ಸಮತೋಲಿತ ಅಣೆಕಟ್ಟು ನಿರ್ಮಾಣಕ್ಕೆ ಡಿಪಿಆರ್ ಸಿದ್ಧ; ಆಂಧ್ರ, ತೆಲಂಗಾಣ ಜತೆ ಚ‌ರ್ಚೆ: ಡಿ ಕೆ ಶಿವಕುಮಾರ್

Date:

Advertisements

ತುಂಗಭದ್ರ ಜಲಾಶಯದಲ್ಲಿ ಹೂಳು ತುಂಬಿ ವ್ಯರ್ಥವಾಗುತ್ತಿರುವ 27 ಟಿಎಂಸಿ ನೀರು ಸದ್ಬಳಕೆಗೆ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಲಿದೆ. ಇದಕ್ಕಾಗಿ ನವಲಿ ಸಮಾನಾಂತರ ಜಲಾಶಯ ನಿರ್ಮಾಣ ಹಾಗೂ ಪಂಪ್ ಮಾಡಿ ನೀರು ಬಳಸಿಕೊಳ್ಳುವ ಪರ್ಯಾಯ ಯೋಜನೆ ಬಗ್ಗೆ ಸರ್ಕಾರ ಆಲೋಚಿಸುತ್ತಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ವಿಧಾನ ಪರಿಷತ್ತಿನಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ಸದಸ್ಯರಾದ ಬಸನಗೌಡ ಬಾದರ್ಲಿ ಅವರು ತುಂಗಭದ್ರಾ ಅಣೆಕಟ್ಟಿನಲ್ಲಿ ಹೂಳು ತುಂಬಿದೆ ಆದ ಕಾರಣಕ್ಕೆ ನವಲಿ ಜಲಾಶಯ ನಿರ್ಮಾಣಕ್ಕೆ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಗುರುವಾರ ಪ್ರಶ್ನೆ ಕೇಳಿದರು.

ಇದಕ್ಕೆ ಉತ್ತರ ನೀಡಿದ ಜಲಸಂಪನ್ಮೂಲ ಸಚಿವರೂ ಆದ ಡಿ.ಕೆ. ಶಿವಕುಮಾರ್, “ನಮ್ಮ ಅಧಿಕಾರಿಗಳು ಸಮತೋಲಿತ ಅಣೆಕಟ್ಟು ನಿರ್ಮಾಣ ಮಾಡದೆ ಪರ್ಯಾಯವಾದ ಆಲೋಚನೆ ತಿಳಿಸಿದ್ದಾರೆ. ನಮ್ಮ ಪಾಲಿನ ನೀರನ್ನು ಪಂಪ್ ಮಾಡಿಕೊಂಡು ಬಳಸಿಕೊಳ್ಳುವ ಬಗ್ಗೆ ಚಿಂತನೆ ಮಾಡಲಾಗುತ್ತಿದೆ. ಇದರಿಂದ ಮೂರು ರಾಜ್ಯಗಳಿಗೆ ಉಪಯೋಗವಾಗಲಿದೆ. ನಮಗೆ ಶೇ.65 ಅವರಿಗೆ ಶೇ.35 ರಷ್ಟು ಉಪಯೋಗವಾಗಲಿದೆ. ಸಮತೋಲಿತ ಅಣೆಕಟ್ಟು ನಿರ್ಮಾಣ ಹಾಗೂ ಹೊಸ ಪ್ರಸ್ತಾವನೆಗಳನ್ನು ಕೇಂದ್ರಕ್ಕೆ ಸಲ್ಲಿಸುತ್ತೇವೆ. ನಾವು ನಮ್ಮ ಪಾಲಿನ ನೀರು ಉಳಿಸಿಕೊಳ್ಳಲು ಬದ್ಧವಾಗಿದ್ದೇವೆ” ಎಂದರು.

Advertisements

ಮಾ.18 ಕ್ಕೆ ಪೆನ್ನಾರ್ ಕುರಿತು ಚರ್ಚೆ

“ಇದೇ 18 ರಂದು ಕೇಂದ್ರ ಜಲಶಕ್ತಿ ಸಚಿವರು ಪೆನ್ನಾರ್ ನದಿ ವಿಚಾರವಾಗಿ ನಮ್ಮನ್ನು ಹಾಗೂ ತಮಿಳುನಾಡಿನವರನ್ನು ಚರ್ಚೆಗೆ ಕರೆದಿದ್ದಾರೆ. ಅಂದು ನವಲಿ ಅಣೆಕಟ್ಟು ನಿರ್ಮಾಣ ಹಾಗೂ ಪರ್ಯಾಯ ಪರಿಹಾರಗಳ ಬಗ್ಗೆ ಕೇಂದ್ರ ಸಚಿವರ ಬಳಿ ಚರ್ಚೆ ಮಾಡಲಾಗುವುದು. ಈ ವಿಚಾರವಾಗಿ ಆಂದ್ರ ಮತ್ತು ತೆಲಂಗಾಣ ಮುಖ್ಯಮಂತ್ರಿಗಳ ಬಳಿ ಮಾತನಾಡಿ, ಪತ್ರ ಕೂಡ ಬರೆದಿದ್ದೇನೆ. ರಾಜಸ್ಥಾನದ ಉದಯಪುರಲ್ಲಿ ನಡೆದ ಸಮಾವೇಶದಲ್ಲಿ ಆಂಧ್ರಪ್ರದೇಶ ಹಾಗೂ ತೆಲಂಗಾಣದ ಜಲಸಂಪನ್ಮೂಲ ಸಚಿವರ ಜತೆ ಚರ್ಚೆ ಮಾಡಿದ್ದು, ಆಂಧ್ರ ಪ್ರದೇಶ ಮುಖ್ಯಮಂತ್ರಿಗಳಿಗೆ ದೂರವಾಣಿ ಕರೆ ಮಾಡಿ ಈ ಯೋಜನೆ ಬಗ್ಗೆ ಪ್ರಾತ್ಯಕ್ಷಿಕೆ ತೋರಿಸಿ ಚರ್ಚೆ ಮಾಡಲು ಸಮಯ ನೀಡಿ ಎಂದು ಕೇಳಿದ್ದೆ. ಎರಡು ರಾಜ್ಯಗಳ ಜತೆ ಚರ್ಚೆ ಮಾಡಿದ ನಂತರ ತುಂಗಭದ್ರಾ ಮಂಡಳಿ ಮುಂದೆ ಈ ಯೋಜನೆಗಳ ವರದಿ ಸಲ್ಲಿಸಲಾಗುವುದು ಎಂದು ಹೇಳಿದ್ದೆ. ಆಂಧ್ರಪ್ರದೇಶ ಸಿಎಂ ಅವರು ಈ ವಿಚಾರವಾಗಿ ಚರ್ಚೆ ಮಾಡುವುದಾಗಿ ತಿಳಿಸಿದ್ದಾರೆ” ಎಂದು ಹೇಳಿದರು.

“ತುಂಗಾಭದ್ರ ಅಣೆಕಟ್ಟಿನಲ್ಲಿ ಹೂಳು ತುಂಬಿರುವ ಕಾರಣಕ್ಕೆ ಸುಮಾರು 25 ರಿಂದ 30 ಟಿಎಂಸಿ ನೀರು ನಮಗೆ ಸಿಗದೆ ವ್ಯರ್ಥವಾಗುತ್ತಿದೆ. ಸಮತೋಲಿತ ಅಣೆಕಟ್ಟು ನಿರ್ಮಾಣಕ್ಕೆ ಸುಮಾರು 15 ಸಾವಿರ ಎಕರೆ ಭೂಮಿ ಬೇಕಾಗಿದೆ. ಈ ಬಗ್ಗೆ ಈಗಾಗಲೇ ತಾಂತ್ರಿಕ ವರದಿಗಳನ್ನು ತಯಾರಿಸಲಾಗಿದೆ. ಈ ಬಗ್ಗೆ ಡಿಪಿಆರ್ ಕೂಡ ತಯಾರಾಗಿದೆ. ಇದನ್ನು ತುಂಗಭದ್ರಾ ಬೋರ್ಡ್ ಹಾಗೂ ಆಂಧ್ರ, ತೆಲಂಗಾಣ ರಾಜ್ಯಗಳಿಗೂ ಕಳಿಸಲಾಗಿದೆ” ಎಂದು ಹೇಳಿದರು.

“ಆಂಧ್ರ ಪ್ರದೇಶ ಮುಖ್ಯಮಂತ್ರಿಗಳು ಸಮಯಾವಕಾಶ ನೀಡಿದ ತಕ್ಷಣ ನಾನೇ ಖುದ್ದಾಗಿ ಹೋಗಿ ಮಾತನಾಡುವೆ. ಸಚಿವ ಬೋಸ್ ರಾಜು, ಆ ಭಾಗದ ಇತರೆ ಸಚಿವರು ಹಾಗೂ ಶಾಸಕರು ಈ ಕೆಲಸ ಆಗಲೇಬೇಕು ಎಂದು ಬೆನ್ನು ಹತ್ತಿದ್ದಾರೆ. ಈಗಾಗಲೇ ನಾನು, ಬೋಸರಾಜು ಹಾಗೂ ಸಚಿವ ಸೋಮಣ್ಣ ಅವರು ಕೇಂದ್ರ ಜಲಶಕ್ತಿ ಸಚಿವರನ್ನು ಭೇಟಿ ಮಾಡಿ ಚರ್ಚೆ ಮಾಡಿದ್ದೇವೆ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

Download Eedina App Android / iOS

X