ ನಿಗಮ ಅಕ್ರಮ | ಹಣ ಲೂಟಿ ಮಾಡಲು ನಕಲಿ ಹುದ್ದೆ ಸೃಷ್ಟಿ!

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಿಂದ ಕೋಟ್ಯಂತರ ರೂ.ಗಳನ್ನು ಲೂಟಿ...

ಮುಂಗಾರು ಅಧಿವೇಶನ ಆರಂಭ, ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ ; ಸಿಎಂ ತಿರುಗೇಟು

ಮುಡಾ, ವಾಲ್ಮೀಕಿ ಅಭಿವೃದ್ಧಿ ನಿಮಗ ಹಗರಣ ಹಾಗೂ ಗ್ಯಾರಂಟಿ ಯೋಜನೆಗಳಿಗೆ ಎಸ್​ಸಿ...