ಬರ ಪರಿಹಾರ | ಮನಮೋಹನ್ ಸಿಂಗ್ ಸರ್ಕಾರ ಎಷ್ಟು ಪರಿಹಾರ ನೀಡಿದೆ ಎಂದು ಲೆಕ್ಕ ಕೊಡಿ: ಆರ್. ಅಶೋಕ್

Date:

“ಬರಗಾಲದಿಂದ ಬಳಲಿದ ರಾಜ್ಯದ ಜನತೆಗೆ 3,454 ಕೋಟಿ ರೂ. ಪರಿಹಾರವನ್ನು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ನೀಡಿದ್ದು, ಇದರಲ್ಲಿ ಕಾಂಗ್ರೆಸ್ ಸರ್ಕಾರದ ಯಾವುದೇ ಪಾತ್ರವಿಲ್ಲ. ಈಗ ರಾಜ್ಯ ಸರ್ಕಾರ ಹಿಂದಿನ ಬಿಜೆಪಿ ಸರ್ಕಾರ ನೀಡಿದಂತೆಯೇ ಡಬಲ್ ಪರಿಹಾರ ನೀಡಲಿ” ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್. ಅಶೋಕ್ ತಿಳಿಸಿದ್ದಾರೆ.

- Advertisement -

ಮಲ್ಲೇಶ್ವರಂನ ಬಿಜೆಪಿ ‌ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಮನಮೋಹನ್ ಸಿಂಗ್ ಸರ್ಕಾರ ಎಷ್ಟು ಪರಿಹಾರ ನೀಡಿದೆ ಎಂದು ಕಾಂಗ್ರೆಸ್ ಲೆಕ್ಕ ಕೊಡಲಿ” ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

“ಖಜಾನೆ ಖಾಲಿಯಾಗಿರುವುದರಿಂದ ಸಿಎಂ ಸಿದ್ದರಾಮಯ್ಯ ಸರ್ಕಾರದ ಬಳಿ ಹಣವಿಲ್ಲ ಎಂಬುದು ಜಗಜ್ಜಾಹೀರಾಗಿದೆ. ಬರಗಾಲದ ಪರಿಹಾರಕ್ಕಾಗಿ ಸರಿಯಾದ ಮಾಹಿತಿ ನೀಡಲು ಕೂಡ ಸರ್ಕಾರ ವಿಳಂಬ ಮಾಡಿತ್ತು. ಕೋರ್ಟ್ ಆದೇಶವಾಗಿದ್ದರೆ ಕರ್ನಾಟಕಕ್ಕೆ ಮಾತ್ರ ಪರಿಹಾರ ಬರಬೇಕಿತ್ತು. ಆದರೆ ಕೇಂದ್ರ ಸರ್ಕಾರವೇ ಕ್ರಮ ವಹಿಸಿ ಪರಿಹಾರ ನೀಡಿದೆ‌‌. ಇದರಲ್ಲಿ ಕಾಂಗ್ರೆಸ್‌ನ ಶ್ರಮ ಏನೂ ಇಲ್ಲ. ಚುನಾವಣಾ ಆಯೋಗ ಅನುಮತಿ ನೀಡಿರುವುದರಿಂದ ಮಾತ್ರ ಹಣ ಬಿಡುಗಡೆಯಾಗಿದೆ” ಎಂದರು.

“ಕಾಂಗ್ರೆಸ್ ಸರ್ಕಾರ ಬರಗಾಲದ ಪರಿಹಾರದ ಹಣವನ್ನು ಲೂಟಿ ಮಾಡಬಾರದು. ಇದರಲ್ಲೂ ಕೈ ಚಳಕ ಮಾಡಿ ದುಡ್ಡು ಹೊಡೆಯದಂತೆ ನಾವು ಕಾವಲು ಕಾಯುತ್ತೇವೆ‌. ಬರದಿಂದ ನೊಂದ ರೈತರ ಖಾತೆಗೆ ನೇರವಾಗಿ ಪರಿಹಾರ ನೀಡಬೇಕು. ಈವರೆಗೆ ಬರ ಪರಿಹಾರ ಬಂದಿಲ್ಲ ಎಂದು ಕಾಂಗ್ರೆಸ್ ಹೇಳುತ್ತಿತ್ತು. ಹಿಂದಿನ ಬಿಜೆಪಿ ಸರ್ಕಾರ ದುಪ್ಪಟ್ಟು ಪ್ರವಾಹ ಪರಿಹಾರ ನೀಡಿತ್ತು. ಈಗಲೂ ಸರ್ಕಾರ ತನ್ನ ಕಡೆಯಿಂದ ಡಬಲ್ ಪರಿಹಾರ ನೀಡಬೇಕು” ಎಂದರು.

“ರಾಜ್ಯ ಸರ್ಕಾರ ದುಡ್ಡು ಹೊಡೆಯಲು ಚೆಕ್ ಮೂಲಕ ಪರಿಹಾರ ನೀಡಬಾರದು‌. ನೇರ ನಗದು ಪಾವತಿ(ಡಿಬಿಟಿ) ಮೂಲಕವೇ ನೇರವಾಗಿ ಪರಿಹಾರ ನೀಡಬೇಕು” ಎಂದು ವಿಪಕ್ಷ ನಾಯಕ ಆರ್ ಅಶೋಕ್ ಒತ್ತಾಯಿಸಿದರು.

ಇದನ್ನು ಓದಿದ್ದೀರಾ? ಬರ ಪರಿಹಾರ | ಬಾಕಿ ಹಣ ಬಿಡುಗಡೆಯಾಗುವವರೆಗೆ ಕಾನೂನು ಹೋರಾಟ ನಿಲ್ಲಲ್ಲ : ಕೃಷ್ಣ ಬೈರೇಗೌಡ

“ಕಾಂಗ್ರೆಸ್ ಸರ್ಕಾರಕ್ಕೆ ಪರಿಹಾರದ ಬಗ್ಗೆ ಸಾಮಾನ್ಯ ಪ್ರಜ್ಞೆ ಹಾಗೂ ತಿಳಿವಳಿಕೆ ಇಲ್ಲ. ಕಾಂಗ್ರೆಸ್ ಕೇಂದ್ರದಲ್ಲಿ ಅಧಿಕಾರದಲ್ಲಿದ್ದಾಗ ಎಷ್ಟು ಹಣ ಬಿಡುಗಡೆ ಮಾಡಿತ್ತು ಎಂದು ತಿಳಿಸಲಿ‌. ಯಡಿಯೂರಪ್ಪ ಸಿಎಂ ಆಗಿದ್ದಾಗ ಕೇಂದ್ರದಲ್ಲಿ ಮನಮೋಹನ್ ಸಿಂಗ್ ಸರ್ಕಾರವೇ ಇತ್ತು‌‌. ಆಗಿನ ಪರಿಹಾರಕ್ಕೂ ಈಗ ನೀಡಿರುವ ಪರಿಹಾರಕ್ಕೂ ಜನರೇ ಹೋಲಿಕೆ ಮಾಡಲಿ‌‌. ವಿದ್ಯುತ್ ದರ, ಮಾರ್ಗಸೂಚಿ ದರ, ದತ್ತು ಪಡೆಯಲು ದರ ಹೀಗೆ ಎಲ್ಲದರಲ್ಲೂ ಸರ್ಕಾರ ದರ ಏರಿಕೆ ಮಾಡಿದೆ” ಎಂದು ದೂರಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR ವಿವಾದದ ನಡುವೆ ಒಡಿಶಾ ಮುಖ್ಯ ಚುನಾವಣಾಧಿಕಾರಿ ಸ್ವಯಂ ನಿವೃತ್ತಿಗೆ ಅರ್ಜಿ; ಆರ್ ಎಸ್ ಗೋಪಾಲನ್ ಹೇಳಿದ್ದೇನು?

ಒಡಿಶಾದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಪೂರ್ಣಗೊಂಡ...

ಇಡಿ ಅಧಿಕಾರಿಗಳ ವಿರುದ್ಧ ಎಸ್‌ಸಿ/ಎಸ್‌ಟಿ ಪ್ರಕರಣ: ಪ್ರತಿಕ್ರಿಯಿಸಲು ವಿಳಂಬ ಮಾಡಿದ ಸಿಎಂ ಸೊರೇನ್‌ಗೆ ಜಾರ್ಖಂಡ್ ಹೈಕೋರ್ಟ್ ದಂಡ

ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳ ವಿರುದ್ಧ ದಾಖಲಾಗಿರುವ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ...

ದ್ವೇಷಭಾಷಣ ಆರೋಪ: TMC ಸಂಸದೆ ಮಹುವಾ ಮೊಯಿತ್ರಾಗೆ ಬಂಧನದಿಂದ ಮುಕ್ತಿ; ಕ್ಷೇತ್ರ ಭೇಟಿ ವೇಳೆ ಭದ್ರತೆ ನೀಡಲು ಹೈಕೋರ್ಟ್‌ ಸೂಚನೆ

ದ್ವೇಷಪೂರಿತ ಭಾಷಣ ಮಾಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಗಾಳದ ಟಿಎಂಸಿ...