ತಮಿಳುನಾಡು SIR: 97 ಲಕ್ಷಕ್ಕೂ ಹೆಚ್ಚು ಮತದಾರರ ಹೆಸರು ಡಿಲೀಟ್, ಚೆನ್ನೈನಲ್ಲೇ 14.25 ಲಕ್ಷ ಮತದಾರರನ್ನು ಕೈಬಿಟ್ಟ ಆಯೋಗ

Date:

ತಮಿಳುನಾಡು ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆಯ(ಎಸ್‌ಐಆರ್) ಕರಡು ಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು, 97 ಲಕ್ಷಕ್ಕೂ ಹೆಚ್ಚು ಮತದಾರರ ಹೆಸರನ್ನು ಡಿಲೀಟ್ ಮಾಡಲಾಗಿದೆ. ಚೆನ್ನೈನಲ್ಲೇ 14.25 ಲಕ್ಷ ಮತದಾರರನ್ನು ಚುನಾವಣಾ ಆಯೋಗ ಕೈಬಿಟ್ಟಿದೆ. ವಲಸೆ, ಸಾವು, ನಕಲಿ ಮೊದಲಾದ ಕಾರಣ ನೀಡಿ 97 ಲಕ್ಷಕ್ಕೂ ಹೆಚ್ಚು ಮತದಾರರ ಹೆಸರುಗಳನ್ನು ಅಳಿಸಲಾಗಿದೆ.

- Advertisement -

ತಮಿಳುನಾಡಿನ ಮುಖ್ಯ ಚುನಾವಣಾ ಅಧಿಕಾರಿ ಒದಗಿಸಿದ ಮಾಹಿತಿಯ ಪ್ರಕಾರ, ವಲಸೆ ಬಂದ ಕಾರಣ 66.4 ಲಕ್ಷ ಜನರನ್ನು ಕರಡು ಪಟ್ಟಿಯಿಂದ ತೆಗೆದುಹಾಕಲಾಗಿದೆ, 26.9 ಲಕ್ಷ ಜನರು ಮೃತಪಟ್ಟಿದ್ದಾರೆ ಮತ್ತು 3.98 ಲಕ್ಷ ಮತದಾರರ ಹೆಸರು ಒಂದಕ್ಕಿಂತ ಅಧಿಕ ಸ್ಥಳಗಳಲ್ಲಿ ದಾಖಲಾಗಿರುವುದು ಕಂಡುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ ಕೋಟ್ಯಂತರ ಭಾರತೀಯರಿಗೆ ವಿರಾಟ್ ಕೊಹ್ಲಿ ಕೇವಲ ಒಬ್ಬ ಆಟಗಾರನಲ್ಲ; ಬದಲಾಗಿ ಅದ್ಭುತ ಕಾವ್ಯದಂತಿರುವ ಒಂದು ಸುವರ್ಣ ಶಕೆ. ನವೆಂಬರ್ 5,...

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ...

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...

ಇದನ್ನು ಓದಿದ್ದೀರಾ? 12 ರಾಜ್ಯಗಳಲ್ಲಿ ನಾಳೆಯಿಂದ ಎಸ್‌ಐಆರ್ ಎರಡನೇ ಹಂತ ಆರಂಭ

5.43 ಕೋಟಿ ಮತದಾರರಿಂದ ಮಾಹಿತಿಯನ್ನು ಸಂಗ್ರಹಿಸಲಾಗಿದೆ. ಇದು ರಾಜ್ಯದ ಒಟ್ಟು ಮತದಾರರಲ್ಲಿ ಶೇಕಡ 84.81ರಷ್ಟಿದೆ. 2025ರ ಡಿಸೆಂಬರ್ 19ರ ಹೊತ್ತಿಗೆ 6,41,14,587 ಮತದಾರರಲ್ಲಿ, 5,43,76,755 ಮತದಾರರು ತಮ್ಮ ಮಾಹಿತಿಯನ್ನು ನೀಡಿದ್ದು, ಎಸ್‌ಐಆರ್‌ನ ಮೊದಲ ಹಂತದಲ್ಲಿ ಅಗಾಧ ಪ್ರಮಾಣದಲ್ಲಿ ಜನರು ಭಾಗಿಯಾಗಿದ್ದಾರೆ ಎಂದು ಚುನಾವಣಾ ಆಯೋಗ ಹೇಳಿದೆ.

ಇನ್ನು ತಮಿಳುನಾಡನ್ನು ಹೊರತುಪಡಿಸಿ, ಗುಜರಾತ್‌ನ ಕರಡು ಮತದಾರರ ಪಟ್ಟಿಯನ್ನು ಶುಕ್ರವಾರ ಬಿಡುಗಡೆ ಮಾಡಲಾಗಿದ್ದು, 73.7 ಲಕ್ಷ ಮತದಾರರ ಹೆಸರು ಅಳಿಸಲಾಗಿದೆ. ಗುಜರಾತ್‌ನ ಮುಖ್ಯ ಚುನಾವಣಾ ಅಧಿಕಾರಿ ಒದಗಿಸಿದ ಮಾಹಿತಿಯ ಪ್ರಕಾರ, 18.07 ಲಕ್ಷ ಮತದಾರರು ಮೃತಪಟ್ಟಿದ್ದಾರೆ. 51.86 ಲಕ್ಷ ಮತದಾರರನ್ನು ಸ್ಥಳಾಂತರರಾಗಿದ್ದಾರೆ ಮತ್ತು 3.81 ಲಕ್ಷ ಮತದಾರರನ್ನು ಒಂದಕ್ಕಿಂತ ಅಧಿಕ ಸ್ಥಳದಲ್ಲಿ ನೋಂದಾಯಿಸಲಾಗಿದೆ.

ಇನ್ನು ತಮಿಳುನಾಡಿನಲ್ಲಿ ಡಿಎಂಕೆ ಆಡಳಿತವು ಎಸ್‌ಐಆರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ. ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರ ತೀವ್ರ ವಿರೋಧದ ನಡುವೆಯೂ ಎಸ್‌ಐಆರ್ ನಡೆಯುತ್ತಿದ್ದು, ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದೆ. “ಈ ಪ್ರಜಾಪ್ರಭುತ್ವ ವಿರೋಧಿ ನಡೆಯನ್ನು ತಡೆಯಲು, ನಾವು ಸರ್ವಪಕ್ಷ ಸಭೆ ಕರೆದು SIR ಅನ್ನು ಖಂಡಿಸುವ ನಿರ್ಣಯವನ್ನು ಅಂಗೀಕರಿಸಿದ್ದೇವೆ. ಚುನಾವಣೆಗೆ ಕೆಲವೇ ತಿಂಗಳುಗಳ ಮೊದಲು ಮತದಾರರ ಪಟ್ಟಿಯ ಸಂಪೂರ್ಣ ಪರಿಷ್ಕರಣೆಯನ್ನು ಕೈಗೊಳ್ಳುವ ಚುನಾವಣಾ ಆಯೋಗದ ನಿರ್ಧಾರವು ಕಾನೂನುಬದ್ಧ ಮತದಾರರನ್ನು ಅಳಿಸಲು ಯೋಜಿತ ತಂತ್ರದ ಭಾಗವಾಗಿದೆ” ಎಂದು ಸ್ಟಾಲಿನ್ ಆರೋಪಿಸಿದ್ದಾರೆ.

“ಲಕ್ಷಾಂತರ ನಿಜವಾದ ಮತದಾರರನ್ನು ಪಟ್ಟಿಯಿಂದ ತೆಗೆದುಹಾಕಲಾಗಿದೆ. ಬಿಹಾರದಲ್ಲಿ ಇದೇ ತಂತ್ರವನ್ನು ಮೊದಲು ಬಳಸಲಾಗಿತ್ತು. ಬಿಹಾರದಲ್ಲಿಯೂ ಇದೇ ತಂತ್ರವನ್ನು ಬಳಸಲಾಗಿತ್ತು” ಎಂದು ಹೇಳಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವರ್ಷಗಳಿಂದ ನೀರಿಲ್ಲದೆ ಸೊರಗಿದ ಗ್ರಾಮ; ಹತಾಶೆಯಿಂದ ಊರನ್ನೇ ಬಿಕರಿಗಿಟ್ಟ ನಿವಾಸಿಗಳು

ಒಂದೆಡೆ ನೀರಾವರಿ ಯೋಜನೆ, ಇನ್ನೊಂದೆಡೆ ನೀರಿಗಾಗಿ ಪರದಾಡುವ ರೈತರು. ಯೋಜನೆ ಆರಂಭವಾಗಿ...

ಅಮೆರಿಕದಲ್ಲಿ ಡೀಸೆಲ್ ರಫ್ತು ನಿಷೇಧದ ಚರ್ಚೆ; ಭಾರತದ ಮೇಲಾಗುವ ಪರಿಣಾಮವೇನು?

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ರಷ್ಯಾ-ಉಕ್ರೇನ್ ನಡುವಿನ ಸಂಘರ್ಷದಿಂದಾಗಿ ಜಾಗತಿಕ...

4 ವರ್ಷದಲ್ಲಿ BJP, NPFಗೆ ಹಾರಿದ 111 ಜನಪ್ರತಿನಿಧಿಗಳು; ಎಡಿಆರ್‌ ವರದಿ

2022ರಿಂದ 2026ರ ಅವಧಿಯಲ್ಲಿ ಚುನಾವಣೆ ಗೆದ್ದ ಬಳಿಕ ಒಟ್ಟು 111 ಹಾಲಿ...

ಉದ್ಯೋಗ ಮಾಹಿತಿ | ರೈಲ್ವೆಯಲ್ಲಿ 590 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಭಾರತೀಯ ರೈಲ್ವೆ ಇಲಾಖೆಯ ವಿವಿಧ ವಲಯಗಳಲ್ಲಿ ಖಾಲಿ ಇರುವ ಪ್ಯಾರಾಮೆಡಿಕಲ್ ವಿಭಾಗದ...