ರಾಜ್ಯದಲ್ಲಿ ಬರ; ಆಕಾಶದಲ್ಲಿ ತೇಲಾಡುತ್ತಿರುವ ದೊರೆ: ವಿಜಯೇಂದ್ರ ಲೇವಡಿ

Date:

Advertisements

ಮುಖ್ಯಮಂತ್ರಿ ಮತ್ತವರ ಮಂತ್ರಿಮಂಡಲದ ಸದಸ್ಯರ ಆಡಂಬರ, ವೈಭವದ ಪ್ರದರ್ಶನಗಳನ್ನು ನೋಡಿದರೆ “ರೋಮ್ ದೊರೆ ನೀರೋ” ಉಲ್ಲೇಖಿಸುವ ಬದಲು “ರಾಜ್ಯ ಬರದಿಂದ ತತ್ತರಿಸುತ್ತಿದ್ದರೆ ದೊರೆ ಆಕಾಶದಲ್ಲಿ ಓಲಾಡುತ್ತ ತೇಲುತ್ತಿದ್ದಾರೆ…” ಎಂದು ವರ್ಣಿಸಬಹುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಲೇವಡಿ ಮಾಡಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆ ಸಚಿವ ಜಮೀರ್‌ ಅಹಮದ್‌ ಖಾನ್‌ ಅವರ ವಿಮಾನದಲ್ಲಿ ಪ್ರಯಾಣಿಸಿರುವ ವಿಡಿಯೋ ಹಂಚಿಕೊಂಡು ಎಕ್ಸ್‌ ನಲ್ಲಿ ಪ್ರತಿಕ್ರಿಯಿಸಿರುವ ಅವರು, “ಯಾರದ್ದೋ ದುಡ್ಡು ಎಲ್ಲಮ್ಮನ ಜಾತ್ರೆ, ಜನರ ದುಡ್ಡು ಆಕಾಶದಲ್ಲಿ ಜಾತ್ರೆ” ಮಾಡುತ್ತಿದ್ದಾರೆ ಎಂದು ಕುಟುಕಿದ್ದಾರೆ.

“ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ರಾಜ್ಯ ಬರಗಾಲದಿಂದ ಬೇಯುತ್ತಿದೆ. ರೈತರು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ಸಾಮಾನ್ಯರ ಬದುಕು ಅಸಹನೀಯ ಪರಿಸ್ಥಿತಿ ತಲುಪಿದೆ, ಇಂತಹ ಗಂಭೀರ ಪರಿಸ್ಥಿತಿಯಲ್ಲೂ ಶ್ರೀಮಂತಿಕೆಯ ದರ್ಪ ತೋರುವ, ಮೋಜು, ಮಸ್ತಿಯೇ ತನ್ನ ಜೀವನ ಶೈಲಿ ಎಂದು ಪ್ರದರ್ಶಿಸಿಕೊಳ್ಳುತ್ತಿರುವ ಸಚಿವ ಜಮೀರ್ ಅಹಮದ್ ಖಾನ್ ಅವರ ಜೊತೆ ಜನರ ತೆರಿಗೆ ಹಣ ವ್ಯಯಿಸಿ ಐಶಾರಾಮಿ ಜೆಟ್ ವಿಮಾನದಲ್ಲಿ ಪ್ರಯಾಣಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮೋಜಿನ ಭಾಗವಾಗಿರುವುದು ಈ ರಾಜ್ಯದ ದೌರ್ಭಾಗ್ಯವಲ್ಲದೇ ಮತ್ತಿನ್ನೇನು ಅಲ್ಲ” ಎಂದು ಟೀಕಿಸಿದ್ದಾರೆ.

Advertisements

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. ಬಿಜೆಪಿ ರಾಜ್ಯಾಧ್ಯಕ್ಷರೇ, ನಿಮ್ಮಿಂದಲೇ ಪ್ರಾರಂಭ ಮಾಡಿ,, ನೀವು ಪ್ರವಾಸಕ್ಕೆ ಯಾವ ಕಾರು ಉಪಯೋಗಿಸುವಿರಿ,, ಲಕ್ಸುರಿ ಕಾರು ತಾನೇ,,ಸರಕಾರಿ ಸಾರಿಗೆ ಬಸ್ ನಲ್ಲಂತೂ ಅಲ್ಲವೇ ಅಲ್ಲ,,,ಕಳೆದ ವರ್ಷ ಕರ್ನಾಟಕದಲ್ಲಿನ ಪ್ರವಾಹ ಪೀಡಿತ ಪ್ರದೇಶಗಳ ವೀಕ್ಷಣೆ ಮಾಡಲು ನಿಮ್ಮ ಕೇಂದ್ರ ನಾಯಕರು ಬಂದಿದ್ದರು ಭಾರತೀಯ ರೈಲಿನಲ್ಲಿ ಬಂದಿದ್ರಾ,,,ಕೇವಲ ಪಕ್ಷ ರಾಜಕಾರಣಕ್ಕೆ ಮಾತಾಡಲು ಮಾತಾಡಬೇಡಿ,, ಇನ್ನೊಬ್ಬರ ಮೇಲೆ ಕಾಮೆಂಟ್ ಮಾಡುವಾಗ ನಾವೇನು ಅನ್ನುವುದರ ಮೊದಲ ತಿಳುವಳಿಕೆ ನಮಗಿರಬೇಕು

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಜೆಪಿ-ಆರ್‌ಎಸ್‌ಎಸ್‌ ಜತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ನಾನು ಅಪ್ಪಟ ಕಾಂಗ್ರೆಸ್ಸಿಗ. ಹುಟ್ಟಿನಿಂದ ಕಾಂಗ್ರೆಸ್ಸಿಗ. ಜೀವ ಇರುವ ತನಕವೂ ಕಾಂಗ್ರೆಸ್ಸಿಗನಾಗಿಯೇ...

ಗೇಮಿಂಗ್​ ಆ್ಯಪ್​ಗಳಿಗೆ ಅಕ್ರಮ ಹಣ ವರ್ಗಾವಣೆ ಆರೋಪ: ಚಿತ್ರದುರ್ಗ ಶಾಸಕ ವೀರೇಂದ್ರ ಮನೆ ಮೇಲೆ ಇಡಿ ದಾಳಿ

ಶುಕ್ರವಾರ(ಆಗಸ್ಟ್ 22) ಬೆಳ್ಳಂಬೆಳಗ್ಗೆ ಚಿತ್ರದುರ್ಗದ ಶಾಸಕ ಕೆಸಿ ವೀರೇಂದ್ರ ಪಪ್ಪಿ ಅವರ...

ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ: ಚಲನಚಿತ್ರ ನಿರ್ದೇಶಕಿ ಸುಮನ್ ಕಿತ್ತೂರು

ಪರಿಶಿಷ್ಟ ಜಾತಿ ಒಳಮೀಸಲಾತಿ ವಿಚಾರದಲ್ಲಿ ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ...

Download Eedina App Android / iOS

X