ಬರ ನಿರ್ವಹಣೆ | ಜಿಲ್ಲಾಧಿಕಾರಿ, ಸಿಇಒಗಳೊಂದಿಗೆ ವಿಡಿಯೋ ಸಂವಾದ ನಡೆಸಿದ ಸಿದ್ದರಾಮಯ್ಯ

Date:

Advertisements

ರಾಜ್ಯದಲ್ಲಿ ಮುಂದಿನ ಮೂರು ತಿಂಗಳಲ್ಲಿ ಎದುರಾಗಬಹುದಾದ ತೀವ್ರ ಬರಗಾಲವನ್ನು ನಿಭಾಯಿಸಲು ಸರ್ಕಾರ ಸಂಪೂರ್ಣ ಸಿದ್ದತೆ ಮಾಡಿಕೊಂಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಜಿಲ್ಲಾಧಿಕಾರಿ ಹಾಗೂ ಸಿಇಒಗಳೊಂದಿಗೆ ಮಂಗಳವಾರ ವೀಡಿಯೊ ಸಂವಾದ ನಡೆಸಿದ ನಂತರ ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

“ಅನಿವಾರ್ಯವಾದಾಗ ಮಾತ್ರ ಹೊಸ ಕೊಳವೆಬಾವಿಗಳನ್ನು ಕೊರೆಸಲು ಜಿಲ್ಲಾಧಿಕಾರಿಗಳಿಗೆ ಅಧಿಕಾರ ನೀಡಿದ್ದು, ಹೆಚ್ಚುವರಿಯಾಗಿ 140 ಕೋಟಿ ರೂ.ಗಳ ಜೊತೆಗೆ 70 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗುವುದು. ಇದು ಸರ್ಕಾರದಿಂದ ನೀಡುವ ಅನುದಾನವಾಗಿದೆ” ಎಂದರು.

Advertisements

“ಕರ್ನಾಟಕದಲ್ಲಿ ಈ ವರ್ಷ ಬರಗಾಲವಿದ್ದು, 223 ತಾಲ್ಲೂಕುಗಳು ಬರಗಾಲ ಪೀಡಿತವಾಗಿದ್ದು, 194 ತೀವ್ರ ಬರಗಾಲ ಪೀಡಿತವಾಗಿವೆ. ಕುಡಿಯುವ ನೀರಿಗೆ ಯಾವುದೇ ಕಾರಣಕ್ಕೂ ತೊಂದರೆಯಾಗಬಾರದು ಎಂದು ಮುಖ್ಯ ಕಾರ್ಯದರ್ಶಿ, ಜಿಲ್ಲಾಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಲಾಗಿದೆ” ಎಂದು ಹೇಳಿದರು.

“ಎಲ್ಲ ಜಿಲ್ಲಾಧಿಕಾರಿಗಳ ಪಿಡಿ ಖಾತೆಯಲ್ಲಿ 854 ಕೋಟಿ ರೂ. ಲಭ್ಯವಿದೆ. ಪ್ರತಿ ಜಿಲ್ಲೆಯಲ್ಲಿ ಟಾಸ್ಕ್ ಫೋರ್ಸ್ ಸಭೆ ಕರೆದು ತಾಲ್ಲೂಕಿನ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಸೂಚಿಸಿದೆ. ಈವರೆಗೆ 646 ಸಭೆಗಳನ್ನು ಇಲ್ಲಿಯವರೆಗೆ ನಡೆಸಲಾಗಿದೆ. ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ 307 ಸಭೆಗಳಾಗಿವೆ. ಕುಡಿಯುವ ನೀರಿಗೆ ತೊಂದರೆ ಯಾಗದಂತೆ ಕ್ರಮ ವಹಿಸಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕೊಬ್ಬರಿ ಖರೀದಿ, ಅಧಿಕಾರಿಗಳ ಅಸಡ್ಡೆ, ಅನ್ನದಾತ ಅನಾಥ

“ಸಮಸ್ಯೆಯಿರುವ ಗ್ರಾಮ, ಜಿಲ್ಲೆಗಳಲ್ಲಿ ಅದಕ್ಕೆ ಮುಂಚಿತವಾಗಿ ಯೋಜನೆ ತಯಾರಿಸಬೇಕು. ಸದ್ಯ 98 ತಾಲ್ಲೂಕುಗಳ 412 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ. 175 ಗ್ರಾಮಗಳಿಗೆ 204 ಟ್ಯಾಂಕರ್ ಗಳಿಂದ 596 ಖಾಸಗಿ ಕೊಳವೆಬಾವಿಗಳ ಮೂಲಕ ನೀರು ಸರಬರಾಜು ಆಗುತ್ತಿದೆ” ಎಂದು ವಿವರಿಸಿದರು.

“120 ಬಿಬಿಎಂಪಿ ಹಾಗೂ ಜಲಮಂಡಲಿಯಲ್ಲಿ 232 ಟ್ಯಾಂಕರ್ ಗಳಲ್ಲಿ ನೀರು ಸರಬರಾಜು ಆಗುತ್ತಿದೆ. 96 ವಾರ್ಡುಗಳಲ್ಲಿ ಟ್ಯಾಂಕರ್ ಮೂಲಕ ನೀರು ಸರಬರಾಜು ಆಗುತ್ತಿದೆ. ಕೆಲವೆಡೆ ಸರ್ಕಾರದ ಕೊಳವೆಬಾವಿಗಳನ್ನು ಆಳ ಮಾಡುವುದು, ಫ್ಲ್ಯಾಶಿಂಗ್ ಮಾಡುವುದು, ಖಾಸಗಿ ಕೊಳವೆಬಾವಿಗಳನ್ನು ಬಾಡಿಗೆಗೆ ಪಡೆಯುವುದು, ಟ್ಯಾಂಕರ್ ಮೂಲಕ ನೀರು ಸರಬರಾಜಿಗೆ ಕ್ರಮ ವಹಿಸಿದೆ” ಎಂದರು.

ಪರಿಹಾರ

“ಇಂದಿನವರೆಗೆ 33.25 ಲಕ್ಷ ರೈತರಿಗೆ 631 ಕೋಟಿ ರೂ.ಗಳ ತಾತ್ಕಾಲಿಕ ಪರಿಹಾರವನ್ನು ನೀಡಲಾಗಿದೆ. ಸರ್ಕಾರ 600 ಕೋಟಿ ರೂ.ಗಳ ಬೆಳೆ ವಿಮೆ ಪರಿಹಾರ ಒದಗಿಸಲಾಗಿದೆ. ಇನ್ನೂ 800 ಕೋಟಿ ರೂ.ಗಳನ್ನು ಪಾವತಿಯಾಗುವ ನಿರೀಕ್ಷೆ ಇದೆ. ಮೇವಿಗೆ ಈವರೆಗೆ ತೊಂದರೆ ಇಲ್ಲ. ಆದರೂ ಮುಂಜಾಗ್ರತ ಕ್ರಮವಾಗಿ ಪಶುಸಂಗೋಪನೆ ಇಲಾಖೆಗೆ 40 ಕೋಟಿ ರೂ.ಗಳನ್ನು ಮೇವು ಬೆಳೆಯಲು ಒದಗಿಸಲಾಗಿದೆ” ಎಂದು ಮಾಹಿತಿ ನೀಡಿದರು.

“ಅಧಿಕಾರಿಗಳು ವಾಚಕರ ವಾಣಿ, ಸಾಮಾಜಿಕ ಜಾಲತಾಣಗಳಲ್ಲಿ ವರದಿಯನ್ನು ಕಟ್ಟುನಿಟ್ಟಾಗಿ ಗಮನಿಸಿ ಪರಿಹಾರ ನೀಡಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ. ಸಹಾಯವಾಣಿ ಹಾಗೂ ಕಂಟ್ರೋಲ್ ರೂಮ್ ನ್ನು ಸ್ಥಾಪಿಸಬೇಕು ಎಂದು ಸೂಚಿಸಲಾಗಿದೆ. ಹಣಕ್ಕೆ ಯಾವುದೇ ತೊಂದರೆ ಇಲ್ಲದಂತೆ ನೋಡಿಕೊಳ್ಳಲಾಗಿದೆ” ಎಂದು ಸಿದ್ದರಾಮಯ್ಯ ಹೇಳಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

Download Eedina App Android / iOS

X