ಕೇಂದ್ರದೊಂದಿಗೆ ಬರ ಪರಿಹಾರ ಚರ್ಚೆ; ದೆಹಲಿಗೆ ನಾಳೆ ರಾಜ್ಯ ಸಚಿವರ ತಂಡ: ಚಲುವರಾಯಸ್ವಾಮಿ

Date:

Advertisements

ಬರ ಪರಿಹಾರ ಕುರಿತು ಕೇಂದ್ರ ಹಣಕಾಸು ಸಚಿವರೊಂದಿಗೆ ಚರ್ಚಿಸಲು ನ.23ರಂದು ಕಂದಾಯ ಮತ್ತು ಗ್ರಾಮೀಣಾಭಿವೃದ್ಧಿ ಸಚಿವರೊಂದಿಗೆ ದೆಹಲಿಗೆ ತೆರಳುತ್ತಿರುವುದಾಗಿ ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ತಿಳಿಸಿದ್ದಾರೆ.

ದಾವಣಗೆರೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಚಿತ್ರದುರ್ಗ, ದಾವಣಗೆರೆ ಹಾಗೂ ಹಾವೇರಿ ಜಿಲ್ಲೆಗಳ ಕೃಷಿ ಮತ್ತು ಜಲಾನಯನ ಇಲಾಖೆ ಯೋಜನೆಗಳ ಅನುಷ್ಠಾನದ ಪ್ರಗತಿ ಪರಿಶೀಲನೆ ಸಭೆ ನಡೆಸಿ ಅವರು ಮಾತನಾಡಿದರು.

‘ರಾಜ್ಯದ 223 ತಾಲೂಕುಗಳಲ್ಲಿ ಬರ ಘೋಷಣೆಯಾಗಿದೆ. 18000 ಕೋಟಿಗೂ ಅಧಿಕ ಪರಿಹಾರ ಕೋರಲಾಗಿದೆ. ರಾಜ್ಯದ ನಿರಂತರ ಮನವಿಗಳ ಹಿನ್ನೆಲೆಯಲ್ಲಿ ಕೇಂದ್ರ ಹಣಕಾಸು ಸಚಿವರು ಭೇಟಿಗೆ ಸಮಯ ನಿಗದಿಪಡಿಸಿದ್ದು, ಸಚಿವರಾದ ಕೃಷ್ಣ ಬೈರೇಗೌಡ ಮತ್ತು ಪ್ರಿಯಾಂಕ್ ಖರ್ಗೆ ಜೊತೆಗೆ ತಾನೂ ಕೂಡ ದೆಹಲಿಗೆ ತೆರಳುತ್ತಿದ್ದೇನೆ’ ಎಂದು ಚಲುವರಾಯಸ್ವಾಮಿ ತಿಳಿಸಿದರು.

Advertisements

‘ರೈತರ ಹಿತ ಸಂರಕ್ಷಣೆಗೆ ರಾಜ್ಯ ಸರ್ಕಾರದ ಆದ್ಯತೆ ಸದಾ ಇರಲಿದೆ. ಅದಕ್ಕೆ ನಾವು ಸದಾ ಬದ್ಧ ಎಂದ ಕೃಷಿ ಸಚಿವರು, ಈ ವರ್ಷ ‌ಕೃಷಿ ಭಾಗ್ಯ ಮರು ಜಾರಿಗೊಳಿಸಿದ್ದು 200 ಕೋಟಿ ರೂ ವೆಚ್ಚದಲ್ಲಿ 30,000ಕ್ಕೂ ಅಧಿಕ ಕೃಷಿ ಹೊಂಡ ನಿರ್ಮಾಣ ಮಾಡಲಾಗುವುದು. ಇದಕ್ಕೆ ಕ್ಯಾಬಿನೆಟ್ ಅನುಮೋದನೆ ಪಡೆಯಲಾಗಿದೆ’ ಎಂದು ಮಾಹಿತಿ ನೀಡಿದರು.

ಇದೇ ವೇಳೆ, ‘ಬೆಳೆ ಸಮೀಕ್ಷೆಯಲ್ಲಿ ಯಾವುದೇ ನಿರ್ಲಕ್ಷ್ಯ ಸಹಿಸುವುದಿಲ್ಲ. ಲೋಪ ಎಸಗಿದರೆ ಅಧಿಕಾರಿಗಳನ್ನೇ ಹೊಣೆ ಮಾಡಲಾಗುವುದು’ ಎಂದು ಸಚಿವರು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

‘ಬೆಳೆ ಸಮೀಕ್ಷೆ ವೇಳೆ ಅಧಿಕಾರಿಗಳ ನಿರ್ಲಕ್ಷ್ಯ, ಲೋಪಗಳ ಬಗ್ಗೆ ಜನಪ್ರತಿಧಿಗಳು, ರೈತರು ದೂರು‌ ಸಲ್ಲಿಸಿದ್ದಾರೆ. ರೈತರ ಹಿತ ಇಲಾಖೆ ಹಾಗೂ ಅಧಿಕಾರಿಗಳ ಮೊದಲ‌ ಆದ್ಯತೆಯಾಗಿರಬೇಕು. ನಿರ್ಲಕ್ಷ್ಯ ಧೋರಣೆ ಮುಂದುವರೆಸಿದರೆ ಶಿಸ್ತು ಕ್ರಮ ಜರುಗಿಸಬೇಕಾಗುತ್ತದೆ’ ಎಂದು ತಿಳಿಸಿದರು.

ಇದನ್ನು ಓದಿದ್ದೀರಾ? ಜಾತಿ ಗಣತಿ | ವೈಜ್ಞಾನಿಕ ಸಮೀಕ್ಷೆಗೆ ಹಲವು ಸಮುದಾಯಗಳ ಆಗ್ರಹ: ಡಿಕೆ ಶಿವಕುಮಾರ್

‘ರೈತರ ಸಂಕಷ್ಟಕ್ಕೆ ಸ್ಪಂದಿಸುವುದು ಅಧಿಕಾರಿಗಳ ಜವಾಬ್ದಾರಿ. ಈಗಾಗಲೇ ಕೃಷಿಕರು ನೊಂದಿದ್ದಾರೆ. ಅವರಿಗೆ ಬೆಂಬಲವಾಗಿ ನಿಲ್ಲಬೇಕು. ಬೆಳೆ ಸಮೀಕ್ಷೆ, ವಿಮೆ ಪಾವತಿ ವೇಳೆ ನಷ್ಟವಾಗದಂತೆ ಕಾಳಜಿ ವಹಿಸಬೇಕು’ ಎಂದು ಸಚಿವರು ತಿಳಿಸಿದರು.

‘ಕೇಂದ್ರ ಸರ್ಕಾರದ ಎನ್‌ಡಿಆರ್‌ಎಫ್ ಮಾನದಂಡಗಳ ಅನ್ವಯ ಬರ ಘೋಷಣೆ ಮಾಡಲಾಗಿದೆ. ಬೆಳೆ ಹಾನಿ ಪರಿಹಾರ ವಿತರಿಸುವಾಗ ರೈತರಿಗೆ ಅನ್ಯಾಯವಾಗದಂತೆ ಎಚ್ಚರಿಕೆ ವಹಿಸಬೇಕು. ಸರ್ಕಾರದ ಯೋಜನೆಗಳನ್ನು ಸಕಾಲದಲ್ಲಿ ‌ತಲುಪಿಸಬೇಕು. ಕೃಷಿಕರಿಗೆ ತಾಂತ್ರಿಕ ನೆರವು, ಮಾರ್ಗದರ್ಶನ ನೀಡಬೇಕು. ಜಲ ಸಂರಕ್ಷಣೆಗೆ ಗಮನ ಹರಿಸಬೇಕು’ ಎಂದು ಸಚಿವರು ನಿರ್ದೇಶನ ನೀಡಿದರು.

chaluva

‘ಎಲ್ಲ ಜಿಲ್ಲೆಗಳಲ್ಲಿ ಕೆವೈಸಿ, ಫ್ರೂಟ್ ಐಡಿ ನೋಂದಣಿ ಶೇ 100ರಷ್ಟು ಪೂರ್ಣ ಆಗಬೇಕು. ಎಲ್ಲ ಆರ್.ಟಿ.ಸಿಗಳ ದಾಖಲೆಯಾಗಬೇಕು. ಇದನ್ನು ಆಂದೋಲನದ ಸ್ವರೂಪದಲ್ಲಿ ‌ಮಾಡಬೇಕು’ ಎಂದು ಕೃಷಿ ಸಚಿವರು ಸೂಚಿಸಿದರು.

ಬಿತ್ತನೆಯಲ್ಲಿ ಹೊಸ ತಂತ್ರಜ್ಞಾನ ಯಶಸ್ಸು; ಸಚಿವರ ಮೆಚ್ಚುಗೆ
ದಾವಣಗೆರೆ ಜಿಲ್ಲೆಯ ವಿವಿಧೆಡೆ ಹೊಸ ತಂತ್ರಜ್ಞಾನ ಮತ್ತು ಯಾಂತ್ರಿಕತೆ ಬಳಸಿ ತೊಗರಿ, ಗೋವಿನ ಜೋಳ ಹಾಗೂ ಭತ್ತ ಬೇಸಾಯ ಮಾಡಿ ಅಧಿಕ ಇಳುವರಿ ಪಡೆದಿರುವ ಬಗ್ಗೆ ಜಂಟಿ ಕೃಷಿ ನಿರ್ದೇಶಕರ ಸಭೆಯ ಗಮನಕ್ಕೆ ತಂದರು.

‘ಇದೊಂದು ಅಭಿನಂದನಾರ್ಹ ಬೆಳವಣಿಗೆ. ಮುಂದಿನ ವರ್ಷ ಇನ್ನಷ್ಟು ರೈತರಿಗೆ ಈ ಬಗ್ಗೆ ಅರಿವು ಮೂಡಿಸಿ’ ಎಂದು ಸಚಿವ ಚಲುವರಾಯಸ್ವಾಮಿ ಸಲಹೆ ನೀಡಿದರು.

ಚನ್ನಗಿರಿ ಶಾಸಕರಾದ ಬಸವರಾಜು ಶಿವಗಂಗಾ ಹಾಗೂ ಮಾಯಕೊಂಡ ಶಾಸಕ ಬಸವಂತಪ್ಪ ಮತ್ತಿತರರು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

Download Eedina App Android / iOS

X